Prakash Raj: ‘ಬೇಷರಂ ರಂಗ್’ ವಿವಾದ; ‘ಇದನ್ನೆಲ್ಲ ಎಲ್ಲಿಯವರೆಗೆ ಸಹಿಸಬೇಕು’ ಅಂತ ಪ್ರಶ್ನೆ ಮಾಡಿದ ಪ್ರಕಾಶ್ ರಾಜ್
Besharam Rang Song: ಬಿಡುಗಡೆಯಾದ ಕ್ಷಣದಿಂದಲೂ ‘ಬೇಷರಂ ರಂಗ್..’ ಹಾಡು ಟ್ರೆಂಡ್ ಸೃಷ್ಟಿ ಮಾಡಿದೆ. ಯೂಟ್ಯೂಬ್ನಲ್ಲಿ ಈವರೆಗೆ 4.2 ಕೋಟಿಗೂ ಅಧಿಕ ಬಾರಿ ವೀಕ್ಷಣೆ ಕಂಡಿದೆ.

ನಟ ಪ್ರಕಾಶ್ ರಾಜ್ (Prakash Raj) ಅವರು ತಮ್ಮ ಅಭಿಪ್ರಾಯ ವ್ಯಕ್ತಪಡಿಸುವಲ್ಲಿ ಎಂದಿಗೂ ಹಿಂದೇಟು ಹಾಕಿದವರಲ್ಲ. ಆ ಕಾರಣದಿಂದ ಅವರು ಕೆಲವರ ವಿರೋಧ ಕಟ್ಟಿಕೊಂಡಿದ್ದೂ ಉಂಟು. ಹಾಗಂತ ಅವರು ಟ್ರೋಲ್ ಮಂದಿಗೆ ಹೆದರಿ ಸುಮ್ಮನೆ ಕೂತಿಲ್ಲ. ಚಿತ್ರರಂಗದ ಅನೇಕ ಸಂಗತಿಗಳ ಬಗ್ಗೆ ಅವರು ಪ್ರತಿಕ್ರಿಯೆ ನೀಡುತ್ತಾರೆ. ಈಗ ಹೊಸ ಚರ್ಚೆ ಹುಟ್ಟುಹಾಕಿರುವ ‘ಬೇಷರಂ ರಂಗ್..’ ಹಾಡಿನ ಬಗ್ಗೆ ಅವರು ಟ್ವೀಟ್ ಮಾಡಿದ್ದಾರೆ. ಈ ಸಾಂಗ್ ಬಗ್ಗೆ ಕೆಲವರು ತಕರಾರು ತೆಗೆದಿದ್ದಾರೆ. ಶಾರುಖ್ ಖಾನ್ ಅಭಿನಯದ ‘ಪಠಾಣ್’ (Pathaan) ಸಿನಿಮಾದ ಈ ಹಾಡಿನಲ್ಲಿ ದೀಪಿಕಾ ಪಡುಕೋಣೆ (Deepika Padukone) ಅವರು ಕೇಸರಿ ಬಣ್ಣ ಬಿಕಿನಿ ಧರಿಸಿದ್ದನ್ನು ಒಂದು ವರ್ಗದ ಮಂದಿ ವಿರೋಧಿಸಿದ್ದಾರೆ. ‘ಇಂಥದ್ದನ್ನೆಲ್ಲ ಇನ್ನೂ ಎಲ್ಲಿಯವರೆಗೆ ಸಹಿಸಿಕೊಳ್ಳಬೇಕು’ ಎಂದು ಪ್ರಕಾಶ್ ರಾಜ್ ಪ್ರಶ್ನೆ ಮಾಡಿದ್ದಾರೆ.
ಬಿಡುಗಡೆಯಾದ ಕ್ಷಣದಿಂದಲೂ ‘ಬೇಷರಂ ರಂಗ್..’ ಹಾಡು ಟ್ರೆಂಡ್ ಸೃಷ್ಟಿ ಮಾಡಿದೆ. ಯೂಟ್ಯೂಬ್ನಲ್ಲಿ ಈವರೆಗೆ 4.2 ಕೋಟಿಗೂ ಅಧಿಕ ಬಾರಿ ವೀಕ್ಷಣೆ ಕಂಡಿದೆ. ಈ ಹಾಡಿನಲ್ಲಿ ದೀಪಿಕಾ ಪಡುಕೋಣೆ ಅವರು ಕಾಣಿಸಿಕೊಂಡ ರೀತಿ ಅಶ್ಲೀಲವಾಗಿದೆ ಎಂಬುದು ಕೆಲವರ ವಾದ. ಅಲ್ಲದೇ ಕೇಸರಿ ಬಣ್ಣದ ಬಿಕಿಸಿ ಧರಿಸಿ ‘ಬೇಷರಂ ರಂಗ್’ (ನಾಚಿಕೆ ಇಲ್ಲದ ಬಣ್ಣ) ಎಂದು ಹಾಡಿರುವುದನ್ನು ಹಲವರು ಖಂಡಿಸುತ್ತಿದ್ದಾರೆ.
ಇದನ್ನೂ ಓದಿ: Deepika Padukone: ‘ಬೇಷರಂ ರಂಗ್’ ಹಾಡಿನ ವಿವಾದ; ದೀಪಿಕಾ ಕೇಸರಿ ಬಿಕಿನಿ ಧರಿಸಿದ್ದಕ್ಕೂ ನೆಟ್ಟಿಗರ ತಕರಾರು
ಈ ವಿವಾದದ ಕುರಿತಾಗಿ ಪ್ರಕಟ ಆಗಿರುವ ಸುದ್ದಿಯನ್ನು ಪ್ರಕಾಶ್ ರಾಜ್ ಅವರು ತಮ್ಮ ಟ್ವಿಟರ್ ಖಾತೆಯಲ್ಲಿ ಶೇರ್ ಮಾಡಿಕೊಂಡಿದ್ದಾರೆ. ‘ಅಸಹ್ಯಕರ.. ಇದನ್ನೆಲ್ಲ ನಾವು ಇನ್ನೂ ಎಲ್ಲಿಯವರೆಗೆ ಸಹಿಸಿಕೊಳ್ಳಬೇಕು? ಬಣ್ಣದ ಕುರುಡುತನ’ ಎಂದು ಅವರು ಬರೆದುಕೊಂಡಿದ್ದಾರೆ. ಜೊತೆಗೆ #AndhBhakts ಮತ್ತು #justasking ಹ್ಯಾಷ್ಟ್ಯಾಗ್ ಬಳಸಿದ್ದಾರೆ. ಇದಕ್ಕೆ ನೆಟ್ಟಿಗರು ಹಲವು ರೀತಿಯಲ್ಲಿ ಪ್ರತಿಕ್ರಿಯಿಸಿದ್ದಾರೆ.
ಇದನ್ನೂ ಓದಿ: Besharam Rang: ಹೊಸ ಹಾಡಿನಲ್ಲಿ ಹಾಟ್ ಆಗಿ ಕಾಣಿಸಿಕೊಂಡ ದೀಪಿಕಾ; ‘ಪಠಾಣ್’ ಚಿತ್ರದ ಮೇಲೆ ಹೆಚ್ಚಿತು ನಿರೀಕ್ಷೆ
‘ಪಠಾಣ್’ ಚಿತ್ರದ ಮೂಲಕ ಭರ್ಜರಿಯಾಗಿ ಕಮ್ಬ್ಯಾಕ್ ಮಾಡಲು ಶಾರುಖ್ ಖಾನ್ ಸಜ್ಜಾಗಿದ್ದಾರೆ. ಈ ಸಿನಿಮಾ 2023ರ ಜನವರಿ 25ರಂದು ವಿಶ್ವಾದ್ಯಂತ ಬಿಡುಗಡೆ ಆಗಲಿದೆ. ಆದರೆ ಅದಕ್ಕೂ ಮುನ್ನವೇ ಈ ಸಿನಿಮಾವನ್ನು ಬಹಿಷ್ಕಾರ ಮಾಡಬೇಕು ಎಂದು ಸೋಶಿಯಲ್ ಮೀಡಿಯಾದಲ್ಲಿ ಅಭಿಯಾನ ಶುರು ಮಾಡಲಾಗಿದೆ. ಟ್ವಿಟರ್ನಲ್ಲಿ #BoycottPathan ಹ್ಯಾಶ್ಟ್ಯಾಗ್ ಟ್ರೆಂಡ್ ಆಗಿದೆ.
Disgusting … How long should we tolerate these ..Colour Blind #AndhBhakts .. #justasking https://t.co/SSgxKpvcE9
— Prakash Raj (@prakashraaj) December 14, 2022
#Besharam BIGOTS.. So it’s okay when Saffron clad men garland rapists..give hate speech, broker MLAs, a Saffron clad swamiji rapes Minors, But not a DRESS in a film ?? #justasking ….Protesters Burn Effigies Of SRK In Indore. Their Demand: Ban ‘Pathaan’ https://t.co/00Wa982IU4
— Prakash Raj (@prakashraaj) December 15, 2022
ಸಿದ್ದಾರ್ಥ್ ಆನಂದ್ ಅವರು ‘ಪಠಾಣ್’ ಚಿತ್ರಕ್ಕೆ ನಿರ್ದೇಶನ ಮಾಡಿದ್ದಾರೆ. ಶಾರುಖ್ ಖಾನ್ ಅವರಿಗೆ ಜೋಡಿಯಾಗಿ ದೀಪಿಕಾ ಪಡುಕೋಣೆ ನಟಿಸಿದ್ದಾರೆ. ಇನ್ನೊಂದು ಮುಖ್ಯ ಪಾತ್ರದಲ್ಲಿ ಜಾನ್ ಅಬ್ರಾಹಂ ಅಭಿನಯಿಸಿದ್ದಾರೆ. ಟೀಸರ್ ನೋಡಿದ ಅಭಿಮಾನಿಗಳು ಖುಷಿಪಟ್ಟಿದ್ದರು. ಆದರೆ ‘ಬೇಷರಂ ರಂಗ್..’ ಹಾಡು ರಿಲೀಸ್ ಆದಾಗಿನಿಂದ ವಿವಾದ ತಲೆ ಎತ್ತಿದೆ.
ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.