AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾರುಖ್ ಮ್ಯಾನೇಜರ್ ಪೂಜಾ ದದ್ಲಾನಿಗೆ ವರ್ಷಕ್ಕೆ ಸಿಗುತ್ತಿದೆ ಕೋಟ್ಯಂತರ ರೂಪಾಯಿ ಸಂಭಾವನೆ

ಶಾರುಖ್ ಖಾನ್ ಮ್ಯಾನೇಜರ್ ಆಗಿರುವ ಪೂಜಾ ಕೇವಲ ಮ್ಯಾನೇಜರ್ ಕೆಲಸ ಮಾಡುತ್ತಿಲ್ಲ. ಅವರು ಶಾರುಖ್ ಕುಟುಂಬದಲ್ಲಿ ಒಬ್ಬರಾಗಿದ್ದಾರೆ. ಅವರು ಯಾವಾಗಲೂ ಶಾರುಖ್ ಜೊತೆ ಇರುತ್ತಾರೆ. ಶಾರುಖ್ ಖಾನ್ ಮ್ಯಾನೇಜ್ ಮಾಡಬೇಕಾದ ವಿಷಯಗಳನ್ನು ಪೂಜಾ ನೋಡಿಕೊಳ್ಳುತ್ತಾರೆ.

ಶಾರುಖ್ ಮ್ಯಾನೇಜರ್ ಪೂಜಾ ದದ್ಲಾನಿಗೆ ವರ್ಷಕ್ಕೆ ಸಿಗುತ್ತಿದೆ ಕೋಟ್ಯಂತರ ರೂಪಾಯಿ ಸಂಭಾವನೆ
ಪೂಜಾ
 ಶ್ರೀಲಕ್ಷ್ಮೀ ಎಚ್
| Edited By: |

Updated on: Apr 08, 2024 | 1:05 PM

Share

ನಟ ಶಾರುಖ್ ಖಾನ್ (Shah Rukh Khan) ಅವರು ಐಪಿಎಲ್​ನಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ತಂಡದ ಒಡೆತನ ಹೊಂದಿದ್ದಾರೆ. ಮ್ಯಾಚ್ ವೀಕ್ಷಿಸಲು ಅವರು ಸ್ಟೇಡಿಯಂಗೆ ಆಗಮಿಸುತ್ತಾರೆ. ಇತ್ತೀಚೆಗೆ ಅವರು ಪಂದ್ಯ ವೀಕ್ಷಿಸಲು ಬಂದಾಗ ಅವರ ಜೊತೆ ಮಹಿಳೆಯೊಬ್ಬರು ಇದ್ದರು. ಇದು ಯಾರು ಎನ್ನುವ ಪ್ರಶ್ನೆ ಅನೇಕರಿಗೆ ಮೂಡಿತ್ತು. ಇವರು ಪೂಜಾ ದದ್ಲಾನಿ. ಶಾರುಖ್ ಅವರ ಮ್ಯಾನೇಜರ್. ಶಾರುಖ್ ಖಾನ್ ಅವರ ಎಲ್ಲ ವಿಚಾರವನ್ನು ಇವರೇ ನೋಡಿಕೊಳ್ಳುತ್ತಾರೆ. ಅವರ ಸಂಭಾವನೆ ವಿಚಾರ ಕೂಡ ಭರ್ಜರಿ ಚರ್ಚೆ ಆಗುತ್ತಿದೆ.

ಶಾರುಖ್ ಖಾನ್ ಅವರು ಇತ್ತೀಚಿನ ವರ್ಷಗಳಲ್ಲಿ ಸಾಕಷ್ಟು ತೊಂದರೆ ಅನುಭವಿಸಿದ್ದರು. ಈಗ ಅವರಿಗೆ ಎಲ್ಲವೂ ಒಳ್ಳೆಯದೇ ಆಗುತ್ತಿದೆ. ‘ಪಠಾಣ್’, ‘ಜವಾನ್’ ಹಾಗೂ ‘ಡಂಕಿ’ ಸಿನಿಮಾ ಬಾಕ್ಸ್ ಆಫೀಸ್​ನಲ್ಲಿ ಗೆಲುವು ಕಂಡಿವೆ. ಅವರ ಮಗ ಆರ್ಯನ್ ಖಾನ್ ಆರಂಭಿಸಿದ ಬಟ್ಟೆ ಬಿಸ್ನೆಸ್ ಒಳ್ಳೆಯ ರೀತಿಯಲ್ಲಿ ಸಾಗುತ್ತಿದೆ. ಸುಹಾನಾ ಖಾನ್ ಚಿತ್ರರಂಗಕ್ಕೆ ಕಾಲಿಟ್ಟಿದ್ದಾರೆ. ಇದಕ್ಕೆ ಇವರ ಮ್ಯಾನೇಜರ್ ಪೂಜಾ ಕೊಡುಗೆಯೂ ಇದೆ. ಶಾರುಖ್ ಖಾನ್ ಅವರು ಸಾವಿರಾರು ಕೋಟಿಯ ಆಸ್ತಿ ಹೊಂದಿದ್ದಾರೆ. ಶಾರುಖ್ ಖಾನ್ ಅವರು ತಮ್ಮ ಮ್ಯಾನೇಜರ್ ಪೂಜಾ ದದ್ಲಾನಿಯನ್ನು ಸಾಕಷ್ಟು ನಂಬುತ್ತಾರೆ.

ಶಾರುಖ್ ಖಾನ್ ಮ್ಯಾನೇಜರ್ ಆಗಿರುವ ಪೂಜಾ ಕೇವಲ ಮ್ಯಾನೇಜರ್ ಕೆಲಸ ಮಾಡುತ್ತಿಲ್ಲ. ಅವರು ಶಾರುಖ್ ಕುಟುಂಬದಲ್ಲಿ ಒಬ್ಬರಾಗಿದ್ದಾರೆ. ಅವರು ಯಾವಾಗಲೂ ಶಾರುಖ್ ಜೊತೆ ಇರುತ್ತಾರೆ. ಶಾರುಖ್ ಖಾನ್ ಮ್ಯಾನೇಜ್ ಮಾಡಬೇಕಾದ ವಿಷಯಗಳನ್ನು ಪೂಜಾ ನೋಡಿಕೊಳ್ಳುತ್ತಾರೆ. ಶಾರುಖ್ ಅವರು ಪೂಜಾ ಮೇಲೆ ಅಷ್ಟು ವಿಶ್ವಾಸ ಇಟ್ಟುಕೊಂಡಿದ್ದಾರೆ. ಇದಕ್ಕೆ ಪ್ರತಿಯಾಗಿ ಅವರಿಗೆ ವರ್ಷಕ್ಕೆ ದೊಡ್ಡ ಸಂಭಾವನೆ ಸಿಗುತ್ತಿದೆ. ಪ್ರತಿ ವರ್ಷ ಪೂಜಾ ಸಂಭಾವನೆ ಆಗಿ 7-9 ಕೋಟಿ ರೂಪಾಯಿ ಪಡೆಯುತ್ತಾರೆ. ಅವರ ಒಟ್ಟೂ ಆಸ್ತಿ 45 ಕೋಟಿ ರೂಪಾಯಿಗೂ ಅಧಿಕವಾಗಿದೆ.

2021ರಲ್ಲಿ ಆರ್ಯನ್ ಖಾನ್ ಅವರು ಡ್ರಗ್ ಕೇಸ್​ನಲ್ಲಿ ಸಿಕ್ಕಿ ಬಿದ್ದರು. ಇದರಿಂದ ಶಾರುಖ್ ಸಾಕಷ್ಟು ನೊಂದರು. ಆರ್ಯನ್ ಖಾನ್​ಗೆ ಜಾಮೀನು ಕೊಡಿಸಬೇಕು ಎಂದು ಪೂಜಾ ಸಾಕಷ್ಟು ಪ್ರಯತ್ನಪಟ್ಟಿದ್ದರು. ಎಲ್ಲಾ ಸಂದರ್ಭದಲ್ಲೂ ಶಾರುಖ್ ಖಾನ್​ಗೆ ಕೋರ್ಟ್ ಹಾಗೂ ಪೊಲೀಸ್ ಠಾಣೆಗೆ ಹೋಗೋಕೆ ಸಾಧ್ಯವಾಗುತ್ತಿರಲಿಲ್ಲ. ಆಗ ಶಾರುಖ್ ಬದಲು ಪೂಜಾ ದದ್ಲಾನಿ ಕೋರ್ಟು-ಕಚೇರಿ ಓಡಾಡಿದ್ದರು.

ಶಾರುಖ್ ಖಾನ್ ಅವರು ಹಲವು ಬ್ರ್ಯಾಂಡ್​ಗಳಿಗೆ ಪ್ರಚಾರ ರಾಯಭಾರಿ ಆಗಿದ್ದಾರೆ. ಈ ಕಂಪನಿಗಳ ಜೊತೆ ಪೂಜಾ ಸಂಪರ್ಕ ಇಟ್ಟುಕೊಂಡಿದ್ದಾರೆ. ಜಾಹೀರಾತು ಶೂಟಿಂಗ್ ಮತ್ತಿತ್ಯಾದಿ ವಿಚಾರಗಳ ಬಗ್ಗೆ ಪೂಜಾ ಅವರೇ ಡೇಟ್ಸ್ ಹೊಂದಿಸುತ್ತಾರೆ. ಶಾರುಖ್ ಖಾನ್ ಆಯೋಜಿಸುವ ಎಲ್ಲಾ ಪಾರ್ಟಿಗಳಿಗೆ ಪೂಜಾ ಹಾಜರಿ ಹಾಕುತ್ತಾರೆ.

ಇದನ್ನೂ ಓದಿ: ಈ ಹಾಟ್ ಚೆಲುವೆಯೇ ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್​ರ ಗರ್ಲ್​ಫ್ರೆಂಡ್

ಇತ್ತೀಚೆಗೆ ಪೂಜಾ ಬಾಂದ್ರಾದಲ್ಲಿ ಮನೆ ಖರೀದಿಸಿದ್ದಾರೆ. ಈ ಮನೆಯ ಇಂಟೀರಿಯರ್​​ನ ಶಾರುಖ್ ಖಾನ್ ಪತ್ನಿ ಗೌರಿ ಖಾನ್ ಅವರೇ ಡಿಸೈನ್ ಮಾಡಿದ್ದರು. ಪೂಜಾ ಬಳಿ ಐಷಾರಾಮಿ ಕಾರು ಕೂಡ ಇದೆ. ಪೂಜಾ ಅವರು 2008ರಲ್ಲಿ ಹಿತೇಶ್ ಅವರನ್ನು ಮದುವೆ ಆಗಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
Shreelaxmi H
Shreelaxmi H

ಪತ್ರಕರ್ತೆ ಆಗಬೇಕು ಅಂದುಕೊಂಡವಳು. ಮನೆಯವರ ಒತ್ತಾಯಕ್ಕೆ ಅಕೌಂಟ್ ತೆಗೆದುಕೊಂಡೆ. ಈಗ ಬ್ಯಾಂಕ್ ಎಕ್ಸಾಂಗಳನ್ನು ಬರೆಯುತ್ತಿದ್ದೇನೆ. ಸಮಯ ಸಿಕ್ಕಾಗ ಸುತ್ತಾಡುತ್ತೇನೆ. ಓದಿನ ಬಗ್ಗೆ ಅತೀವ ಆಸಕ್ತಿ. ರವಿ ಬೆಳಗೆರೆ, ತೇಜಸ್ವಿ ನೆಚ್ಚಿನವರು. ಅವರ ಪುಸ್ತಕಗಳನ್ನು ಮತ್ತೆ ಮತ್ತೆ ಓದುತ್ತೇನೆ. ಸಮಯ ಸಿಕ್ಕಾಗ ಪತ್ರಿಕೆಗಳಿಗೆ ಕಥೆಗಳನ್ನು ಬರೆಯುತ್ತೇನೆ. ಸಿನಿಮಾ ಬಗ್ಗೆ ಅತೀವ ಆಸಕ್ತಿ. ಈಗ ಟಿವಿ9 ಕನ್ನಡಕ್ಕೆ ಸಿನಿಮಾ ಸುದ್ದಿಗಳನ್ನು ಬರೆಯುತ್ತಿದ್ದೇನೆ.

Read More
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ