‘ಕಥೆಯಿಲ್ಲದ ವಿಡಿಯೋ ಗೇಮ್​ ರೀತಿ ಇದೆ ಪಠಾಣ್​’: ಪಾಕಿಸ್ತಾನದ ಮಂದಿಯಿಂದ ಕೇಳಿಬಂತು ಟೀಕೆ

Yasir Hussain | Pathaan Movie Review: ಯಾಸಿರ್ ಹುಸೇನ್​ ಅವರು ಪಾಕಿಸ್ತಾನದಲ್ಲಿ ನಟನಾಗಿ, ಬರಹಗಾರನಾಗಿ ಗುರುತಿಸಿಕೊಂಡಿದ್ದಾರೆ. ಇತ್ತೀಚೆಗೆ ಅವರು ‘ಪಠಾಣ್​’ ಸಿನಿಮಾ ವೀಕ್ಷಿಸಿ, ತಮ್ಮ ವಿಮರ್ಶೆಯನ್ನು ತಿಳಿಸಿದ್ದಾರೆ.

‘ಕಥೆಯಿಲ್ಲದ ವಿಡಿಯೋ ಗೇಮ್​ ರೀತಿ ಇದೆ ಪಠಾಣ್​’: ಪಾಕಿಸ್ತಾನದ ಮಂದಿಯಿಂದ ಕೇಳಿಬಂತು ಟೀಕೆ
ಶಾರುಖ್ ಖಾನ್
Follow us
ಮದನ್​ ಕುಮಾರ್​
|

Updated on:Mar 28, 2023 | 5:32 PM

ಭಾರತದ ಸಿನಿಮಾಗಳು ಪಾಕಿಸ್ತಾನದಲ್ಲಿ ರಿಲೀಸ್​ ಆಗುತ್ತಿಲ್ಲ. ಆದರೆ ಒಟಿಟಿ ಮೂಲಕ ಅಲ್ಲಿನ ಪ್ರೇಕ್ಷಕರು ಭಾರತದ ಚಿತ್ರಗಳನ್ನು ನೋಡುತ್ತಾರೆ. ಶಾರುಖ್​ ಖಾನ್​ (Shah Rukh Khan) ನಟನೆಯ ‘ಪಠಾಣ್​’ ಸಿನಿಮಾ ಇತ್ತೀಚೆಗೆ ಒಟಿಟಿಗೆ ಕಾಲಿಟ್ಟಿತು. ಈ ಚಿತ್ರವನ್ನು ಪಾಕಿಸ್ತಾನಿ ಪ್ರೇಕ್ಷಕರು ನೋಡಿ, ವಿಮರ್ಶೆ ತಿಳಿಸುತ್ತಿದ್ದಾರೆ. ಪಾಕಿಸ್ತಾನದ ನಟ ಯಾಸಿರ್​ ಹುಸೇನ್​ ಅವರು ‘ಪಠಾಣ್​’ (Pathaan Movie) ಬಗ್ಗೆ ತಮ್ಮ ಅನಿಸಿಕೆ ಹಂಚಿಕೊಂಡಿದ್ದಾರೆ. ‘ಈ ಸಿನಿಮಾದಲ್ಲಿ ಕಥೆಯೇ ಇಲ್ಲ’ ಎಂದು ಅವರು ಜರಿದಿದ್ದಾರೆ. ಇದಕ್ಕೆ ಶಾರುಖ್​ ಖಾನ್​ ಅವರು ಹೇಗೆ ಪ್ರತಿಕ್ರಿಯೆ ನೀಡುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ. ಈ ಚಿತ್ರದಿಂದ ಶಾರುಖ್​ ವೃತ್ತಿಜೀವನಕ್ಕೆ ದೊಡ್ಡ ಬೂಸ್ಟ್​ ಸಿಕ್ಕಿದೆ. ಆದರೆ ವಿಮರ್ಶೆ (Pathaan Movie Review) ವಿಚಾರದಲ್ಲಿ ಈ ಸಿನಿಮಾ ಎಲ್ಲರಿಗೂ ಇಷ್ಟ ಆಗಿಲ್ಲ.

ಯಾಸಿರ್ ಹುಸೇನ್​ ಅವರು ಪಾಕಿಸ್ತಾನದಲ್ಲಿ ನಟನಾಗಿ, ಬರಹಗಾರನಾಗಿ ಗುರುತಿಸಿಕೊಂಡಿದ್ದಾರೆ. ಅವರು ಇತ್ತೀಚೆಗೆ ‘ಪಠಾಣ್​’ ಸಿನಿಮಾ ವೀಕ್ಷಿಸಿದ್ದಾರೆ. ತಮ್ಮ ವಿಮರ್ಶೆಯನ್ನು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ‘ಈಗಾಗಲೇ ನೀವು ಮಿಷನ್​ ಇಂಪಾಸಿಬಲ್​ ಚಿತ್ರವನ್ನು ನೋಡಿದ್ದೀರಿ ಎಂದಾದರೆ ನಿಮಗೆ ಶಾರುಖ್​ ಖಾನ್ ನಟನೆಯ ಪಠಾಣ್​​ ಚಿತ್ರವು ಒಂದು ಕಥೆಯಿಲ್ಲದ ವಿಡಿಯೋ ಗೇಮ್​ ರೀತಿ ಅನಿಸುತ್ತದೆ. ಅದಕ್ಕಿಂತ ಹೆಚ್ಚೇನೂ ಇಲ್ಲ’ ಎಂದು ಅವರು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: Rani Mukherjee: ‘ಪಠಾಣ್​’ ಚಿತ್ರವನ್ನೇ ಮೀರಿಸಿ ಬಾಕ್ಸ್​ ಆಫೀಸ್​ ಕಲೆಕ್ಷನ್​ ಮಾಡಿದ ರಾಣಿ ಮುಖರ್ಜಿ ನಟನೆಯ ಹೊಸ ಸಿನಿಮಾ

ಇದನ್ನೂ ಓದಿ
Image
Siddharth Anand: ಬಾಲಿವುಡ್​ಗೆ 2023ರ ಮೊದಲ ಬ್ಲಾಕ್​ ಬಸ್ಟರ್​​ ನೀಡಿದ ‘ಪಠಾಣ್​’ ನಿರ್ದೇಶಕ ಸಿದ್ದಾರ್ಥ್​ ಆನಂದ್​
Image
Kangana Ranaut: ‘ಪಠಾಣ್​’ ಸೂಪರ್​ ಹಿಟ್​; ‘ಚಿತ್ರರಂಗ ಇರೋದು ಹಣ ಮಾಡೋಕಲ್ಲ’ ಅಂತ ಕೊಂಕು ನುಡಿದ ಕಂಗನಾ
Image
Pathaan Review: ದೇಶಭಕ್ತಿಯಲ್ಲಿ ಮಿಂದೆದ್ದ ‘ಪಠಾಣ್​’; ಶಾರುಖ್​ ಫ್ಯಾನ್ಸ್​ಗೆ ಹಬ್ಬ, ಆ್ಯಕ್ಷನ್ ಪ್ರಿಯರಿಗೆ ಮಸ್ತ್ ಮನರಂಜನೆ
Image
Pathaan Movie Twitter Review: ‘ಹೈ ವೋಲ್ಟೇಜ್ ಆ್ಯಕ್ಷನ್ ಸಿನಿಮಾ’; ‘ಪಠಾಣ್​’ ನೋಡಿ ವಿಮರ್ಶೆ ತಿಳಿಸಿದ ನೆಟ್ಟಿಗರು

ಶಾರುಖ್​ ಖಾನ್​ ಅವರು ‘ಪಠಾಣ್​’ ಸಿನಿಮಾದಿಂದ ದೊಡ್ಡ ಲಾಭ ಮಾಡಿಕೊಂಡಿದ್ದಾರೆ. ಆರಂಭದಲ್ಲಿ ಈ ಚಿತ್ರದ ಬಗ್ಗೆ ಕೆಲವರು ತಕರಾರು ತೆಗೆದಿದ್ದರು. ಆದರೆ ನಂತರ ಚಿತ್ರದ ಸಕ್ಸಸ್​ ಕಂಡು ವಿರೋಧಿಗಳು ಬಾಯಿ ಮುಚ್ಚಿಕೊಂಡರು. ವಿಶ್ವಾದ್ಯಂತ ಈ ಸಿನಿಮಾ ಸಾವಿರ ಕೋಟಿ ರೂಪಾಯಿಗೂ ಅಧಿಕ ಕಲೆಕ್ಷನ್​ ಮಾಡಿದೆ. ಅತಿ ಹೆಚ್ಚು ಕಲೆಕ್ಷನ್​ ಮಾಡಿದ ಹಿಂದಿ ಸಿನಿಮಾ ಎಂಬ ಖ್ಯಾತಿ ಈ ಚಿತ್ರಕ್ಕಿದೆ.

ಇದನ್ನೂ ಓದಿ: Pathaan: 50 ದಿನ ಪೂರೈಸಿದ ‘ಪಠಾಣ್​’; 20 ದೇಶದಲ್ಲಿ ಇನ್ನೂ ಪ್ರದರ್ಶನ ಕಾಣುತ್ತಿದೆ ಶಾರುಖ್​ ಸಿನಿಮಾ

ಪಾಕಿಸ್ತಾನದಲ್ಲಿ ಅಕ್ರಮವಾಗಿ ಪ್ರದರ್ಶನವಾಗಿತ್ತು ಪಠಾಣ್​:

‘ಪಠಾಣ್​’ ಚಿತ್ರದ ಪ್ರದರ್ಶನಕ್ಕೆ ಪಾಕಿಸ್ತಾನದ ಚಿತ್ರಮಂದಿರಗಳಲ್ಲಿ ಅವಕಾಶ ಇಲ್ಲ. ಹಾಗಿದ್ದರೂ ಕೂಡ ಕೆಲವರು ಈ ಸಿನಿಮಾವನ್ನು ಕದ್ದುಮುಚ್ಚಿ ನೋಡಿದ್ದರು. ಕರಾಚಿಯಲ್ಲಿ ‘ಪಠಾಣ್​’ ಸಿನಿಮಾವನ್ನು ಕಾನೂನು ಬಾಹಿರವಾಗಿ ಪ್ರದರ್ಶಿಸಲಾಗುತ್ತಿತ್ತು. ಆನ್​ಲೈನ್​ ಮೂಲಕ 900 ರೂಪಾಯಿ ಬೆಲೆಗೆ ಟಿಕೆಟ್​ ಮಾರಾಟ ಮಾಡಲಾಗಿತ್ತು. ಈ ವಿಷಯ ತಿಳಿಯುತ್ತಿದ್ದಂತೆಯೇ ಅಲ್ಲಿನ ಸೆನ್ಸಾರ್​ ಮಂಡಳಿ ಅಧಿಕಾರಿಗಳು ಕ್ರಮ ಕೈಗೊಂಡಿದ್ದರು. ‘ಪಠಾಣ್​’ ಪ್ರದರ್ಶನವನ್ನು ಕೂಡಲೇ ನಿಲ್ಲಿಸಲಾಗಿತ್ತು.

ಸಿದ್ದಾರ್ಥ್​ ಆನಂದ್​ ಅವರು ‘ಪಠಾಣ್​’ ಚಿತ್ರಕ್ಕೆ ನಿರ್ದೇಶನ ಮಾಡಿದ್ದಾರೆ. ದೀಪಿಕಾ ಪಡುಕೋಣೆ, ಜಾನ್​ ಅಬ್ರಾಹಂ ಕೂಡ ಈ ಚಿತ್ರದಲ್ಲಿ ಮುಖ್ಯ ಭೂಮಿಕೆ ನಿಭಾಯಿಸಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 5:32 pm, Tue, 28 March 23

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ