ಪರಿಣೀತಿ ಚೋಪ್ರಾ-ರಾಘವ್ ಚಡ್ಡಾ ನಿಶ್ಚಿತಾರ್ಥ ನಡೆಯೋದು ಪಕ್ಕಾ? ಇಲ್ಲಿದೆ ಸಾಕ್ಷಿ

Parineeti Chopra: ಆಪ್​ ನಾಯಕ ರಾಘವ್ ಜೊತೆ ಪರಿಣೀತಿ ಅಕ್ಟೋಬರ್​ನಲ್ಲಿ ಮದುವೆ ಆಗಲಿದ್ದಾರೆ ಎನ್ನಲಾಗಿದೆ. ಅದಕ್ಕೂ ಮೊದಲು ಇವರು ಗ್ರ್ಯಾಂಡ್ ಆಗಿ ನಿಶ್ಚಿತಾರ್ಥ ಮಾಡಿಕೊಳ್ಳುತ್ತಿದ್ದಾರೆ.

ಪರಿಣೀತಿ ಚೋಪ್ರಾ-ರಾಘವ್ ಚಡ್ಡಾ ನಿಶ್ಚಿತಾರ್ಥ ನಡೆಯೋದು ಪಕ್ಕಾ? ಇಲ್ಲಿದೆ ಸಾಕ್ಷಿ
ರಾಘವ್​-ಪರಿಣೀತಿ
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on: May 12, 2023 | 7:44 AM

ಬಾಲಿವುಡ್ ನಟಿ ಪರಿಣೀತಿ ಚೋಪ್ರಾ (Parineeti Chopra) ಹಾಗೂ ರಾಘವ್ ಚಡ್ಡಾ ಡೇಟಿಂಗ್ ಮಾಡುತ್ತಿರುವ ವಿಚಾರ ಗುಟ್ಟಾಗಿ ಉಳಿದಿಲ್ಲ. ಇಬ್ಬರೂ ಅನೇಕ ಕಡೆಗಳಲ್ಲಿ ಒಟ್ಟಾಗಿ ಕಾಣಿಸಿಕೊಂಡಿದ್ದಿದೆ. ಇವರಿಬ್ಬರೂ ಶನಿವಾರ (ಮೇ 13) ನಿಶ್ಚಿತಾರ್ಥ ಮಾಡಿಕೊಳ್ಳುತ್ತಾರೆ ಎನ್ನಲಾಗಿದೆ. ಇದಕ್ಕೆ ಸಂಬಂಧಿಸಿ ಹೊಸ ಫೋಟೋ ಒಂದು ವೈರಲ್ ಆಗಿದೆ. ಇದನ್ನು ನೋಡಿದ ಅವರ ಫ್ಯಾನ್ಸ್ ಮದುವೆ ನಡೆಯೋದು ಖಚಿತ ಎಂದು ಹೇಳುತ್ತಿದ್ದಾರೆ. ಅಷ್ಟಕ್ಕೂ ಏನಿದು ಫೋಟೋ? ಇಲ್ಲಿದೆ ಅದಕ್ಕೆ ಉತ್ತರ.

ರಾಜಕೀಯಕ್ಕೂ ಬಣ್ಣದ ಲೋಕಕ್ಕೂ ಉತ್ತಮ ನಂಟಿದೆ. ಅನೇಕರು ಸಿನಿಮಾದಿಂದ ರಾಜಕೀಯಕ್ಕೆ ಕಾಲಿಟ್ಟಿದ್ದಾರೆ. ಈಗ ಪರಿಣೀತಿ ಅವರು ರಾಜಕಾರಣಿಯನ್ನೇ ಮದುವೆ ಆಗುತ್ತಿದ್ದಾರೆ. ಆಪ್​ ನಾಯಕ ರಾಘವ್ ಜೊತೆ ಅವರು ಅಕ್ಟೋಬರ್​ನಲ್ಲಿ ಮದುವೆ ಆಗಲಿದ್ದಾರೆ ಎನ್ನಲಾಗಿದೆ. ಅದಕ್ಕೂ ಮೊದಲು ಇವರು ಗ್ರ್ಯಾಂಡ್ ಆಗಿ ನಿಶ್ಚಿತಾರ್ಥ ಮಾಡಿಕೊಳ್ಳುತ್ತಿದ್ದಾರೆ.

ದೆಹಲಿಯಲ್ಲಿರುವ ಪರಿಣೀತಿ ಮನೆಯನ್ನು ಬೆಳಕಿನಿಂದ ಅಲಂಕರಿಸಲಾಗಿದೆ. ಸಾಮಾನ್ಯವಾಗಿ ವಿಶೇಷ ದಿನಗಳ ಸಂದರ್ಭದಲ್ಲಿ ಮನೆಯನ್ನು ಈ ರೀತಿ ಬೆಳಕಿನಿಂದ ಅಲಂಕಾರ ಮಾಡಲಾಗುತ್ತದೆ. ಪರಿಣೀತಿ ಮನೆಯನ್ನು ಅಲಂಕಾರ ಮಾಡಿರುವುದಕ್ಕೆ ನಿಶ್ಚಿತಾರ್ಥವೇ ಕಾರಣ ಎಂದು ಅನೇಕರು ಅಭಿಪ್ರಾಯಪಟ್ಟಿದ್ದಾರೆ. ಅವರ ಕಡೆಯಿಂದ ಈ ಬಗ್ಗೆ ಅಧಿಕೃತ ಮಾಹಿತಿ ಸಿಗಲಿ ಎಂದು ಫ್ಯಾನ್ಸ್ ಕಾಯುತ್ತಿದ್ದಾರೆ.

150ಕ್ಕೂ ಅಧಿಕ ಮಂದಿ ನಿಶ್ಚಿತಾರ್ಥದಲ್ಲಿ ಭಾಗಿ ಆಗುತ್ತಿದ್ದಾರೆ. ಆಪ್ತರು, ಕುಟುಂಬದವರಿಗೆ ಮಾತ್ರ ಆಹ್ವಾನ ನೀಡಲಾಗಿದೆ. ಸದ್ಯ ಮನೆಯನ್ನು ಅಲಂಕಾರ ಮಾಡಿರುವ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಪರಿಣೀತಿ ಚೋಪ್ರಾ ಸಹೋದರಿ ಪ್ರಿಯಾಂಕಾ ಚೋಪ್ರಾ ಅವರಿಗೆ ಈ ಕಾರ್ಯಕ್ರಮಕ್ಕೆ ಬರೋಕೆ ಸಾಧ್ಯವಾಗುತ್ತಿಲ್ಲ. ಇತ್ತೀಚೆಗಷ್ಟೇ ಅವರು ಮುಂಬೈಗೆ ಬಂದಿದ್ದರು.

ಇದನ್ನೂ ಓದಿ: ಒಟ್ಟಾಗಿ ಐಪಿಎಲ್ ಮ್ಯಾಚ್​ ವೀಕ್ಷಿಸಿದ​ ಪರಿಣೀತಿ ಚೋಪ್ರಾ-ರಾಘವ್ ಚಡ್ಡಾ; ಗಮನ ಸೆಳದ ಜೋಡಿ

ಪರಿಣೀತಿ ಹಾಗೂ ರಾಘವ್ ಚಡ್ಡಾ ಲಂಡನ್​ನಲ್ಲಿ ಒಟ್ಟಿಗೆ ಓದಿದ್ದಾರೆ. ಈ ವೇಳೆ ಅವರ ಮಧ್ಯೆ ಪರಿಚಯ ಬೆಳೆದಿದೆ. ಈ ಪರಿಚಯ ಪ್ರೀತಿಗೆ ತಿರುಗಿದೆ ಎನ್ನಲಾಗಿದೆ. ಮನೆಯವರ ಒಪ್ಪಿಗೆ ಪಡೆದ ಬಳಿಕವೇ ಇಬ್ಬರೂ ಮದುವೆ ಆಗುವ ನಿರ್ಧಾರಕ್ಕೆ ಬಂದಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: ‘ಪರಿಣೀತಿ ಚೋಪ್ರಾ ಜೊತೆ ಮದುವೆ ಆಗ್ತೀರಾ’ ಎಂಬ ಪ್ರಶ್ನೆ ಬಗ್ಗೆ ಮೌನ ಮುರಿದ ಆಪ್ ನಾಯಕ

ಪರಿಣೀತಿ ಚೋಪ್ರಾಗೆ ಚಿತ್ರರಂಗದಲ್ಲಿ ಹೇಳಿಕೊಳ್ಳುವಂತಹ ಯಶಸ್ಸು ಸಿಗಲೇ ಇಲ್ಲ. ಅವರನ್ನು ಹುಡುಕಿಕೊಂಡು ದೊಡ್ಡ ನಿರ್ಮಾಪಕರಾಗಲೀ, ನಿರ್ದೇಶಕರಾಗಲೀ ಬರುತ್ತಿಲ್ಲ. ಅಲ್ಲೊಂದು ಇಲ್ಲೊಂದು ಸಿನಿಮಾ ಮಾಡಿಕೊಂಡು ಅವರು ಮುನ್ನಡೆಯುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಯತ್ನಾಳ್ ದೂರು ನೀಡಿದರೆ ವಿಜಯೇಂದ್ರ ವಿರುದ್ಧ ತನಿಖೆ: ಪ್ರಿಯಾಂಕ್ ಖರ್ಗೆ
ಯತ್ನಾಳ್ ದೂರು ನೀಡಿದರೆ ವಿಜಯೇಂದ್ರ ವಿರುದ್ಧ ತನಿಖೆ: ಪ್ರಿಯಾಂಕ್ ಖರ್ಗೆ
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
14 ತಿಂಗಳುಗಳ ಬಳಿಕ ಮೊಹಮ್ಮದ್ ಶಮಿ ಎಂಟ್ರಿ: ವಿಡಿಯೋ ಹಂಚಿಕೊಂಡ ಬಿಸಿಸಿಐ
14 ತಿಂಗಳುಗಳ ಬಳಿಕ ಮೊಹಮ್ಮದ್ ಶಮಿ ಎಂಟ್ರಿ: ವಿಡಿಯೋ ಹಂಚಿಕೊಂಡ ಬಿಸಿಸಿಐ
ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​
ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​
ಗೃಹ ಇಲಾಖೆ ನೀಡುವ ಸೂಚನೆಗಳನ್ನು ಬ್ಯಾಂಕ್​ಗಳು ಪಾಲಿಸುತ್ತಿಲ್ಲ: ಪರಮೇಶ್ವರ್
ಗೃಹ ಇಲಾಖೆ ನೀಡುವ ಸೂಚನೆಗಳನ್ನು ಬ್ಯಾಂಕ್​ಗಳು ಪಾಲಿಸುತ್ತಿಲ್ಲ: ಪರಮೇಶ್ವರ್
ಉದ್ಯಮಿಗೆ ಹಲ್ಲೆ ಮಾಡಿ ಹಣ ಕಸಿದು ಕಾರು ಸಮೇತ ಪರಾರಿಯಾದ ಮುಸುಕುಧಾರಿಗಳು
ಉದ್ಯಮಿಗೆ ಹಲ್ಲೆ ಮಾಡಿ ಹಣ ಕಸಿದು ಕಾರು ಸಮೇತ ಪರಾರಿಯಾದ ಮುಸುಕುಧಾರಿಗಳು
ಬಾಗಲಕೋಟೆಯ ಪ್ರೌಢ ಮತ್ತು ಪ್ರಾಥಮಿಕ ಶಾಲೆಗಳಿಗೆ ರಜೆ ಘೋಷಣೆ
ಬಾಗಲಕೋಟೆಯ ಪ್ರೌಢ ಮತ್ತು ಪ್ರಾಥಮಿಕ ಶಾಲೆಗಳಿಗೆ ರಜೆ ಘೋಷಣೆ
ಗೌತಮಿಯ ಮುದ್ದಾಡಿದ ಶ್ವಾನಗಳು; ಮನೆಗೆ ಬಂದ ಸ್ಪರ್ಧಿಗೆ ಹೀಗಿತ್ತು ಸ್ವಾಗತ
ಗೌತಮಿಯ ಮುದ್ದಾಡಿದ ಶ್ವಾನಗಳು; ಮನೆಗೆ ಬಂದ ಸ್ಪರ್ಧಿಗೆ ಹೀಗಿತ್ತು ಸ್ವಾಗತ
ರಜತ್ ಮೇಲಿನ ಕೋಪಕ್ಕೆ ಬಿಗ್ ಬಾಸ್ ಪ್ರಾಪರ್ಟಿ ಪುಡಿ ಮಾಡಿದ ಮಂಜು
ರಜತ್ ಮೇಲಿನ ಕೋಪಕ್ಕೆ ಬಿಗ್ ಬಾಸ್ ಪ್ರಾಪರ್ಟಿ ಪುಡಿ ಮಾಡಿದ ಮಂಜು
ಡೊನಾಲ್ಡ್​ಟ್ರಂಪ್​ಗೆ ಮರಳು ಕಲಾವಿದನಿಂದ ಅಭಿನಂದನೆ
ಡೊನಾಲ್ಡ್​ಟ್ರಂಪ್​ಗೆ ಮರಳು ಕಲಾವಿದನಿಂದ ಅಭಿನಂದನೆ