ಅಗಂತುಕನಿಂದ ನಟಿಯ ಕಾರಿನ ಮೇಲೆ ದಾಳಿ, ಹಲ್ಲೆಗೆ ಯತ್ನ

Payel Mukherjee: ದಕ್ಷಿಣ ಭಾರತದ ಸಿನಿಮಾಗಳಲ್ಲಿಯೂ ನಟಿಸಿರುವ ನಟಿ ಪಾಯಲ್ ಮುಖರ್ಜಿಯನ್ನು ಅನಾಮಿಕ ದ್ವಿಚಕ್ರ ವಾಹನ ಸವಾರನೊಬ್ಬ ಅಡ್ಡಗಟ್ಟಿದ್ದು, ಹಲ್ಲೆಗೆ ಯತ್ನಿಸಿದ್ದಾನೆ. ವಿಡಿಯೋ ಮಾಡಿ ನಟಿ ಪಾಯಲ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಅಗಂತುಕನಿಂದ ನಟಿಯ ಕಾರಿನ ಮೇಲೆ ದಾಳಿ, ಹಲ್ಲೆಗೆ ಯತ್ನ
Follow us
ಮಂಜುನಾಥ ಸಿ.
|

Updated on:Aug 24, 2024 | 3:36 PM

ತೆಲುಗು, ತಮಿಳು ಸಿನಿಮಾಗಳಲ್ಲಿಯೂ ನಟಿಸಿರುವ ಬೆಂಗಾಲಿ ಮೂಲದ ನಟಿ ಪಾಯಲ್ ಮುಖರ್ಜಿ ಮೇಲೆ ಅಗಂತುಕ ಬೈಕ್ ಸವಾರನೊಬ್ಬ ದಾಳಿ ಮಾಡಿದ್ದು, ಹಲ್ಲೆಗೆ ಸಹ ಯತ್ನಿಸಿದ್ದಾನೆ. ಘಟನೆಯನ್ನು ಸಾಮಾಜಿಕ ಜಾಲತಾಣದಲ್ಲಿ ಲೈವ್ ಸಹ ಮಾಡಿದ್ದರು ನಟಿ. ಘಟನೆಯ ಬಳಿಕವೂ ಸಹ ನಟಿ ಪಾಯಲ್, ಅಳುತ್ತಾ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಸಹ ಹಂಚಿಕೊಂಡಿದ್ದಾರೆ.

ಪಾಯಲ್ ಹೇಳಿರುವಂತೆ, ಪಾಯಲ್, ಕೊಲ್ಕತ್ತ ನಗರದಲ್ಲಿ ತಮ್ಮ ಎಸ್​ಯುವಿ ಕಾರಿನಲ್ಲಿ ಹೋಗುವಾಗ ದ್ವಿಚಕ್ರ ವಾಹನ ಚಾಲನೆ ಮಾಡಿಕೊಂಡು ವ್ಯಕ್ತಿಯೊಬ್ಬ ಹಿಂದೆ ಬಂದಿದ್ದಾನೆ. ಹಾಗೂ ನಟಿಯನ್ನು ಗಾಡಿ ನಿಲ್ಲಿಸುವಂತೆ ಹೇಳಿದ್ದಾನೆ. ಆ ಬಳಿಕ ಹೆಲ್ಮೆಟ್​ನಿಂದ ಪಾಯಲ್​ರ ಕಾರಿನ ಗಾಜು ಒಡೆದು, ಕಾರಿನ ಒಳಕ್ಕೆ ಏನೋ ಪುಡಿಯನ್ನು ಎಸೆದಿದ್ದಾನಂತೆ. ಆ ಬಳಿಕವೂ ಸಹ ಕಾರಿನಿಂದ ಕೆಳಗೆ ಇಳಿಯುವಂತೆ ಬಲವಂತ ಮಾಡಿದ್ದಾನೆ. ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾನೆ. ನಟಿಯ ಕಾರಿನ ಕನ್ನಡಿಗಳನ್ನು ಸಹ ಒಡೆದು ಹಾಕಿದ್ದಾನೆ.

ಇದನ್ನೂ ಓದಿ:ಕೊಲ್ಕತ್ತಾ ಅತ್ಯಾಚಾರ-ಕೊಲೆ ಪ್ರಕರಣ; ಸಂಜಯ್ ರಾಯ್ ಮತ್ತು ಇತರ 6 ಜನರ ಪಾಲಿಗ್ರಾಫ್ ಪರೀಕ್ಷೆ ಆರಂಭ

ಅದಾದ ಬಳಿಕ ಗಾಬರಿಯಾದ ನಟಿ ಪಾಯಲ್ ಘೋಷ್, ಪೊಲೀಸರಿಗೆ ಕರೆ ಮಾಡಿದ್ದಾರೆ. ಬಳಿಕ ಪೊಲೀಸರು ಸ್ಥಳಕ್ಕೆ ಆಗಮಿಸಿ ಆತನನ್ನು ಕರೆದೊಯ್ದಿದ್ದಾರೆ. ಆಗಂತುಕ ಚಲಾಯಿಸುತ್ತಿದ್ದ ಬೈಕು ತಮಿಳುನಾಡಿದ್ದಾಗಿದೆ. ಘಟನೆಯ ಬಳಿಕ ವಿಡಿಯೋನಲ್ಲಿ ಮಾತನಾಡಿರುವ ನಟಿ ಪಾಯಲ್, ‘ಒಬ್ಬ ಮಹಿಳೆಯನ್ನು ಇಂಥಹಾ ಬ್ಯುಸಿ ಪ್ರದೇಶದಲ್ಲಿ ಈ ರೀತಿ ಕೆಟ್ಟದಾಗಿ ಅಡ್ಡಗಟ್ಟೆ ಹಲ್ಲೆ ಮಾಡಲು ಯತ್ನಿಸಲಾಗುತ್ತದೆ ಎಂದರೆ ಎಂಥಹಾ ಕೆಟ್ಟ ಪರಿಸ್ಥಿತಿಯಲ್ಲಿ ನಾವು ಇರಬಹುದು ಯೋಚಿಸಿ. ಮಹಿಳೆಯರ ಸುರಕ್ಷತೆ ಬಗ್ಗೆ ನಾವು ಮಾತನಾಡುತ್ತಿರುವ ಸಮಯದಲ್ಲಿಯೇ ಇಂಥಹಾ ಘಟನೆ ನಡೆದಿದೆ’ ಎಂದಿದ್ದಾರೆ.

ಕೊಲ್ಕತ್ತದಲ್ಲಿ ಆಗಸ್ಟ್ 09 ರಂದು ನಡೆದ ವೈದ್ಯೆಯ ಅಮಾನುಷ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಖಂಡಿಸಿ ಪಾಯಲ್ ಸಾಮಾಜಿಕ ಜಾಲತಾಣದಲ್ಲಿ ಅಭಿಪ್ರಾಯ ಹಂಚಿಕೊಂಡಿದ್ದರು. ಇದೇ ಕಾರಣಕ್ಕೆ ಈಗ ಪಾಯಲ್ ಮೇಲೆ ದಾಳಿ ಮಾಡಲಾಗಿದೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಪಾಯಲ್ ಮುಖರ್ಜಿ, ಪಶ್ಚಿಮ ಬಂಗಾಳದವರು. ತೆಲುಗು, ತಮಿಳು, ಹಿಂದಿ ಹಾಗೂ ಮಲಯಾಳಂ ಚಿತ್ರರಂಗದಲ್ಲಿ ನಟಿಸಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 3:36 pm, Sat, 24 August 24

ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ
ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ
ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily Horoscope: ಈ ರಾಶಿಯವರು ಇಂದು ಹೊಸ ವಾಹನ ಖರೀದಿಸುವರು
Daily Horoscope: ಈ ರಾಶಿಯವರು ಇಂದು ಹೊಸ ವಾಹನ ಖರೀದಿಸುವರು
ಆವೇಶ, ಆಕ್ರೋಶ... ಸ್ಯಾಮ್ ಕೊನ್​ಸ್ಟಾಸ್ ಮುಂದೆ ಘರ್ಜಿಸಿದ ವಿರಾಟ್ ಕೊಹ್ಲಿ
ಆವೇಶ, ಆಕ್ರೋಶ... ಸ್ಯಾಮ್ ಕೊನ್​ಸ್ಟಾಸ್ ಮುಂದೆ ಘರ್ಜಿಸಿದ ವಿರಾಟ್ ಕೊಹ್ಲಿ
ಜಸ್​ಪ್ರೀತ್ ಬುಮ್ರಾ ಖಡಕ್ ಲುಕ್​ಗೆ ಸ್ಯಾಮ್​ ಕೊನ್​ಸ್ಟಾಸ್ ಗಪ್ ಚುಪ್
ಜಸ್​ಪ್ರೀತ್ ಬುಮ್ರಾ ಖಡಕ್ ಲುಕ್​ಗೆ ಸ್ಯಾಮ್​ ಕೊನ್​ಸ್ಟಾಸ್ ಗಪ್ ಚುಪ್
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಅಶೋಕ ಸಾರಿಗೆ ಸಚಿವರಾಗಿದ್ದಾಗ ಬಸ್ ಟಿಕೆಟ್ ದರ ಹೆಚ್ಚಿಸಿರಲಿಲ್ಲವೇ? ಸಿಎಂ
ಅಶೋಕ ಸಾರಿಗೆ ಸಚಿವರಾಗಿದ್ದಾಗ ಬಸ್ ಟಿಕೆಟ್ ದರ ಹೆಚ್ಚಿಸಿರಲಿಲ್ಲವೇ? ಸಿಎಂ
ಸಿಖ್ಖರ ಮೆರವಣಿಗೆ ವೇಳೆ ಕಾರಿನಲ್ಲಿ ಡಿಕ್ಕಿ;ಜನರಿಂದ ಪೊಲೀಸ್ ಮಗನ ವಾಹನ ಪುಡಿ
ಸಿಖ್ಖರ ಮೆರವಣಿಗೆ ವೇಳೆ ಕಾರಿನಲ್ಲಿ ಡಿಕ್ಕಿ;ಜನರಿಂದ ಪೊಲೀಸ್ ಮಗನ ವಾಹನ ಪುಡಿ
ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ
ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ