Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೋಧ್ರಾ ದುರಂತದ ಸತ್ಯ ಹೊರಬರ್ತಿದೆ: ‘ಸಾಬರಮತಿ ರಿಪೋರ್ಟ್’ ಸಿನಿಮಾ ಬಗ್ಗೆ ಮೋದಿ ಟ್ವೀಟ್

ನಟ ವಿಕ್ರಾಂತ್ ಮಾಸಿ ಅಭಿನಯದ ‘ದಿ ಸಾಬರಮತಿ ರಿಪೋರ್ಟ್’ ಸಿನಿಮಾ ಇತ್ತೀಚೆಗೆ ಬಿಡುಗಡೆ ಆಗಿದೆ. ನವೆಂಬರ್​ 15ರಂದು ರಿಲೀಸ್ ಆಗಿರುವ ಈ ಸಿನಿಮಾ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರು ಟ್ವೀಟ್ ಮಾಡಿದ್ದಾರೆ. ಗೋಧ್ರಾ ದುರಂತದ ಸತ್ಯ ಈಗ ಹೊರಗೆ ಬರುತ್ತಿದೆ ಎಂದು ಮೋದಿ ಪೋಸ್ಟ್ ಮಾಡಿದ್ದಾರೆ. ಅವರ ಈ ಟ್ವೀಟ್ ವೈರಲ್​ ಆಗಿದೆ.

ಗೋಧ್ರಾ ದುರಂತದ ಸತ್ಯ ಹೊರಬರ್ತಿದೆ: ‘ಸಾಬರಮತಿ ರಿಪೋರ್ಟ್’ ಸಿನಿಮಾ ಬಗ್ಗೆ ಮೋದಿ ಟ್ವೀಟ್
ನರೇಂದ್ರ ಮೋದಿ, ‘ದಿ ಸಾಬರಮತಿ ರಿಪೋರ್ಟ್’ ಪೋಸ್ಟರ್​
Follow us
ಮದನ್​ ಕುಮಾರ್​
|

Updated on: Nov 17, 2024 | 9:57 PM

ಗೋಧ್ರಾ ರೈಲು ದುರಂತ ಇಂದಿಗೂ ವಿವಾದದ ವಿಷಯವಾಗಿಯೇ ಉಳಿದಿದೆ. 2002ರಲ್ಲಿ ನಡೆದ ಆ ಘಟನೆಯ ಬಳಿಕ ಗುಜರಾತ್ ಉದ್ವಿಗ್ನಗೊಂಡಿತ್ತು. ಆ ಕುರಿತು ಹಲವು ಸಾಕ್ಷ್ಯಚಿತ್ರಗಳು ಈಗಾಗಲೇ ಬಂದಿವೆ. ಈಗ ಬಾಲಿವುಡ್​ನಲ್ಲಿ ‘ದಿ ಸಾಬರಮತಿ ರಿಪೋರ್ಟ್​’ ಸಿನಿಮಾ ಬಿಡುಗಡೆ ಆಗಿದೆ. ಇದರಲ್ಲಿ ವಿಕ್ರಾಂತ್ ಮಾಸಿ ಅವರು ಮುಖ್ಯ ಭೂಮಿಕೆ ನಿಭಾಯಿಸಿದ್ದಾರೆ. ಈ ಸಿನಿಮಾದ ಕುರಿತು ‘ಎಕ್ಸ್​’ನಲ್ಲಿ ಕೇಳಿಬಂದ ಅಭಿಪ್ರಾಯಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಪ್ರತಿಕ್ರಿಯೆ ನೀಡಿದ್ದಾರೆ. ಅವರ ಪೋಸ್ಟ್ ವೈರಲ್ ಆಗಿದ್ದು, ಸಿನಿಮಾ ಬಗ್ಗೆ ಚರ್ಚೆ ಹುಟ್ಟುಹಾಕಿದೆ.

‘ಸಾಮಾನ್ಯ ಜನರು ನೋಡುವ ರೀತಿಯಲ್ಲಿ ಸತ್ಯ ಹೊರಗೆ ಬರುತ್ತಿರುವುದು ಒಳ್ಳೆಯ ವಿಷಯ. ಕ್ಷಣಿಕ ಕಾಲಕ್ಕೆ ಮಾತ್ರ ಸುಳ್ಳಿನ ನಿರೂಪಣೆ ಇರಬಹುದು. ಕೊನೆಗೂ ಸತ್ಯ ಹೊರಗೆ ಬರುತ್ತದೆ’ ಎಂದು ನರೇಂದ್ರ ಮೋದಿ ಅವರು ‘ಎಕ್ಸ್’ ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ. ಮೋದಿ ಅವರು ಈ ಪೋಸ್ಟ್ ಮಾಡಿದ್ದರಿಂದ ‘ದಿ ಸಾಬರಮತಿ ರಿಪೋರ್ಟ್’ ಸಿನಿಮಾ ಬಗ್ಗೆ ಜನರಿಗೆ ಇನ್ನಷ್ಟು ಮಾಹಿತಿ ಸಿಕ್ಕಂತೆ ಆಗಿದೆ.

ಗೋಧ್ರಾ ಹತ್ಯಾ ಕಾಂಡ ನಡೆದಾಗ ಅಂದಿನ ಮಾಧ್ಯಮಗಳು ಆ ಘಟನೆಯನ್ನು ಯಾವ ರೀತಿ ಬಿಂಬಿಸಿದ್ದವು ಎಂಬುದನ್ನೇ ಮುಖ್ಯ ಥೀಮ್ ಆಗಿ ಇಟ್ಟುಕೊಂಡು ‘ದಿ ಸಾಬರಮತಿ ರಿಪೋರ್ಟ್’ ಸಿನಿಮಾ ಮೂಡಿಬಂದಿದೆ. ಈ ಸಿನಿಮಾ ಬಗ್ಗೆ ಮೋದಿ ಪೋಸ್ಟ್ ಮಾಡಿದ್ದನ್ನು ಕೆಲವರು ತೆಗಳಿದ್ದಾರೆ. ರಾಜಕೀಯದ ಎಲ್ಲ ಕೆಲಸಗಳನ್ನು ಬಿಟ್ಟು ಅವರು ಸಿನಿಮಾದ ಪ್ರಚಾರ ಮಾಡಿದ್ದಾರೆ ಎಂದು ಕೆಲವರು ಟೀಕೆ ಮಾಡಿದ್ದಾರೆ.

ಇದನ್ನೂ ಓದಿ: ‘ದಿ ಸಾಬರಮತಿ ರಿಪೋರ್ಟ್’ ಸಿನಿಮಾ ನಟನಿಗೆ ಕೊಲೆ ಬೆದರಿಕೆ, ಮಗುವನ್ನೂ ಬಿಟ್ಟಿಲ್ಲ

ವಿಕ್ರಾಂತ್ ಮಾಸಿ, ರಾಶಿ ಖನ್ನಾ, ರಿದ್ದಿ ಡೋಗ್ರಾ, ಬರ್ಕಾ ಸಿಂಗ್ ಮುಂತಾದವರು ‘ದಿ ಸಾಬರಮತಿ ರಿಪೋರ್ಟ್’ ಸಿನಿಮಾದಲ್ಲಿ ನಟಿಸಿದ್ದಾರೆ. ಧೀರಜ್ ಶರ್ಮಾ ಅವರು ಈ ಸಿನಿಮಾಗೆ ನಿರ್ದೇಶನ ಮಾಡಿದ್ದಾರೆ. ಏಕ್ತಾ ಕಪೂರ್​ ಅವರು ಈ ಸಿನಿಮಾಗೆ ಬಂಡವಾಳ ಹೂಡಿದ್ದಾರೆ. ಮೊದಲ ದಿನ (ನ.15) ಈ ಚಿತ್ರ 1.10 ಕೋಟಿ ರೂಪಾಯಿ ಗಳಿಸಿತು. 2ನೇ ದಿನ 1.25 ಕೋಟಿ ರೂಪಾಯಿ ಕಲೆಕ್ಷನ್ ಮಾಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಎಕ್ಸ್​ಪೋ ಉದ್ಘಾಟಿಸಿದ ಕಲಬುರಗಿ ಪೊಲೀಸ್ ಆಯುಕ್ತ ಡಾ ಶರಣಪ್ಪ ಎಸ್​ಡಿ
ಎಕ್ಸ್​ಪೋ ಉದ್ಘಾಟಿಸಿದ ಕಲಬುರಗಿ ಪೊಲೀಸ್ ಆಯುಕ್ತ ಡಾ ಶರಣಪ್ಪ ಎಸ್​ಡಿ
ವಕ್ಫ್ ಪ್ರತಿಭಟನೆ;ಬಂಗಾಳದ ಮುರ್ಷಿದಾಬಾದ್‌ನಲ್ಲಿ 110ಕ್ಕೂ ಹೆಚ್ಚು ಜನರ ಬಂಧನ
ವಕ್ಫ್ ಪ್ರತಿಭಟನೆ;ಬಂಗಾಳದ ಮುರ್ಷಿದಾಬಾದ್‌ನಲ್ಲಿ 110ಕ್ಕೂ ಹೆಚ್ಚು ಜನರ ಬಂಧನ
ಕಂದಾಯ ಸಚಿವ ಮೆಟ್ರೋ ರೈಲಲ್ಲೂ ಒಬ್ಬಂಟಿಯಾಗಿ ಓಡಾಡುತ್ತಿರುತ್ತಾರೆ
ಕಂದಾಯ ಸಚಿವ ಮೆಟ್ರೋ ರೈಲಲ್ಲೂ ಒಬ್ಬಂಟಿಯಾಗಿ ಓಡಾಡುತ್ತಿರುತ್ತಾರೆ
ಕರ್ನಾಟಕವೀಗ ಪ್ರತಿಭಟನೆಗಳ ರಾಜ್ಯ, ಎಲ್ಲ ಮೂರು ಪಕ್ಷಗಳಿಂದ ಪ್ರತಿಭಟನೆ!
ಕರ್ನಾಟಕವೀಗ ಪ್ರತಿಭಟನೆಗಳ ರಾಜ್ಯ, ಎಲ್ಲ ಮೂರು ಪಕ್ಷಗಳಿಂದ ಪ್ರತಿಭಟನೆ!
ಅಪ್ಪಾಜಿಯವರ ಅಭಿಮಾನಿಗಳಲ್ಲೇ ನಾವು ಅಪ್ಪ-ಅಮ್ಮನನ್ನು ಕಾಣುತ್ತೇವೆ: ಲಕ್ಷ್ಮಿ
ಅಪ್ಪಾಜಿಯವರ ಅಭಿಮಾನಿಗಳಲ್ಲೇ ನಾವು ಅಪ್ಪ-ಅಮ್ಮನನ್ನು ಕಾಣುತ್ತೇವೆ: ಲಕ್ಷ್ಮಿ
ಹಿಂದೂಗಳು ದುರ್ಬಲರಲ್ಲವೆಂಬ ಸಂದೇಶ ಸಾರುವ ಉದ್ದೇಶ ಸಂಘಟಕರದ್ದು
ಹಿಂದೂಗಳು ದುರ್ಬಲರಲ್ಲವೆಂಬ ಸಂದೇಶ ಸಾರುವ ಉದ್ದೇಶ ಸಂಘಟಕರದ್ದು
ಬೆಳೆದುನಿಂತ ಅಡಿಕೆ ಸಸಿಗಳ ಮೇಲೆ ಅದೆಂಥ ವೈರತ್ವ ಅಂತ ಅರ್ಥವಾಗದು
ಬೆಳೆದುನಿಂತ ಅಡಿಕೆ ಸಸಿಗಳ ಮೇಲೆ ಅದೆಂಥ ವೈರತ್ವ ಅಂತ ಅರ್ಥವಾಗದು
ಫೋರ್ ಇಲ್ಲ, ಸಿಕ್ಸ್ ಅಂತು ಇಲ್ಲವೇ ಇಲ್ಲ: ಸುಮ್ಮನೆ ಕೂತ CSK ಚಿಯರ್​ಲೀಡರ್ಸ್
ಫೋರ್ ಇಲ್ಲ, ಸಿಕ್ಸ್ ಅಂತು ಇಲ್ಲವೇ ಇಲ್ಲ: ಸುಮ್ಮನೆ ಕೂತ CSK ಚಿಯರ್​ಲೀಡರ್ಸ್
‘ಬಾಯ್ಸ್ vs ಗರ್ಲ್ಸ್’ ವೇದಿಕೆ ಮೇಲೆ ರಜತ್​ ಕಾಲೆಳೆದ ಗರ್ಲ್ಸ್
‘ಬಾಯ್ಸ್ vs ಗರ್ಲ್ಸ್’ ವೇದಿಕೆ ಮೇಲೆ ರಜತ್​ ಕಾಲೆಳೆದ ಗರ್ಲ್ಸ್
ಗ್ಯಾರಂಟಿ ಯೋಜನೆಗಳ ವೈಫಲ್ಯದಿಂದ ಬೇಸತ್ತ ಜನ ಸಹ ಧರಣಿಯಲ್ಲಿ ಭಾಗಿ: ನಿಖಿಲ್
ಗ್ಯಾರಂಟಿ ಯೋಜನೆಗಳ ವೈಫಲ್ಯದಿಂದ ಬೇಸತ್ತ ಜನ ಸಹ ಧರಣಿಯಲ್ಲಿ ಭಾಗಿ: ನಿಖಿಲ್