AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂಡೋನೇಷ್ಯಾದಲ್ಲಿ ಪ್ರಧಾನಿ ಮೋದಿ ಭಾಷಣ; ‘ಕುಚ್ ಕುಚ್ ಹೋತಾ ಹೈ’ ಡೈಲಾಗ್ ಬಳಕೆಗೆ ಕರಣ್ ಸಂತಸ

ಇಂಡೋನೇಷ್ಯಾದ ಜಕಾರ್ತದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಭಾರತ ಮತ್ತು ಇಂಡೋನೇಷ್ಯಾ ಬಾಂಧವ್ಯದ ಬಗ್ಗೆ ಮಾತನಾಡುತ್ತಾ ಬಾಲಿವುಡ್‌ನ ‘ಕುಚ್ ಕುಚ್ ಹೋತಾ ಹೈ’ ಸಿನಿಮಾದ ಡೈಲಾಗ್ ಬಳಸಿದ್ದಾರೆ. ಪ್ರಧಾನಿಯವರ ಈ ಅಪರೂಪದ ಪ್ರಶಂಸೆಗೆ ನಿರ್ದೇಶಕ ಕರಣ್ ಜೋಹರ್ ಭಾವುಕರಾಗಿ ಧನ್ಯವಾದ ಅರ್ಪಿಸಿದ್ದಾರೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ.

ಇಂಡೋನೇಷ್ಯಾದಲ್ಲಿ ಪ್ರಧಾನಿ ಮೋದಿ ಭಾಷಣ; ‘ಕುಚ್ ಕುಚ್ ಹೋತಾ ಹೈ’ ಡೈಲಾಗ್ ಬಳಕೆಗೆ ಕರಣ್ ಸಂತಸ
ಮೋದಿ-ಕರಣ್
 ಶ್ರೀಲಕ್ಷ್ಮೀ ಎಚ್
| Edited By: |

Updated on:Jul 08, 2026 | 11:12 AM

Share

ಮುಖ್ಯಾಂಶಗಳು

  • ಜಕಾರ್ತದಲ್ಲಿ ಪ್ರಧಾನಿ ಮೋದಿ ಭಾಷಣದ ಹವಾ
  • ಇಂಡೋನೇಷ್ಯಾದಲ್ಲೂ ಕರಣ್ ಜೋಹರ್ ಸಿನಿಮಾದ್ದೇ ಕ್ರೇಜ್
  • ‘ಕುಚ್ ಕುಚ್’ ಅಲ್ಲ, ಜೊತೆಯಾಗಿ ಹೆಜ್ಜೆ ಇಟ್ಟರೆ ‘ಬಹುತ್ ಕುಚ್’ ಆಗುತ್ತೆ ಎಂದ ಮೋದಿ

ಇಂಡೋನೇಷ್ಯಾದ ಜಕಾರ್ತದಲ್ಲಿ ಭಾರತೀಯ ಸಮುದಾಯವನ್ನು ಉದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಅವರು ಇತ್ತೀಚೆಗೆ ಮಾತನಾಡಿದ್ದಾರೆ. ಈ ಭಾಷಣದಲ್ಲಿ ಅವರು ಬಾಲಿವುಡ್‌ನ ಪ್ರಸಿದ್ಧ ‘ಕುಚ್ ಕುಚ್ ಹೋತಾ ಹೈ’ ಸಿನಿಮಾದ ಉಲ್ಲೇಖ ಮಾಡಿದ್ದಾರೆ. ಪ್ರಧಾನಿಯವರ ಈ ಮಾತಿಗೆ ಚಿತ್ರದ ನಿರ್ದೇಶಕ ಕರಣ್ ಜೋಹರ್ ಅಪಾರ ಕೃತಜ್ಞತೆ ಸಲ್ಲಿಸಿದ್ದಾರೆ. ಪ್ರಧಾನಿ ಮೋದಿ ಅವರು ತಮ್ಮ ಸಿನಿಮಾವನ್ನು ನೆನಪಿಸಿಕೊಂಡಿದ್ದಕ್ಕೆ ಕರಣ್ ಜೋಹರ್ ಅತ್ಯಂತ ಸಂತಸ ವ್ಯಕ್ತಪಡಿಸಿದ್ದಾರೆ.

ಮೋದಿ ಭಾಷಣದಲ್ಲಿ ಸಿನಿಮಾದ ಹವಾ!

ಇಂಡೋನೇಷ್ಯಾದಲ್ಲಿ ಭಾರತೀಯ ಸಿನಿಮಾಗಳಿಗೆ ಭಾರಿ ಜನಪ್ರಿಯತೆ ಇದೆ. ಪ್ರಧಾನಿ ಮೋದಿ ಅವರು ಅಲ್ಲಿನ ಜನರಿಗೆ ಭಾರತದ ಸಿನಿಮಾಗಳ ಕ್ರೇಜ್ ನೆನಪಿಸಿದರು. ಶಾರುಖ್ ಖಾನ್ ಮತ್ತು ಕಾಜೋಲ್ ನಟನೆಯ ‘ಕುಚ್ ಕುಚ್ ಹೋತಾ ಹೈ’ ಚಿತ್ರದ ಶೀರ್ಷಿಕೆ ಗೀತೆಯನ್ನು ಅವರು ಪ್ರಸ್ತಾಪಿಸಿದರು. ಭಾರತ ಮತ್ತು ಇಂಡೋನೇಷ್ಯಾ ದೇಶಗಳ ಸ್ನೇಹದ ಬಗ್ಗೆ ಮೋದಿ ಮಾತನಾಡಿದರು.

“ಇಲ್ಲಿ ಭಾರತದ ‘ಕುಚ್ ಕುಚ್ ಹೋತಾ ಹೈ’ ಹಾಡು ತುಂಬಾ ಫೇಮಸ್ ಆಗಿದೆ. ಇಂದು ನಾನು ಹೇಳಲು ಬಯಸುತ್ತೇನೆ. ಭಾರತ ಮತ್ತು ಇಂಡೋನೇಷ್ಯಾ ಜೊತೆಯಾಗಿ ಹೆಜ್ಜೆ ಇಟ್ಟರೆ ‘ಕುಚ್ ಕುಚ್’ (ಸ್ವಲ್ಪ ಸ್ವಲ್ಪ) ಮಾತ್ರ ಆಗುವುದಿಲ್ಲ. ಬದಲಿಗೆ ‘ಬಹುತ್ ಕುಚ್’ (ಬಹಳಷ್ಟು) ಒಳಿತಾಗುತ್ತದೆ’ ಎಂದು ಪ್ರಧಾನಿ ಮೋದಿ ವಿವರಿಸಿದರು.

ಕರಣ್ ಜೋಹರ್ ಭಾವುಕ ಪೋಸ್ಟ್!

ಪ್ರಧಾನಿ ಮೋದಿಯವರ ಭಾಷಣದ ವಿಡಿಯೋ ತುಣುಕನ್ನು ಕರಣ್ ಜೋಹರ್ ತಮ್ಮ ಇನ್‌ಸ್ಟಾಗ್ರಾಮ್‌ ಸ್ಟೇಟಸ್​​ನಲ್ಲಿ ಹಂಚಿಕೊಂಡಿದ್ದಾರೆ. ಪ್ರಧಾನಿಯವರು ಜಕಾರ್ತದಲ್ಲಿ ತಮ್ಮ ಸಿನಿಮಾದ ಬಗ್ಗೆ ಮಾತನಾಡಿದ್ದು ಹೆಮ್ಮೆ ತಂದಿದೆ ಎಂದು ಬರೆದುಕೊಂಡಿದ್ದಾರೆ. ಪ್ರೀತಿ ಎಂಬ ಭಾಷೆಗೆ ಯಾವುದೇ ಗಡಿಗಳಿಲ್ಲ ಎಂದು ಅವರು ಹೇಳಿದ್ದಾರೆ. ಈ ಹಾಡನ್ನು ಎಂದೆಂದಿಗೂ ಜೀವಂತವಾಗಿರಿಸಿದ್ದಕ್ಕೆ ಪ್ರಧಾನಿ ಮೋದಿಯವರಿಗೆ ಧನ್ಯವಾದ ಅರ್ಪಿಸಿದ್ದಾರೆ.

ಇದನ್ನೂ ಓದಿ: ;ರಾಮಾಯಣ ಚಿತ್ರಕ್ಕೆ ಕರಣ್ ಜೋಹರ್ ಡಿಸ್ಟ್ರಿಬ್ಯೂಟರ್; ಕೇವಲ 250 ಕೋಟಿ ರೂ.ಗೆ ಡೀಲ್

ಸಿನಿಮಾದ ಹಿನ್ನೆಲೆ

‘ಕುಚ್ ಕುಚ್ ಹೋತಾ ಹೈ’ ಸಿನಿಮಾ 1998 ರಲ್ಲಿ ಬಿಡುಗಡೆಯಾಗಿತ್ತು. ಇದು ಕರಣ್ ಜೋಹರ್ ನಿರ್ದೇಶನದ ಮೊದಲ ಸಿನಿಮಾವಾಗಿದೆ. ಶಾರುಖ್ ಖಾನ್, ಕಾಜೋಲ್ ಮತ್ತು ರಾಣಿ ಮುಖರ್ಜಿ ಈ ಚಿತ್ರದಲ್ಲಿ ನಟಿಸಿದ್ದರು. ಈ ಸಿನಿಮಾ ಬಾಲಿವುಡ್‌ನ ಸಾರ್ವಕಾಲಿಕ ದೊಡ್ಡ ಹಿಟ್ ಚಿತ್ರಗಳಲ್ಲಿ ಒಂದಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 11:06 am, Wed, 8 July 26

Follow Us
 ಶ್ರೀಲಕ್ಷ್ಮೀ ಎಚ್
ಶ್ರೀಲಕ್ಷ್ಮೀ ಎಚ್

ಪತ್ರಕರ್ತೆ ಆಗಬೇಕು ಅಂದುಕೊಂಡವಳು. ಮನೆಯವರ ಒತ್ತಾಯಕ್ಕೆ ಅಕೌಂಟ್ ತೆಗೆದುಕೊಂಡೆ. ಈಗ ಬ್ಯಾಂಕ್ ಎಕ್ಸಾಂಗಳನ್ನು ಬರೆಯುತ್ತಿದ್ದೇನೆ. ಸಮಯ ಸಿಕ್ಕಾಗ ಸುತ್ತಾಡುತ್ತೇನೆ. ಓದಿನ ಬಗ್ಗೆ ಅತೀವ ಆಸಕ್ತಿ. ರವಿ ಬೆಳಗೆರೆ, ತೇಜಸ್ವಿ ನೆಚ್ಚಿನವರು. ಅವರ ಪುಸ್ತಕಗಳನ್ನು ಮತ್ತೆ ಮತ್ತೆ ಓದುತ್ತೇನೆ. ಸಮಯ ಸಿಕ್ಕಾಗ ಪತ್ರಿಕೆಗಳಿಗೆ ಕಥೆಗಳನ್ನು ಬರೆಯುತ್ತೇನೆ. ಸಿನಿಮಾ ಬಗ್ಗೆ ಅತೀವ ಆಸಕ್ತಿ. ಈಗ ಟಿವಿ9 ಕನ್ನಡಕ್ಕೆ ಸಿನಿಮಾ ಸುದ್ದಿಗಳನ್ನು ಬರೆಯುತ್ತಿದ್ದೇನೆ.

Read More
ತುಮಕೂರು ದಸರಾ: ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿದ ಡಿಸಿಎಂ ಪರಮೇಶ್ವರ್
ತುಮಕೂರು ದಸರಾ: ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿದ ಡಿಸಿಎಂ ಪರಮೇಶ್ವರ್
ದಸರಾ ಆನೆಗಳ ಗುಣ, ಸ್ವಭಾವದ ಬಗ್ಗೆ ಸಿಬ್ಬಂದಿ ಹೇಳಿದ ಮಾತುಗಳನ್ನು ಕೇಳಿ!
ದಸರಾ ಆನೆಗಳ ಗುಣ, ಸ್ವಭಾವದ ಬಗ್ಗೆ ಸಿಬ್ಬಂದಿ ಹೇಳಿದ ಮಾತುಗಳನ್ನು ಕೇಳಿ!
ಭೂಗತ ಪಾತಕಿ ಹೇಮಂತ್ ಪೂಜಾರಿ ಹೆಸರಲ್ಲಿ ಕರಾವಳಿ ಉದ್ಯಮಿಗಳಿಗೆ ಬೆದರಿಕೆ ಕರೆ!
ಭೂಗತ ಪಾತಕಿ ಹೇಮಂತ್ ಪೂಜಾರಿ ಹೆಸರಲ್ಲಿ ಕರಾವಳಿ ಉದ್ಯಮಿಗಳಿಗೆ ಬೆದರಿಕೆ ಕರೆ!
ಮೈಸೂರು ದಸರಾ: ಅರಮನೆಯಲ್ಲಿ ಯದುವೀರ್ ನೇತೃತ್ವದಲ್ಲಿ ಅದ್ದೂರಿ ಆಯುಧ ಪೂಜೆ
ಮೈಸೂರು ದಸರಾ: ಅರಮನೆಯಲ್ಲಿ ಯದುವೀರ್ ನೇತೃತ್ವದಲ್ಲಿ ಅದ್ದೂರಿ ಆಯುಧ ಪೂಜೆ
ರಾಜ್ಯ ಬಿಜೆಪಿ ಕಚೇರಿಯಲ್ಲಿ ಆಯುಧ ಪೂಜೆ ಸಂಭ್ರಮದ ಆಚರಣೆ
ರಾಜ್ಯ ಬಿಜೆಪಿ ಕಚೇರಿಯಲ್ಲಿ ಆಯುಧ ಪೂಜೆ ಸಂಭ್ರಮದ ಆಚರಣೆ
ಆಯುಧ ಪೂಜೆ ಸಂಭ್ರಮ:ದೊಡ್ಡ ಗಣಪತಿ ಮತ್ತು ಸರ್ಕಲ್ ಮಾರಮ್ಮ ದೇಗುಲಗಳಲ್ಲಿ ಪೂಜೆ
ಆಯುಧ ಪೂಜೆ ಸಂಭ್ರಮ:ದೊಡ್ಡ ಗಣಪತಿ ಮತ್ತು ಸರ್ಕಲ್ ಮಾರಮ್ಮ ದೇಗುಲಗಳಲ್ಲಿ ಪೂಜೆ
ಆರ್‌ಎಸ್‌ಎಸ್ ವಿಜಯದಶಮಿ ಉತ್ಸವದಲ್ಲಿ ಮೋಹನ್ ಭಾಗವತ್ ಮಾತು
ಆರ್‌ಎಸ್‌ಎಸ್ ವಿಜಯದಶಮಿ ಉತ್ಸವದಲ್ಲಿ ಮೋಹನ್ ಭಾಗವತ್ ಮಾತು
ವೇದಿಕೆ ಮೇಲೆ ರಚಿತಾ ರಾಮ್ ಅವರನ್ನು ಎಳೆದಾಡಿದ ಅಭಿಮಾನಿ: ವಿಡಿಯೋ
ವೇದಿಕೆ ಮೇಲೆ ರಚಿತಾ ರಾಮ್ ಅವರನ್ನು ಎಳೆದಾಡಿದ ಅಭಿಮಾನಿ: ವಿಡಿಯೋ
ಬೆಂಗಳೂರು: ಶಾಂತಿನಗರದಲ್ಲಿ ಮೂರು ದಿನಗಳ ದುರ್ಗಾದೇವಿ ಉತ್ಸವ
ಬೆಂಗಳೂರು: ಶಾಂತಿನಗರದಲ್ಲಿ ಮೂರು ದಿನಗಳ ದುರ್ಗಾದೇವಿ ಉತ್ಸವ
ಹಬ್ಬ ಹಿನ್ನೆಲೆ ಕೆ. ಆರ್ ಮಾರ್ಕೆಟ್​ನಲ್ಲಿ ಖರೀದಿ ಭರಾಟೆ ಜೋರು!
ಹಬ್ಬ ಹಿನ್ನೆಲೆ ಕೆ. ಆರ್ ಮಾರ್ಕೆಟ್​ನಲ್ಲಿ ಖರೀದಿ ಭರಾಟೆ ಜೋರು!