KK Death News: ಗಾಯಕ ಕೆಕೆ ನಿಧನ; 1 ಕೋಟಿ ರೂ. ಕೊಟ್ಟರೂ ಅಂಥ ಸ್ಥಳದಲ್ಲಿ ಹಾಡುವುದಿಲ್ಲ ಎಂದಿದ್ದ ಸಿಂಗರ್​

Krishnakumar Kunnath: ಗಾಯಕ ಕೆಕೆ ನಿಧನಕ್ಕೆ ಕೋಟ್ಯಂತರ ಅಭಿಮಾನಿಗಳು ಸಂತಾಪ ಸೂಚಿಸುತ್ತಿದ್ದಾರೆ. ಅವರ ನೆನಪುಗಳನ್ನು ಮೆಲುಕು ಹಾಕಲಾಗುತ್ತಿದೆ.

KK Death News: ಗಾಯಕ ಕೆಕೆ ನಿಧನ; 1 ಕೋಟಿ ರೂ. ಕೊಟ್ಟರೂ ಅಂಥ ಸ್ಥಳದಲ್ಲಿ ಹಾಡುವುದಿಲ್ಲ ಎಂದಿದ್ದ ಸಿಂಗರ್​
ಗಾಯಕ ಕೆಕೆ
Follow us
TV9 Web
| Updated By: ಮದನ್​ ಕುಮಾರ್​

Updated on:Jun 01, 2022 | 8:21 AM

ಭಾರತೀಯ ಸಂಗೀತ ಲೋಕಕ್ಕೆ ಪದೇಪದೇ ಕೆಟ್ಟ ಸುದ್ದಿ ಕೇಳಿಬರುತ್ತಿದೆ. ಹಲವು ಗಾಯಕರ ನಿಧನದಿಂದ ಶೋಕದ ವಾತಾವರಣ ನಿರ್ಮಾಣ ಆಗಿದೆ. ಕೆಲವೇ ದಿನಗಳ ಹಿಂದೆ ಕೇರಳದಲ್ಲಿ ಗಾಯಕ ಎಡವ ಬಿಶೀರ್​ ಅವರು ವೇದಿಕೆಯಲ್ಲಿ ಹಾಡುತ್ತಿರುವಾಗಲೇ ಕುಸಿದು ಬಿದ್ದು ಮೃತಪಟ್ಟ ಘಟನೆ ನಡೆಯಿತು. ಈಗ ಖ್ಯಾತ ಗಾಯಕ ಕೆಕೆ (ಕೃಷ್ಣಕುಮಾರ್​ ಕುನ್ನತ್​ ) ಅವರು ಕೂಡ ಹೃದಯಾಘಾತದಿಂದ ನಿಧನರಾಗಿರುವುದು (KK Death) ನೋವಿನ ಸಂಗತಿ. ಹಲವು ಭಾಷೆಗಳಲ್ಲಿ ಹಾಡಿ ಫೇಮಸ್​ ಆಗಿದ್ದ ಅವರು ಮಂಗಳವಾರ (ಮೇ 31) ಕೋಲ್ಕತ್ತಾದಲ್ಲಿ ಸಂಗೀತ ಕಾರ್ಯಕ್ರಮ ನೀಡುತ್ತಿದ್ದರು. ಆಗ ಅವರಿಗೆ ಆರೋಗ್ಯದಲ್ಲಿ ಏರುಪೇರು ಆಯಿತು. ಕೂಡಲೇ ಅವರು ಹೋಟೆಲ್​ಗೆ ಬಂದು ವಿಶ್ರಾಂತಿ ಪಡೆಯಲು ನಿರ್ಧರಿಸಿದರು. ಬಳಿಕ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತಾದರೂ ಅಷ್ಟರಲ್ಲಾಗಲೇ ಅವರು ಮೃತಪಟ್ಟಿದ್ದರು ಎಂಬುದು ತಿಳಿದುಬಂದಿದೆ. ಅವರ ನಿಧನಕ್ಕೆ ಕೋಟ್ಯಂತರ ಅಭಿಮಾನಿಗಳು ಕಂಬನಿ ಮಿಡಿಯುತ್ತಿದ್ದಾರೆ. ವೃತ್ತಿಬದುಕಿನ ಬಗ್ಗೆ ಕೆಕೆ (Krishnakumar Kunnath) ಅವರು ತಮ್ಮದೇ ನಿಲುವು ಹೊಂದಿದ್ದರು. 1 ಕೋಟಿ ರೂಪಾಯಿ ಸಂಭಾವನೆ (KK Remuneration) ಕೊಟ್ಟರೂ ಕೂಡ ಮದುವೆ ಸಮಾರಂಭಗಳಲ್ಲಿ ಹಾಡುವುದಿಲ್ಲ ಎಂದು ಅವರು ಈ ಹಿಂದೆ ಹೇಳಿದ್ದರು.

ದೊಡ್ಡ ದೊಡ್ಡ ಉದ್ಯಮಿಗಳ ಮದುವೆಯಲ್ಲಿ ಬಾಲಿವುಡ್​ ಸೆಲೆಬ್ರಟಿಗಳು, ಖ್ಯಾತ ಗಾಯಕರು ಮನರಂಜನಾ ಕಾರ್ಯಕ್ರಮ ನೀಡುತ್ತಾರೆ. ಅದಕ್ಕಾಗಿ ಅವರಿಗೆ ಕೈ ತುಂಬ ಸಂಭಾವನೆ ಕೂಡ ಸಿಗುತ್ತದೆ. ಆದರೆ ಕೆಲವು ಸೆಲೆಬ್ರಿಟಿಗಳು ಈ ರೀತಿಯ ಕಾರ್ಯಕ್ರಮಗಳನ್ನು ಒಪ್ಪಿಕೊಳ್ಳುವುದಿಲ್ಲ. ಗಾಯಕ ಕೆಕೆ ಕೂಡ ಅದೇ ಸಾಲಿಗೆ ಸೇರುವವರಾಗಿದ್ದರು. ಈ ವಿಚಾರದಲ್ಲಿ ತಮ್ಮ ನಿಲುವು ಏನು ಎಂಬುದನ್ನು ಅವರು ಈ ಹಿಂದೆಯೇ ಸ್ಪಷ್ಟವಾಗಿ ತಿಳಿಸಿದ್ದರು.

2008ರಲ್ಲಿ ಹಿಂದುಸ್ತಾನ್​ ಟೈಮ್ಸ್​ಗೆ ನೀಡಿದ ಸಂದರ್ಶನದಲ್ಲಿ ಕೆಕೆ ಅವರು ಈ ವಿಚಾರ ತಿಳಿಸಿದ್ದರು. ‘ನೀವು ಯಾವುದಾದರೂ ಆಫರ್​ ಅನ್ನು ತಿರಸ್ಕರಿಸಿದ್ದು ಇದೆಯೇ?’ ಎಂಬ ಪ್ರಶ್ನೆಗೆ ಉತ್ತರಿಸಿದ್ದ ಕೆಕೆ ಅವರು, ‘ಹೌದು, ಒಂದು ಕೋಟಿ ರೂಪಾಯಿ ಸಂಭಾವನೆ ನೀಡಿದರೂ ಕೂಡ ಮದುವೆ ಸಮಾರಂಭಗಳಲ್ಲಿ ಹಾಡಲು ನಾನು ಒಪ್ಪಿಕೊಳ್ಳುವುದಿಲ್ಲ’ ಎಂದು ಹೇಳಿದ್ದರು.

ಇದನ್ನೂ ಓದಿ
Image
Singer KK Death: ಕೋಲ್ಕತ್ತಾದಲ್ಲಿ ಸಂಗೀತ ಕಾರ್ಯಕ್ರಮ ನೀಡಿದ ನಂತರ 53 ವರ್ಷದ ಗಾಯಕ ಕೆಕೆ ಕುಸಿದು ಬಿದ್ದು ಸಾವು
Image
Edava Basheer Death: ಹಾಡುವಾಗಲೇ ವೇದಿಕೆಯಲ್ಲಿ ಕುಸಿದು ಬಿದ್ದು ಆರ್ಕೆಸ್ಟ್ರಾ ಗಾಯಕ ಎಡವ ಬಶೀರ್​ ನಿಧನ; ವಿಡಿಯೋ ವೈರಲ್​
Image
Anekal Balaraj Death: ‘ಕರಿಯ’ ಸಿನಿಮಾ ನಿರ್ಮಾಪಕ ಆನೇಕಲ್​ ಬಾಲರಾಜ್​ ಇನ್ನಿಲ್ಲ; ಬೆಂಗಳೂರಿನಲ್ಲಿ ಅಪಘಾತದಿಂದ ನಿಧನ
Image
ಅಪ್ಪು ಹುಟ್ಟುಹಬ್ಬ ಮಾಡುವಾಗ ಕುಸಿದು ಬಿದ್ದಿದ್ದ ಅಭಿಮಾನಿ ಹೃದಯಾಘಾತದಿಂದ ಸಾವು; ಅಯ್ಯೋ ವಿಧಿಯೇ..

ಅನೇಕ ಗಾಯಕರು ಸಿನಿಮಾದಲ್ಲಿ ಹೀರೋ ಆದ ಉದಾಹರಣೆ ಇದೆ. ಆದರೆ ಕೆಕೆ ಅವರು ಅಂಥ ಒಂದು ಅವಕಾಶವನ್ನು ಕೂಡ ಸ್ವೀಕರಿಸಿರಲಿಲ್ಲ. ‘ಸಿನಿಮಾದಲ್ಲಿ ನಟಿಸುವಂತೆ ಒಮ್ಮೆ ನನಗೆ ಆಫರ್​ ಬಂದಿತ್ತು. ಕಡಿಮೆ ಹಣಕ್ಕಾಗಿ ನಾನು ನಟಿಸಲಾರೆ. ಹಾಗಾಗಿ ಅಂಥ ಆಫರ್​ ಅನ್ನು ನಾನು ತಿರಸ್ಕರಿಸಿದ್ದೆ’ ಎಂದು ಕೆಕೆ ಹೇಳಿದ್ದರು. ಕನ್ನಡ, ಹಿಂದಿ, ತಮಿಳು, ತೆಲುಗು ಸೇರಿದಂತೆ ಅನೇಕ ಭಾಷೆಗಳಲ್ಲಿ ಹಾಡುಗಳನ್ನು ಹೇಳಿದ್ದ ಕೆಕೆ ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಎಲ್ಲರೂ ಪ್ರಾರ್ಥಿಸುತ್ತಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 8:21 am, Wed, 1 June 22

6,6,6,6,6: RCB ಆಟಗಾರ ಲಿಯಾಮ್ ಲಿವಿಂಗ್​ಸ್ಟೋನ್ ಸಿಡಿಲಬ್ಬರ ಶುರು
6,6,6,6,6: RCB ಆಟಗಾರ ಲಿಯಾಮ್ ಲಿವಿಂಗ್​ಸ್ಟೋನ್ ಸಿಡಿಲಬ್ಬರ ಶುರು
Daily Devotional: ಪುಣ್ಯಕ್ಷೇತ್ರಗಳಿಗೆ ತೆರಳುವಾಗ ಅಪಘಾತವಾದರೆ ಏನರ್ಥ
Daily Devotional: ಪುಣ್ಯಕ್ಷೇತ್ರಗಳಿಗೆ ತೆರಳುವಾಗ ಅಪಘಾತವಾದರೆ ಏನರ್ಥ
Daily Horoscope: ಈ ರಾಶಿಯವರ ವ್ಯಾಪಾರದ ತೊಂದರೆಗಳು ನಿವಾರಣೆಯಾಗುತ್ತದೆ
Daily Horoscope: ಈ ರಾಶಿಯವರ ವ್ಯಾಪಾರದ ತೊಂದರೆಗಳು ನಿವಾರಣೆಯಾಗುತ್ತದೆ
ಹನುಮಂತನೊಟ್ಟಿಗೆ ಜಗಳ, ಮಹಾಪ್ರಭುಗಳ ಆಜ್ಞೆಯನ್ನೂ ಧಿಕ್ಕರಿಸಿದ ಶೋಭಾ ಶೆಟ್ಟಿ
ಹನುಮಂತನೊಟ್ಟಿಗೆ ಜಗಳ, ಮಹಾಪ್ರಭುಗಳ ಆಜ್ಞೆಯನ್ನೂ ಧಿಕ್ಕರಿಸಿದ ಶೋಭಾ ಶೆಟ್ಟಿ
ಸರ್ಕಾರದ ಎಲ್ಲ ಹಗರಣಗಳನ್ನು ಅಧಿವೇಶನದಲ್ಲಿ ಪ್ರಸ್ತಾಪಿಸುತ್ತೇವೆ: ಅಶೋಕ
ಸರ್ಕಾರದ ಎಲ್ಲ ಹಗರಣಗಳನ್ನು ಅಧಿವೇಶನದಲ್ಲಿ ಪ್ರಸ್ತಾಪಿಸುತ್ತೇವೆ: ಅಶೋಕ
ಸರ್ಕಾರ ಯಾವುದೇ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸುವುದಿಲ್ಲ: ಶಿವಕುಮಾರ್
ಸರ್ಕಾರ ಯಾವುದೇ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸುವುದಿಲ್ಲ: ಶಿವಕುಮಾರ್
ಬಾಂಗ್ಲಾದೇಶದಲ್ಲಿ ಹಿಂದೂಗಳ ಸ್ಥಿತಿ ಅತ್ಯಂತ ಕಳವಳಕಾರಿಯಾಗಿದೆ: ಸಿಟಿ ರವಿ
ಬಾಂಗ್ಲಾದೇಶದಲ್ಲಿ ಹಿಂದೂಗಳ ಸ್ಥಿತಿ ಅತ್ಯಂತ ಕಳವಳಕಾರಿಯಾಗಿದೆ: ಸಿಟಿ ರವಿ
ಬಿಜೆಪಿ ಚುನಾವಣೆಯಲ್ಲಿ ಸೋತಾಗಲೂ ಅಪ್ಪ-ಮಗ ಹೊಣೆ ಹೊರಬೇಕು: ಯತ್ನಾಳ್
ಬಿಜೆಪಿ ಚುನಾವಣೆಯಲ್ಲಿ ಸೋತಾಗಲೂ ಅಪ್ಪ-ಮಗ ಹೊಣೆ ಹೊರಬೇಕು: ಯತ್ನಾಳ್
ಸಹೋದರನ ಮದುವೆಗೆ 35 ಅಡಿ ಉದ್ದದ ನೋಟಿನ ಮಾಲೆ ಉಡುಗೊರೆಯಾಗಿ ನೀಡಿದ ಅಣ್ಣ
ಸಹೋದರನ ಮದುವೆಗೆ 35 ಅಡಿ ಉದ್ದದ ನೋಟಿನ ಮಾಲೆ ಉಡುಗೊರೆಯಾಗಿ ನೀಡಿದ ಅಣ್ಣ
ಡಿಸೆಂಬರ್ 5 ರಂದು ಹಾಸನದಲ್ಲಿ ಕಾಂಗ್ರೆಸ್ ಸಮಾವೇಶ ಆಯೋಜನೆ: ರಾಜಣ್ಣ
ಡಿಸೆಂಬರ್ 5 ರಂದು ಹಾಸನದಲ್ಲಿ ಕಾಂಗ್ರೆಸ್ ಸಮಾವೇಶ ಆಯೋಜನೆ: ರಾಜಣ್ಣ