AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೊಜ್ಜಿನ ಸಮಸ್ಯೆ ವಿರುದ್ಧದ ಸಮರಕ್ಕೆ ಪ್ರಧಾನಿ ಮೋದಿ ಜೊತೆ ಕೈ ಜೋಡಿಸಿದ ಚಿತ್ರರಂಗ

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಭಾರತದಲ್ಲಿ ಹೆಚ್ಚುತ್ತಿರುವ ಸ್ಥೂಲಕಾಯ ಸಮಸ್ಯೆಯನ್ನು ಎದುರಿಸಲು ರಾಷ್ಟ್ರವ್ಯಾಪಿ ಅಭಿಯಾನ ಆರಂಭಿಸಿದ್ದಾರೆ. ಮೋಹನ್​ಲಾಲ್, ಆರ್. ಮಾಧವನ್, ಶ್ರೇಯಾ ಘೋಷಾಲ್ ಮುಂತಾದ ಸೆಲೆಬ್ರಿಟಿಗಳು ಮತ್ತು ರಾಜಕಾರಣಿಗಳು, ಕ್ರೀಡಾಪಟುಗಳು ಈ ಅಭಿಯಾನಕ್ಕೆ ಬೆಂಬಲ ನೀಡುತ್ತಿದ್ದಾರೆ. ಆರೋಗ್ಯಕರ ಜೀವನಶೈಲಿ ಮತ್ತು ಆರೋಗ್ಯಕರ ಆಹಾರದ ಬಗ್ಗೆ ಜಾಗೃತಿ ಮೂಡಿಸುವುದು ಈ ಅಭಿಯಾನದ ಮುಖ್ಯ ಉದ್ದೇಶವಾಗಿದೆ.

ಬೊಜ್ಜಿನ ಸಮಸ್ಯೆ ವಿರುದ್ಧದ ಸಮರಕ್ಕೆ ಪ್ರಧಾನಿ ಮೋದಿ ಜೊತೆ ಕೈ ಜೋಡಿಸಿದ ಚಿತ್ರರಂಗ
ಬೊಜ್ಜಿನ ಸಮಸ್ಯೆ ವಿರುದ್ಧದ ಸಮರಕ್ಕೆ ಕೈ ಜೋಡಿಸಿದ ಚಿತ್ರರಂಗ
ರಾಜೇಶ್ ದುಗ್ಗುಮನೆ
|

Updated on: Feb 25, 2025 | 11:01 AM

Share

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಬೊಜ್ಜಿನ ವಿರುದ್ಧ ಸಮರ ಸಾರಿದ್ದಾರೆ. ದೇಶದಲ್ಲಿ ಏರುತ್ತಿರುವ ಸ್ಥೂಲಕಾಯ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಶ್ರಮ ಹಾಕುತ್ತಿದ್ದಾರೆ. ಈ ಆಂದೋಲನಕ್ಕೆ ಸಿನಿಮಾ ರಂಗದವರನ್ನು ರಾಯಭಾರಿ ಆಗಿಆಯ್ಕೆ ಮಾಡಿದ್ದಾರೆ. ಮಲಯಾಳಂ ನಟ ಮೋಹನ್​ಲಾಲ್, ಆರ್​ ಮಾಧವನ್ ಹಾಗೂ ಗಾಯಕಿ ಶ್ರೇಯಾ ಘೋಷಾಲ್ ಅವರನ್ನು ಈ ಆಂದೋಲನಕ್ಕೆ ಕರೆ ತಂದಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು ಬೊಜ್ಜಿನ ಸಮಸ್ಯೆ ವಿರುದ್ಧ ಸಮರ ಸಾರಿದ್ದಾರೆ. ಈ ಕಾರಣಕ್ಕೆ ರಾಜಕಾರಣಿಗಳು, ಕ್ರೀಡಾಪಟುಗಳು, ಉದ್ಯಮಿಗಳನ್ನು ಈ ಕ್ಯಾಂಪೇನ್​​ಗೆ ಆಯ್ಕೆ ಮಾಡಿದ್ದಾರೆ. ಕಾಶ್ಮೀರ ಸಿಎಂ ಒಮರ್ ಅಬ್ದುಲ್ಲಾ, ಉದ್ಯಮಿ ಆನಂದ್ ಮಹಿಂದ್ರಾ, ವೇಟ್​ಲಿಫ್ಟರ್ ಮೀರಾಬಾಯ್​ ಚನು, ಇನ್​ಫೋಸಿಸ್ ಸಹ ಸಂಸ್ಥಾಪಕ ನಂದನ್ ನೀಲೆಕಣಿ, ಸುಧಾ ಮೂರ್ತಿ, ಶೂಟರ್ ಮನು ಭಾಕರ್​ ಮೊದಲಾದವರು ಲಿಸ್ಟ್​ನಲ್ಲಿ ಇದ್ದಾರೆ.

ಈ ಬಗ್ಗೆ ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ. ‘ಮನ್​ಕಿಬಾತ್​ನಲ್ಲಿ ಹೇಳಿದಂತೆ ಬೊಜ್ಜಿನ ವಿರುದ್ಧದ ಹೋರಾಟವನ್ನು ಬಲಪಡಿಸಲು ಮತ್ತು ಆಹಾರದಲ್ಲಿ ತೈಲ ಬಳಕೆಯನ್ನು ಕಡಿಮೆ ಮಾಡುವ ಕುರಿತು ಜಾಗೃತಿ ಮೂಡಿಸಲು ನಾನು ಈ ಕೆಳಗಿನ ಜನರನ್ನು ನಾಮನಿರ್ದೇಶನ ಮಾಡಲು ಬಯಸುತ್ತೇನೆ. ನಮ್ಮ ಚಳುವಳಿ ದೊಡ್ಡದಾಗಲು ತಲಾ 10 ಜನರನ್ನು ಅವರು ನಾಮನಿರ್ದೇಶನ ಮಾಡಬೇಕು ಎಂಬುದು ನನ್ನ ವಿನಂತಿ’ ಎಂದು ಮೋದಿ ಟ್ವೀಟ್​ನಲ್ಲಿ ಹೇಳಿದ್ದಾರೆ.

ಇದನ್ನೂ ಓದಿ: Mann ki Baat: ಮಕ್ಕಳಲ್ಲಿ ಬೊಜ್ಜು ನಾಲ್ಕು ಪಟ್ಟು ಹೆಚ್ಚಾಗಿದೆ ಎಂದ ಮೋದಿ, ಡಾ. ದೇವಿಶೆಟ್ಟಿ ಕೊಟ್ಟ ಸಲಹೆಗಳೇನು?

ಭಾರತದಲ್ಲಿ ಇತ್ತೀಚೆಗೆ ಸ್ಥೂಲಕಾಯ ಸಮಸ್ಯೆ ಹೆಚ್ಚಿದೆ. ಎಂಟರಲ್ಲಿ ಒಬ್ಬರು ಈ ಸಮಸ್ಯೆಗೆ ಒಳಗಾಗಿದ್ದಾರೆ ಎಂದು ವರದಿ ಹೇಳುತ್ತದೆ. ‘ಫಿಟ್ ಮತ್ತು ಆರೋಗ್ಯಕರ ರಾಷ್ಟ್ರವಾಗಲು ನಾವು ಸ್ಥೂಲಕಾಯದ ಸಮಸ್ಯೆಯನ್ನು ನಿಭಾಯಿಸಬೇಕು. ಒಂದು ಅಧ್ಯಯನದ ಪ್ರಕಾರ, ಇಂದು ಪ್ರತಿ ಎಂಟು ಜನರಲ್ಲಿ ಒಬ್ಬರು ಬೊಜ್ಜಿನ ಸಮಸ್ಯೆಯಿಂದ ಬಳಲುತ್ತಿದ್ದಾರೆ’ ಎಂದು ಮೋದಿ ಈ ಮೊದಲು ಹೇಳಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಕನಸಿನಲ್ಲಿ ಬಂದ ದೇವರು ಹೇಳಿದ್ದಕ್ಕೆ ಮಣ್ಣು ಅಗೆದಾಗ ನಡೆಯಿತು ಅಚ್ಚರಿ!
ಕನಸಿನಲ್ಲಿ ಬಂದ ದೇವರು ಹೇಳಿದ್ದಕ್ಕೆ ಮಣ್ಣು ಅಗೆದಾಗ ನಡೆಯಿತು ಅಚ್ಚರಿ!
ಈ ವರ್ಷದ ಮೊದಲ ಸೂಪರ್ ಮೂನ್ ಭಾರತದಲ್ಲಿ ಕಂಡಿದ್ದು ಹೀಗೆ; ವಿಡಿಯೋ ವೈರಲ್
ಈ ವರ್ಷದ ಮೊದಲ ಸೂಪರ್ ಮೂನ್ ಭಾರತದಲ್ಲಿ ಕಂಡಿದ್ದು ಹೀಗೆ; ವಿಡಿಯೋ ವೈರಲ್
ಕಾನೂನು ಸುವ್ಯವಸ್ಥೆ ಕಾಪಾಡೋದು ಬಿಟ್ಟು ಶಾಸಕನ ಕಾಪಾಡುತ್ತಿದ್ದಾರೆ: ಜೋಶಿ
ಕಾನೂನು ಸುವ್ಯವಸ್ಥೆ ಕಾಪಾಡೋದು ಬಿಟ್ಟು ಶಾಸಕನ ಕಾಪಾಡುತ್ತಿದ್ದಾರೆ: ಜೋಶಿ
ಮೃತ ರಾಜಶೇಖರ್​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ ನೀಡಿದ ಸಚಿವ ಜಮೀರ್
ಮೃತ ರಾಜಶೇಖರ್​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ ನೀಡಿದ ಸಚಿವ ಜಮೀರ್
ಹಾರ್ದಿಕ್ ಸಿಡಿಲಬ್ಬರ; ಲಿಸ್ಟ್​ ಎ ಕ್ರಿಕೆಟ್‌ನಲ್ಲಿ ಚೊಚ್ಚಲ ಶತಕ
ಹಾರ್ದಿಕ್ ಸಿಡಿಲಬ್ಬರ; ಲಿಸ್ಟ್​ ಎ ಕ್ರಿಕೆಟ್‌ನಲ್ಲಿ ಚೊಚ್ಚಲ ಶತಕ
ಸುಂಟರಗಾಳಿಗೆ ಕುಸಿದ ಪೆಂಡಾಲ್​​: ಸಚಿವ ಸತೀಶ್​ ಜಾರಕಿಹೊಳಿ ಪಾರು
ಸುಂಟರಗಾಳಿಗೆ ಕುಸಿದ ಪೆಂಡಾಲ್​​: ಸಚಿವ ಸತೀಶ್​ ಜಾರಕಿಹೊಳಿ ಪಾರು
ವೆನೆಜುವೆಲಾ ಮೇಲೆ ಅಮೆರಿಕದಿಂದ ವೈಮಾನಿಕ ದಾಳಿ; ತುರ್ತು ಪರಿಸ್ಥಿತಿ ಘೋಷಣೆ
ವೆನೆಜುವೆಲಾ ಮೇಲೆ ಅಮೆರಿಕದಿಂದ ವೈಮಾನಿಕ ದಾಳಿ; ತುರ್ತು ಪರಿಸ್ಥಿತಿ ಘೋಷಣೆ
ಬಳ್ಳಾರಿ ಗಲಭೆ: ರೆಡ್ಡಿ, ಶ್ರೀರಾಮುಲುಗೆ ಫೋನ್​ ಮಾಡಿ ಧೈರ್ಯ ಹೇಳಿದ ದೇವೇಗೌಡ
ಬಳ್ಳಾರಿ ಗಲಭೆ: ರೆಡ್ಡಿ, ಶ್ರೀರಾಮುಲುಗೆ ಫೋನ್​ ಮಾಡಿ ಧೈರ್ಯ ಹೇಳಿದ ದೇವೇಗೌಡ
ಬೇಜವಾಬ್ದಾರಿ, ಅಹಂಕಾರ, ಪಕ್ಷಪಾತ: ಗಿಲ್ಲಿ ವಿರುದ್ಧ ದೂರಿನ ಸರಮಾಲೆ
ಬೇಜವಾಬ್ದಾರಿ, ಅಹಂಕಾರ, ಪಕ್ಷಪಾತ: ಗಿಲ್ಲಿ ವಿರುದ್ಧ ದೂರಿನ ಸರಮಾಲೆ
4ನೇ ಶತಕ.. ದೇಶಿ ಅಂಗಳದಲ್ಲಿ ಕನ್ನಡಿಗನ ಪಾರುಪತ್ಯ; ವಿಡಿಯೋ
4ನೇ ಶತಕ.. ದೇಶಿ ಅಂಗಳದಲ್ಲಿ ಕನ್ನಡಿಗನ ಪಾರುಪತ್ಯ; ವಿಡಿಯೋ