AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಶಾರುಖ್​ ಖಾನ್​ಗೆ ಹೇಳಿ ಜವಾನ್​ ಚಿತ್ರದ ಟಿಕೆಟ್​ ಕೊಡಿಸಿ ಪ್ಲೀಸ್​’: ವಿವೇಕ್​ ಅಗ್ನಿಹೋತ್ರಿ ಬಹಿರಂಗ ಮನವಿ

‘ದಿ ವ್ಯಾಕ್ಸಿನ್​ ವಾರ್​’ ಸಿನಿಮಾವನ್ನು ಪ್ರಚಾರ ಮಾಡುವ ಉದ್ದೇಶದಿಂದ ವಿವೇಕ್​ ಅಗ್ನಿಹೋತ್ರಿ ಅವರು ಸೋಶಿಯಲ್​ ಮೀಡಿಯಾದಲ್ಲಿ ನೆಟ್ಟಿಗರ ಜೊತೆ ಪ್ರಶ್ನೋತ್ತರ ನಡೆಸಿದ್ದಾರೆ. ಈ ವೇಳೆ ಅವರಿಗೆ ‘ಜವಾನ್​’ ಸಿನಿಮಾ ಬಗ್ಗೆ ಶಾರುಖ್​ ಖಾನ್​ ಅಭಿಮಾನಿಗಳಿಂದ ಪ್ರಶ್ನೆ ಎದುರಾಗಿದೆ. ಅದಕ್ಕೆ ವಿವೇಕ್​ ಅಗ್ನಿಹೋತ್ರಿ ನೀಡಿದ ಉತ್ತರ ಎಲ್ಲರ ಗಮನ ಸೆಳೆಯುತ್ತಿದೆ.

‘ಶಾರುಖ್​ ಖಾನ್​ಗೆ ಹೇಳಿ ಜವಾನ್​ ಚಿತ್ರದ ಟಿಕೆಟ್​ ಕೊಡಿಸಿ ಪ್ಲೀಸ್​’: ವಿವೇಕ್​ ಅಗ್ನಿಹೋತ್ರಿ ಬಹಿರಂಗ ಮನವಿ
ವಿವೇಕ್​ ಅಗ್ನಿಹೋತ್ರಿ, ಶಾರುಖ್​ ಖಾನ್​
ಮದನ್​ ಕುಮಾರ್​
|

Updated on: Sep 03, 2023 | 7:56 AM

Share

ನಿರ್ದೇಶಕ ವಿವೇಕ್​ ಅಗ್ನಿಹೋತ್ರಿ (Vivek Agnihotri) ಅವರು ಬಾಲಿವುಡ್​ನ ಒಂದು ವರ್ಗದ ಸೆಲೆಬ್ರಿಟಿಗಳನ್ನು ವಿರೋಧಿಸುತ್ತಾರೆ ಎಂಬುದು ಗೊತ್ತಿರುವ ವಿಚಾರ. ಅವರ ಟ್ವೀಟ್​ಗಳ ಮೂಲಕ ಈಗಾಗಲೇ ಅದು ಸಾಬೀತಾಗಿದೆ. ಇತ್ತೀಚೆಗೆಷ್ಟೇ ಅವರು ‘ಜವಾನ್​’ (Jawan Movie) ಸಿನಿಮಾದ ಬಗ್ಗೆ ವ್ಯಂಗ್ಯವಾಡಿದ್ದರು. ಈ ಚಿತ್ರದ ಬಗ್ಗೆ ಇರುವ ಮೀಮ್​ ಶೇರ್​ ಮಾಡಿಕೊಂಡಿದ್ದರು. ಆದರೆ ಈಗ ಅವರು ಏಕಾಏಕಿ ಉಲ್ಟಾ ಹೊಡೆದಿದ್ದಾರೆ. ಶಾರುಖ್​ ಖಾನ್​ (Shah Rukh Khan) ನಟನೆಯ ಈ ಸಿನಿಮಾದ ಟ್ರೇಲರ್​ಗೆ ವಿವೇಕ್​ ಅಗ್ನಿಹೋತ್ರಿ ಮೆಚ್ಚುಗೆ ಸೂಚಿಸಿದ್ದಾರೆ. ಅಲ್ಲದೇ, ಈ ಚಿತ್ರದ ಟಿಕೆಟ್​ ಕೊಡಿಸಿ ಎಂದು ಅವರು ಬಹಿರಂಗವಾಗಿಯೇ ಮನವಿ ಮಾಡಿಕೊಂಡಿದ್ದಾರೆ. ಅವರು ಮಾಡಿರುವ ಟ್ವೀಟ್​ ವೈರಲ್​ ಆಗಿದೆ. ‘ಜವಾನ್​’ ಸಿನಿಮಾ ಬ್ಲಾಕ್​ಬಸ್ಟರ್​ ಹಿಟ್​ ಆಗುತ್ತದೆ ಎಂದು ಕೂಡ ವಿವೇಕ್​ ಅಗ್ನಿಹೋತ್ರಿ ಅವರು ಭವಿಷ್ಯ ನುಡಿದಿದ್ದಾರೆ.

‘ದಿ ಕಾಶ್ಮೀರ್​ ಫೈಲ್ಸ್’ ಸಿನಿಮಾ ಸೂಪರ್​ ಹಿಟ್​ ಆದ ಬಳಿಕ ನಿರ್ದೇಶಕ ವಿವೇಕ್​ ಅಗ್ನಿಹೋತ್ರಿ ಅವರ ಖ್ಯಾತಿ ಹೆಚ್ಚಾಯಿತು. ಈಗ ಅವರು ‘ದಿ ವ್ಯಾಕ್ಸಿನ್​ ವಾರ್​’ ಸಿನಿಮಾಗೆ ನಿರ್ದೇಶನ ಮಾಡಿದ್ದು, ಆ ಚಿತ್ರದ ಬಿಡುಗಡೆಗೆ ಸಕಲ ತಯಾರಿ ಮಾಡಿಕೊಂಡಿದ್ದಾರೆ. ಆ ಸಿನಿಮಾ ಸೆಪ್ಟೆಂಬರ್ 28ರಂದು ಬಿಡುಗಡೆ ಆಗಲಿದೆ. ತಮ್ಮ ಸಿನಿಮಾವನ್ನು ಪ್ರಚಾರ ಮಾಡುವ ಉದ್ದೇಶದಿಂದ ಅವರು ಸೋಶಿಯಲ್​ ಮೀಡಿಯಾದಲ್ಲಿ ನೆಟ್ಟಿಗರ ಜೊತೆ ಪ್ರಶ್ನೋತ್ತರ ನಡೆಸಿದ್ದಾರೆ. ಈ ವೇಳೆ ಅವರಿಗೆ ‘ಜವಾನ್​’ ಸಿನಿಮಾ ಬಗ್ಗೆ ಶಾರುಖ್​ ಖಾನ್​ ಅಭಿಮಾನಿಗಳಿಂದ ಪ್ರಶ್ನೆ ಎದುರಾಗಿದೆ. ಅದಕ್ಕೆ ವಿವೇಕ್​ ಅಗ್ನಿಹೋತ್ರಿ ನೀಡಿದ ಉತ್ತರ ಎಲ್ಲರ ಗಮನ ಸೆಳೆಯುತ್ತಿದೆ.

‘ಜವಾನ್​ ಚಿತ್ರ 500 ಕೋಟಿ ರೂಪಾಯಿ ಕಲೆಕ್ಷನ್​​ ಮಾಡಲಿದೆ’: ಭವಿಷ್ಯ ನುಡಿದ ಮನೋಜ್​ ದೇಸಾಯಿ

‘ಜವಾನ್​ ಸಿನಿಮಾದ ಟ್ರೇಲರ್​ ಹೇಗನಿಸಿತು’ ಎಂದು ವ್ಯಕ್ತಿಯೊಬ್ಬರು ಪ್ರಶ್ನೆ ಕೇಳಿದ್ದಾರೆ. ಅದಕ್ಕೆ ಉತ್ತರ ನೀಡಿರುವ ವಿವೇಕ್​ ಅಗ್ನಿಹೋತ್ರಿ ಅವರು, ‘ಅದ್ಭುತ.. ಮೈಂಡ್​ ಬ್ಲೋಯಿಂಗ್​. ಬ್ಲಾಕ್​ ಬಸ್ಟರ್​ ಖಚಿತ ಎಂಬುದು ಟ್ರೇಲರ್​ನಿಂದ ತಿಳಿಯುತ್ತಿದೆ’ ಎಂದು ಟ್ವೀಟ್​ ಮಾಡಿದ್ದಾರೆ.

ವಿವೇಕ್ ಅಗ್ನಿಹೋತ್ರಿ ಟ್ವೀಟ್:

‘ಜವಾನ್​ ಸಿನಿಮಾ ನೋಡುತ್ತೀರಾ’ ಎಂದು ನೆಟ್ಟಿಗರು ಪ್ರಶ್ನಿಸಿದ್ದಾರೆ. ‘ಫಸ್ಟ್​ ಡೇ ಫಸ್ಟ್​ ಶೋ ನೋಡುತ್ತೇವೆ. ಆದರೆ ಟಿಕೆಟ್​ ಎಲ್ಲಿದೆ ಗೆಳೆಯ? ಶಾರುಖ್​ ಖಾನ್​ಗೆ ಹೇಳಿ ಟಿಕೆಟ್​ ಕೊಡಿಸಿ ಪ್ಲೀಸ್​’ ಎಂದು ವಿವೇಕ್​ ಅಗ್ನಿಹೋತ್ರಿ ಮನವಿ ಮಾಡಿಕೊಂಡಿದ್ದಾರೆ.

ವಿವೇಕ್ ಅಗ್ನಿಹೋತ್ರಿ ಟ್ವೀಟ್:

ವಿವೇಕ್ ಅಗ್ನಿಹೋತ್ರಿ ಅವರ ಈ ಮಾತಿಗೆ ನೆಟ್ಟಿಗರು ಬಗೆಬಗೆಯಲ್ಲಿ ಕಮೆಂಟ್​ ಮಾಡುತ್ತಿದ್ದಾರೆ. ‘ಇಷ್ಟಕ್ಕೆಲ್ಲ ಶಾರುಖ್​ ಖಾನ್​ಗೆ ಯಾಕೆ ಕೇಳಬೇಕು? ನಾನೇ ಭಿಕ್ಷೆ ಹಾಕುತ್ತೇನೆ’ ಎಂದು ವ್ಯಕ್ತಿಯೊಬ್ಬರು ವ್ಯಂಗ್ಯವಾಡಿದ್ದಾರೆ. ‘ನನಗೆ ನಿಮ್ಮ ವಿವರ ಕಳಿಸಿ. ನಿಮ್ಮ ಊರು ಮತ್ತು ಹತ್ತಿರದ ಚಿತ್ರಮಂದಿರ ಯಾವುದು ಅಂತ ಹೇಳಿ’ ಎಂದು ಇನ್ನೊಬ್ಬರು ಟ್ವೀಟ್​ ಮಾಡಿದ್ದಾರೆ. ‘ವಿವೇಕ್​ ಅಗ್ನಿಹೋತ್ರಿ ಬಳಿ ಇರುವ ದುಡ್ಡು ಖಾಲಿ ಆಯಿತು ಎನಿಸುತ್ತದೆ. ಮತ್ತೊಂದು ಕಾಶ್ಮೀರ್​ ಫೈಲ್ಸ್​ ಸಿನಿಮಾ ಮಾಡಬೇಕಿದೆ’ ಎಂದು ನೆಟ್ಟಿಗರೊಬ್ಬರು ಕಾಲೆಳೆದಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
ಮದನ್​ ಕುಮಾರ್​
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಸೌಜನ್ಯ ಕೇಸ್​​ ತನಿಖೆಗೆ SIT ಚಾಲನೆ: ಮೊದಲ ಸಭೆ, ಇನ್​ ಸೈಡ್​ ಮಾಹಿತಿ
ಸೌಜನ್ಯ ಕೇಸ್​​ ತನಿಖೆಗೆ SIT ಚಾಲನೆ: ಮೊದಲ ಸಭೆ, ಇನ್​ ಸೈಡ್​ ಮಾಹಿತಿ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ
ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ
ಕುರುಡುಮಲೆ ವಿನಾಯಕ ದೇಗುಲದಲ್ಲಿ ಮೋದಿ ಹೆಸರಲ್ಲಿ ಬಿ.ವೈ.ವಿಜಯೇಂದ್ರ ಪೂಜೆ
ಕುರುಡುಮಲೆ ವಿನಾಯಕ ದೇಗುಲದಲ್ಲಿ ಮೋದಿ ಹೆಸರಲ್ಲಿ ಬಿ.ವೈ.ವಿಜಯೇಂದ್ರ ಪೂಜೆ