Sign In

By signing in or creating an account, you agree with Associated Broadcasting Company's Terms & Conditions and Privacy Policy.

Shah Rukh Khan: ಸೆಲ್ಫಿ ಕೇಳಲು ಬಂದ ಅಭಿಮಾನಿಯನ್ನು ತಳ್ಳಿದ ಶಾರುಖ್​ ಖಾನ್​; ‘ಪಠಾಣ್​’ ಗೆದ್ದ ಮೇಲೆ ಸೊಕ್ಕು ಬಂತಾ?

Shah Rukh Khan Viral Video: ಏರ್​ಪೋರ್ಟ್​​ನಲ್ಲಿ ಕೆಲವು ಅಭಿಮಾನಿಗಳು ಸೆಲ್ಫಿ ತೆಗೆದುಕೊಳ್ಳಲು ಮುಗಿಬಿದ್ದಿದ್ದಾರೆ. ಇದರಿಂದ ಶಾರುಖ್​ ಖಾನ್​ ಅವರಿಗೆ ಸಿಟ್ಟು ಬಂದಿದೆ.

Shah Rukh Khan: ಸೆಲ್ಫಿ ಕೇಳಲು ಬಂದ ಅಭಿಮಾನಿಯನ್ನು ತಳ್ಳಿದ ಶಾರುಖ್​ ಖಾನ್​; ‘ಪಠಾಣ್​’ ಗೆದ್ದ ಮೇಲೆ ಸೊಕ್ಕು ಬಂತಾ?
ಶಾರುಖ್ ಖಾನ್
Follow us
ಮದನ್​ ಕುಮಾರ್​
|

Updated on: May 03, 2023 | 11:10 AM

ನಟ ಶಾರುಖ್​ ಖಾನ್​ ಅವರು ಯಶಸ್ಸಿನ ಅಲೆಯಲ್ಲಿ ತೇಲುತ್ತಿದ್ದಾರೆ. ಈ ವರ್ಷ ಆರಂಭದಲ್ಲಿ ಬಿಡುಗಡೆಯಾದ ‘ಪಠಾಣ್​’ ಸಿನಿಮಾ (Pathaan Movie) ಬ್ಲಾಕ್​ ಬಸ್ಟರ್​ ಹಿಟ್​ ಆಯಿತು. ಅದರಿಂದ ಶಾರುಖ್​ ಖಾನ್​ ಅವರಿಗೆ ಸಿಕ್ಕಾಪಟ್ಟೆ ಲಾಭ ಆಗಿದೆ. ಈ ಗೆಲುವಿನ ಬಳಿಕ ಶಾರುಖ್​ ಖಾನ್​ (Shah Rukh Khan) ಅವರಿಗೆ ಅಹಂ ಬಂದಿದೆಯೇ? ಅವರು ಮನಬಂದಂತೆ ನಡೆದುಕೊಳ್ಳಲು ಶುರುಮಾಡಿದ್ದಾರಾ? ಈ ರೀತಿ ಪ್ರಶ್ನೆ ಮೂಡಲು ಕಾರಣ ಆಗುವಂತಹ ಒಂದು ಘಟನೆ ನಡೆದಿದೆ. ಅಭಿಮಾನಿಗಳ (Shah Rukh Khan Fans) ಜೊತೆ ಶಾರುಖ್​ ಖಾನ್​ ಅವರು ಸಿಟ್ಟಿನಿಂದ ವರ್ತಿಸಿದ್ದಾರೆ. ಸೆಲ್ಫಿ ಕೇಳಲು ಬಂದ ಅಭಿಮಾನಿಯನ್ನು ದೂರಕ್ಕೆ ತಳ್ಳಿದ್ದಾರೆ. ಈ ವಿಡಿಯೋ ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗಿದ್ದು, ನೆಟ್ಟಿಗರು ಬಗೆಬಗೆಯಲ್ಲಿ ಕಮೆಂಟ್​ ಮಾಡುತ್ತಿದ್ದಾರೆ.

ಈ ಘಟನೆ ನಡೆದಿರುವುದು ಮುಂಬೈ ವಿಮಾನ ನಿಲ್ದಾಣದಲ್ಲಿ. ‘ಡಂಕಿ’ ಸಿನಿಮಾದ ಶೂಟಿಂಗ್​ ಸಲುವಾಗಿ ಕಾಶ್ಮೀರಕ್ಕೆ ತೆರಳಿದ್ದ ಶಾರುಖ್​ ಖಾನ್​ ಅವರು ತಮ್ಮ ಮ್ಯಾನೇಜರ್​ ಪೂಜಾ ದದ್ಲಾನಿ ಜೊತೆ ಮುಂಬೈಗೆ ವಾಪಸ್​ ಬಂದಿದ್ದಾರೆ. ಈ ವೇಳೆ ಅಲ್ಲಿದ್ದ ಕೆಲವು ಅಭಿಮಾನಿಗಳು ಸೆಲ್ಫಿ ತೆಗೆದುಕೊಳ್ಳಲು ಮುಗಿಬಿದ್ದಿದ್ದಾರೆ. ಇದರಿಂದ ಶಾರುಖ್​ ಖಾನ್​ ಅವರಿಗೆ ಸಿಟ್ಟು ಬಂದಿದೆ. ಮೊಬೈಲ್​ ಹಿಡಿದುಕೊಂಡು ತಮ್ಮತ್ತ ಬಂದ ವ್ಯಕ್ತಿಯೊಬ್ಬರನ್ನು ಶಾರುಖ್​ ಖಾನ್​ ತಳ್ಳಿದ್ದಾರೆ. ಅಲ್ಲದೇ ಒಂದು ಕ್ಷಣ ಹಿಂದಕ್ಕೆ ತಿರುಗಿ ಸಿಟ್ಟಿನಿಂದ ನೋಡಿದ್ದಾರೆ. ಪಾಪರಾಜಿಗಳ ಕ್ಯಾಮೆರಾದಲ್ಲಿ ಈ ವಿಡಿಯೋ ಸೆರೆಯಾಗಿದೆ.

ಇದನ್ನೂ ಓದಿ
Image
Shah Rukh Khan Birthday: ಶಾರುಖ್​​ ಜನ್ಮದಿನ; 2023ರ ವರ್ಷ ಪೂರ್ತಿ ಆಗಲಿದೆ ಕಿಂಗ್​ ಖಾನ್ ಸಿನಿಮಾ ಉತ್ಸವ​​
Image
Shah Rukh Khan: ವಿರಾಟ್​ ಕೊಹ್ಲಿ ಪರಾಕ್ರಮದಿಂದ ಪಾಕ್​ಗೆ ಸೋಲು; ಶಾರುಖ್​ ಖಾನ್​ ಹೇಳಿದ್ದೇನು?
Image
Shah Rukh Khan: 20 ಲಕ್ಕಿ ಅಭಿಮಾನಿಗಳಿಗೆ ಸ್ಟಾರ್​ ಹೋಟೆಲ್​ನಲ್ಲಿ ರೂಂ ಬುಕ್​ ಮಾಡಿ ಭೇಟಿಯಾದ ಶಾರುಖ್​ ಖಾನ್​
Image
SRK: ತಮ್ಮದೇ ಶರ್ಟ್​ ಜತೆ ಮಾತನಾಡಿಕೊಂಡ ಶಾರುಖ್​; ಗಂಡನ ಪರಿಸ್ಥಿತಿ ಕಂಡು ಗೌರಿ ಖಾನ್​ ಗಲಿಬಿಲಿ
View this post on Instagram

A post shared by @varindertchawla

ಸೆಲೆಬ್ರಿಟಿಗಳು ಕಂಡಾಗ ಅವರ ಜೊತೆ ಸೆಲ್ಫಿ ತೆಗೆದುಕೊಳ್ಳಬೇಕು ಎಂದು ಅಭಿಮಾನಿಗಳು ಬಯಸುವುದು ಸಹಜ. ಆದರೆ ಅಲ್ಲಿನ ಪರಿಸ್ಥಿತಿ ಯಾವ ರೀತಿ ಇದೆ ಎಂಬುದನ್ನು ಕೂಡ ಅವರ ಗಮನಿಸಬೇಕು. ಸೆಲೆಬ್ರಿಟಿಗಳು ತುಂಬ ಅವಸರದಲ್ಲಿ ಎಲ್ಲಿಗಾದರೂ ಹೊರಟಿದ್ದರೆ ಸೆಲ್ಫಿ ನೀಡುವ ತಾಳ್ಮೆ ಅವರಿಗೆ ಇರುವುದಿಲ್ಲ. ಅಂಥ ಸಂದರ್ಭದಲ್ಲಿ ಅವರು ಕೋಪ ಮಾಡಿಕೊಂಡ ಅನೇಕ ಉದಾಹರಣೆ ಇದೆ. ಈ ಹಿಂದೆ ಸಲ್ಮಾನ್​ ಖಾನ್​ ಕೂಡ ಸಿಟ್ಟಿನಿಂದ ವರ್ತಿಸಿದ್ದರು.

ಇದನ್ನೂ ಓದಿ: Aryan Khan: ಬಟ್ಟೆ ವ್ಯಾಪಾರ ಶುರು ಮಾಡಿದ ಆರ್ಯನ್​ ಖಾನ್​ಗೆ ಭರ್ಜರಿ ಲಾಭ; ಮಗನ ಬಗ್ಗೆ ಶಾರುಖ್​ ಖಾನ್​ಗೆ ಹೆಮ್ಮೆ

ಶಾರುಖ್​ ಖಾನ್​ ಅವರು ಪ್ರಸ್ತುತ ‘ಡಂಕಿ’ ಮತ್ತು ‘ಜವಾನ್​’ ಸಿನಿಮಾದ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ‘ಡಂಕಿ’ ಚಿತ್ರಕ್ಕೆ ರಾಜ್​ಕುಮಾರ್​ ಹಿರಾನಿ ಅವರು ನಿರ್ದೇಶನ ಮಾಡುತ್ತಿದ್ದಾರೆ. ಆ ಕಾರಣದಿಂದ ಈ ಸಿನಿಮಾ ಮೇಲೆ ನಿರೀಕ್ಷೆ ಹೆಚ್ಚಾಗಿದೆ. ಅಟ್ಲಿ ಕುಮಾರ್​ ನಿರ್ದೇಶನದಲ್ಲಿ ‘ಜವಾನ್​’ ಸಿನಿಮಾ ಮೂಡಿಬರುತ್ತಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಕನ್ನಡಿಗ ವೈಶಾಕ್​ನನ್ನು ಕಣಕ್ಕಿಳಿಸಿ ಪಂದ್ಯ ಗೆದ್ದ ಪಂಜಾಬ್
ಕನ್ನಡಿಗ ವೈಶಾಕ್​ನನ್ನು ಕಣಕ್ಕಿಳಿಸಿ ಪಂದ್ಯ ಗೆದ್ದ ಪಂಜಾಬ್
ದೆಹಲಿಯಲ್ಲಿ ಹೆಚ್​ಡಿಕೆ ಮತ್ತು ದೇವೇಗೌಡರನ್ನು ಭೇಟಿಯಾಗಿರುವ ಜಾರಕಿಹೊಳಿ
ದೆಹಲಿಯಲ್ಲಿ ಹೆಚ್​ಡಿಕೆ ಮತ್ತು ದೇವೇಗೌಡರನ್ನು ಭೇಟಿಯಾಗಿರುವ ಜಾರಕಿಹೊಳಿ
ಸದ್ಯಕ್ಕೆ ವಾಪಸ್ಸು ಹೋಗುತ್ತಿದ್ದೇನೆ ಎಂದಷ್ಟೇ ಹೇಳಿದ ಬಸನಗೌಡ ಯತ್ನಾಳ್
ಸದ್ಯಕ್ಕೆ ವಾಪಸ್ಸು ಹೋಗುತ್ತಿದ್ದೇನೆ ಎಂದಷ್ಟೇ ಹೇಳಿದ ಬಸನಗೌಡ ಯತ್ನಾಳ್
ಯುವ ಕ್ರಿಕೆಟಿಗನ ಕ್ವಾಟ್ಲೆ ನೋಡಿ ಶಾಕ್ ಆದ ಇಡೀ ಆರ್​ಸಿಬಿ ತಂಡ
ಯುವ ಕ್ರಿಕೆಟಿಗನ ಕ್ವಾಟ್ಲೆ ನೋಡಿ ಶಾಕ್ ಆದ ಇಡೀ ಆರ್​ಸಿಬಿ ತಂಡ
ನಮ್ಮ ಸಿಎಂ ಕಚೇರಿಯೂ ಇಷ್ಟು ಭವ್ಯವಾಗಿಲ್ಲವೆಂದು ಉದ್ಗರಿಸಿದ ಪರಮೇಶ್ವರ್!
ನಮ್ಮ ಸಿಎಂ ಕಚೇರಿಯೂ ಇಷ್ಟು ಭವ್ಯವಾಗಿಲ್ಲವೆಂದು ಉದ್ಗರಿಸಿದ ಪರಮೇಶ್ವರ್!
ಬಿಜೆಪಿ ಶಾಸಕರು ಪೀಠಕ್ಕೆ ಅಗೌರವ ತೋರಿಲ್ಲ,ಸದನ ದೇಗುಲವಿದ್ದಂತೆ: ಸುರೇಶ್ ಗೌಡ
ಬಿಜೆಪಿ ಶಾಸಕರು ಪೀಠಕ್ಕೆ ಅಗೌರವ ತೋರಿಲ್ಲ,ಸದನ ದೇಗುಲವಿದ್ದಂತೆ: ಸುರೇಶ್ ಗೌಡ
ಸಿಎಂ ಸಿದ್ದರಾಮಯ್ಯಕ್ಕಿಂತ ಮೊದಲು ಡಿಸಿಎಂ ಶಿವಕುಮಾರ್ ದೆಹಲಿ ಪಯಣ
ಸಿಎಂ ಸಿದ್ದರಾಮಯ್ಯಕ್ಕಿಂತ ಮೊದಲು ಡಿಸಿಎಂ ಶಿವಕುಮಾರ್ ದೆಹಲಿ ಪಯಣ
ಕರಾಟೆಯಲ್ಲಿ ಪುಟ್ಟ ಹುಡುಗನ ಅದ್ಭುತ ಸಾಧನೆ, ಏಷ್ಯಾ ಬುಕ್ ಆಫ್​ಗೆ ಸೇರ್ಪಡೆ
ಕರಾಟೆಯಲ್ಲಿ ಪುಟ್ಟ ಹುಡುಗನ ಅದ್ಭುತ ಸಾಧನೆ, ಏಷ್ಯಾ ಬುಕ್ ಆಫ್​ಗೆ ಸೇರ್ಪಡೆ
ಪಾರ್ಲಿಮೆಂಟ್ ಕಚೇರಿಯಲ್ಲಿ ಇವತ್ತು ಸಹ ಹೆಚ್​ಡಿಕೆಯನ್ನು ಭೇಟಿಯಾದ ಸತೀಶ್
ಪಾರ್ಲಿಮೆಂಟ್ ಕಚೇರಿಯಲ್ಲಿ ಇವತ್ತು ಸಹ ಹೆಚ್​ಡಿಕೆಯನ್ನು ಭೇಟಿಯಾದ ಸತೀಶ್
Video: ಬೆಂಗಳೂರಿನಲ್ಲಿ ಭಯಾನಕ ಸಿಲಿಂಡರ್ ಸ್ಫೋಟ, ವ್ಯಕ್ತಿ ಜಸ್ಟ್ ಮಿಸ್
Video: ಬೆಂಗಳೂರಿನಲ್ಲಿ ಭಯಾನಕ ಸಿಲಿಂಡರ್ ಸ್ಫೋಟ, ವ್ಯಕ್ತಿ ಜಸ್ಟ್ ಮಿಸ್