Prabhas: ‘ಆದಿಪುರುಷ್​’ ಚಿತ್ರತಂಡ ರಿಲೀಸ್​ ಮಾಡಲಿದೆ ಇನ್ನೊಂದು ಟ್ರೇಲರ್​; ಏನಿದು ಸ್ಪೆಷಲ್​ ನ್ಯೂಸ್​?

Adipurush Second Trailer: ಪ್ರಭಾಸ್​ ನಟನೆಯ ಸಿನಿಮಾ ಎಂದರೆ ಅಭಿಮಾನಿಗಳು ಆ್ಯಕ್ಷನ್​ ಬಯಸುತ್ತಾರೆ. ‘ಆದಿಪುರುಷ್​’ ಸಿನಿಮಾದಲ್ಲಿ ಪ್ರಭಾಸ್​ ರಾಮನಾಗಿ ನಟಿಸಿದ್ದರೆ, ರಾವಣನಾಗಿ ಸೈಫ್​ ಅಲಿ ಖಾನ್​ ಅಭಿನಯಿಸಿದ್ದಾರೆ.

Prabhas: ‘ಆದಿಪುರುಷ್​’ ಚಿತ್ರತಂಡ ರಿಲೀಸ್​ ಮಾಡಲಿದೆ ಇನ್ನೊಂದು ಟ್ರೇಲರ್​; ಏನಿದು ಸ್ಪೆಷಲ್​ ನ್ಯೂಸ್​?
ಪ್ರಭಾಸ್​
Follow us
ಮದನ್​ ಕುಮಾರ್​
|

Updated on: Jun 04, 2023 | 10:10 AM

ಹಲವು ಕಾರಣಗಳಿಂದಾಗಿ ‘ಆದಿಪುರುಷ್​’ ಸಿನಿಮಾ (Adipurush Movie) ಹೈಪ್​ ಸೃಷ್ಟಿ ಮಾಡಿದೆ. ಜೂನ್​ 16ರಂದು ಪ್ಯಾನ್​ ಇಂಡಿಯಾ ಮಟ್ಟದಲ್ಲಿ ರಿಲೀಸ್​ ಆಗಲಿರುವ ಈ ಸಿನಿಮಾದಲ್ಲಿ ಪ್ರಭಾಸ್​ (Prabhas) ಅವರು ಮುಖ್ಯ ಭೂಮಿಕೆ ನಿಭಾಯಿಸಿದ್ದಾರೆ. ರಾಮಾಯಣದ ಕತೆಯನ್ನು ಆಧರಿಸಿ ಈ ಚಿತ್ರ ತಯಾರಾಗಿದೆ. ಈಗಾಗಲೇ ಅಭಿಮಾನಿಗಳು ಒಂದು ಟ್ರೇಲರ್​ ನೋಡಿ ಖುಷಿಪಟ್ಟಿದ್ದಾರೆ. ಈಗ ಹೊಸದೊಂದು ಸುದ್ದಿ ಕೇಳಿಬರುತ್ತಿದೆ. ಈ ಸಿನಿಮಾದ ಮತ್ತೊಂದು ಟ್ರೇಲರ್​ ಬಿಡುಗಡೆ ಮಾಡಲು ಸಿದ್ಧತೆ ನಡೆದಿದೆ ಎನ್ನಲಾಗುತ್ತಿದೆ. ಜೂನ್​ 6ರಂದು ತಿರುಪತಿಯಲ್ಲಿ ಅದ್ದೂರಿಯಾಗಿ ಪ್ರೀ-ರಿಲೀಸ್​ ಇವೆಂಟ್​ ನಡೆಯಲಿದೆ. ಅಂದು ‘ಆದಿಪುರುಷ್​’ ಚಿತ್ರದ 2ನೇ ಟ್ರೇಲರ್​ ಬಿಡುಗಡೆ (Adipurush Second Trailer) ಆಗಲಿದೆ ಎಂಬ ಸುದ್ದಿ ಕೇಳಿಬಂದಿದೆ. ನಟ ಪ್ರಭಾಸ್​ ಮತ್ತು ನಟಿ ಕೃತಿ ಸನೋನ್ ಅವರು ಹೊಸ ಟ್ರೇಲರ್​ ಲಾಂಚ್​ ಮಾಡುವ ಸಾಧ್ಯತೆ ಇದೆ.

ಪ್ರಭಾಸ್​ ನಟನೆಯ ಸಿನಿಮಾ ಎಂದರೆ ಅಭಿಮಾನಿಗಳು ಆ್ಯಕ್ಷನ್​ ಬಯಸುತ್ತಾರೆ. ‘ಆದಿಪುರುಷ್​’ ಸಿನಿಮಾದಲ್ಲಿ ಪ್ರಭಾಸ್​ ರಾಮನಾಗಿ ನಟಿಸಿದ್ದರೆ, ರಾವಣನಾಗಿ ಸೈಫ್​ ಅಲಿ ಖಾನ್​ ಅಭಿನಯಿಸಿದ್ದಾರೆ. ರಾಮ-ರಾವಣರ ನಡುವಿನ ಕಾಳಗ ಹೇಗಿರಲಿದೆ ಎಂಬುದನ್ನು ತಿಳಿಸಲು 2ನೇ ಟ್ರೇಲರ್​ ಬಿಡುಗಡೆ ಮಾಡಲಾಗುತ್ತಿದೆ. ಈ ಸಿನಿಮಾದಲ್ಲಿ ಅತ್ಯಾಧುನಿಕ ಗ್ರಾಫಿಕ್ಸ್​ ತಂತ್ರಜ್ಞಾನ ಬಳಕೆ ಆಗಿದೆ. ಅದ್ದೂರಿ ಬಜೆಟ್​ನಲ್ಲಿ ಈ ಚಿತ್ರ ನಿರ್ಮಾಣ ಆಗಿದೆ.

ಪ್ರಭಾಸ್​ ಅಭಿಮಾನಿಗಳು ‘ಆದಿಪುರುಷ್​’ ಚಿತ್ರಕ್ಕಾಗಿ ತುದಿಗಾಲಿನಲ್ಲಿ ನಿಂತು ಕಾದಿದ್ದಾರೆ. ಪ್ರಭಾಸ್​ ಪಾಲಿಗೆ ಈ ಚಿತ್ರ ಬಹಳ ಮಹತ್ವದ ಪ್ರಾಜೆಕ್ಟ್​ ಆಗಿದೆ. ‘ಆದಿಪುರುಷ್​’ ಮೂಲಕ ಗೆಲ್ಲಲೇ ಬೇಕಾದ ಅನಿವಾರ್ಯತೆ ಅವರಿಗೆ ಇದೆ. ಹಾಗಾದರೆ ‘ಆದಿಪುರುಷ್​’ ಸಿನಿಮಾ ಬಾಕ್ಸ್​ ಆಫೀಸ್​ನಲ್ಲಿ ಮೊದಲ ದಿನ ಎಷ್ಟು ಕಲೆಕ್ಷನ್​ ಮಾಡಬಹುದು ಎಂಬ ಕೌತುಕ ಎಲ್ಲರಲ್ಲೂ ಇದೆ. ಬಾಕ್ಸ್​ ಆಫೀಸ್​ ತಜ್ಞರ ಪ್ರಕಾರ ಈ ಸಿನಿಮಾ ಮೊದಲ ದಿನ ವಿಶ್ವಾದ್ಯಂತ 100 ಕೋಟಿ ರೂಪಾಯಿ ಬಾಚಿಕೊಳ್ಳುವ ಸಾಧ್ಯತೆ ಇದೆ. ಈ ಊಹೆ ನಿಜವಾಗುತ್ತಾ ಎಂಬುದನ್ನು ತಿಳಿಯಲು ಇನ್ನು ಕೆಲವೇ ದಿನಗಳು ಬಾಕಿ. ಓಂ ರಾವತ್​ ನಿರ್ದೇಶನದಲ್ಲಿ ‘ಆದಿಪುರುಷ್​’ ಚಿತ್ರ ಮೂಡಿಬಂದಿದೆ. ಭರ್ಜರಿಯಾಗಿ ಪ್ರಚಾರ ಮಾಡಲಾಗುತ್ತಿದೆ.

ಇದನ್ನೂ ಓದಿ: ಆದಿಪುರುಷ್ ಸಿನಿಮಾದ ಬಜೆಟ್ ಎಷ್ಟು? ಬಿಡುಗಡೆಗೆ ಮುನ್ನ ಸಿನಿಮಾ ಗಳಿಸಿರುವುದೆಷ್ಟು?

‘ಆದಿಪುರುಷ್​’ ಸಿನಿಮಾ ಪ್ಯಾನ್​ ಇಂಡಿಯಾ ಮಟ್ಟದಲ್ಲಿ ರಿಲೀಸ್​ ಆಗುತ್ತಿದೆ. ಕನ್ನಡ, ತೆಲುಗು, ಹಿಂದಿ, ಮಲಯಾಳಂ, ತಮಿಳು ಭಾಷೆಯಲ್ಲಿ ಬಿಡುಗಡೆ ಆಗಲಿದೆ. ಎಲ್ಲ ರಾಜ್ಯಗಳಲ್ಲೂ ಉತ್ತಮ ಓಪನಿಂಗ್​ ಪಡೆದುಕೊಳ್ಳುವ ನಿರೀಕ್ಷೆ ಇದೆ. ಹಿಂದಿ ಪ್ರೇಕ್ಷಕರಲ್ಲೂ ಈ ಸಿನಿಮಾ ಬಗ್ಗೆ ಹೈಪ್​ ಕ್ರಿಯೇಟ್​ ಆಗಿದೆ. ಬಾಲಿವುಡ್​ ಕಲಾವಿದರು ಈ ಚಿತ್ರದಲ್ಲಿ ನಟಿಸಿರುವುದೇ ಅದಕ್ಕೆ ಕಾರಣ. ಅಲ್ಲದೇ ಪ್ರಭಾಸ್​ ಅವರಿಗೆ ಉತ್ತರ ಭಾರತದಲ್ಲಿ ಸಾಕಷ್ಟು ಅಭಿಮಾನಿಗಳು ಇದ್ದಾರೆ. ಈ ಎಲ್ಲ ಕಾರಣದಿಂದ ಹಿಂದಿ ಭಾಷಿಕ ರಾಜ್ಯಗಳಲ್ಲಿ ಮೊದಲ ದಿನ ಉತ್ತಮ ಕಲೆಕ್ಷನ್​ ಆಗಲಿದೆ ಎಂದು ನಿರೀಕ್ಷಿಸಲಾಗುತ್ತಿದೆ.

ಇದನ್ನೂ ಓದಿ: Prabhas: ‘ಆದಿಪುರುಷ್’ ರಿಲೀಸ್ ದಿನ ಪ್ರಭಾಸ್ ಅಭಿಮಾನಿಗಳಿಗೆ ಡಬಲ್ ಧಮಾಕ; ಹೊರಬಿತ್ತು ಹೊಸ ಸುದ್ದಿ

ಈ ಸಿನಿಮಾದಲ್ಲಿ ಆಂಜನೇಯನಾಗಿ ದೇವದತ್ತ​ ನಾಗೆ, ಲಕ್ಷ್ಮಣನಾಗಿ ಸನ್ನಿ ಸಿಂಗ್​ ನಟಿಸಿದ್ದಾರೆ. ಮೊದಲ ಟ್ರೇಲರ್​ನಲ್ಲಿ ಅದ್ದೂರಿತನ ಕಾಣಿಸಿದೆ. ದೊಡ್ಡ ಪರದೆಯಲ್ಲಿ ‘ಆದಿಪುರುಷ್​’ ಚಿತ್ರವನ್ನು ನೋಡಲು ಫ್ಯಾನ್ಸ್​ ಕಾದಿದ್ದಾರೆ. 3ಡಿ ಅವತರಣಿಕೆಯಲ್ಲಿ ಈ ಸಿನಿಮಾ ಪ್ರದರ್ಶನ ಆಗಲಿದೆ ಎಂಬುದು ವಿಶೇಷ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ
ಡಿಕೆ ಶಿವಕುಮಾರ್ ಒಕ್ಕಲಿಗ ಸಮುದಾಯದ ಪರಮೋಚ್ಛ ನಾಯಕ: ಪ್ರದೀಪ್ ಈಶ್ವರ್
ಡಿಕೆ ಶಿವಕುಮಾರ್ ಒಕ್ಕಲಿಗ ಸಮುದಾಯದ ಪರಮೋಚ್ಛ ನಾಯಕ: ಪ್ರದೀಪ್ ಈಶ್ವರ್
Results: ಹಣ ಹಂಚಿ ಕಾಂಗ್ರೆಸ್ ಅಭ್ಯರ್ಥಿ ಗೆದ್ದಿದ್ದಾರೆ: ಬಂಗಾರು ಹನುಮಂತು
Results: ಹಣ ಹಂಚಿ ಕಾಂಗ್ರೆಸ್ ಅಭ್ಯರ್ಥಿ ಗೆದ್ದಿದ್ದಾರೆ: ಬಂಗಾರು ಹನುಮಂತು
ಕ್ಯಾಚ್ ಕೈಚೆಲ್ಲಿದ ಪಂತ್: ಸಿಟ್ಟಿನಲ್ಲಿ ಗುರಾಯಿಸಿದ ಬುಮ್ರಾ
ಕ್ಯಾಚ್ ಕೈಚೆಲ್ಲಿದ ಪಂತ್: ಸಿಟ್ಟಿನಲ್ಲಿ ಗುರಾಯಿಸಿದ ಬುಮ್ರಾ
ಚನ್ನಪಟ್ಟಣ ಉಪ ಚುನಾವಣೆಯಲ್ಲಿ ನಿಖಿಲ್​ಗೆ ಸೋಲಾಗೋದು ಹೆಚ್ಚು ಕಡಿಮೆ ಖಚಿತ
ಚನ್ನಪಟ್ಟಣ ಉಪ ಚುನಾವಣೆಯಲ್ಲಿ ನಿಖಿಲ್​ಗೆ ಸೋಲಾಗೋದು ಹೆಚ್ಚು ಕಡಿಮೆ ಖಚಿತ
ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್ ವಿಜಯೋತ್ಸವಕ್ಕೆ ಅಭಿಮಾನಿಗಳಿಂದ ಸಿದ್ಧತೆ
ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್ ವಿಜಯೋತ್ಸವಕ್ಕೆ ಅಭಿಮಾನಿಗಳಿಂದ ಸಿದ್ಧತೆ
ಎರಡು ಕುಟುಂಬಗಳಿಗೆ ಚನ್ನಪಟ್ಟಣ ಚುನಾವಣಾ ಫಲಿತಾಂಶ ಪ್ರತಿಷ್ಠೆಯ ಪ್ರಶ್ನೆ
ಎರಡು ಕುಟುಂಬಗಳಿಗೆ ಚನ್ನಪಟ್ಟಣ ಚುನಾವಣಾ ಫಲಿತಾಂಶ ಪ್ರತಿಷ್ಠೆಯ ಪ್ರಶ್ನೆ