AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Pathaan Teaser: ಮೈನವಿರೇಳಿಸುವಂತಿದೆ ‘ಪಠಾಣ್​’ ಟೀಸರ್​; ಭರ್ಜರಿ ಆಗಿರಲಿದೆ ಶಾರುಖ್​ ಖಾನ್​ ಕಮ್​ಬ್ಯಾಕ್​

Pathaan Movie | Shah Rukh Khan: ಶಾರುಖ್​ ಖಾನ್​ ಅವರ 57ನೇ ವರ್ಷದ ಜನ್ಮದಿನವನ್ನು ಅಭಿಮಾನಿಗಳು ಸಡಗರದಿಂದ ಆಚರಿಸುತ್ತಿದ್ದಾರೆ. ಆ ಸಂಭ್ರಮವನ್ನು ಹೆಚ್ಚು ಮಾಡಲು ‘ಪಠಾಣ್​’ ಚಿತ್ರದ ಟೀಸರ್​ ಬಿಡುಗಡೆ ಆಗಿದೆ.

Pathaan Teaser: ಮೈನವಿರೇಳಿಸುವಂತಿದೆ ‘ಪಠಾಣ್​’ ಟೀಸರ್​; ಭರ್ಜರಿ ಆಗಿರಲಿದೆ ಶಾರುಖ್​ ಖಾನ್​ ಕಮ್​ಬ್ಯಾಕ್​
ಶಾರುಖ್ ಖಾನ್
TV9 Web
| Edited By: |

Updated on: Nov 02, 2022 | 12:34 PM

Share

ನಟ ಶಾರುಖ್​ ಖಾನ್​ (Shah Rukh Khan) ಅವರ ‘ಪಠಾಣ್​’ ಸಿನಿಮಾ ಮೇಲೆ ಅಭಿಮಾನಿಗಳಿಗೆ ಸಾಕಷ್ಟು ನಿರೀಕ್ಷೆ ಇದೆ. ಆ ನಿರೀಕ್ಷೆಯನ್ನು ದುಪ್ಪಟ್ಟು ಮಾಡುವ ರೀತಿಯಲ್ಲಿ ಇದರ ಟೀಸರ್​ ಮೂಡಿಬಂದಿದೆ. ಇಂದು (ನ.2) ಶಾರುಖ್​ ಖಾನ್​ ಅವರ ಹುಟ್ಟುಹಬ್ಬದ ಪ್ರಯುಕ್ತ ‘ಪಠಾಣ್​’ (Pathaan) ಟೀಸರ್​ ಬಿಡುಗಡೆ ಮಾಡಲಾಗಿದೆ. ಇದರಲ್ಲಿನ ಸಾಹಸ ದೃಶ್ಯಗಳನ್ನು ನೋಡಿ ಅಭಿಮಾನಿಗಳು ವಾವ್​ ಎನ್ನುತ್ತಿದ್ದಾರೆ. ಈ ಸಿನಿಮಾ ತುಂಬ ಅದ್ದೂರಿಯಾಗಿ ಮೂಡಿಬಂದಿದೆ ಎಂಬುದಕ್ಕೆ ಈ ಟೀಸರ್ (Pathaan Teaser)​ ಸಾಕ್ಷಿ ಒದಗಿಸುತ್ತಿದೆ. ಬಿಡುಗಡೆಯಾದ ಕೆಲವೇ ನಿಮಿಷಗಳಲ್ಲಿ ಇದು ಲಕ್ಷಾಂತರ ಬಾರಿ ವೀಕ್ಷಣೆ ಕಂಡಿದೆ. ‘ಪಠಾಣ್​’ ಚಿತ್ರದಿಂದ ಶಾರುಖ್​ ಖಾನ್​ ಅವರು ಭರ್ಜರಿಯಾಗಿ ಕಮ್​ ಬ್ಯಾಕ್​ ಮಾಡುವುದು ಖಚಿತವಾಗಿದೆ.

‘ಪಠಾಣ್​’ ಟೀಸರ್​ಗೆ ಸಿದ್ದಾರ್ಥ್​ ಆನಂದ್​ ಅವರು ನಿರ್ದೇಶನ ಮಾಡಿದ್ದಾರೆ. ‘ಬ್ಯಾಂಗ್​ ಬ್ಯಾಂಗ್​’, ‘ವಾರ್​’ ಮುಂತಾದ ಆ್ಯಕ್ಷನ್​ ಸಿನಿಮಾಗಳನ್ನು ನೀಡಿದ ಖ್ಯಾತಿ ಸಿದ್ದಾರ್ಥ್​ ಆನಂದ್​ ಅವರಿಗೆ ಇದೆ. ಈ ಬಾರಿ ಅವರು ‘ಪಠಾಣ್​’ ಚಿತ್ರದ ಮೂಲಕ ಇನ್ನೊಂದು ಹಂತ ಮೇಲೇರಿದ್ದಾರೆ. ಈ ಸಿನಿಮಾದಲ್ಲಿನ ಆ್ಯಕ್ಷನ್​ ದೃಶ್ಯಗಳು ಚಿತ್ರಮಂದಿರದಲ್ಲಿ ಅಭಿಮಾನಿಗಳಿಗೆ ಹೊಸ ಅನುಭವ ನೀಡುವುದು ಗ್ಯಾರಂಟಿ ಎಂದು ಎಲ್ಲರೂ ಕಮೆಂಟ್​ ಮಾಡುತ್ತಿದ್ದಾರೆ.

ಇದನ್ನೂ ಓದಿ
Image
Shah Rukh Khan Birthday: ಶಾರುಖ್​​ ಜನ್ಮದಿನ; 2023ರ ವರ್ಷ ಪೂರ್ತಿ ಆಗಲಿದೆ ಕಿಂಗ್​ ಖಾನ್ ಸಿನಿಮಾ ಉತ್ಸವ​​
Image
Shah Rukh Khan: ವಿರಾಟ್​ ಕೊಹ್ಲಿ ಪರಾಕ್ರಮದಿಂದ ಪಾಕ್​ಗೆ ಸೋಲು; ಶಾರುಖ್​ ಖಾನ್​ ಹೇಳಿದ್ದೇನು?
Image
Shah Rukh Khan: 20 ಲಕ್ಕಿ ಅಭಿಮಾನಿಗಳಿಗೆ ಸ್ಟಾರ್​ ಹೋಟೆಲ್​ನಲ್ಲಿ ರೂಂ ಬುಕ್​ ಮಾಡಿ ಭೇಟಿಯಾದ ಶಾರುಖ್​ ಖಾನ್​
Image
SRK: ತಮ್ಮದೇ ಶರ್ಟ್​ ಜತೆ ಮಾತನಾಡಿಕೊಂಡ ಶಾರುಖ್​; ಗಂಡನ ಪರಿಸ್ಥಿತಿ ಕಂಡು ಗೌರಿ ಖಾನ್​ ಗಲಿಬಿಲಿ

ಶಾರುಖ್​ ಖಾನ್​ ಅವರಿಗೆ ‘ಪಠಾಣ್​’ ಚಿತ್ರದ ಗೆಲುವು ತುಂಬ ಮುಖ್ಯವಾಗಲಿದೆ. 2018ರ ಡಿಸೆಂಬರ್​ನಲ್ಲಿ ಬಿಡುಗಡೆಯಾದ ‘ಜೀರೋ’​ ನಂತರ ಅವರ ಯಾವುದೇ ಹೊಸ ಚಿತ್ರ ಈವರೆಗೆ ತೆರೆಕಂಡಿಲ್ಲ. ‘ಪಠಾಣ್​’ ಚಿತ್ರ 2023ರ ಜನವರಿ 25ರಂದು ವಿಶ್ವಾದ್ಯಂತ ಬಿಡುಗಡೆ ಆಗಲಿದೆ. ಈ ಸಿನಿಮಾಗಾಗಿ ಶಾರುಖ್ ಅವರು ಸಿಕ್ಕಾಪಟ್ಟೆ ಶ್ರಮಪಟ್ಟಿದ್ದಾರೆ. ಸಿಕ್ಸ್​ ಪ್ಯಾಕ್ಸ್​ ಗೆಟಪ್​ನಲ್ಲಿ ಫೈಟ್​ ಮಾಡಿದ್ದಾರೆ. ಆ್ಯಕ್ಷನ್​ ಝಲಕ್​ ಹೇಗಿರಲಿದೆ ಎಂಬುದು ಈ ಟೀಸರ್​ ನೋಡಿದರೆ ತಿಳಿಯುತ್ತದೆ.

‘ಪಠಾಣ್​’ ಸಿನಿಮಾದಲ್ಲಿ ಶಾರುಖ್​ ಖಾನ್​ ಜೊತೆ ದೀಪಿಕಾ ಪಡುಕೋಣೆ ಮತ್ತು ಜಾನ್​ ಅಬ್ರಾಹಂ ಅವರು ಪ್ರಮುಖ ಪಾತ್ರಗಳನ್ನು ಮಾಡಿದ್ದಾರೆ. ಈಗ ಬಿಡುಗಡೆ ಆಗಿರುವ ಟೀಸರ್​ನಲ್ಲಿ ಅವರ ಪಾತ್ರಗಳು ಕೂಡ ಹೈಲೈಟ್​ ಆಗಿವೆ. ಸಿನಿಮಾದಲ್ಲಿ ಜಾನ್​ ಅಬ್ರಹಾಂ ಮತ್ತು ಶಾರುಖ್​ ಖಾನ್​ ನಡುವಿನ ಮುಖಾಮುಖಿ ದೃಶ್ಯಗಳು ಪ್ರೇಕ್ಷಕರಿಗೆ ಮಸ್ತ್​ ಮನರಂಜನೆ ನೀಡಲಿದೆ ಎಂದು ಎಲ್ಲರೂ ನಿರೀಕ್ಷಿಸುತ್ತಿದ್ದಾರೆ.

ಶಾರುಖ್​ ಖಾನ್​ ಅವರ 57ನೇ ವರ್ಷದ ಜನ್ಮದಿನವನ್ನು ಅಭಿಮಾನಿಗಳು ಸಡಗರದಿಂದ ಆಚರಿಸುತ್ತಿದ್ದಾರೆ. ಆ ಸಂಭ್ರಮವನ್ನು ಹೆಚ್ಚು ಮಾಡಲು ‘ಪಠಾಣ್​’ ಚಿತ್ರದ ಟೀಸರ್​ ಬಿಡುಗಡೆ ಆಗಿದೆ. ಶಾರುಖ್​ ಮನೆ ಎದುರು ಅಪಾರ ಸಂಖ್ಯೆಯಲ್ಲಿ ಅಭಿಮಾನಿಗಳು ಜಮಾಯಿಸಿದ್ದಾರೆ. ನೆಚ್ಚಿನ ನಟನಿಗೆ ಸೋಶಿಯಲ್​ ಮೀಡಿಯಾದಲ್ಲಿ ಶುಭಾಶಯಗಳ ಮಳೆ ಸುರಿಸಲಾಗುತ್ತಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಸಚಿವ ಸ್ಥಾನಕ್ಕೆ ರಾಜೀನಾಮೆ ಸುದ್ದಿ: ಈ ಬಗ್ಗೆ ಕೆಜೆ ಜಾರ್ಜ್ ಹೇಳಿದ್ದೇನು?
ಸಚಿವ ಸ್ಥಾನಕ್ಕೆ ರಾಜೀನಾಮೆ ಸುದ್ದಿ: ಈ ಬಗ್ಗೆ ಕೆಜೆ ಜಾರ್ಜ್ ಹೇಳಿದ್ದೇನು?
ಅಜಿತ್ ಪವಾರ್ ಅಂತ್ಯಕ್ರಿಯೆ; ಮಕ್ಕಳಿಂದ ಅಪ್ಪನ ಚಿತೆಗೆ ಅಗ್ನಿಸ್ಪರ್ಶ
ಅಜಿತ್ ಪವಾರ್ ಅಂತ್ಯಕ್ರಿಯೆ; ಮಕ್ಕಳಿಂದ ಅಪ್ಪನ ಚಿತೆಗೆ ಅಗ್ನಿಸ್ಪರ್ಶ