AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Pathan Trailer: ಶಾರುಖ್ ಖಾನ್ ಚಿತ್ರಕ್ಕೆ ಮತ್ತೊಂದು ಪೆಟ್ಟು; ಆನ್​​ಲೈನ್​ನಲ್ಲಿ ‘ಪಠಾಣ್​’ ಚಿತ್ರದ ಟ್ರೇಲರ್ ಲೀಕ್​?

‘ಪಠಾಣ್​’ ಚಿತ್ರ ರಿಲೀಸ್​ಗೆ ಇನ್ನು 20 ದಿನ ಬಾಕಿ ಇದೆ. ಜನವರಿ 25ರಂದು ‘ಪಠಾಣ್​’ ರಿಲೀಸ್ ಆಗಲಿದೆ. ಶಾರುಖ್ ಖಾನ್ ಅವರು ಈ ಚಿತ್ರಕ್ಕಾಗಿ 6 ಪ್ಯಾಕ್​​ನಲ್ಲಿ ಕಾಣಿಸಿಕೊಂಡಿದ್ದಾರೆ. ಅವರ ಲುಕ್ ಎಲ್ಲರ ಗಮನ ಸೆಳೆದಿದೆ.

Pathan Trailer: ಶಾರುಖ್ ಖಾನ್ ಚಿತ್ರಕ್ಕೆ ಮತ್ತೊಂದು ಪೆಟ್ಟು; ಆನ್​​ಲೈನ್​ನಲ್ಲಿ ‘ಪಠಾಣ್​’ ಚಿತ್ರದ ಟ್ರೇಲರ್ ಲೀಕ್​?
ಶಾರುಖ್
TV9 Web
| Edited By: |

Updated on: Jan 04, 2023 | 9:13 AM

Share

ಶಾರುಖ್ ಖಾನ್ (Shah Rukh Khan) ನಟನೆಯ ‘ಪಠಾಣ್​’ ಸಿನಿಮಾ ಬಗ್ಗೆ ಬೆಟ್ಟದಷ್ಟು ನಿರೀಕ್ಷೆ ಸೃಷ್ಟಿ ಆಗಿದೆ. ನಾಲ್ಕು ವರ್ಷಗಳ ಬಳಿಕ ಶಾರುಖ್ ಖಾನ್ ದೊಡ್ಡ ಪರದೆಗೆ ಮರಳುತ್ತಿರುವುದಕ್ಕೆ ಅವರ ಅಭಿಮಾನಿಗಳ ವಲಯದಲ್ಲಿ ಖುಷಿ ಇದೆ. ಇನ್ನು ಒಂದು ವರ್ಗದ ಜನರು ಈ ಚಿತ್ರವನ್ನು ಟೀಕಿಸುತ್ತಿದ್ದಾರೆ. ಈ ಚಿತ್ರದಿಂದ ಸಾಕಷ್ಟು ವಿವಾದಗಳು ಹುಟ್ಟಿಕೊಂಡಿವೆ. ಇನ್ನು ಚಿತ್ರಕ್ಕೆ ಬೈಕಾಟ್ ಬೆದರಿಕೆಯೂ ಇದೆ. ಈ ಮಧ್ಯೆ ‘ಪಠಾಣ್​’ ಚಿತ್ರದ (Pathan Movie) ಟ್ರೇಲರ್ ಲೀಕ್ ಆಗಿದೆ. ಇದು ಫ್ಯಾನ್ಸ್​​ಗೆ ಬೇಸರ ಮೂಡಿಸಿದೆ.

‘ಪಠಾಣ್​’ ಚಿತ್ರ ರಿಲೀಸ್​ಗೆ ಇನ್ನು 20 ದಿನ ಬಾಕಿ ಇದೆ. ಜನವರಿ 25ರಂದು ‘ಪಠಾಣ್​’ ರಿಲೀಸ್ ಆಗಲಿದೆ. ಶಾರುಖ್ ಖಾನ್ ಅವರು ಈ ಚಿತ್ರಕ್ಕಾಗಿ 6 ಪ್ಯಾಕ್​​ನಲ್ಲಿ ಕಾಣಿಸಿಕೊಂಡಿದ್ದಾರೆ. ಅವರ ಲುಕ್ ಎಲ್ಲರ ಗಮನ ಸೆಳೆದಿದೆ. ಇನ್ನು ದೀಪಿಕಾ ಪಡುಕೋಣೆ ಹಾಟ್ ಆಗಿ ಕಾಣಿಸಿಕೊಂಡಿದ್ದಾರೆ. ನಿರ್ದೇಶಕ ಸಿದ್ದಾರ್ಥ್​ ಆನಂದ್ ಸಾಕಷ್ಟು ಎಚ್ಚರಿಕೆ ತೆಗೆದುಕೊಂಡ ಹೊರತಾಗಿಯೂ ಈ ಚಿತ್ರದ ಟ್ರೇಲರ್ ಲೀಕ್ ಆಗಿದೆ. ‘ಪಠಾಣ್​’ ಟ್ರೇಲರ್​ ಎನ್ನಲಾದ ವಿಡಿಯೋ ಒಂದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಇದನ್ನೂ ಓದಿ
Image
Vivek Agnihotri: ಶಾರುಖ್​​ ನಟನೆಯ ‘ಬೇಷರಂ ರಂಗ್​’ ಹಾಡು ನೋಡಿ ವ್ಯಂಗ್ಯವಾಗಿ ಪ್ರತಿಕ್ರಿಯಿಸಿದ ವಿವೇಕ್​ ಅಗ್ನಿಹೋತ್ರಿ
Image
Deepika Padukone: ‘ಬೇಷರಂ​ ರಂಗ್​’ ಹಾಡಿನ ವಿವಾದ; ದೀಪಿಕಾ ಕೇಸರಿ ಬಿಕಿನಿ ಧರಿಸಿದ್ದಕ್ಕೂ ನೆಟ್ಟಿಗರ ತಕರಾರು
Image
Besharam Rang: ಹೊಸ ಹಾಡಿನಲ್ಲಿ ಹಾಟ್​ ಆಗಿ ಕಾಣಿಸಿಕೊಂಡ ದೀಪಿಕಾ; ‘ಪಠಾಣ್​’ ಚಿತ್ರದ ಮೇಲೆ ಹೆಚ್ಚಿತು ನಿರೀಕ್ಷೆ
Image
Besharam Rang: ಕೆಲವೇ ನಿಮಿಷಗಳಲ್ಲಿ 1 ಮಿಲಿಯನ್​ ವೀಕ್ಷಣೆ ಕಂಡ ‘ಪಠಾಣ್​’ ಸಿನಿಮಾ ಹಾಡು​

ಈ ವಿಡಿಯೋನ ಸಾಕಷ್ಟು ಎಡಿಟ್ ಮಾಡಲಾಗಿದೆ. ಹೀಗಾಗಿ, ಯಾವುದೂ ಸ್ಪಷ್ಟವಾಗಿ ಕಾಣುತ್ತಿಲ್ಲ. ಕೆಲವರು ಇದು ‘ಪಠಾಣ್​’ ಟ್ರೇಲರ್​ ತುಣುಕು ಎಂದು ಹೇಳುತ್ತಿದ್ದಾರೆ. ಇನ್ನೂ ಕೆಲವರು ಇದನ್ನು ಅಲ್ಲಗಳೆದಿದ್ದಾರೆ. ಇದು ನಿಜಕ್ಕೂ ‘ಪಠಾಣ್’ ಚಿತ್ರದ ಟ್ರೇಲರ್ ಹೌದೋ ಅಥವಾ ಇಲ್ಲವೋ ಎಂಬ ಬಗ್ಗೆ ತಂಡದ ಕಡೆಯಿಂದ ಸ್ಪಷ್ಟನೆ ಸಿಗಬೇಕಿದೆ.

‘ಪಠಾಣ್’ ಸಿನಿಮಾದ ಹಾಡುಗಳು ಸದ್ದು ಮಾಡಿವೆ. ‘ಬೇಷರಂ ರಂಗ್​..’ ಹಾಡು ಸಾಕಷ್ಟು ವಿವಾದ ಸೃಷ್ಟಿಸಿದೆ. ಇದರಿಂದ ಚಿತ್ರಕ್ಕೆ ಮೈಲೇಜ್ ಸಿಕ್ಕಿದೆ. ಮತ್ತೊಂದು ಕಡೆ ಈ ವಿವಾದದಿಂದ ಚಿತ್ರಕ್ಕೆ ಹಿನ್ನಡೆ ಆಗುವ ಸೂಚನೆ ಕೂಡ ಸಿಕ್ಕಿದೆ.

ಇದನ್ನೂ ಓದಿ: Vivek Agnihotri: ‘ಪಠಾಣ್​ ಚಿತ್ರದ ವಿವಾದದಿಂದ ವಿವೇಕ್​ ಅಗ್ನಿಹೋತ್ರಿ ಪ್ರಚಾರ ಪಡೆಯುತ್ತಿದ್ದಾರೆ’: ಕೆಆರ್​ಕೆ ಆರೋಪ

‘ಪಠಾಣ್​’ ಚಿತ್ರದಲ್ಲಿ ಜಾನ್ ಅಬ್ರಾಹಂ ಅವರು ವಿಲನ್ ಆಗಿ ಕಾಣಿಸಿಕೊಂಡಿದ್ದಾರೆ. ದೀಪಿಕಾ ಪಡುಕೋಣೆ ಚಿತ್ರದ ನಾಯಕಿ. ಸಿನಿಮಾದ ಟೀಸರ್ ಈಗಾಗಲೇ ಸಾಕಷ್ಟು ಸದ್ದು ಮಾಡಿದೆ. ‘ಜವಾನ್​’, ‘ಡಂಕಿ’ ಚಿತ್ರದ ಕೆಲಸಗಳಲ್ಲೂ ಶಾರುಖ್ ಬ್ಯುಸಿ ಇದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
TV9 Web
TV9 Web

TV9 Kannada

Read More
ಬೆಳಗಾವಿ ಪಾಲಿಕೆ ಸಭೆಯಲ್ಲಿ BJP-ಕಾಂಗ್ರೆಸಿಗರ ನಡುವೆ 'ವಂದೇ ಮಾತರಂ' ಗದ್ದಲ
ಬೆಳಗಾವಿ ಪಾಲಿಕೆ ಸಭೆಯಲ್ಲಿ BJP-ಕಾಂಗ್ರೆಸಿಗರ ನಡುವೆ 'ವಂದೇ ಮಾತರಂ' ಗದ್ದಲ
4 ಮಂದಿ ರಕ್ಷಣೆ, ಆಸ್ಪತ್ರೆಗೆ ದಾಖಲು; 150 ಆಂಬುಲೆನ್ಸ್ ಸಿದ್ಧ
4 ಮಂದಿ ರಕ್ಷಣೆ, ಆಸ್ಪತ್ರೆಗೆ ದಾಖಲು; 150 ಆಂಬುಲೆನ್ಸ್ ಸಿದ್ಧ
ಬೀದರ್ ಕೋಟೆಗೆ 'ಕರ್ನಾಟಕ ಪ್ರವಾಸೋದ್ಯಮ ಪ್ರಶಸ್ತಿ'
ಬೀದರ್ ಕೋಟೆಗೆ 'ಕರ್ನಾಟಕ ಪ್ರವಾಸೋದ್ಯಮ ಪ್ರಶಸ್ತಿ'
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ
ಮಂಗಳೂರಿನ ಎಂಆರ್‌ಪಿಎಲ್‌ನಲ್ಲಿ ಸ್ಫೋಟ: ಮುಗಿಲೆತ್ತರಕ್ಕೆ ಆವರಿಸಿದ ಹೊಗೆ
ಮಂಗಳೂರಿನ ಎಂಆರ್‌ಪಿಎಲ್‌ನಲ್ಲಿ ಸ್ಫೋಟ: ಮುಗಿಲೆತ್ತರಕ್ಕೆ ಆವರಿಸಿದ ಹೊಗೆ
ತುಮಕೂರಿನಲ್ಲಿ ಮಳೆಯ ಅಬ್ಬರ; ಬಸ್​ ನಿಲ್ದಾಣ, ಶಾಲಾ ಆವರಣ ಜಲಾವೃತ!
ತುಮಕೂರಿನಲ್ಲಿ ಮಳೆಯ ಅಬ್ಬರ; ಬಸ್​ ನಿಲ್ದಾಣ, ಶಾಲಾ ಆವರಣ ಜಲಾವೃತ!
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!
ಭೂಸುಧಾರಣಾ ಕಾಯ್ದೆ ತಿದ್ದುಪಡಿ ವಾಪಸ್​ಗೆ ಆಗ್ರಹಿಸಿ ರಾಹುಲ್​ಗೆ ಪತ್ರ
ಭೂಸುಧಾರಣಾ ಕಾಯ್ದೆ ತಿದ್ದುಪಡಿ ವಾಪಸ್​ಗೆ ಆಗ್ರಹಿಸಿ ರಾಹುಲ್​ಗೆ ಪತ್ರ