AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಂಡು ಮಗುವಿಗೆ ಜನ್ಮ ನೀಡಿದ ನಟಿ ಪರಿಣಿತಿ ಚೋಪ್ರಾ

ನಟಿ ಪರಿಣಿತಿ ಚೋಪ್ರಾ ಮತ್ತು ರಾಜಕಾರಣಿ ರಾಘವ್ ಚಡ್ಡಾ ದಂಪತಿಗೆ ಗಂಡು ಮಗು ಜನಿಸಿದ್ದು, ರಾಘವ್ ಚಡ್ಡಾ ಈ ಸಂತೋಷದ ಸುದ್ದಿಯನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ. ಅಭಿಮಾನಿಗಳಿಂದ ಮತ್ತು ಸೆಲೆಬ್ರಿಟಿಗಳಿಂದ ಶುಭಾಶಯಗಳು ಹರಿದುಬರುತ್ತಿವೆ. ದೆಹಲಿಯ ಆಸ್ಪತ್ರೆಯಲ್ಲಿ ಮಗುವಿಗೆ ಜನ್ಮ ನೀಡಿದ ಪರಿಣಿತಿ, ಹೊಸ ಜೀವನದ ಸಂತೋಷದಲ್ಲಿದ್ದಾರೆ.

ಗಂಡು ಮಗುವಿಗೆ ಜನ್ಮ ನೀಡಿದ ನಟಿ ಪರಿಣಿತಿ ಚೋಪ್ರಾ
ರಾಘವ್- ಪರಿಣಿತಿ
 ಶ್ರೀಲಕ್ಷ್ಮೀ ಎಚ್
| Edited By: |

Updated on: Oct 20, 2025 | 1:22 PM

Share

ಬಾಲಿವುಡ್ ನಟಿ ಪರಿಣಿತಿ ಚೋಪ್ರಾ (Pariniti Chopra) ಮತ್ತು ರಾಜಕಾರಣಿ ರಾಘವ್ ಚಡ್ಡಾ ತಮ್ಮ ಮಗುವಿನ ಆಗಮನದ ಬಗ್ಗೆ ಪೋಸ್ಟ್ ಹಂಚಿಕೊಂಡಿದ್ದರು. ಪರಿಣಿತಿ ಪ್ರೆಗ್ನೆಂಟ್ ಎಂಬ ವಿಚಾರ ಇದರಲ್ಲಿ ಇತ್ತು. ಈಗ ಪರಿಣಿತಿ ತಾಯಿಯಾಗಿದ್ದು ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ರಾಘವ್ ಚಡ್ಡಾ ಸಾಮಾಜಿಕ ಮಾಧ್ಯಮದಲ್ಲಿ ಸಂತೋಷದ ಸುದ್ದಿಯನ್ನು ಹಂಚಿಕೊಂಡಿದ್ದಾರೆ.

ಭಾನುವಾರ (ಅಕ್ಟೋಬರ್ 19) ಬೆಳಿಗ್ಗೆ ಪರಿಣಿತಿ ಅವರನ್ನು ದೆಹಲಿಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂಬ ಸುದ್ದಿ ಬಂದಿತ್ತು. ಇದು ಅಭಿಮಾನಿಗಳಿಗೆ ಅವರ ಆರೋಗ್ಯದ ಬಗ್ಗೆ ಚಿಂತೆ ಮೂಡಿಸಿತು. ಈಗ, ಅಂತಿಮವಾಗಿ, ಅವರ ಮನೆಗೆ ಗಂಡು ಮಗುವಿನ ಆಗಮನ ಆಗಿದೆ. ಸಾಮಾಜಿಕ ಮಾಧ್ಯಮದಲ್ಲಿ ಈ ಅಭಿಮಾನಿಗಳಿಂದ ಅಭಿನಂದನೆಗಳ ಮಹಾಪೂರವೇ ಹರಿದು ಬರುತ್ತಿದೆ.

ಇದನ್ನೂ ಓದಿ
Image
‘ದೆವ್ವ ಬಿಡಿಸೋಕೆ ಬರ್ತಿದಾರೆ ಸುದೀಪ್’; ದೊಡ್ಡ ಸೂಚನೆ ಕೊಟ್ಟ ಕಲರ್ಸ್ ಕನ್ನಡ
Image
ಶಾಲಲ್ಲಿ ಚಪ್ಪಲಿ ಸುತ್ತಿ ಹೊಡೆದ ಗಿಲ್ಲಿ ನಟ; ಅಶ್ವಿನಿ-ಜಾನ್ವಿ ಗಪ್ ಚುಪ್
Image
ರಕ್ಷಿತಾ ಗುಂಡಿಗೆ ಮೆಚ್ಚಲೇಬೇಕು; ಅಶ್ವಿನಿ-ಜಾನ್ವಿ ಕೂಗಾಡಿದರೂ ಜಗಲ್ಲೂ ಇಲ್ಲ
Image
ಆಲಿಯಾ ಹೊಸ ಮನೆಯಲ್ಲಿ ಮೈಸೂರಿನ ಅರುಣ್ ಯೋಗಿರಾಜ್ ಕೆತ್ತಿದ ಗಣಪತಿ ಮೂರ್ತಿ

‘ಕೊನೆಗೂ, ನಮ್ಮ ಮಗ ಬಂದಿದ್ದಾನೆ. ಈ ಪುಟ್ಟ ಅತಿಥಿ ಬರುವ ಮೊದಲು ಜೀವನ ಹೇಗಿತ್ತು ಎಂದು ನಮಗೆ ನಿಜವಾಗಿಯೂ ನೆನಪಿಲ್ಲ. ನಮ್ಮ ಹೃದಯ ಸಂತೋಷದಿಂದ ತುಂಬಿದೆ. ಮೊದಲು ನಾವು ಒಬ್ಬರಿಗೊಬ್ಬರು ಇದ್ದೆವು ಆದರೆ ಈಗ ನಮಗೆ ಎಲ್ಲವೂ ಇದೆ. ಪ್ರೀತಿ ಮತ್ತು ಕೃತಜ್ಞತೆಯಿಂದ, ಪರಿಣಿತಿ ಮತ್ತು ರಾಘವ್’ ಎಂದು ರಾಘವ್ ಚಡ್ಡಾ ಪೋಸ್ಟ್ ಮಾಡಿದ್ದಾರೆ.

ರಾಘವ್ ಅವರು ಈ ಪೋಸ್ಟ್ ಅನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡ ತಕ್ಷಣ, ಅಭಿಮಾನಿಗಳು ಮತ್ತು ಸೆಲೆಬ್ರಿಟಿಗಳು ಅವರಿಗೆ ಶುಭಾಶಯಗಳನ್ನು ತಿಳಿಸಿದ್ದಾರೆ. ಎಲ್ಲರೂ ದಂಪತಿಗಳ ಹೊಸ ಪ್ರಯಾಣಕ್ಕೆ ಪ್ರೀತಿ ಮತ್ತು ಆಶೀರ್ವಾದಗಳನ್ನು ಕಳುಹಿಸಿದ್ದಾರೆ.

ಪರಿಣಿತಿ ಮತ್ತು ರಾಘವ್ ಅವರ ವಿವಾಹ ಸಮಾರಂಭವು ಸೆಪ್ಟೆಂಬರ್ 24, 2023ರಂದು ರಾಜಸ್ಥಾನದ ಉದಯಪುರದಲ್ಲಿ ನಡೆಯಿತು. ಈ ವಿವಾಹದಲ್ಲಿ ಬಾಲಿವುಡ್ ಮತ್ತು ರಾಜಕೀಯದ ಅನೇಕ ಸೆಲೆಬ್ರಿಟಿಗಳು ಭಾಗವಹಿಸಿದ್ದರು. ಇದಕ್ಕೂ ಮೊದಲು, ಈ ಜೋಡಿ ಅದ್ದೂರಿಯಾಗಿ ನಿಶ್ಚಿತಾರ್ಥ ಮಾಡಿಕೊಂಡಿತ್ತು.

ಇದನ್ನೂ ಓದಿ: ತಾಯಿ ಆಗ್ತಿದ್ದಾರೆ ಪರಿಣಿತಿ ಚೋಪ್ರಾ; ಇವರ ವಿವಾಹ ನಡೆದಿದ್ದು ಯಾವಾಗ?

ಪರಿಣಿತಿ ತನ್ನ ಪ್ರೇಮಕಥೆಯ ಬಗ್ಗೆ ಪಾಡ್‌ಕ್ಯಾಸ್ಟ್‌ನಲ್ಲಿ ಮಾತನಾಡಿದ್ದರು. ಲಂಡನ್‌ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಇವರು ಭೇಟಿಯಾದರು. ಅದಾದ ನಂತರ, ಇವರ ಮಧ್ಯೆ ಗೆಳೆತನ ಮೂಡಿತು. ಅದು ಪ್ರೀತಿಗೆ ತಿರುಗಿತು. ಆ ಬಳಿಕ ಇವರು ಮದುವೆಯಾಗಲು ನಿರ್ಧರಿಸಿದರು. ವಿಶೇಷ ಎಂದರೆ, ಇವರಿಬ್ಬರೂ ಲಂಡನ್​ನಲ್ಲಿ ಒಂದೇ ಕಾಲೇಜ್​ನಲ್ಲಿ ಶಿಕ್ಷಣ ಪಡೆದಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್