AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಂದು ಇನ್​​ಸ್ಟಾಗ್ರಾಂ ರೀಲ್​ ಹಾಕಿದರೆ ಓರಿಗೆ ಬರುವ ಹಣ ಎಷ್ಟು ಲಕ್ಷ ಗೊತ್ತೆ?

Orry Instagram: ಓರಿ, ಸಾಮಾಜಿಕ ಜಾಲತಾಣದಲ್ಲಿ ಬಲು ವೈರಲ್ ವ್ಯಕ್ತಿ. ಚಿತ್ರ ವಿಚಿತ್ರ ಬಟ್ಟೆಗಳನ್ನು ಹಾಕಿಕೊಂಡು, ಸಿನಿಮಾ ಸೆಲೆಬ್ರಿಟಿಗಳ ಎದೆಯ ಮೇಲೆ ಕೈಇಟ್ಟು ಫೋಟೊ, ವಿಡಿಯೋ ಮಾಡಿ ಅಪ್​​ಲೋಡ್ ಮಾಡುವ ಓರಿ ತನ್ನ ಭಿನ್ನ ವ್ಯಕ್ತಿತ್ವ, ವಿಚಿತ್ರತನದಿಂದಲೇ ಬಲು ಜನಪ್ರಿಯರು. ಬಲು ಜನಪ್ರಿಯ ಇನ್​​ಫ್ಲ್ಯುಯೆನ್ಸರ್ ಎನಿಸಿಕೊಂಡಿರುವ ಈ ಓರಿ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಚಿತ್ರಗಳನ್ನು ಹಾಕಿಕೊಂಡೇ ತಿಂಗಳಿಗೆ ಕೋಟ್ಯಂತರ ರೂಪಾಯಿ ಹಣ ಗಳಿಕೆ ಮಾಡುತ್ತಿದ್ದಾರೆ. ಈ ಬಗ್ಗೆ ಖುದ್ದು ಓರಿಯೇ ಸಂದರ್ಶನವೊಂದರಲ್ಲಿ ಹೇಳಿಕೊಂಡಿದ್ದಾರೆ.

ಒಂದು ಇನ್​​ಸ್ಟಾಗ್ರಾಂ ರೀಲ್​ ಹಾಕಿದರೆ ಓರಿಗೆ ಬರುವ ಹಣ ಎಷ್ಟು ಲಕ್ಷ ಗೊತ್ತೆ?
Orry
ಮಂಜುನಾಥ ಸಿ.
|

Updated on:Jun 17, 2026 | 3:59 PM

Share

ಓರಿ, ಸಾಮಾಜಿಕ ಜಾಲತಾಣದಲ್ಲಿ (Social Media) ಬಲು ವೈರಲ್ ವ್ಯಕ್ತಿ. ಚಿತ್ರ ವಿಚಿತ್ರ ಬಟ್ಟೆಗಳನ್ನು ಹಾಕಿಕೊಂಡು, ಸಿನಿಮಾ ಸೆಲೆಬ್ರಿಟಿಗಳ ಎದೆಯ ಮೇಲೆ ಕೈಇಟ್ಟು ಫೋಟೊ, ವಿಡಿಯೋ ಮಾಡಿ ಅಪ್​​ಲೋಡ್ ಮಾಡುವ ಓರಿ ತನ್ನ ಭಿನ್ನ ವ್ಯಕ್ತಿತ್ವ, ವಿಚಿತ್ರತನದಿಂದಲೇ ಬಲು ಜನಪ್ರಿಯರು. ಬಲು ಜನಪ್ರಿಯ ಇನ್​​ಫ್ಲ್ಯುಯೆನ್ಸರ್ ಎನಿಸಿಕೊಂಡಿರುವ ಈ ಓರಿ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಚಿತ್ರಗಳನ್ನು ಹಾಕಿಕೊಂಡೇ ತಿಂಗಳಿಗೆ ಕೋಟ್ಯಂತರ ರೂಪಾಯಿ ಹಣ ಗಳಿಕೆ ಮಾಡುತ್ತಿದ್ದಾರೆ. ಈ ಬಗ್ಗೆ ಖುದ್ದು ಓರಿಯೇ ಸಂದರ್ಶನವೊಂದರಲ್ಲಿ ಹೇಳಿಕೊಂಡಿದ್ದಾರೆ.

ಇತ್ತೀಚೆಗೆ ‘ಲರ್ನ್ ಬೈ ಕೆಕೆ ಕ್ರಿಯೇಟ್’ ಪಾಡ್‌ಕಾಸ್ಟ್‌ನಲ್ಲಿ ಭಾಗವಹಿಸಿದ್ದ ಓರಿ, ತಮ್ಮ ಆದಾಯದ ಬಗ್ಗೆ ಮಾತನಾಡಿದ್ದಾರೆ. ತಮ್ಮ ಆದಾಯದ ಬಹುಪಾಲು ಬ್ರ್ಯಾಂಡ್ ಪ್ರೊಮೋಷನ್ ಮತ್ತು ಖಾಸಗಿ ಕಾರ್ಯಕ್ರಮಗಳಲ್ಲಿ ಭಾಗಿ ಆಗುವುದರಿಂದ ಬರುತ್ತದೆ ಎಂದು ಓರಿ ಹೇಳಿದ್ದಾರೆ. ‘ಕಳೆದ ತಿಂಗಳು ನಾನು ಕೇವಲ ಒಂದು ಡೀಲ್‌ನಿಂದ, ಅಂದರೆ ಒಂದೇ ಒಂದು ರೀಲ್ ಹಾಕಿ 76 ಲಕ್ಷ ರೂಪಾಯಿಗಳನ್ನು ಗಳಿಸಿದ್ದೇನೆ’ ಎಂದು ಅವರು ಈ ವೇಳೆ ತಿಳಿಸಿದ್ದಾರೆ.

ಓರಿ ತಮ್ಮ ಆನ್‌ಲೈನ್ ಜನಪ್ರಿಯತೆಯನ್ನು ವ್ಯಾಪಾರವನ್ನಾಗಿ ಪರಿವರ್ತನೆ ಮಾಡಿಕೊಂಡಿದ್ದಾರೆ. ಮಧ್ಯಾಹ್ನದ ಊಟ, ರಾತ್ರಿಯ ಊಟ, ಹುಟ್ಟುಹಬ್ಬದ ಪಾರ್ಟಿಗಳು, ಮದುವೆಗಳು ಮತ್ತು ಇತರ ಸಾಮಾಜಿಕ ಸಮಾರಂಭಗಳಲ್ಲಿ ಭಾಗವಹಿಸಲು ಅವರು 15 ಲಕ್ಷದಿಂದ 25 ಲಕ್ಷ ರೂಪಾಯಿವರೆಗೆ ಶುಲ್ಕ ವಿಧಿಸುತ್ತಾರಂತೆ ಈ ಬಗ್ಗೆ ಖುದ್ದು ಅವರೇ ಹೇಳಿಕೊಂಡಿದ್ದಾರೆ. ‘15 ರಿಂದ 25 ಲಕ್ಷ ರೂಪಾಯಿಗಳಿಗೆ ನೀವು ನನ್ನನ್ನು ಮಧ್ಯಾಹ್ನದ ಊಟಕ್ಕೆ ಅಥವಾ ರಾತ್ರಿಯ ಊಟಕ್ಕೆ ಖರೀದಿಸಬಹುದು. ನಾನು ನಿಮ್ಮ ಮದುವೆಗೆ ಬರುತ್ತೇನೆ, ಹುಟ್ಟುಹಬ್ಬಕ್ಕೆ ಬರುತ್ತೇನೆ. ನಾವು ಬಾಲ್ಯದ ಸ್ನೇಹಿತರಂತೆ ವರ್ತಿಸುತ್ತೇನೆ, ನಿಮ್ಮೊಂದಿಗೆ ಸಮಯ ಕಳೆಯುತ್ತೇನೆ, ನಿಮ್ಮ ಪೋಷಕರೊಂದಿಗೆ ಕುಳಿತು ಮಾತನಾಡುತ್ತೇನೆ, ಮತ್ತು ನೀವು ಬಯಸಿದಂತೆ ಎಲ್ಲರೊಂದಿಗೆ ಬೆರೆಯುತ್ತೇನೆ. ನನ್ನನ್ನು ‘ಖರೀದಿಸಿದವರಿಗೆ’ ಸಾಮಾಜಿಕ ಜಾಲತಾಣದಲ್ಲಿ ಹೆಚ್ಚು ಜನಪ್ರಿಯತೆ ಸಿಗುತ್ತದೆ’ ಎಂದು ಓರಿ ತಮ್ಮ ಬ್ಯುಸಿನೆಸ್ ವಿವರಿಸಿದ್ದಾರೆ.

ಇದನ್ನೂ ಓದಿ:‘ಕಲ್ಕಿ 2898 ಎಡಿ’ ಪಾರ್ಟ್ 2 ಪ್ರಭಾಸ್ ಸಿನಿಮಾ ಅಲ್ಲ, ಕಮಲ್ ಹಾಸನ್ ಸಿನಿಮಾ

ಓರಿಯ ನಿಜವಾದ ಹೆಸರು ಓರ್ಹಾನ್ ಅವತ್ರಾಮಣಿ, ಇನ್‌ಸ್ಟಾಗ್ರಾಮ್‌ನಲ್ಲಿ 25 ಲಕ್ಷಕ್ಕೂ ಹೆಚ್ಚು ಫಾಲೋವರ್‌ಗಳನ್ನು ಹೊಂದಿದ್ದಾರೆ. ಅವರು ಬಾಲಿವುಡ್ ಸೆಲೆಬ್ರಿಟಿಗಳೊಂದಿಗೆ ಪಾರ್ಟಿ ಮಾಡುವುದರಲ್ಲಿ ಮತ್ತು ಹೈ-ಪ್ರೊಫೈಲ್ ಕಾರ್ಯಕ್ರಮಗಳಲ್ಲಿ ಭಾಗವಹಿಸುವುದರಲ್ಲಿ ಸದಾ ಸುದ್ದಿಯಲ್ಲಿರುತ್ತಾರೆ. ಜಾನ್ಹವಿ ಕಪೂರ್, ಖುಷಿ ಕಪೂರ್ ಸೇರಿದಂತೆ ಅನೇಕ ಸೆಲೆಬ್ರಿಟಿಗಳೊಂದಿಗೆ ಓರಿ ಫೋಟೋಗಳಿಗೆ ಪೋಸ್ ನೀಡುತ್ತಿರುತ್ತಾರೆ. ವಿಶೇಷವಾಗಿ ಸೆಲೆಬ್ರಿಟಿಗಳ ಎದೆಯ ಮೇಲೆ ಕೈ ಇಟ್ಟು ಅವರು ನೀಡುವ ಸಿಗ್ನೇಚರ್ ಪೋಸ್‌ನಿಂದ ಅವರು ಹೆಚ್ಚು ಖ್ಯಾತಿ ಗಳಿಸಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 3:58 pm, Wed, 17 June 26

Follow Us
ಮೇಲ್ಮನೆ ಮೇಲಾಟ:ಕಾಂಗ್ರೆಸ್​​ ಕ್ಯಾಂಪ್​ ಸೇರಿಕೊಂಡ ಬಿಜೆಪಿ ಉಚ್ಛಾಟಿತ ಶಾಸಕ
ಮೇಲ್ಮನೆ ಮೇಲಾಟ:ಕಾಂಗ್ರೆಸ್​​ ಕ್ಯಾಂಪ್​ ಸೇರಿಕೊಂಡ ಬಿಜೆಪಿ ಉಚ್ಛಾಟಿತ ಶಾಸಕ
ಸಚಿವ ಸ್ಥಾನ ಸಂಬಂಧ ಜಮೀರ್​​ ಅಹ್ಮದ್​​ ಸ್ಫೋಟಕ ಹೇಳಿಕೆ
ಸಚಿವ ಸ್ಥಾನ ಸಂಬಂಧ ಜಮೀರ್​​ ಅಹ್ಮದ್​​ ಸ್ಫೋಟಕ ಹೇಳಿಕೆ
ಐಸೊಬ್ಯುಟನಾಲ್; ಶೀಘ್ರದಲ್ಲೇ ಬರಲಿದೆ ಪರಿಸರ ಸ್ನೇಹಿ ಬಯೋ ಡೀಸೆಲ್!
ಐಸೊಬ್ಯುಟನಾಲ್; ಶೀಘ್ರದಲ್ಲೇ ಬರಲಿದೆ ಪರಿಸರ ಸ್ನೇಹಿ ಬಯೋ ಡೀಸೆಲ್!
ಚಿನ್ನಯ್ಯ ತಮ್ಮ ಬಳಿ ಹೇಳಿದ್ದೇನು? ಬಹಿರಂಗಪಡಿಸಿದ ಪ್ರಕಾಶ್ ರೈ
ಚಿನ್ನಯ್ಯ ತಮ್ಮ ಬಳಿ ಹೇಳಿದ್ದೇನು? ಬಹಿರಂಗಪಡಿಸಿದ ಪ್ರಕಾಶ್ ರೈ
ಎದೆ ಉರಿ ಕಾಣಿಸಿಕೊಂಡು ನಾಲ್ಕು ವರ್ಷದ ಬಾಲಕ ವೈಷ್ಣವ್ ಸಾವು
ಎದೆ ಉರಿ ಕಾಣಿಸಿಕೊಂಡು ನಾಲ್ಕು ವರ್ಷದ ಬಾಲಕ ವೈಷ್ಣವ್ ಸಾವು
ಬೌರಿಂಗ್ ಆಸ್ಪತ್ರೆ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ ಅಧಿಕಾರಿಗಳು!
ಬೌರಿಂಗ್ ಆಸ್ಪತ್ರೆ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ ಅಧಿಕಾರಿಗಳು!
ಗ್ರೈಂಡರ್​​​ನಿಂದ ವಿದ್ಯುತ್​ ಪ್ರವಹಿಸಿ 4 ವರ್ಷದ ಬಾಲಕಿ ಸಾವು
ಗ್ರೈಂಡರ್​​​ನಿಂದ ವಿದ್ಯುತ್​ ಪ್ರವಹಿಸಿ 4 ವರ್ಷದ ಬಾಲಕಿ ಸಾವು
'ಗ್ಯಾರಂಟಿಯಲ್ಲಿ ಅಕ್ರಮವಾಗಿದೆ ಎಂದಾದರೆ ಅನುಷ್ಠಾನ ಸಮಿತಿ ಏನ್ಮಾಡ್ತಿತ್ತು?"
'ಗ್ಯಾರಂಟಿಯಲ್ಲಿ ಅಕ್ರಮವಾಗಿದೆ ಎಂದಾದರೆ ಅನುಷ್ಠಾನ ಸಮಿತಿ ಏನ್ಮಾಡ್ತಿತ್ತು?
ಇಷ್ಟು ಫೇಮ್ ಸಿಕ್ಕರೂ ಸಿನಿಮಾಗಳಲ್ಲಿ ಏಕೆ ನಟಿಸಲ್ಲ? ಕಾರಣ ತಿಳಿಸಿದ ಹನುಮಂತ
ಇಷ್ಟು ಫೇಮ್ ಸಿಕ್ಕರೂ ಸಿನಿಮಾಗಳಲ್ಲಿ ಏಕೆ ನಟಿಸಲ್ಲ? ಕಾರಣ ತಿಳಿಸಿದ ಹನುಮಂತ
ಜೆಡಿಎಸ್​​ನಿಂದ ಕಾಂಗ್ರೆಸ್​​ ಶಾಸಕರ ಸಂಪರ್ಕ ಸುದ್ದಿ ಸುಳ್ಳೆಂದ ಹೆಚ್​​ಡಿಕೆ
ಜೆಡಿಎಸ್​​ನಿಂದ ಕಾಂಗ್ರೆಸ್​​ ಶಾಸಕರ ಸಂಪರ್ಕ ಸುದ್ದಿ ಸುಳ್ಳೆಂದ ಹೆಚ್​​ಡಿಕೆ