AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರೆಗ್ನೆಂಟ್ ಆಗಿದ್ದಾರೆ ನಟಿ ಪರಿಣೀತಿ ಚೋಪ್ರಾ? ಮೂಡಿತು ಅನುಮಾನ

ಪರಿಣೀತಿ ಚೋಪ್ರಾ ಹಾಗೂ ರಾಘಚ್ ಛಡ್ಡಾ ಅವರು ಕಳೆದ ವರ್ಷ ಮದುವೆ ಆದರು. ಇತ್ತೀಚೆಗೆ ಅವರು ಲೂಸ್ ಫಿಟ್ಟಿಂಗ್ ಡ್ರೆಸ್​ನಲ್ಲಿ ವಿಮಾನ ನಿಲ್ದಾಣದಲ್ಲಿ ಕಾಣಿಸಿಕೊಂಡಿದ್ದರು. ಆದರೆ, ಈ ವಿಚಾರದಲ್ಲಿ ನಿಜ ಇಲ್ಲ ಎಂದು ಹೇಳಲಾಗುತ್ತಿದೆ. ಕುಟುಂಬದ ಕಡೆಯಿಂದ ಈ ಬಗ್ಗೆ ಸ್ಪಷ್ಟನೆ ಸಿಕ್ಕಿಲ್ಲ ಎಂದು ಹೇಳಲಾಗುತ್ತಿದೆ.

ಪ್ರೆಗ್ನೆಂಟ್ ಆಗಿದ್ದಾರೆ ನಟಿ ಪರಿಣೀತಿ ಚೋಪ್ರಾ? ಮೂಡಿತು ಅನುಮಾನ
ರಾಘವ್-ಪರಿಣೀತಿ
 ಶ್ರೀಲಕ್ಷ್ಮೀ ಎಚ್
| Edited By: |

Updated on: Mar 10, 2024 | 9:00 AM

Share

ಇತ್ತೀಚೆಗೆ ಅನೇಕ ಸೆಲೆಬ್ರಿಟಿಗಳು ಪ್ರೆಗ್ನೆಂಟ್ ವಿಚಾರ ಘೋಷಣೆ ಮಾಡಿಕೊಂಡಿದ್ದಾರೆ. ದೀಪಿಕಾ ಪಡುಕೋಣೆ (Deepika Padukone) ಹಾಗೂ ರಣವೀರ್ ಸಿಂಗ್ ಅವರು ಮಗುವಿನ ನಿರೀಕ್ಷೆಯಲ್ಲಿರುವ ಬಗ್ಗೆ ಮಾಹಿತಿ ನೀಡಿದ್ದಾರೆ. ಕನ್ನಡದ ಕ್ಯೂಟ್ ಕಪಲ್ ಮಿಲನಾ ನಾಗರಾಜ್ ಹಾಗೂ ಡಾರ್ಲಿಂಗ್ ಕೃಷ್ಣ ಕೂಡ ಸಿಹಿ ಸುದ್ದಿ ನೀಡಿದ್ದಾರೆ. ಈ ಎರಡೂ ದಂಪತಿ ಸೆಪ್ಟೆಂಬರ್​ನಲ್ಲಿ ತಂದೆ-ತಾಯಿ ಆಗಿ ಪ್ರಮೋಟ್ ಆಗಲಿದ್ದಾರೆ. ಈಗ ಪರಿಣೀತಿ ಚೋಪ್ರಾ ಕೂಡ ಪ್ರೆಗ್ನೆಂಟ್ ಎನ್ನುವ ವಿಚಾರ ಹರಿದಾಡಿದೆ. ಆದರೆ, ಕೆಲವು ಮೂಲಗಳ ಪ್ರಕಾರ ಅವರು ಪ್ರೆಗ್ನೆಂಟ್ ಅಲ್ಲ ಎನ್ನಲಾಗಿದೆ.

ಪರಿಣೀತಿ ಚೋಪ್ರಾ ಹಾಗೂ ರಾಘಚ್ ಛಡ್ಡಾ ಅವರು ಕಳೆದ ವರ್ಷ ಮದುವೆ ಆದರು. ಇತ್ತೀಚೆಗೆ ಅವರು ಲೂಸ್ ಫಿಟ್ಟಿಂಗ್ ಡ್ರೆಸ್​ನಲ್ಲಿ ವಿಮಾನ ನಿಲ್ದಾಣದಲ್ಲಿ ಕಾಣಿಸಿಕೊಂಡಿದ್ದರು. ಆದರೆ, ಈ ವಿಚಾರದಲ್ಲಿ ನಿಜ ಇಲ್ಲ ಎಂದು ಹೇಳಲಾಗುತ್ತಿದೆ. ಕುಟುಂಬದ ಕಡೆಯಿಂದ ಈ ಬಗ್ಗೆ ಸ್ಪಷ್ಟನೆ ಸಿಕ್ಕಿಲ್ಲ ಎಂದು ಹೇಳಲಾಗುತ್ತಿದೆ.

ಪರಿಣೀತಿ ಚೋಪ್ರಾ ಅವರು ತಮ್ಮ ಕೆಲಸದ ಮೇಲೆ ಗಮನ ಹರಿಸುತ್ತಿದ್ದಾರೆ. ಅವರು ಹಲವು ಸಿನಿಮಾ ಒಪ್ಪಿಕೊಂಡು ನಟಿಸುತ್ತಿದ್ದಾರೆ. ಇದರ ಜೊತೆಗೆ ಅವರಿಗೆ ಹಲವು ಬ್ರ್ಯಾಂಡ್​ಗಳ ಪ್ರಚಾರದ ರಾಯಭಾರತ್ವ ಕೂಡ ಸಿಕ್ಕಿದೆ. ಅವುಗಳ ಪ್ರಚಾರದಲ್ಲೂ ಪರಿಣೀತಿ ಚೋಪ್ರಾ ಬ್ಯುಸಿ ಇದ್ದಾರೆ. ಅವರು ಇನ್ನೂ ಕೆಲವು ವರ್ಷಗಳ ಕಾಲ ಚಿತ್ರರಂಗದಲ್ಲಿ ಬ್ಯುಸಿ ಆಗಿರೋ ಆಲೋಚನೆ ಇದೆ.

‘ಪರಿಣೀತಿ ಚೋಪ್ರಾ ಅವರ ಪ್ರೆಗ್ನೆನ್ಸಿ ವದಂತಿ ಸುಳ್ಳು. ಅವರು ಕೆಲಸಕ್ಕಾಗಿ ನಾನಾ ಊರುಗಳಿಗೆ ತೆರಳಬೇಕಾಗುತ್ತದೆ. ಯಾವ ಬಟ್ಟೆ ಹಾಕಿಕೊಳ್ಳಬೇಕು ಎಂಬುದು ಅವರ ಆಯ್ಕೆ. ಇದರಿಂದ ಈ ರೀತಿ ವದಂತಿ ಹೊರಡಿಸುವುದು ಸರಿ ಅಲ್ಲ’ ಎಂದು ಪರಿಣೀತಿ ಚೋಪ್ರಾ ಆಪ್ತರು ಹೇಳರುವುದಾಗಿ ವರದಿ ಆಗಿದೆ. ಪರಿಣೀತಿ ಚೋಪ್ರಾ ಅವರು ತಮ್ಮ ಖಾಸಗಿ ವಿಚಾರವನ್ನು ಹೊರಗೆ ಬಿಟ್ಟುಕೊಡೋಕೆ ಬಯುಸುವುದಿಲ್ಲ.

ರಾಘವ್ ಚಡ್ಡಾ ಹಾಗೂ ಪರಿಣೀತಿ ಚೋಪ್ರಾ ಹಲವು ವರ್ಷಗಳಿಂದ ಪ್ರೀತಿಸುತ್ತಿದ್ದರು. ಆದರೆ, ಈ ವಿಚಾರವನ್ನು ಮುಚ್ಚಿಟ್ಟಿದ್ದರು. ಮದುವೆ ಸಂದರ್ಭದಲ್ಲಿ ಈ ವಿಚಾರವನ್ನು ಅವರು ರಿವೀಲ್ ಮಾಡಿದರು. ರಾಘವ್ ಹಾಗೂ ಪರಿಣೀತಿ 2023ರ ಸೆಪ್ಟೆಂಬರ್​ನಲ್ಲಿ ಮದುವೆ ಆದರು. ರಾಜಸ್ಥಾನದ ಉದಯಪುರದಲ್ಲಿ ಇವರ ಮದುವೆ ಅದ್ದೂರಿಯಾಗಿ ನಡೆದಿದೆ.

ಇದನ್ನೂ ಓದಿ: ಬರ್ತ್​ಡೇ ಬೆಡಗಿ ಪರಿಣೀತಿ ಚೋಪ್ರಾ ಬಗ್ಗೆ ನಿಮಗೆಷ್ಟು ಗೊತ್ತು? ಮದುವೆ ಬಳಿಕ ಸಿನಿಮಾರಂಗ ಬಿಟ್ಟರಾ?

ಪರಿಣೀತಿ ಚೋಪ್ರಾ ಇತ್ತೀಚೆಗೆ ಸಿನಿಮಾ ಆಯ್ಕೆಯಲ್ಲಿ ಸಖತ್ ಚ್ಯೂಸಿ ಆಗಿದ್ದಾರೆ. ಅಲ್ಲೊಂದು ಇಲ್ಲೊಂದು ಸಿನಿಮಾ ಒಪ್ಪಿಕೊಂಡು ನಟಿಸಿದ್ದಾರೆ. ಅವರಿಗೆ ಈವರೆಗೆ ಚಿತ್ರರಂಗದಲ್ಲಿ ಇಲ್ಲಿವರೆಗೆ ದೊಡ್ಡ ಗೆಲುವು ಸಿಕ್ಕಿಲ್ಲ. ಸದ್ಯ ಅವರ ಮುಂದಿನ ಸಿನಿಮಾ ಏಪ್ರಿಲ್ 12ರಂದು ರಿಲೀಸ್ ಆಗಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
Shreelaxmi H
Shreelaxmi H

ಪತ್ರಕರ್ತೆ ಆಗಬೇಕು ಅಂದುಕೊಂಡವಳು. ಮನೆಯವರ ಒತ್ತಾಯಕ್ಕೆ ಅಕೌಂಟ್ ತೆಗೆದುಕೊಂಡೆ. ಈಗ ಬ್ಯಾಂಕ್ ಎಕ್ಸಾಂಗಳನ್ನು ಬರೆಯುತ್ತಿದ್ದೇನೆ. ಸಮಯ ಸಿಕ್ಕಾಗ ಸುತ್ತಾಡುತ್ತೇನೆ. ಓದಿನ ಬಗ್ಗೆ ಅತೀವ ಆಸಕ್ತಿ. ರವಿ ಬೆಳಗೆರೆ, ತೇಜಸ್ವಿ ನೆಚ್ಚಿನವರು. ಅವರ ಪುಸ್ತಕಗಳನ್ನು ಮತ್ತೆ ಮತ್ತೆ ಓದುತ್ತೇನೆ. ಸಮಯ ಸಿಕ್ಕಾಗ ಪತ್ರಿಕೆಗಳಿಗೆ ಕಥೆಗಳನ್ನು ಬರೆಯುತ್ತೇನೆ. ಸಿನಿಮಾ ಬಗ್ಗೆ ಅತೀವ ಆಸಕ್ತಿ. ಈಗ ಟಿವಿ9 ಕನ್ನಡಕ್ಕೆ ಸಿನಿಮಾ ಸುದ್ದಿಗಳನ್ನು ಬರೆಯುತ್ತಿದ್ದೇನೆ.

Read More
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್
ಡಿಕೆಶಿ ಪ್ರಮಾಣವಚನ ಕಾರ್ಯಕ್ರಮದ ಬಗ್ಗೆ ನೊಣವಿನಕೆರೆ ಶ್ರೀಗಳು ಹೇಳಿದ್ದಿಷ್ಟು
ಡಿಕೆಶಿ ಪ್ರಮಾಣವಚನ ಕಾರ್ಯಕ್ರಮದ ಬಗ್ಗೆ ನೊಣವಿನಕೆರೆ ಶ್ರೀಗಳು ಹೇಳಿದ್ದಿಷ್ಟು