AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Pathaan: ಬಾಯ್ಕಾಟ್​ ಎಂದವರಿಗೆ, ಕೇಸರಿ ಬಿಕಿನಿಗೂ ಕಿರಿಕ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾರುಖ್​ ಖಾನ್​

Shah Rukh Khan Viral Video: ಸೋಶಿಯಲ್​ ಮೀಡಿಯಾದಲ್ಲಿ ನೆಗೆಟಿವ್​ ವಿಚಾರಗಳನ್ನು ಹಬ್ಬಿಸಲಾಗುತ್ತಿದೆ. ಈ ಕುರಿತು ‘ಪಠಾಣ್​’ ಚಿತ್ರದ ಹೀರೋ ಶಾರುಖ್​ ಖಾನ್ ಅಭಿಪ್ರಾಯ ಹಂಚಿಕೊಂಡಿದ್ದಾರೆ.

Pathaan: ಬಾಯ್ಕಾಟ್​ ಎಂದವರಿಗೆ, ಕೇಸರಿ ಬಿಕಿನಿಗೂ ಕಿರಿಕ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾರುಖ್​ ಖಾನ್​
ಶಾರುಖ್ ಖಾನ್
TV9 Web
| Updated By: ಮದನ್​ ಕುಮಾರ್​|

Updated on:Dec 16, 2022 | 11:17 AM

Share

ನಟ ಶಾರುಖ್​ ಖಾನ್​ (Shah Rukh Khan) ಅವರು ಸದ್ಯ ‘ಪಠಾಣ್​’ ಸಿನಿಮಾದ ಬಿಡುಗಡೆಯನ್ನು ಎದುರುನೋಡುತ್ತಿದ್ದಾರೆ. ಆದರೆ ಈ ಚಿತ್ರಕ್ಕೆ ಸೋಶಿಯಲ್​ ಮೀಡಿಯಾದಲ್ಲಿ ಟ್ರೋಲ್​ ಕಾಟ ಹೆಚ್ಚಾಗಿದೆ. ಒಂದು ವರ್ಗದ ಜನರು ಶಾರುಖ್​ ಖಾನ್​ ಅವರನ್ನು ಟಾರ್ಗೆಟ್​ ಮಾಡಿದ್ದಾರೆ. ಹಾಗಾಗಿ ‘ಪಠಾಣ್​’ (Pathaan) ಚಿತ್ರವನ್ನು ಬಹಿಷ್ಕಾರ ಮಾಡಬೇಕು ಎಂದು ಅಭಿಯಾನ ನಡೆಸಲಾಗುತ್ತಿದೆ. ಅಲ್ಲದೇ, ಈ ಸಿನಿಮಾದ ‘ಬೇಷರಂ ರಂಗ್​..’ (Besharam Rang Song) ಹಾಡಿನಲ್ಲಿ ನಟಿ ದೀಪಿಕಾ ಪಡುಕೋಣೆ ಅವರು ಕೇಸರಿ ಬಣ್ಣದ ಬಿಕಿನಿ ಧರಿಸಿದ್ದಕ್ಕೂ ಕೆಲವರು ತಕರಾರು ತೆಗೆದಿದ್ದಾರೆ. ಇಂಥವರಿಗೆಲ್ಲ ಶಾರುಖ್​ ಖಾನ್​ ಅವರು ಪರೋಕ್ಷವಾಗಿ ತಿರುಗೇಟು ನೀಡಿದ್ದಾರೆ. ಕೊಲ್ಕತ್ತಾ ಅಂತಾರಾಷ್ಟ್ರೀಯ ಸಿನಿಮೋತ್ಸವದಲ್ಲಿ ಮಾತನಾಡಿದ ಅವರು ಅನೇಕ ವಿಚಾರಗಳನ್ನು ಹಂಚಿಕೊಂಡಿದ್ದಾರೆ.

ಗುರುವಾರ (ಡಿ.15) ಸಂಜೆ ಕೊಲ್ಕತ್ತಾ ಅಂತಾರಾಷ್ಟ್ರೀಯ ಸಿನಿಮೋತ್ಸವ ಉದ್ಘಾಟನೆಗೊಂಡಿದೆ. ಈ ಕಾರ್ಯಕ್ರಮಕ್ಕೆ ಶಾರುಖ್​ ಖಾನ್​, ಅಮಿತಾಭ್​ ಬಚ್ಚನ್​, ಜಯಾ ಬಚ್ಚನ್, ರಾಣಿ ಮುಖರ್ಜಿ, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೇರಿದಂತೆ ಅನೇಕರು ಹಾಜರಿ ಹಾಕಿದ್ದರು. ಈ ವೇದಿಕೆಯಲ್ಲಿ ಶಾರುಖ್​ ಮಾತನಾಡಿರುವ ವಿಡಿಯೋ ವೈರಲ್​ ಆಗಿದೆ.

ಇದನ್ನೂ ಓದಿ
Image
Vivek Agnihotri: ಶಾರುಖ್​​ ನಟನೆಯ ‘ಬೇಷರಂ ರಂಗ್​’ ಹಾಡು ನೋಡಿ ವ್ಯಂಗ್ಯವಾಗಿ ಪ್ರತಿಕ್ರಿಯಿಸಿದ ವಿವೇಕ್​ ಅಗ್ನಿಹೋತ್ರಿ
Image
Deepika Padukone: ‘ಬೇಷರಂ​ ರಂಗ್​’ ಹಾಡಿನ ವಿವಾದ; ದೀಪಿಕಾ ಕೇಸರಿ ಬಿಕಿನಿ ಧರಿಸಿದ್ದಕ್ಕೂ ನೆಟ್ಟಿಗರ ತಕರಾರು
Image
Besharam Rang: ಹೊಸ ಹಾಡಿನಲ್ಲಿ ಹಾಟ್​ ಆಗಿ ಕಾಣಿಸಿಕೊಂಡ ದೀಪಿಕಾ; ‘ಪಠಾಣ್​’ ಚಿತ್ರದ ಮೇಲೆ ಹೆಚ್ಚಿತು ನಿರೀಕ್ಷೆ
Image
Besharam Rang: ಕೆಲವೇ ನಿಮಿಷಗಳಲ್ಲಿ 1 ಮಿಲಿಯನ್​ ವೀಕ್ಷಣೆ ಕಂಡ ‘ಪಠಾಣ್​’ ಸಿನಿಮಾ ಹಾಡು​

ಸೋಶಿಯಲ್​ ಮೀಡಿಯಾದಲ್ಲಿ ನೆಗೆಟಿವ್​ ವಿಚಾರಗಳನ್ನು ಹಬ್ಬಿಸಲಾಗುತ್ತಿದೆ. ಈ ಕುರಿತು ಶಾರುಖ್​ ಖಾನ್ ಅಭಿಪ್ರಾಯ ಹಂಚಿಕೊಂಡಿದ್ದಾರೆ. ‘ಸಂಕುಚಿತ ದೃಷ್ಟಿಕೋನದಿಂದ ಈ ರೀತಿ ಆಗುತ್ತಿದೆ. ಈ ಸಂದರ್ಭದಲ್ಲಿ ಸಿನಿಮಾಗೆ ಮಹತ್ವದ ಪಾತ್ರವಿದೆ’ ಎಂದು ಅವರು ಹೇಳಿದ್ದಾರೆ. ಎಲ್ಲಿಯೂ ಕೂಡ ಅವರು ‘ಪಠಾಣ್​’ ಚಿತ್ರದ ಹೆಸರು ಎತ್ತಿಲ್ಲ. ಆದರೆ ಭಾಷಣ ಮುಗಿಸುವಾಗ ಅವರು ಹೇಳಿದ ಒಂದು ಮಾತು ಸಖತ್​ ವೈರಲ್ ಆಗಿದೆ.

ಇದನ್ನೂ ಓದಿ: Prakash Raj: ‘ಬೇಷರಂ ರಂಗ್​’ ವಿವಾದ; ‘ಇದನ್ನೆಲ್ಲ ಎಲ್ಲಿಯವರೆಗೆ ಸಹಿಸಬೇಕು’ ಅಂತ ಪ್ರಶ್ನೆ ಮಾಡಿದ ಪ್ರಕಾಶ್​ ರಾಜ್​

‘ಜಗತ್ತು ಸಹಜ ಸ್ಥಿತಿಗೆ ಬಂದಿದೆ. ನಾವೆಲ್ಲರೂ ಖುಷಿಯಾಗಿದ್ದೇವೆ. ನಾನು ಹೆಚ್ಚು ಖುಷಿಯಾಗಿದ್ದೇನೆ. ಜಗತ್ತು ಏನು ಬೇಕಾದರೂ ಮಾಡಿಕೊಳ್ಳಲಿ. ನಾನು, ನೀವು ಮತ್ತು ಪಾಸಿಟಿವ್​ ಮನಸ್ಥಿತಿ ಇರುವ ಎಲ್ಲ ಜನರು ಜೀವಂತವಾಗಿದ್ದೇವೆ ಅಂತ ಹೇಳಲು ನನಗೆ ಯಾವುದೇ ಅಡೆತಡೆ ಇಲ್ಲ’ ಎಂದು ಶಾರುಖ್​ ಖಾನ್​ ಹೇಳಿದ್ದಾರೆ.

ಇದನ್ನೂ ಓದಿ: Vivek Agnihotri: ಶಾರುಖ್​​ ನಟನೆಯ ‘ಬೇಷರಂ ರಂಗ್​’ ಹಾಡು ನೋಡಿ ವ್ಯಂಗ್ಯವಾಗಿ ಪ್ರತಿಕ್ರಿಯಿಸಿದ ವಿವೇಕ್​ ಅಗ್ನಿಹೋತ್ರಿ

ಶಾರುಖ್​ ಹೇಳಿದ ಈ ಮಾತುಗಳನ್ನು ಅಭಿಮಾನಿಗಳು ಸೋಶಿಯಲ್​ ಮೀಡಿಯಾದಲ್ಲಿ ಶೇರ್​ ಮಾಡುತ್ತಿದ್ದಾರೆ. ‘ಪಠಾಣ್​’ ಚಿತ್ರವನ್ನು ಬಾಯ್ಕಾಟ್​ ಮಾಡಬೇಕು ಎಂದು ಬೊಬ್ಬೆ ಹೊಡೆಯುತ್ತಿರುವವರನ್ನು ಉದ್ದೇಶಿಸಿಯೇ ಶಾರುಖ್​ ಈ ರೀತಿ ಹೇಳಿದ್ದಾರೆ ಎಂದು ನೆಟ್ಟಿಗರು ಅಭಿಪ್ರಾಯ ಪಟ್ಟಿದ್ದಾರೆ.

2023ರ ಜನವರಿ 25ರಂದು ‘ಪಠಾಣ್​’ ಸಿನಿಮಾ ಬಿಡುಗಡೆ ಆಗಲಿದೆ. ಈ ಸಿನಿಮಾದಲ್ಲಿ ಜಾನ್​ ಅಬ್ರಾಹಂ ಕೂಡ ಪ್ರಮುಖ ಪಾತ್ರ ಮಾಡಿದ್ದಾರೆ. ಸಿದ್ದಾರ್ಥ್​ ಆನಂದ್​ ನಿರ್ದೇಶನ ಮಾಡಿದ್ದು, ಯಶ್​ ರಾಜ್​ ಫಿಲ್ಮ್ಸ್​ ಬ್ಯಾನರ್​ ಮೂಲಕ ನಿರ್ಮಾಣ ಆಗಿದೆ. ವಿರೋಧದ ನಡುವೆಯೂ ಈ ಚಿತ್ರದ ‘ಬೇಷರಂ ರಂಗ್​..’ ಹಾಡು ಧೂಳೆಬ್ಬಿಸುತ್ತಿದೆ. 5 ಕೋಟಿಗೂ ಅಧಿಕ ಬಾರಿ ವೀಕ್ಷಣೆ ಕಂಡು ಸದ್ದು ಮಾಡುತ್ತಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 11:16 am, Fri, 16 December 22

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು