Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗುಟ್ಟಾಗಿ ನಡೆಯಿತು ಪರಿಣೀತಿ ಚೋಪ್ರಾ-ರಾಘವ್ ಚಡ್ಡಾ ಎಂಗೇಜ್​ಮೆಂಟ್​? ಅಕ್ಟೋಬರ್​ನಲ್ಲಿ ಮದುವೆ

ಪರಿಣೀತಿ ಚೋಪ್ರಾ ಗುಟ್ಟಾಗಿ ಎಂಗೇಜ್​ಮೆಂಟ್ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಎಲ್ಲವೂ ಅಂದುಕೊಂಡಂತೆ ನಡೆದರೆ ಅಕ್ಟೋಬರ್ ವೇಳೆಗೆ ಅದ್ದೂರಿಯಾಗಿ ಮದುವೆ ಜರುಗಲಿದೆ.

ಗುಟ್ಟಾಗಿ ನಡೆಯಿತು ಪರಿಣೀತಿ ಚೋಪ್ರಾ-ರಾಘವ್ ಚಡ್ಡಾ ಎಂಗೇಜ್​ಮೆಂಟ್​? ಅಕ್ಟೋಬರ್​ನಲ್ಲಿ ಮದುವೆ
ರಾಘವ್-ಪರಿಣೀತಿ
Follow us
ರಾಜೇಶ್ ದುಗ್ಗುಮನೆ
|

Updated on: Apr 21, 2023 | 11:31 AM

ನಟಿ ಪರಿಣೀತಿ ಚೋಪ್ರಾ (Parineeti Chopra) ಚಿತ್ರರಂಗದಲ್ಲಿ ದೊಡ್ಡ ಯಶಸ್ಸು ಕಂಡಿಲ್ಲ. ಅವರ ನಟನೆಯ ಯಾವ ಚಿತ್ರಗಳೂ ಸದ್ದು ಮಾಡಿಲ್ಲ. ಆದರೆ, ಈಗ ಅವರು ವೈಯಕ್ತಿಕ ವಿಚಾರದಿಂದ ಸುದ್ದಿಯಲ್ಲಿದ್ದಾರೆ. ಅವರು ಆಪ್ ನಾಯಕ ರಾಘವ್ ಚಡ್ಡಾ ಜೊತೆ ಮದುವೆ ಆಗಲಿದ್ದಾರೆ ಎನ್ನಲಾಗುತ್ತಿದೆ. ಇಬ್ಬರೂ ಒಟ್ಟಾಗಿ ಅನೇಕ ಕಡೆಗಳಲ್ಲಿ ಕಾಣಿಸಿಕೊಂಡಿದ್ದು ಈ ಅನುಮಾನ ಹುಟ್ಟಲು ಮುಖ್ಯ ಕಾರಣ. ಈಗ ಪರಿಣೀತಿ ಚೋಪ್ರಾ ಗುಟ್ಟಾಗಿ ಎಂಗೇಜ್​ಮೆಂಟ್ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಎಲ್ಲವೂ ಅಂದುಕೊಂಡಂತೆ ನಡೆದರೆ ಅಕ್ಟೋಬರ್ ವೇಳೆಗೆ ಅದ್ದೂರಿಯಾಗಿ ಮದುವೆ ಜರುಗಲಿದೆ.

ಪರಿಣೀತಿ ಚೋಪ್ರಾ ಹೋದಲ್ಲಿ ಬಂದಲ್ಲಿ ಪಾಪರಾಜಿಗಳು ಮುತ್ತಿಕೊಳ್ಳುತ್ತಿದ್ದಾರೆ. ರಾಘವ್ ಜೊತೆಗಿನ ಸಂಬಂಧದ ಬಗ್ಗೆ ಅವರಿಗೆ ನಿರಂತರವಾಗಿ ಕೇಳಲಾಗುತ್ತಿದೆ. ಆದರೆ, ಈ ವಿಚಾರದಲ್ಲಿ ಅವರು ನಕ್ಕು ಸುಮ್ಮನಾಗುತ್ತಿದ್ದಾರೆ ಅಷ್ಟೇ. ಈಗ ಅವರ ಕೈಯಲ್ಲಿ ಹೊಸದಾಗಿ ಉಂಗುರ ಕಾಣಿಸಿದ್ದು ಹಲವು ಅನುಮಾನ ಹುಟ್ಟುಹಾಕಿದೆ.

ಇತ್ತೀಚೆಗೆ ರಾಘವ್ ಚಡ್ಡಾ ಹಾಗೂ ಪರಿಣೀತಿ ಗುಟ್ಟಾಗಿ ಎಂಗೇಜ್​ಮೆಂಟ್ ಮಾಡಿಕೊಂಡಿದ್ದಾರೆ ಎಂದು ವರದಿ ಆಗಿದೆ. ಕುಟುಂಬದ ಕೆಲವೇ ಕೆಲವು ಸದಸ್ಯರು ಈ ಕಾರ್ಯಕ್ರಮಕ್ಕೆ ಆಗಮಿಸಿದ್ದಾರೆ. ಪ್ರಿಯಾಂಕಾ ಚೋಪ್ರಾ ಅವರು ಇತ್ತೀಚೆಗೆ ಮುಂಬೈಗೆ ಬಂದಿದ್ದರು. ಅವರು ಕೂಡ ಎಂಗೇಜ್​ಮೆಂಟ್​ಗೆ ಹಾಜರಿ ಹಾಕಿದ್ದರಾ ಎನ್ನುವ ಪ್ರಶ್ನೆ ಮೂಡಿದೆ. ಇನ್ನು ಇವರ ಮದುವೆ ವಿಚಾರ ಕೂಡ ಚರ್ಚೆಯಲ್ಲಿದೆ.

ಇದನ್ನೂ ಓದಿ: ‘ಪರಿಣೀತಿ ಚೋಪ್ರಾ ಜೊತೆ ಮದುವೆ ಆಗ್ತೀರಾ’ ಎಂಬ ಪ್ರಶ್ನೆ ಬಗ್ಗೆ ಮೌನ ಮುರಿದ ಆಪ್ ನಾಯಕ

ಅಕ್ಟೋಬರ್​ನಲ್ಲಿ ಈ ಜೋಡಿ ಮದುವೆ ಆಗಲಿದೆ ಎನ್ನಲಾಗುತ್ತಿದೆ. ಪರಿಣೀತಿಗೆ ಒಪ್ಪಿಕೊಂಡ ಸಿನಿಮಾ ಕೆಲಸ ಪೂರ್ಣಗೊಳಿಸಬೇಕಿದೆ. ರಾಘವ್ ರಾಜಕೀಯದಲ್ಲಿ ಬ್ಯುಸಿ ಇದ್ದಾರೆ. ಹೀಗಾಗಿ, ಸಿದ್ಧತೆಗೆ ಸಮಯ ಬೇಕಿದ್ದು, ಅಕ್ಟೋಬರ್ ವೇಳೆಗೆ ಇವರು ವಿವಾಹ ಆಗಲಿದ್ದಾರೆ. ಅಕ್ಟೋಬರ್​​ನಲ್ಲಿ ಪ್ರಿಯಾಂಕಾ ಕೂಡ ಭಾರತಕ್ಕೆ ಬರಲಿದ್ದಾರೆ. ಅವರು ಕೂಡ ಮದುವೆಗೆ ಹಾಜರಿ ಹಾಕಲಿದ್ದಾರೆ ಎಂದು ತಿಳಿದು ಬಂದಿದೆ.

ಇದನ್ನೂ ಓದಿ: RRR: ‘ಶ್ರದ್ಧಾ ಕಪೂರ್, ಪರಿಣೀತಿ ಚೋಪ್ರಾ..’; ‘ಆರ್​ಆರ್​ಆರ್​’ ಆಫರ್ ರಿಜೆಕ್ಟ್ ಮಾಡಿದ್ದ 5 ಸ್ಟಾರ್ ನಟಿಯರು ಇವರೇ!

ಇತ್ತೀಚೆಗೆ ಪರಿಣೀತಿ ಚೋಪ್ರಾ ಅವರು ಡಿಸೈನರ್ ಮನಿಷ್ ಮಲ್ಹೋತ್ರಾ ನಿವಾಸಕ್ಕೆ ಭೇಟಿ ನೀಡಿದ್ದರು. ಮದುವೆ ಉಡುಗೆ ಆರ್ಡರ್ ನೀಡಲು ಇಲ್ಲಿಗೆ ಅವರು ಆಗಮಿಸಿದ್ದರು ಎನ್ನಲಾಗಿದೆ. ಈ ಬಗ್ಗೆ ಪರಿಣೀತಿ ಚೋಪ್ರಾ ಬಳಿ ಕೇಳಿದರೆ ಅವರು ನಕ್ಕು ಸುಮ್ಮನಾಗುತ್ತಿದ್ದಾರೆ. ಹೀಗಾಗಿ ಅನುಮಾನ ಬಲವಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ಬಿವಿ ಕಾರಂತರು ನಾಯಿ ತಿಥಿಗೆ ಹೋದ ಕತೆ, ರಂಗಾಯಣ ರಘು ಅನುಕರಣೆ ನೋಡಿ
ಬಿವಿ ಕಾರಂತರು ನಾಯಿ ತಿಥಿಗೆ ಹೋದ ಕತೆ, ರಂಗಾಯಣ ರಘು ಅನುಕರಣೆ ನೋಡಿ
ಹಿಂದೂ ಕಾರ್ಯಕರ್ತರು ಯಾವ ಕಾರಣಕ್ಕೂ ಎದೆಗುಂದಬಾರದು: ಯತ್ನಾಳ್
ಹಿಂದೂ ಕಾರ್ಯಕರ್ತರು ಯಾವ ಕಾರಣಕ್ಕೂ ಎದೆಗುಂದಬಾರದು: ಯತ್ನಾಳ್
ವಿಜಯೇಂದ್ರ ಬಗ್ಗೆ ಹಿಂದೆ ನೀಡಿದ ಹೇಳಿಕೆಗೆ ಈಗಲೂ ಬದ್ಧ: ರಮೇಶ್ ಜಾರಕಿಹೊಳಿ
ವಿಜಯೇಂದ್ರ ಬಗ್ಗೆ ಹಿಂದೆ ನೀಡಿದ ಹೇಳಿಕೆಗೆ ಈಗಲೂ ಬದ್ಧ: ರಮೇಶ್ ಜಾರಕಿಹೊಳಿ
ಜಾಮ್ನಗರದಿಂದ ದ್ವಾರಕಾಗೆ 140 ಕಿ.ಮೀ ದೂರ ಅನಂತ್ ಅಂಬಾನಿ ಪಾದಯಾತ್ರೆ
ಜಾಮ್ನಗರದಿಂದ ದ್ವಾರಕಾಗೆ 140 ಕಿ.ಮೀ ದೂರ ಅನಂತ್ ಅಂಬಾನಿ ಪಾದಯಾತ್ರೆ
ಮಠದಲ್ಲಿ ಸಿದ್ಧಲಿಂಗ ಸ್ವಾಮೀಜಿಯವರ ಪಾದಕ್ಕೆ ನಮಸ್ಕರಿಸಿದ ರಾಜನಾಥ್ ಸಿಂಗ್
ಮಠದಲ್ಲಿ ಸಿದ್ಧಲಿಂಗ ಸ್ವಾಮೀಜಿಯವರ ಪಾದಕ್ಕೆ ನಮಸ್ಕರಿಸಿದ ರಾಜನಾಥ್ ಸಿಂಗ್