Sign In

By signing in or creating an account, you agree with Associated Broadcasting Company's Terms & Conditions and Privacy Policy.

Box Office: ಕೆಜಿಎಫ್ 2, ಬಾಹುಬಲಿ 2 ಸಿನಿಮಾಗಳನ್ನೂ ಹಿಂದಿಕ್ಕಿದ ಪಠಾಣ್!

ಕೆಜಿಎಫ್ 2, ಬಾಹುಬಲಿ 2 ಸಿನಿಮಾಗಳನ್ನು ಹಿಂದಿಕ್ಕಿ ಹೊಸ ದಾಖಲೆ ಬೆರದಿದೆ ಶಾರುಖ್ ಖಾನ್ ನಟನೆಯ ಪಠಾಣ್ ಹಿಂದಿ ಸಿನಿಮಾ. ಯಾವುದಾ ದಾಖಲೆ?

Box Office: ಕೆಜಿಎಫ್ 2, ಬಾಹುಬಲಿ 2 ಸಿನಿಮಾಗಳನ್ನೂ ಹಿಂದಿಕ್ಕಿದ ಪಠಾಣ್!
ಪಠಾಣ್
Follow us
ಮಂಜುನಾಥ ಸಿ.
|

Updated on: Mar 03, 2023 | 10:18 PM

ಶಾರುಖ್ ಖಾನ್ (Shah Rukh Khan) ನಟನೆಯ ‘ಪಠಾಣ್‘ (Pathaan) ಸಿನಿಮಾದ ಗೆಲುವಿನ ನಾಗಾಲೋಟ ಸದ್ಯಕ್ಕೆ ನಿಲ್ಲುವಂತಿಲ್ಲ. ಈಗಾಗಲೇ ವಿಶ್ವದೆಲ್ಲೆಡೆ ಸಾವಿರ ಕೋಟಿಗೂ ಹೆಚ್ಚು ಕಲೆಕ್ಷನ್ ಮಾಡಿರುವ ಪಠಾಣ್ ಸಿನಿಮಾ ಹಲವು ದಾಖಲೆಗಳನ್ನು ಮುರಿದು ಮುಂದೆ ಸಾಗುತ್ತಿದೆ. ಇತ್ತೀಚಿನ ಬ್ಲಾಕ್ ಬಸ್ಟರ್ ‘ಕೆಜಿಎಫ್ 2’, ಹಾಗೂ ರಾಜಮೌಳಿಯ ಆಲ್​ಟೈಮ್ ಸೂಪರ್ ಹಿಟ್ ‘ಬಾಹುಬಲಿ 2’ ಸಿನಿಮಾಗಳ ದಾಖಲೆಯನ್ನು ಹಿಂದಿಕ್ಕಿದೆ ಪಠಾಣ್.

ಈವರೆಗೆ ಭಾರತದಲ್ಲಿ ಅತಿ ಹೆಚ್ಚು ಹಣ ಗಳಿಸಿದ ಹಿಂದಿ ಸಿನಿಮಾ ಎಂಬ ಶ್ರೇಯ ಇದೀಗ ‘ಪಠಾಣ್’ ಸಿನಿಮಾದ ಪಾಲಾಗಿದೆ. ಈ ಹಿಂದೆ ಈ ದಾಖಲೆ ‘ಬಾಹುಬಲಿ 2’ ಹಿಂದಿ ಆವೃತ್ತಿಯ ಸಿನಿಮಾ ಹೆಸರಲ್ಲಿತ್ತು. ಆದರೆ ಈ ಆ ದಾಖಲೆ ಮುರಿದಿರುವ ‘ಪಠಾಣ್’ ಸಿನಿಮಾ ಭಾರತದಲ್ಲಿ ಅತಿ ಹೆಚ್ಚು ಹಣ ಗಳಿಸಿದ ಹಿಂದಿ ಸಿನಿಮಾ ಎನಿಸಿಕೊಂಡಿದೆ.

‘ಪಠಾಣ್’ ಸಿನಿಮಾದ ಹಿಂದಿ ಆವೃತ್ತಿ ಭಾರತದಲ್ಲಿ ಈವರೆಗೆ 650 ಕೋಟಿಗೂ ಹೆಚ್ಚು ಹಣ ಗಳಿಸಿದೆ. ಇಷ್ಟು ದೊಡ್ಡ ಮೊತ್ತದ ಹಣವನ್ನು ಹಿಂದಿಯ ಇನ್ಯಾವುದೇ ಸಿನಿಮಾ ಭಾರತದ ಮಾರುಕಟ್ಟೆಯಲ್ಲಿ ಗಳಿಸಿಲ್ಲ. ಭಾರತದ ಅತಿ ಹೆಚ್ಚು ಕಲೆಕ್ಷನ್ ಮಾಡಿದ ಸಿನಿಮಾ ಎನಿಸಿಕೊಂಡಿರುವ ಆಮಿರ್ ಖಾನ್​ರ ‘ದಂಗಲ್’ ಸಹ ಭಾರತದಲ್ಲಿ ಇಷ್ಟು ದೊಡ್ಡ ಮೊತ್ತದ ಕಲೆಕ್ಷನ್ ಮಾಡಿಲ್ಲ!

‘ದಂಗಲ್’, ‘ಬಾಹುಬಲಿ 2’, ‘ಕೆಜಿಎಫ್ 2 ‘ ಸಿನಿಮಾಗಳು ಇಂದಿಗೂ ಹೆಚ್ಚು ಕಲೆಕ್ಷನ್ ಮಾಡಿದ ಸಿನಿಮಾಗಳಾಗಿವೆ, ಆದರೆ ಭಾರತದಲ್ಲಿ ಅತಿ ಹೆಚ್ಚು ಹಣ ಗಳಿಸಿದ ಹಿಂದಿ ಭಾಷೆಯ ಸಿನಿಮಾ ಎಂಬ ದಾಖಲೆ ಶಾರುಖ್ ಖಾನ್​ರ ‘ಪಠಾಣ್’ ಸಿನಿಮಾದ ಪಾಲಾಗಿದೆ. ವಿಶ್ವದಾದ್ಯಂತ 2200 ಕೋಟಿ ಗಳಿಸಿರುವ ಆಮಿರ್ ಖಾನ್​ರ ‘ದಂಗಲ್’ ಸಿನಿಮಾ ಭಾರತದಲ್ಲಿ ಗಳಿಸಿರುವುದು 590 ಕೋಟಿಯಷ್ಟೆ. ಇನ್ನು ‘ಕೆಜಿಎಫ್ 2’ ಸಿನಿಮಾದ ಹಿಂದಿ ಆವೃತ್ತಿ ಭಾರತದಲ್ಲಿ ಗಳಿಸಿರುವುದು 509 ಕೋಟಿ. ‘ಬಾಹುಬಲಿ 2’ ಸಿನಿಮಾದ ಹಿಂದಿ ಆವೃತ್ತಿ 510 ಕೋಟಿ ಹಣ ಗಳಿಸಿತ್ತು.

‘ಪಠಾಣ್’ ಸಿನಿಮಾವು ವಿಶ್ವದಾದ್ಯಂತ ಈವರೆಗೆ 1024 ಕೋಟಿ ಗಳಿಕೆ ಮಾಡಿದ್ದು ಬ್ಲಾಕ್ ಬಸ್ಟರ್ ಎನಿಸಿಕೊಂಡಿದೆ. ಶಾರುಖ್ ಖಾನ್​ರ ಈ ಹಿಂದಿನ ಯಾವ ಸಿನಿಮಾಗಳೂ ಸಹ ಇಷ್ಟು ದೊಡ್ಡ ಕಲೆಕ್ಷನ್ ಮಾಡಿರಲಿಲ್ಲ. ಇನ್ನು ಕೋವಿಡ್ ಬಳಿಕ ಸತತ ಸೋಲುಗಳಿಂದ ಬಸವಳಿದು ಹೋಗಿದ್ದ ಬಾಲಿವುಡ್​ಗೆ ‘ಪಠಾಣ್’ ಪುನರ್ಜೀವನ ನೀಡಿದಂತಾಗಿದೆ.

ಪಠಾಣ್ ಸಿನಿಮಾ ಸ್ಪೈ ಥ್ರಿಲ್ಲರ್ ಆಗಿದ್ದು, ಶಾರುಖ್ ಖಾನ್ ಜೊತೆಗೆ ದೀಪಿಕಾ ಪಡುಕೋಣೆ, ಜಾನ್ ಅಬ್ರಹಾಂ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ನಟ ಸಲ್ಮಾನ್ ಖಾನ್ ವಿಶೇಷ ಅತಿಥಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಸಿನಿಮಾವನ್ನು ಸಿದ್ಧಾರ್ಥ್ ಆನಂದ್ ನಿರ್ದೇಶನ ಮಾಡಿದ್ದು, ನಿರ್ಮಾಣ ಮಾಡಿರುವುದು ಯಶ್ ರಾಜ್ ಫಿಲಮ್ಸ್.

ಇನ್ನಷ್ಟು ಸಿನಿಮಾ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ರಥಗಳ ಮೇಲೆ ಬಾಳೆಹಣ್ಣು ಎಸೆದು ಹರಕೆ ತೀರಿಸಿಕೊಂಡ ಭಕ್ತರು
ರಥಗಳ ಮೇಲೆ ಬಾಳೆಹಣ್ಣು ಎಸೆದು ಹರಕೆ ತೀರಿಸಿಕೊಂಡ ಭಕ್ತರು
ಶವ ಸಂಸ್ಕಾರದ ಸಮಯದಲ್ಲಿ ಮಾಡಿದ ಸಹಾಯ ಹೇಗೆ ಫಲ ಕೊಡುತ್ತೆ?
ಶವ ಸಂಸ್ಕಾರದ ಸಮಯದಲ್ಲಿ ಮಾಡಿದ ಸಹಾಯ ಹೇಗೆ ಫಲ ಕೊಡುತ್ತೆ?
ರವಿ ಮೀನ ರಾಶಿಯಲ್ಲಿ, ಚಂದ್ರ ಸಿಂಹ ರಾಶಿಯಲ್ಲಿ ಸಂಚಾರ
ರವಿ ಮೀನ ರಾಶಿಯಲ್ಲಿ, ಚಂದ್ರ ಸಿಂಹ ರಾಶಿಯಲ್ಲಿ ಸಂಚಾರ
‘ಇಂಟರ್​ವಲ್​’ ಸಿನಿಮಾ ಗೆದ್ದಿದ್ದು ಹೇಗೆ? 25 ಡೇಸ್ ಸಂಭ್ರಮದಲ್ಲಿ ಚಿತ್ರತಂಡ
‘ಇಂಟರ್​ವಲ್​’ ಸಿನಿಮಾ ಗೆದ್ದಿದ್ದು ಹೇಗೆ? 25 ಡೇಸ್ ಸಂಭ್ರಮದಲ್ಲಿ ಚಿತ್ರತಂಡ
ಪತಿರಾನ ಓವರ್​ನಲ್ಲಿ ಹ್ಯಾಟ್ರಿಕ್ ಸಿಕ್ಸರ್ ಸಿಡಿಸಿದ ಪ್ರಿಯಾಂಶ್
ಪತಿರಾನ ಓವರ್​ನಲ್ಲಿ ಹ್ಯಾಟ್ರಿಕ್ ಸಿಕ್ಸರ್ ಸಿಡಿಸಿದ ಪ್ರಿಯಾಂಶ್
ಬಿಸಿಲ ತಾಪದಿಂದ ಅಹಮದಾಬಾದ್‌ನಲ್ಲಿ ಪ್ರಜ್ಞೆ ತಪ್ಪಿ ಬಿದ್ದ ಪಿ. ಚಿದಂಬರಂ
ಬಿಸಿಲ ತಾಪದಿಂದ ಅಹಮದಾಬಾದ್‌ನಲ್ಲಿ ಪ್ರಜ್ಞೆ ತಪ್ಪಿ ಬಿದ್ದ ಪಿ. ಚಿದಂಬರಂ
ಹಣದ ಕೊರತೆಯಿಂದ ಕಾರು ಮಾರಿದ ಅಜಯ್ ರಾವ್; ಕಣ್ಣೀರು ಹಾಕಿದ ಮಗಳು
ಹಣದ ಕೊರತೆಯಿಂದ ಕಾರು ಮಾರಿದ ಅಜಯ್ ರಾವ್; ಕಣ್ಣೀರು ಹಾಕಿದ ಮಗಳು
ಬಂಗಾಳದಲ್ಲಿ ವಕ್ಫ್ ಮಸೂದೆ ಹಿಂಪಡೆಯಲು ಒತ್ತಾಯಿಸಿ ಭುಗಿಲೆದ್ದ ಹಿಂಸಾಚಾರ
ಬಂಗಾಳದಲ್ಲಿ ವಕ್ಫ್ ಮಸೂದೆ ಹಿಂಪಡೆಯಲು ಒತ್ತಾಯಿಸಿ ಭುಗಿಲೆದ್ದ ಹಿಂಸಾಚಾರ
ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಸಿನಿಮಾ ವಾಹನಗಳ ಪ್ರವೇಶ: ಆಕ್ರೋಶ
ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಸಿನಿಮಾ ವಾಹನಗಳ ಪ್ರವೇಶ: ಆಕ್ರೋಶ
ಯತ್ನಾಳ್ ಅಸಲಿಗೆ ಒಬ್ಬ ನಕಲಿ ಹಿಂದೂ ಹುಲಿ: ರೇಣುಕಾಚಾರ್ಯ
ಯತ್ನಾಳ್ ಅಸಲಿಗೆ ಒಬ್ಬ ನಕಲಿ ಹಿಂದೂ ಹುಲಿ: ರೇಣುಕಾಚಾರ್ಯ