AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Pathaan: ಭಾರತದಲ್ಲಿ 414 ಕೋಟಿ ರೂಪಾಯಿ ಮೀರಿತು ‘ಪಠಾಣ್​’ ಕಲೆಕ್ಷನ್​; ಇನ್ನೂ ನಿಂತಿಲ್ಲ ಅಬ್ಬರ

Shah Rukh Khan | Pathaan Box Office Collection: ‘ಪಠಾಣ್​’ ಸಿನಿಮಾ ಮ್ಯಾಜಿಕ್​ ಮಾಡುತ್ತಿದೆ. ಎರಡನೇ ವೀಕೆಂಡ್​ನಲ್ಲಿ (ಫೆ.4 ಮತ್ತು ಫೆ.5) 63.50 ಕೋಟಿ ರೂಪಾಯಿ ಗಳಿಸಿದೆ. ಭಾರತದಲ್ಲಿ ಈ ಚಿತ್ರದ ಒಟ್ಟು ಕಲೆಕ್ಷನ್​ 414 ಕೋಟಿ ರೂಪಾಯಿ ದಾಟಿದೆ.

Pathaan: ಭಾರತದಲ್ಲಿ 414 ಕೋಟಿ ರೂಪಾಯಿ ಮೀರಿತು ‘ಪಠಾಣ್​’ ಕಲೆಕ್ಷನ್​; ಇನ್ನೂ ನಿಂತಿಲ್ಲ ಅಬ್ಬರ
ಶಾರುಖ್ ಖಾನ್
ಮದನ್​ ಕುಮಾರ್​
|

Updated on: Feb 07, 2023 | 7:30 AM

Share

ಶಾರುಖ್​ ಖಾನ್​ ನಟನೆಯ ‘ಪಠಾಣ್​’ ಸಿನಿಮಾ (Pathaan Movie) ಮಾಡಿರುವ ಮೋಡಿ ಅಷ್ಟಿಷ್ಟಲ್ಲ. ದೇಶಾದ್ಯಂತ ಅಬ್ಬರಿಸಿದ ಈ ಚಿತ್ರ ಇನ್ನೂ ಅನೇಕ ಕಡೆಗಳಲ್ಲಿ ಉತ್ತಮವಾಗಿ ಪ್ರದರ್ಶನ ಕಾಣುತ್ತಿದೆ. ಪ್ರತಿ ದಿನವೂ ಬಹುಕೋಟಿ ರೂಪಾಯಿ ಕಮಾಯಿ ಮಾಡುತ್ತ ಮುನ್ನುಗ್ಗುತ್ತಿದೆ. ಈವರೆಗೂ ಭಾರತದಲ್ಲಿ ‘ಪಠಾಣ್​’ ಸಿನಿಮಾ 414 ಕೋಟಿ ರೂಪಾಯಿಗೂ ಹೆಚ್ಚು ಕಲೆಕ್ಷನ್​ (Pathaan Box Office Collection) ಮಾಡಿದೆ. ಇದರಿಂದ ಶಾರುಖ್​ ಖಾನ್​ ಅವರ ವೃತ್ತಿ ಜೀವನಕ್ಕೆ ದೊಡ್ಡ ಮೈಲೇಜ್​ ಸಿಕ್ಕಿದೆ. ಎರಡನೇ ವೀಕೆಂಡ್​ನಲ್ಲಿ ‘ಪಠಾಣ್​’ ಸಿನಿಮಾ ನಿರೀಕ್ಷೆಗೂ ಮೀರಿ ಹಣ ಬಾಚಿಕೊಂಡಿದೆ. ಇದು ಶಾರುಖ್​ ಖಾನ್​ (Shah Rukh Khan) ಅಭಿಮಾನಿಗಳಿಗೆ ಖುಷಿ ನೀಡಿದೆ.

ಸ್ಟಾರ್​ ಸಿನಿಮಾಗಳು ಮೊದಲ ದಿನ ಅಬ್ಬರಿಸುವುದು ಸಹಜ. ಆದರೆ ನಂತರದ ದಿನಗಳಲ್ಲಿ ಕಲೆಕ್ಷನ್​ ತಗ್ಗುತ್ತದೆ. ಆದರೆ ‘ಪಠಾಣ್​’ ವಿಚಾರದಲ್ಲಿ ಮ್ಯಾಜಿಕ್​ ಆಗುತ್ತಿದೆ. ಎರಡನೇ ವೀಕೆಂಡ್​ನಲ್ಲಿ (ಫೆ.4 ಮತ್ತು ಫೆ.5) 63.50 ಕೋಟಿ ರೂಪಾಯಿ ಗಳಿಸಿದೆ. ಇದರಿಂದ ಭಾರತದಲ್ಲಿ ಈ ಚಿತ್ರದ ಒಟ್ಟು ಕಲೆಕ್ಷನ್​ 414 ಕೋಟಿ ರೂಪಾಯಿ ದಾಟಿದೆ.

ಇದನ್ನೂ ಓದಿ
Image
Siddharth Anand: ಬಾಲಿವುಡ್​ಗೆ 2023ರ ಮೊದಲ ಬ್ಲಾಕ್​ ಬಸ್ಟರ್​​ ನೀಡಿದ ‘ಪಠಾಣ್​’ ನಿರ್ದೇಶಕ ಸಿದ್ದಾರ್ಥ್​ ಆನಂದ್​
Image
Kangana Ranaut: ‘ಪಠಾಣ್​’ ಸೂಪರ್​ ಹಿಟ್​; ‘ಚಿತ್ರರಂಗ ಇರೋದು ಹಣ ಮಾಡೋಕಲ್ಲ’ ಅಂತ ಕೊಂಕು ನುಡಿದ ಕಂಗನಾ
Image
Pathaan Review: ದೇಶಭಕ್ತಿಯಲ್ಲಿ ಮಿಂದೆದ್ದ ‘ಪಠಾಣ್​’; ಶಾರುಖ್​ ಫ್ಯಾನ್ಸ್​ಗೆ ಹಬ್ಬ, ಆ್ಯಕ್ಷನ್ ಪ್ರಿಯರಿಗೆ ಮಸ್ತ್ ಮನರಂಜನೆ
Image
Pathaan Movie Twitter Review: ‘ಹೈ ವೋಲ್ಟೇಜ್ ಆ್ಯಕ್ಷನ್ ಸಿನಿಮಾ’; ‘ಪಠಾಣ್​’ ನೋಡಿ ವಿಮರ್ಶೆ ತಿಳಿಸಿದ ನೆಟ್ಟಿಗರು

ಇದನ್ನೂ ಓದಿ: Pathaan: ‘ಪಠಾಣ್​ ಇಷ್ಟ ಆಗಿಲ್ಲ’: ಮಗುವಿನ ವಿಮರ್ಶೆಯನ್ನೂ ಗಂಭೀರವಾಗಿ ತೆಗೆದುಕೊಂಡ ಶಾರುಖ್​ ಖಾನ್​

‘ಪಠಾಣ್​’ ಸಿನಿಮಾ ರಿಲೀಸ್​ ಆಗುವುದಕ್ಕೂ ಮುನ್ನ ಬಹಿಷ್ಕಾರದ ಭಯ ಕಾಡಿತ್ತು. ಜನರು ಈ ಸಿನಿಮಾವನ್ನು ನೋಡುತ್ತಾರೋ ಇಲ್ಲವೋ ಎಂಬ ಅನುಮಾನ ಇತ್ತು. ಆದರೆ ಪ್ರೇಕ್ಷಕರಿಗೆ ಸಿನಿಮಾ ಇಷ್ಟ ಆಗಿದ್ದರಿಂದ ಬಾಯಿ ಮಾತಿನ ಪ್ರಚಾರ ಚೆನ್ನಾಗಿ ಸಿಕ್ಕಿತು. ಶಾರುಖ್​ ಖಾನ್​ ಮತ್ತು ದೀಪಿಕಾ ಪಡುಕೋಣೆ ಅವರ ಕಾಂಬಿನೇಷನ್​ ನಾಲ್ಕನೇ ಬಾರಿಗೆ ಮೋಡಿ ಮಾಡಿದೆ.

ಇದನ್ನೂ ಓದಿ: Pathaan Movie: ಪಾಕಿಸ್ತಾನದಲ್ಲಿ ‘ಪಠಾಣ್​’ ಚಿತ್ರದ ಅಕ್ರಮ ಪ್ರದರ್ಶನ; ಕಾನೂನು ಕ್ರಮ ಕೈಗೊಂಡ ಸೆನ್ಸಾರ್​ ಮಂಡಳಿ

ಅಂತಿಮವಾಗಿ ‘ಪಠಾಣ್​’ ಸಿನಿಮಾ ಎಷ್ಟು ಕಲೆಕ್ಷನ್​ ಮಾಡಲಿದೆ ಎಂಬುದನ್ನು ತಿಳಿಯುವ ಕೌತುಕ ಮೂಡಿದೆ. ಜಾಗತಿಕ ಬಾಕ್ಸ್​ ಆಫೀಸ್​ನಲ್ಲಿ 730 ಕೋಟಿ ರೂಪಾಯಿಗೂ ಅಧಿಕ ಹಣ ಸಂಗ್ರಹ ಆಗಿದೆ. ಮೂರನೇ ವೀಕೆಂಡ್​ನಲ್ಲೂ ಈ ಚಿತ್ರಕ್ಕೆ ಉತ್ತಮ ಕಲೆಕ್ಷನ್ ಆಗುವ ನಿರೀಕ್ಷೆ ಇದೆ.

ಸಿದ್ದಾರ್ಥ್​ ಆನಂದ್​ ಅವರು ‘ಪಠಾಣ್​’ ಚಿತ್ರಕ್ಕೆ ನಿರ್ದೇಶನ ಮಾಡಿದ್ದಾರೆ. ಅವರ ಕೆಲಸವನ್ನು ಪ್ರೇಕ್ಷಕರು ಮೆಚ್ಚಿಕೊಂಡಿದ್ದಾರೆ. ಚಿತ್ರದ ಹಾಡುಗಳು ಸೂಪರ್​ ಹಿಟ್​ ಆಗಿವೆ. ‘ಬೇಷರಂ ರಂಗ್​..’ ಹಾಡಿನಲ್ಲಿ ದೀಪಿಕಾ ಪಡುಕೋಣೆ ಅವರು ಕೇಸರಿ ಬಿಕಿನಿ ಹಾಕಿದ್ದಾರೆ ಎಂದು ಕೆಲವರು ತಕರಾರು ತೆಗೆದಿದ್ದರು. ಆ ವಿವಾದವನ್ನು ಮರೆಸುವ ರೀತಿಯಲ್ಲಿ ‘ಪಠಾಣ್​’ ಸಿನಿಮಾ ಸೂಪರ್​ ಹಿಟ್​ ಆಗಿದೆ. ಶಾರುಖ್​ ಖಾನ್​ ಅವರು ನಾಲ್ಕು ವರ್ಷದ ಬಳಿಕ ದೊಡ್ಡ ಗೆಲುವು ಪಡೆದುಕೊಂಡಿದ್ದಾರೆ. ಇದರಿಂದಾಗಿ ಅವರ ಮುಂಬರುವ ಸಿನಿಮಾಗಳ ಮೇಲೆ ನಿರೀಕ್ಷೆ ಜೋರಾಗಿದೆ. ‘ಡಂಕಿ’, ‘ಜವಾನ್​’ ಚಿತ್ರದ ಕೆಲಸಗಳು ಪ್ರಗತಿಯಲ್ಲಿವೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More