Shah Rukh Khan: ತಕ್ಷಣ ನೋಡಿ ಇದು ಶಾರುಖ್​ ಖಾನ್​ ಅಂದುಕೊಳ್ಳಬೇಡಿ; ಈ ವ್ಯಕ್ತಿಯ ಕಥೆ ಬೇರೆಯೇ ಇದೆ

Shah Rukh Khan's look alike: ಶಾರುಖ್​ ಖಾನ್ ಅವರ ಬಗ್ಗೆ ಪ್ರತಿ ದಿನ ಒಂದಿಲ್ಲೊಂದು ಸುದ್ದಿ ಕೇಳಿಬರುತ್ತಲೇ ಇರುತ್ತದೆ. ಅಪರೂಪದ ವಿಡಿಯೋಗಳು  ಕೂಡ ವೈರಲ್​ ಆಗುತ್ತವೆ.

Shah Rukh Khan: ತಕ್ಷಣ ನೋಡಿ ಇದು ಶಾರುಖ್​ ಖಾನ್​ ಅಂದುಕೊಳ್ಳಬೇಡಿ; ಈ ವ್ಯಕ್ತಿಯ ಕಥೆ ಬೇರೆಯೇ ಇದೆ
ಸೂರಜ್​ ಕುಮಾರ್​
Follow us
ಮದನ್​ ಕುಮಾರ್​
|

Updated on: Jun 05, 2023 | 7:55 PM

ನಟ ಶಾರುಖ್​ ಖಾನ್​ (​Shah Rukh Khan) ಅವರಿಗೆ ಕೋಟ್ಯಂತರ ಅಭಿಮಾನಿಗಳು ಇದ್ದಾರೆ. ‘ಪಠಾಣ್​’ ಸಿನಿಮಾ ಗೆದ್ದ ಬಳಿಕ ಅವರ ಚಾರ್ಮ್​ ಹೆಚ್ಚಾಗಿದೆ. ಅವರ ಬಗ್ಗೆ ಪ್ರತಿ ದಿನ ಒಂದಿಲ್ಲೊಂದು ಸುದ್ದಿ ಕೇಳಿಬರುತ್ತಲೇ ಇರುತ್ತದೆ. ಹಳೆಯ ವಿಡಿಯೋಗಳು  (​Shah Rukh Khan Video) ಕೂಡ ವೈರಲ್​ ಆಗುತ್ತವೆ. ಅದೇ ರೀತಿ ಈಗ ಒಂದು ವಿಡಿಯೋ ವೈರಲ್​ ಆಗಿದೆ. ಆದರೆ ಅದರಲ್ಲಿ ಇರುವುದು ಶಾರುಖ್​ ಖಾನ್​ ಅಲ್ಲ! ಒಮ್ಮೆಲೇ ನೋಡಿದರೆ ಶಾರುಖ್​ ಖಾನ್​ ರೀತಿ ಕಾಣುವ ಈ ವ್ಯಕ್ತಿಯೇ ಬೇರೆ. ಇವರ ಹೆಸರು ಸೂರಜ್​ ಕುಮಾರ್ (Suraj Kumar)​. ಎಲ್ಲರೂ ಇವರನ್ನು ಚೋಟಾ ಶಾರುಖ್​ ಖಾನ್​ ಎಂದು ಕರೆಯುತ್ತಾರೆ. ಇತ್ತೀಚೆಗೆ ಅವರು ದೆಹಲಿಯಲ್ಲಿ ತಮ್ಮ ಕುಟುಂಬದ ಜೊತೆ ಕಾಣಿಸಿಕೊಂಡಿದ್ದರು. ಆ ವಿಡಿಯೋವನ್ನು ತಮ್ಮ ಸೋಶಿಯಲ್​ ಮೀಡಿಯಾ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಅದನ್ನು ನೋಡಿದ ಎಲ್ಲರೂ ಇದು ಶಾರುಖ್​ ಖಾನ್​​ ಅವರ ಹಳೇ ವಿಡಿಯೋ ಎಂದು ತಿಳಿದುಕೊಂಡಿದ್ದಾರೆ.

ಒಬ್ಬರ ರೀತಿ ಹಲವರು ಇರುತ್ತಾರೆ ಎಂಬುದಕ್ಕೆ ಈಗಾಗಲೇ ಅನೇಕ ಉದಾಹರಣೆಗಳು ಸಿಕ್ಕಿವೆ. ಫೇಮಸ್​ ನಟ-ನಟಿಯರನ್ನೇ ಹೋಲುವಂತಹ ಸಾಮಾನ್ಯ ಜನರು ಸಾಕಷ್ಟು ಮಂದಿ ಇದ್ದಾರೆ. ಅಂಥವರು ಸೋಶಿಯಲ್​ ಮೀಡಿಯಾದಲ್ಲಿ ಫೇಮಸ್​ ಆಗಿರುತ್ತಾರೆ. ಸೂರಜ್​ ಕುಮಾರ್​ ಕೂಡ ಸೋಶಿಯಲ್​ ಮೀಡಿಯಾದಲ್ಲಿ ಖಾತೆ ಹೊಂದಿದ್ದಾರೆ. ಅವರ ಇನ್​ಸ್ಟಾಗ್ರಾಮ್​ ಖಾತೆಯನ್ನು 1.6 ಲಕ್ಷಕ್ಕೂ ಅಧಿಕ ಜನರು ಫಾಲೋ ಮಾಡುತ್ತಿದ್ದಾರೆ. ಶಾರುಖ್​ ಖಾನ್​ರ ಫೇಮಸ್​ ಹಾಡುಗಳಿಗೆ ರೀಲ್ಸ್​ ಮಾಡಿ ಅವರು ಹಂಚಿಕೊಳ್ಳುತ್ತಾರೆ.

ಇನ್ನು, ಅಸಲಿ ಶಾರುಖ್​ ಖಾನ್​ ಬಗ್ಗೆ ಮಾತಾಡೋದಾದರೆ ಅವರು ‘ಜವಾನ್​’ ಮತ್ತು ‘ಡಂಕಿ’ ಸಿನಿಮಾದ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಈ ಸಿನಿಮಾಗಳ ಮೇಲೆ ಅಭಿಮಾನಿಗಳು ಬಹಳ ನಿರೀಕ್ಷೆ ಇಟ್ಟುಕೊಂಡಿದ್ದಾರೆ. ‘ಜವಾನ್​’ ಸಿನಿಮಾಗೆ ಅಟ್ಲಿ ಕುಮಾರ್​ ನಿರ್ದೇಶನ ಮಾಡುತ್ತಿದ್ದು, ರಾಜ್​ಕುಮಾರ್​ ಹಿರಾನಿ ಅವರ ನಿರ್ದೇಶನದಲ್ಲಿ ‘ಡಂಕಿ’ ಸಿನಿಮಾ ಮೂಡಿಬರುತ್ತಿದೆ. ಶಾರುಖ್​ ಖಾನ್​ ಮಗ ಆರ್ಯನ್ ಖಾನ್ ಅವರು ಹೊಸ ವೆಬ್​ ಸೀರಿಸ್ ಮಾಡಲು ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ಚಿತ್ರರಂಗದ ಬಗ್ಗೆಯೇ ಈ ವೆಬ್ ಸರಣಿ ಸಿದ್ಧಗೊಳ್ಳಲಿದೆ ಇದರಲ್ಲಿ ರಣವೀರ್ ಸಿಂಗ್ ಹಾಗೂ ಶಾರುಖ್ ಖಾನ್ ಅತಿಥಿ ಪಾತ್ರ ಮಾಡುತ್ತಿದ್ದಾರೆ ಎಂಬ ಮಾತು ಕೇಳಿ ಬಂದಿದೆ. ಈ ಸರಣಿಯಲ್ಲಿ ಸ್ಟಾರ್​ಗಳ ದಂಡೇ ಇರಲಿದೆ ಎನ್ನಲಾಗುತ್ತಿದೆ.

ಇದನ್ನೂ ಓದಿ: ಶಾರುಖ್ ಖಾನ್ ಮ್ಯಾನೇಜರ್ ಪೂಜಾ ಆಗರ್ಭ ಶ್ರೀಮಂತೆ; ವರ್ಷಕ್ಕೆ ಸಿಗೋ ಸಂಭಾವನೆ ಇಷ್ಟೊಂದಾ?

ಶಾರುಖ್ ಖಾನ್ ಬಾಲಿವುಡ್​ನ ಸೂಪರ್​ಸ್ಟಾರ್​. ಅವರಿಗೆ ವಿಶ್ವಾದ್ಯಂತ ಅಭಿಮಾನಿಗಳು ಇದ್ದಾರೆ. ಅವರಿಗೆ ಅಭಿಮಾನಿಗಳ ಬಗ್ಗೆ ವಿಶೇಷ ಪ್ರೀತಿ ಇದೆ. ಇತ್ತೀಚೆಗೆ ಇದಕ್ಕೆ ಹೊಸ ಉದಾಹರಣೆ ಸಿಕ್ಕಿತ್ತು. ಶಾರುಖ್ ಅಭಿಮಾನಿ ಕ್ಯಾನ್ಸರ್​ನಿಂದ ಬಳಲುತ್ತಿದ್ದರು. ಅವರಿಗೆ ಶಾರುಖ್ ವಿಡಿಯೋ ಕಾಲ್ ಮಾಡಿದರು. ಈ ಮೂಲಕ ಅಭಿಮಾನಿಯ ಆಸೆ ಈಡೇರಿಸಿದರು. ಸದ್ಯ ಶಾರುಖ್ ಖಾನ್ ಬಗ್ಗೆ ಎಲ್ಲ ಕಡೆಗಳಿಂದ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಅಭಿಮಾನಿಗಳು ತೋರಿಸಿರುವ ಪ್ರೀತಿ ಕಂಡು ಶಾರುಖ್ ಖಾನ್ ಖುಷಿ ಆಗಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ