AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಪರೇಷನ್ ಸಿಂದೂರ್ ಹೆಸರಿನಲ್ಲಿ ಸಿನಿಮಾ ಘೋಷಣೆ; ನಿರ್ಮಾಪಕರಿಗೆ ಛೀಮಾರಿ

‘ಉರಿ: ದಿ ಸರ್ಜಿಕಲ್ ಸ್ಟ್ರೈಕ್’ ರೀತಿಯೇ ‘ಆಪರೇಷನ್ ಸಿಂದೂರ್’ ಕುರಿತು ಸಿನಿಮಾ ಮಾಡಲು ತಯಾರಿ ನಡೆದಿದೆ. ನಿರ್ಮಾಪಕರು ಹೊಸ ಪೋಸ್ಟರ್ ಕೂಡ ಬಿಡುಗಡೆ ಮಾಡಿ ಭಾರಿ ಉತ್ಸಾಹ ತೋರಿಸುತ್ತಿದ್ದಾರೆ. ಆದರೆ ಜನರು ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಅದಕ್ಕೆ ಕಾರಣ ಏನು ಎಂಬುದಕ್ಕೆ ಇಲ್ಲಿದೆ ಉತ್ತರ..

ಆಪರೇಷನ್ ಸಿಂದೂರ್ ಹೆಸರಿನಲ್ಲಿ ಸಿನಿಮಾ ಘೋಷಣೆ; ನಿರ್ಮಾಪಕರಿಗೆ ಛೀಮಾರಿ
Operation Sindoor Film Poster
ಮದನ್​ ಕುಮಾರ್​
|

Updated on: May 11, 2025 | 7:13 AM

Share

ಭಾರತ ಮತ್ತು ಪಾಕಿಸ್ತಾನದ ನಡುವಿನ ಯುದ್ಧದ (India Pakistan War) ಬಗ್ಗೆ ಈಗಾಗಲೇ ಅನೇಕ ಸಿನಿಮಾಗಳು ಬಂದಿವೆ. ಈಗ ‘ಆಪರೇಷನ್ ಸಿಂದೂರ್’ ಕುರಿತಾಗಿಯೂ ಸಿನಿಮಾ (Operation Sindoor Movie) ಮಾಡಲು ಕೆಲವು ನಿರ್ಮಾಪಕರು ಮುಂದಾಗುತ್ತಿದ್ದಾರೆ. ಈಗಾಗಲೇ 30ಕ್ಕೂ ಅಧಿಕ ನಿರ್ಮಾಪಕರು ‘ಆಪರೇಷನ್ ಸಿಂದೂರ್’ (Operation Sindoor) ಟೈಟಲ್ ಪಡೆಯಲು ಪ್ರಯತ್ನಿಸಿದ್ದಾರೆ ಎನ್ನಲಾಗಿದೆ. ‘ನಿಕ್ಕಿ ವಿಕ್ಕಿ ಭಗ್ನಾನಿ ಫಿಲ್ಮ್ಸ್​’ ಸಂಸ್ಥೆಯು ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿ ಇದೇ ಶೀರ್ಷಿಕೆಯಲ್ಲಿ ಸಿನಿಮಾ ಘೋಷಣೆ ಮಾಡಿದೆ. ಪೋಸ್ಟರ್ ಕೂಡ ಬಿಡುಗಡೆ ಮಾಡಿದೆ. ನಿರ್ಮಾಪಕರ ಈ ನಿರ್ಧಾರಕ್ಕೆ ಜನರು ಛೀಮಾರಿ ಹಾಕುತ್ತಿದ್ದಾರೆ.

ಸತ್ಯ ಘಟನೆಗಳನ್ನು ಆಧರಿಸಿ ಸಿನಿಮಾ ಮಾಡುವುದು ತಪ್ಪಲ್ಲ. ಆದರೆ ಅದಕ್ಕೆ ಒಂದು ಸೂಕ್ತ ಸಮಯ ಎಂಬುದು ಇರುತ್ತದೆ. ಸದ್ಯಕ್ಕೆ ಭಾರತ ಮತ್ತು ಪಾಕಿಸ್ತಾನದ ನಡುವೆ ಯುದ್ಧ ನಡೆಯುತ್ತಿದೆ. ಪರಿಸ್ಥಿತಿ ಇನ್ನೂ ತಿಳಿಕೊಂಡಿಲ್ಲ. ಏನಾಗುತ್ತೋ ಎಂಬ ಆತಂಕ ಎಲ್ಲರಲ್ಲೂ ಇದೆ. ಹೀಗಿರುವಾಗ ಪೂರ್ತಿ ಚಿತ್ರಣ ಸಿಗುವ ಮೊದಲೇ ಸಿನಿಮಾ ಅನೌನ್ಸ್ ಮಾಡಿದ್ದಕ್ಕೆ ನಿರ್ಮಾಪಕರ ವಿರುದ್ಧ ಜನರು ಅಸಮಾಧಾನ ವಕ್ತಪಡಿಸುತ್ತಿದ್ದಾರೆ.

ಸ್ಕ್ರಿಪ್ಟ್ ಸಿದ್ಧವಾಗಿಲ್ಲ, ಕಲಾವಿದರ ಆಯ್ಕೆ ಆಗಿಲ್ಲ, ಘಟನೆ ಬಗ್ಗೆ ಅಧ್ಯಯನ ನಡೆಸಿಲ್ಲ. ಅಷ್ಟರಲ್ಲಾಗಲೇ ‘ಆಪರೇಷನ್ ಸಿಂದೂರ್’ ಎಂದು ಸಿನಿಮಾ ಘೋಷಣೆ ಮಾಡುವ ಅವಶ್ಯಕತೆ ಏನಿತ್ತು ಎಂದು ಜನರು ಪ್ರಶ್ನಿಸುತ್ತಿದ್ದಾರೆ. ಉತ್ತಮ್ ಅವರು ಈ ಸಿನಿಮಾಗೆ ನಿರ್ದೇಶನ ಮಾಡಲಿದ್ದಾರೆ ಎಂದು ಪೋಸ್ಟರ್ ಮೂಲಕ ತಿಳಿಸಲಾಗಿದೆ.

ಪಾಕಿಸ್ತಾನದ ಉಗ್ರರು ಪಹಲ್ಗಾಮ್​​ನಲ್ಲಿ ದಾಳಿ ನಡೆಸಿ ಅಮಾಯಕ ಜೀವಗಳನ್ನು ಬಲಿ ತೆಗೆದುಕೊಂಡರು. ಅದಕ್ಕೆ ಪ್ರತಿಯಾಗಿ ಭಾರತೀಯ ಸೇನೆ ‘ಆಪರೇಷನ್ ಸಿಂದೂರ್’ ಹೆಸರಿನಲ್ಲಿ ತಿರುಗೇಟು ನೀಡಿತು. ಉಗ್ರರ ಅಡಗು ತಾಣಗಳನ್ನು ಛಿದ್ರ ಮಾಡಲಾಯಿತು. ಈ ಘಟನೆಯನ್ನು ಆಧರಿಸಿ ಸಿನಿಮಾ ಮಾಡಲು ಅನೇಕ ನಿರ್ಮಾಪಕರು ಆಸಕ್ತಿ ತೋರಿಸುತ್ತಿದ್ದಾರೆ.

ಇದನ್ನೂ ಓದಿ: ‘ಆಪರೇಷನ್ ಸಿಂದೂರ್’ ಖಂಡಿಸಿದ ಪಾಕ್ ನಟ ಫವಾದ್ ಖಾನ್; ಭಾರತದಲ್ಲಿ ಛೀಮಾರಿ

ಯುದ್ಧ ಮುಗಿಯುವುದಕ್ಕೂ ಮುನ್ನವೇ ಇಂಥ ಘಟನೆಯನ್ನು ಇಟ್ಟುಕೊಂಡು ಸಿನಿಮಾ ಮಾಡಿ ಹಣ ಗಳಿಸಲು ಉದ್ದೇಶಿಸಿರುವ ನಿರ್ಮಾಪಕರ ಮನಸ್ಥಿತಿಗೆ ಜನರು ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಅಂತಿಮವಾಗಿ ಈ ಟೈಟಲ್​ನಲ್ಲಿ ಯಾರು ಸಿನಿಮಾ ಮಾಡಲಿದ್ದಾರೆ ಎಂಬುದನ್ನು ತಿಳಿಯುವ ಕೌತುಕ ಮೂಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ