AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಪ್ ನಾಯಕನ ಜೊತೆ ಖ್ಯಾತ ಬಾಲಿವುಡ್ ನಟಿ ಡೇಟಿಂಗ್​? ಲೀಕ್ ಆಯ್ತು ಫೋಟೋ

ಬುಧವಾರ ಗುರುಗ್ರಾಮದ ಹೋಟೆಲ್​ ಒಂದರಲ್ಲಿ ಪರಿಣೀತಿ ಹಾಗೂ ರಾಘವ್ ರಾತ್ರಿ ಊಟ ಮಾಡಿದ್ದಾರೆ. ಗುರುವಾರ ಮಧ್ಯಾಹ್ನ ಮುಂಬೈನ ಬಾಂದ್ರಾದ ಹೋಟೆಲ್​ನಲ್ಲಿ ಒಟ್ಟಾಗಿ ಕಾಣಿಸಿಕೊಂಡಿದ್ದಾರೆ.

ಆಪ್ ನಾಯಕನ ಜೊತೆ ಖ್ಯಾತ ಬಾಲಿವುಡ್ ನಟಿ ಡೇಟಿಂಗ್​? ಲೀಕ್ ಆಯ್ತು ಫೋಟೋ
ಪರಿಣೀತಿ-ರಾಘವ್
Follow us
ರಾಜೇಶ್ ದುಗ್ಗುಮನೆ
|

Updated on:Mar 24, 2023 | 8:13 AM

ರಾಜಕೀಯ, ಕ್ರೀಡೆ ಮೊದಲಾದ ಕ್ಷೇತ್ರಗಳಿಗೂ ಚಿತ್ರರಂಗಕ್ಕೂ ಎಲ್ಲಿಲ್ಲದ ನಂಟು. ರಾಜಕಾರಣಿಗಳು, ಕ್ರಿಕೆಟರ್​ಗಳು ಬಾಲಿವುಡ್ ನಾಯಕಿಯರ ಜೊತೆ ಸುತ್ತಾಟ ನಡೆಸಿದ ಉದಾಹರಣೆ ಇದೆ. ಕೆಲವರು ವಿವಾಹ ಕೂಡ ಆಗಿದ್ದಾರೆ. ಈಗ ಬಾಲಿವುಡ್​ ನಟಿ ಪರಿಣೀತಿ ಚೋಪ್ರಾ (Parineeti Chopra) ಅವರು ಇದೇ ವಿಚಾರಕ್ಕೆ ಸುದ್ದಿಯಲ್ಲಿದ್ದಾರೆ. ಆಮ್ ಆದ್ಮಿ ಪಕ್ಷದ ನಾಯಕ ರಾಘವ್ ಚಡ್ಡಾ (Raghav Chadha)  ಜೊತೆ ಅವರು ಡೇಟಿಂಗ್ ಮಾಡುತ್ತಿದ್ದಾರೆ ಎನ್ನುವ ಸುದ್ದಿ ವೈರಲ್ ಆಗಿದೆ. ಇಬ್ಬರೂ ಪದೇಪದೇ ಒಟ್ಟಾಗಿ ಹೋಟೆಲ್​ನಲ್ಲಿ ಕಾಣಿಸಿಕೊಂಡಿದ್ದು ಈ ಸುದ್ದಿ ಹುಟ್ಟಿಕೊಳ್ಳಲು ಕಾರಣ.

ಪರಿಣೀತಿ ಚೋಪ್ರಾ ಅವರು ಬಾಲಿವುಡ್​ನಲ್ಲಿ ಹಲವು ವರ್ಷಗಳಿಂದ ಆ್ಯಕ್ಟೀವ್ ಆಗಿದ್ದಾರೆ. ಆದರೆ, ಅವರಿಗೆ ಯಶಸ್ಸು ಸಿಕ್ಕಿಲ್ಲ. ಅಲ್ಲೊಂದು ಇಲ್ಲೊಂದು ಸಿನಿಮಾ ಒಪ್ಪಿಕೊಂಡು ಅವರು ನಟಿಸುತ್ತಿದ್ದಾರೆ. ಹೀಗಿರುವಾಗಲೇ ಅವರ ಹೆಸರು ರಾಜಕಾರಣಿಯ ಜೊತೆ ತಳಕು ಹಾಕಿಕೊಂಡಿದೆ. ಈ ವಿಚಾರದ ಬಗ್ಗೆ ಅವರ ಕಡೆಯಿಂದಲೇ ಸ್ಪಷ್ಟನೆ ಸಿಗಲಿ ಎಂದು ಫ್ಯಾನ್ಸ್ ಬಯಸುತ್ತಿದ್ದಾರೆ.

ಬುಧವಾರ ಗುರುಗ್ರಾಮದ ಹೋಟೆಲ್​ ಒಂದರಲ್ಲಿ ಪರಿಣೀತಿ ಹಾಗೂ ರಾಘವ್ ರಾತ್ರಿ ಊಟ ಮಾಡಿದ್ದಾರೆ. ಗುರುವಾರ ಮಧ್ಯಾಹ್ನ ಮುಂಬೈನ ಬಾಂದ್ರಾದ ಹೋಟೆಲ್​ನಲ್ಲಿ ಒಟ್ಟಾಗಿ ಕಾಣಿಸಿಕೊಂಡಿದ್ದಾರೆ. ಬೇರೆ ಬೇರೆ ನಗರಗಳಲ್ಲಿ ಇಬ್ಬರೂ ಒಟ್ಟಾಗಿ ಊಟ ಮಾಡಲು ಸೇರಿದ್ದು ಸಹಜವಾಗಿಯೇ ಕುತೂಹಲ ಮೂಡಿಸಿದೆ. ಈ ಫೋಟೋಗಳನ್ನು ಕ್ಲಿಕ್ಕಿಸಿ, ಸೋಶಿಯಲ್ ಮೀಡಿಯಾದಲ್ಲಿ ಹರಿಬಿಡಲಾಗಿದೆ. ಇಬ್ಬರೂ ಮ್ಯಾಚಿಂಗ್ ಶರ್ಟ್ ಧರಿಸಿದ್ದರು ಅನ್ನೋದು ವಿಶೇಷ.

ಇದನ್ನೂ ಓದಿ: RRR: ‘ಶ್ರದ್ಧಾ ಕಪೂರ್, ಪರಿಣೀತಿ ಚೋಪ್ರಾ..’; ‘ಆರ್​ಆರ್​ಆರ್​’ ಆಫರ್ ರಿಜೆಕ್ಟ್ ಮಾಡಿದ್ದ 5 ಸ್ಟಾರ್ ನಟಿಯರು ಇವರೇ!

ಸದ್ಯ ಇವರ ರಿಲೇಶನ್​ಶಿಪ್ ಬಗ್ಗೆ ಅನೇಕ ಅಂತೆಕಂತೆಗಳು ಹರಿದಾಡುತ್ತಿವೆ. ಕೆಲವು ವರದಿಗಳು ಇವರು ಫ್ರೆಂಡ್ಸ್ ಅಷ್ಟೇ ಎಂದು ಹೇಳುತ್ತಿವೆ. ಲಂಡನ್ ಸ್ಕೂಲ್ ಆಫ್ ಎಕನಾಮಿಕ್ಸ್​ನಲ್ಲಿ ಪರಿಣೀತಿ ಹಾಗೂ ರಾಘವ್ ಅಧ್ಯಯನ ನಡೆಸಿದ್ದರು. ಇಬ್ಬರೂ ಒಟ್ಟಾಗಿ ಓದಿದ್ದರಿಂದ ಇವರ ಮಧ್ಯೆ ಫ್ರೆಂಡ್​ಶಿಪ್ ಬೆಳೆದಿದೆ. ಈ ಕಾರಣಕ್ಕೆ ಇಬ್ಬರೂ ಒಟ್ಟಾಗಿ ಕಾಣಿಸಿಕೊಂಡಿದ್ದಾರೆ ಎನ್ನಲಾಗುತ್ತಿದೆ. ಆದರೆ, ಈ ಭೇಟಿಯನ್ನು ಅನೇಕರು ಬೇರೆ ರೀತಿಯಲ್ಲಿ ಬಿಂಬಿಸುತ್ತಿದ್ದಾರೆ. ಪರಿಣೀತಿ ರಾಜಕೀಯ ಸೇರುತ್ತಾರೆ ಎಂಬ ವದಂತಿಯನ್ನೂ ಹರಿಬಿಡಲಾಗಿದೆ. ಈ ಎಲ್ಲಾ ಅಂತೆ-ಕಂತೆಗಳಿಗೆ ಪರಿಣೀತಿ ಅವರೇ ಸ್ಪಷ್ಟನೆ ನೀಡಬೇಕಿದೆ.

ಇದನ್ನೂ ಓದಿ: ರಿಯಾಲಿಟಿ ಶೋನಲ್ಲಿ ಗಳಗಳನೆ ಅತ್ತ ಪರಿಣೀತಿ ಚೋಪ್ರಾ; ಇದು ಫೇಕ್​ ಎಂದವರಿಗೆ ನಟಿಯ ತಿರುಗೇಟು

ಪರಿಣೀತಿ ಚೋಪ್ರಾ ಅವರ ಕೈಯಲ್ಲಿ ಎರಡು ಸಿನಿಮಾ ಇದೆ. ‘ಚಂಕಿಲಾ’ ಹಾಗೂ ‘ಕ್ಯಾಪ್ಸೂಲ್ ಗಿಲ್​’ ಚಿತ್ರದ ಕೆಲಸಗಳಲ್ಲಿ ಅವರು ಬ್ಯುಸಿ ಇದ್ದಾರೆ. ಎರಡೂ ಸಿನಿಮಾ ಕೆಲಸಗಳು ಭರದಿಂದ ಸಾಗುತ್ತಿವೆ. ಇತ್ತೀಚೆಗೆ ಅವರ ಯಾವ ಸಿನಿಮಾಗಳೂ ಗೆಲುವು ಕಂಡಿಲ್ಲ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 7:21 am, Fri, 24 March 23

ಉಗ್ರರ ವಿರುದ್ಧ ಕ್ರಮಕೈಗೊಳ್ಳಿ, ಮೋದಿ ಜೊತೆ ನಾವಿದ್ದೇವೆ: ಮುಸ್ಲಿಂ ಮುಖಂಡರು
ಉಗ್ರರ ವಿರುದ್ಧ ಕ್ರಮಕೈಗೊಳ್ಳಿ, ಮೋದಿ ಜೊತೆ ನಾವಿದ್ದೇವೆ: ಮುಸ್ಲಿಂ ಮುಖಂಡರು
ಕಾರ್ಯಕ್ರಮದಲ್ಲಿ ಸಚಿವ ವೆಂಕಟೇಶ್​ರನ್ನು ವಿಶೇಷವಾಗಿ ಹೊಗಳಿದ ಸಿದ್ದರಾಮಯ್ಯ
ಕಾರ್ಯಕ್ರಮದಲ್ಲಿ ಸಚಿವ ವೆಂಕಟೇಶ್​ರನ್ನು ವಿಶೇಷವಾಗಿ ಹೊಗಳಿದ ಸಿದ್ದರಾಮಯ್ಯ
ಅಮಿತ್ ಶಾ ಆದೇಶ ಕೇಳಿ ಪಾಕಿಸ್ತಾನಿ ಮಹಿಳೆಯ ಅತ್ತೆಗೆ ಹೃದಯಾಘಾತ
ಅಮಿತ್ ಶಾ ಆದೇಶ ಕೇಳಿ ಪಾಕಿಸ್ತಾನಿ ಮಹಿಳೆಯ ಅತ್ತೆಗೆ ಹೃದಯಾಘಾತ
ಬರವಣಿಗೆ ನನ್ನ ಶಕ್ತಿಯಾಗಿತ್ತು ಎನ್ನುತ್ತಾರೆ 425 ನೇ ರ‍್ಯಾಂಕ್ ಪಡೆದ ಮೇಘನಾ
ಬರವಣಿಗೆ ನನ್ನ ಶಕ್ತಿಯಾಗಿತ್ತು ಎನ್ನುತ್ತಾರೆ 425 ನೇ ರ‍್ಯಾಂಕ್ ಪಡೆದ ಮೇಘನಾ
ಇಂದಿನಿಂದ ಹುಬ್ಬಳ್ಳಿಯಲ್ಲಿ ಆರಂಭವಾಗಿರುವ 2-ದಿನದ ಎಜುಕೇಶನ್ ಎಕ್ಸ್​ಪೋ
ಇಂದಿನಿಂದ ಹುಬ್ಬಳ್ಳಿಯಲ್ಲಿ ಆರಂಭವಾಗಿರುವ 2-ದಿನದ ಎಜುಕೇಶನ್ ಎಕ್ಸ್​ಪೋ
ಯುದ್ಧದ ಬಗ್ಗೆ ಸಿಎಂ ಸಿದ್ದರಾಮಯ್ಯ ಏನು ಹೇಳಿದ್ದಾರೆ ಗೊತ್ತಿಲ್ಲ: ಲಕ್ಷ್ಮಿ
ಯುದ್ಧದ ಬಗ್ಗೆ ಸಿಎಂ ಸಿದ್ದರಾಮಯ್ಯ ಏನು ಹೇಳಿದ್ದಾರೆ ಗೊತ್ತಿಲ್ಲ: ಲಕ್ಷ್ಮಿ
ಕೋಲಾರದಲ್ಲಿ ಜನಪದ ಗಾಯಕನಿಂದ ನಿರ್ಮಾಣವಾದ ಹೈಟೆಕ್ ​ಬಸ್ ನಿಲ್ದಾಣ
ಕೋಲಾರದಲ್ಲಿ ಜನಪದ ಗಾಯಕನಿಂದ ನಿರ್ಮಾಣವಾದ ಹೈಟೆಕ್ ​ಬಸ್ ನಿಲ್ದಾಣ
ಪಾಕಿಸ್ತಾನಕ್ಕೆ ಅದರದ್ದೇ ಭಾಷೆಯಲ್ಲಿ ಉತ್ತರ ಕೊಡಬೇಕು: ಧ್ರುವ ಸರ್ಜಾ
ಪಾಕಿಸ್ತಾನಕ್ಕೆ ಅದರದ್ದೇ ಭಾಷೆಯಲ್ಲಿ ಉತ್ತರ ಕೊಡಬೇಕು: ಧ್ರುವ ಸರ್ಜಾ
ಪಾಕಿಸ್ತಾನಕ್ಕೆ ಉತ್ತರ ನೀಡುವ ಕೆಲಸ ವರಿಷ್ಠರು ಮಾಡುತ್ತಿದ್ದಾರೆ: ಯದುವೀರ್
ಪಾಕಿಸ್ತಾನಕ್ಕೆ ಉತ್ತರ ನೀಡುವ ಕೆಲಸ ವರಿಷ್ಠರು ಮಾಡುತ್ತಿದ್ದಾರೆ: ಯದುವೀರ್
ಟಿವಿಯಲ್ಲಿ ಬರತ್ತಿದ್ದ ಸುದ್ದಿ ಸುಳ್ಳಾಗಲಿ ಅಂತ ಪ್ರಾರ್ಥಿಸುತ್ತಿದ್ದೆ:ಸುಮತಿ
ಟಿವಿಯಲ್ಲಿ ಬರತ್ತಿದ್ದ ಸುದ್ದಿ ಸುಳ್ಳಾಗಲಿ ಅಂತ ಪ್ರಾರ್ಥಿಸುತ್ತಿದ್ದೆ:ಸುಮತಿ