Pathan Collection: ವಾರ ಪೂರ್ತಿ ಅಬ್ಬರಿಸಿ 350 ಕೋಟಿ ರೂಪಾಯಿಗೂ ಹೆಚ್ಚು ಕಲೆಕ್ಷನ್​ ಮಾಡಿದ ‘ಪಠಾಣ್​’

Shah Rukh Khan | Pathan Box Office Collection: ಈವರೆಗೂ ‘ಪಠಾಣ್​’ ಸಿನಿಮಾ ಭಾರತದ ಬಾಕ್ಸ್​ ಆಫೀಸ್​ನಲ್ಲಿ 351 ಕೋಟಿ ರೂಪಾಯಿಗೂ ಅಧಿಕ ಕಲೆಕ್ಷನ್​ ಮಾಡಿದೆ. 2ನೇ ವೀಕೆಂಡ್​​ನಲ್ಲಿ ಮತ್ತೆ ಹಣದ ಹೊಳೆ ಹರಿಯುವ ಸಾಧ್ಯತೆ ದಟ್ಟವಾಗಿದೆ.

Pathan Collection: ವಾರ ಪೂರ್ತಿ ಅಬ್ಬರಿಸಿ 350 ಕೋಟಿ ರೂಪಾಯಿಗೂ ಹೆಚ್ಚು ಕಲೆಕ್ಷನ್​ ಮಾಡಿದ ‘ಪಠಾಣ್​’
ಶಾರುಖ್ ಖಾನ್
Follow us
ಮದನ್​ ಕುಮಾರ್​
|

Updated on:Feb 03, 2023 | 9:07 PM

2022ರಲ್ಲಿ ಸೊರಗಿದ್ದ ಬಾಲಿವುಡ್​ ಈಗ ಮೈ ಕೊಡವಿ ನಿಂತಿದೆ. ಬಾಕ್ಸ್​ ಆಫೀಸ್​ನಲ್ಲಿ ಹಿಂದಿ ಸಿನಿಮಾಗಳು ಮೋಡಿ ಮಾಡಬಹುದು ಎಂಬುದು ಮತ್ತೆ ಸಾಬೀತಾಗಿದೆ. ಶಾರುಖ್ ಖಾನ್​ ನಟನೆಯ ‘ಪಠಾಣ್​’ (Pathan Movie) ಸಿನಿಮಾಗೆ ಪ್ರೇಕ್ಷಕರು ಮೆಚ್ಚುಗೆ ಸೂಚಿಸಿದ್ದಾರೆ. ಈ ವರ್ಷ ಆರಂಭದಲ್ಲೇ ತೆರೆಕಂಡ ಈ ಚಿತ್ರ ಭರ್ಜರಿ ಓಪನಿಂಗ್​ ಪಡೆದುಕೊಂಡಿತು. ಒಂದು ವಾರ ಪೂರ್ತಿ ಅಬ್ಬರಿಸಿರುವ ಈ ಸಿನಿಮಾ ಭಾರತೀಯ ಗಲ್ಲಾಪೆಟ್ಟಿಗೆಯಲ್ಲಿ 350 ಕೋಟಿ ರೂಪಾಯಿಗೂ ಹೆಚ್ಚು ಕಲೆಕ್ಷನ್​ (Pathan Box Office Collection) ಮಾಡಿದೆ. ಈಗ ಎರಡನೇ ವೀಕೆಂಡ್​ನಲ್ಲೂ ಕೂಡ ಅದೇ ರೀತಿ ಹಣ ಸಂಗ್ರಹ ಆಗುವ ನಿರೀಕ್ಷೆ ಇದೆ. ಒಟ್ಟಿನಲ್ಲಿ ಶಾರುಖ್​ ಖಾನ್​ (Shah Rukh Khan) ಅವರಿಗೆ ‘ಪಠಾಣ್​’ ಸಿನಿಮಾದಿಂದ ಮರುಜೀವ ಬಂದಂತೆ ಆಗಿದೆ.

ಶಾರುಖ್​ ಖಾನ್​, ದೀಪಿಕಾ ಪಡುಕೋಣೆ, ಜಾನ್​ ಅಬ್ರಾಹಂ, ಡಿಂಪಲ್​ ಕಪಾಡಿಯಾ, ಅಶುತೋಷ್​ ರಾಣಾ ಮುಂತಾದವರು ನಟಿಸಿದ ‘ಪಠಾಣ್​’ ಸಿನಿಮಾ ಜನವರಿ 25ರಂದು ಅದ್ದೂರಿಯಾಗಿ ರಿಲೀಸ್​ ಆಯಿತು. ಮೊದಲ ದಿನ ಈ ಚಿತ್ರ ಗಳಿಸಿದ್ದು ಬರೋಬ್ಬರಿ 55 ಕೋಟಿ ರೂಪಾಯಿ. 2ನೇ ದಿನ 68 ಕೋಟಿ, 3ನೇ ದಿನ 38 ಕೋಟಿ, 4ನೇ ದಿನ 51.50 ಕೋಟಿ, 5ನೇ ದಿನ 58.50 ಕೋಟಿ, 6ನೇ ದಿನ 25.50 ಕೋಟಿ, 7ನೇ ದಿನ 22 ಕೋಟಿ, 8ನೇ 17.50 ಕೋಟಿ ಹಾಗೂ 9ನೇ ದಿನ 15 ಕೋಟಿ ರೂಪಾಯಿ ಗಳಿಸಿತು. ಇದು ನಿಜಕ್ಕೂ ದೊಡ್ಡ ಸಾಧನೆ.

ಇದನ್ನೂ ಓದಿ: Pathaan Sequel: ಬರಲಿದೆ ‘ಪಠಾಣ್​ 2’; ಅಭಿಮಾನಿಗಳಿಗೆ ಖುಷಿ ಸುದ್ದಿ ನೀಡಿದ ಶಾರುಖ್​ ಖಾನ್​

ಇದನ್ನೂ ಓದಿ
Image
Siddharth Anand: ಬಾಲಿವುಡ್​ಗೆ 2023ರ ಮೊದಲ ಬ್ಲಾಕ್​ ಬಸ್ಟರ್​​ ನೀಡಿದ ‘ಪಠಾಣ್​’ ನಿರ್ದೇಶಕ ಸಿದ್ದಾರ್ಥ್​ ಆನಂದ್​
Image
Kangana Ranaut: ‘ಪಠಾಣ್​’ ಸೂಪರ್​ ಹಿಟ್​; ‘ಚಿತ್ರರಂಗ ಇರೋದು ಹಣ ಮಾಡೋಕಲ್ಲ’ ಅಂತ ಕೊಂಕು ನುಡಿದ ಕಂಗನಾ
Image
Pathaan Review: ದೇಶಭಕ್ತಿಯಲ್ಲಿ ಮಿಂದೆದ್ದ ‘ಪಠಾಣ್​’; ಶಾರುಖ್​ ಫ್ಯಾನ್ಸ್​ಗೆ ಹಬ್ಬ, ಆ್ಯಕ್ಷನ್ ಪ್ರಿಯರಿಗೆ ಮಸ್ತ್ ಮನರಂಜನೆ
Image
Pathaan Movie Twitter Review: ‘ಹೈ ವೋಲ್ಟೇಜ್ ಆ್ಯಕ್ಷನ್ ಸಿನಿಮಾ’; ‘ಪಠಾಣ್​’ ನೋಡಿ ವಿಮರ್ಶೆ ತಿಳಿಸಿದ ನೆಟ್ಟಿಗರು

ಈವರೆಗೂ ‘ಪಠಾಣ್​’ ಸಿನಿಮಾ ಭಾರತದ ಬಾಕ್ಸ್​ ಆಫೀಸ್​ನಲ್ಲಿ 351 ಕೋಟಿ ರೂಪಾಯಿಗೂ ಅಧಿಕ ಕಲೆಕ್ಷನ್​ ಮಾಡಿದೆ. 2ನೇ ವೀಕೆಂಡ್​​ನಲ್ಲಿ ಮತ್ತೆ ಹಣದ ಹೊಳೆ ಹರಿಯುವ ಸಾಧ್ಯತೆ ದಟ್ಟವಾಗಿದೆ. ಈ ಚಿತ್ರ ಅನಾಯಾಸವಾಗಿ ಇನ್ನೆರಡು ದಿನಗಳಲ್ಲಿ 400 ಕೋಟಿ ರೂಪಾಯಿಯ ಗಡಿ ಮುಟ್ಟಲಿದೆ. ತೆಲುಗು ಮತ್ತು ತಮಿಳು ವರ್ಷನ್​ನಿಂದ ಈ ಚಿತ್ರಕ್ಕೆ ಈವರೆಗೆ 13 ಕೋಟಿ ರೂಪಾಯಿ ಆದಾಯ ಹರಿದು ಬಂದಿದೆ.

ಇದನ್ನೂ ಓದಿ: Shah Rukh Khan: ‘ಪಠಾಣ್​’ ಗೆಲುವಿನ ಬಳಿಕ ಮೊದಲ ಬಾರಿ ಸುದ್ದಿಗೋಷ್ಠಿ ನಡೆಸಿದ ಶಾರುಖ್​ ಖಾನ್​, ದೀಪಿಕಾ ಪಡುಕೋಣೆ

ಶಾರುಖ್​ ಖಾನ್​ ಅವರು ದೊಡ್ಡ ಗೆಲುವು ಕಾಣದೇ ಬಹಳ ವರ್ಷಗಳೇ ಆಗಿದ್ದವು. ಅವರ ಬ್ಯಾಕ್​ ಟು ಬ್ಯಾಕ್​ ಚಿತ್ರಗಳು ಸೋಲುತ್ತಿದ್ದವು. ಹಾಗಾಗಿ ಅವರು 4 ವರ್ಷ ಬ್ರೇಕ್​ ತೆಗೆದುಕೊಂಡಿದ್ದರು. ಶಾರುಖ್​ ಖಾನ್​ ಭರ್ಜರಿಯಾಗಿ ಕಮ್​ಬ್ಯಾಕ್​ ಮಾಡಲಿ ಎಂಬುದು ಫ್ಯಾನ್ಸ್​ ಬಯಕೆ ಆಗಿತ್ತು. ಅದರಂತೆಯೇ ಆಗಿದೆ. ‘ಪಠಾಣ್​’ ಸಿನಿಮಾ ಪ್ರತಿ ದಿನವೂ ಅಬ್ಬರಿಸುತ್ತಿದೆ. ಈ ಚಿತ್ರ ಅಂತಿಮವಾಗಿ ಎಷ್ಟು ಗಳಿಸಲಿದೆ ಎಂಬುದನ್ನು ತಿಳಿಯುವ ಕೌತುಕ ಸಿನಿಪ್ರಿಯರಿಗಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 9:07 pm, Fri, 3 February 23

ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್