AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಕಲಿ ಶಾರುಖ್​ನ ಕರೆಸಿ ಚುನಾವಣಾ ಪ್ರಚಾರ ಮಾಡಿಸಿದ ಪ್ರಣಿತಿ ಶಿಂಧೆ; ವಿಡಿಯೋ ವೈರಲ್​

ನಟ ಶಾರುಖ್​ ಖಾನ್​ ಯಾವುದೇ ರಾಜಕೀಯ ಪಕ್ಷದ ಜತೆ ಗುರುತಿಸಿಕೊಂಡಿಲ್ಲ. ಸದ್ಯಕ್ಕೆ ಅವರು ಸಿನಿಮಾ ಕೆಲಸಗಳತ್ತ ಗಮನ ಹರಿಸಿದ್ದಾರೆ. ಆದರೆ ಶಾರುಖ್​ ಖಾನ್​ ಅವರನ್ನೇ ಹೋಲುವಂತಹ ವ್ಯಕ್ತಿಯನ್ನು ಕರೆತಂದು ಚುನಾವಣಾ ಪ್ರಚಾರ ಮಾಡಿಸಿದ ಘಟನೆ ಮಹಾರಾಷ್ಟ್ರದ ಸೊಲ್ಲಾಪುರ ಲೋಕಸಭಾ ಕ್ಷೇತ್ರದಲ್ಲಿ ನಡೆದಿದೆ. ಆ ಸಂದರ್ಭದ ವಿಡಿಯೋ ವೈರಲ್​ ಆಗಿದೆ.

ನಕಲಿ ಶಾರುಖ್​ನ ಕರೆಸಿ ಚುನಾವಣಾ ಪ್ರಚಾರ ಮಾಡಿಸಿದ ಪ್ರಣಿತಿ ಶಿಂಧೆ; ವಿಡಿಯೋ ವೈರಲ್​
ನಕಲಿ ಶಾರುಖ್​ನ ಕರೆಸಿ ಚುನಾವಣಾ ಪ್ರಚಾರ ಮಾಡಿಸಿದ ಪ್ರಣಿತಿ ಶಿಂಧೆ
ಮದನ್​ ಕುಮಾರ್​
|

Updated on: Apr 19, 2024 | 2:59 PM

Share

2024ರ ಲೋಕಸಭೆ ಚುನಾವಣೆಯ (Lok Sabha Elections) ಮೊದಲ ಹಂತದ ಮತದಾನ ಇಂದು (ಏಪ್ರಿಲ್​ 19) ಬೆಳಗ್ಗೆ 7 ಗಂಟೆಗೆ ಆರಂಭವಾಗಿದೆ. ದೇಶದ 21 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶ ಸೇರಿ 102 ಲೋಕಸಭಾ ಕ್ಷೇತ್ರಗಳಲ್ಲಿ ಮತದಾನ ನಡೆಯುತ್ತಿದೆ. ಮತ್ತೊಂದೆಡೆ, 2ನೇ ಹಂತದ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆಗೆ ಇಂದು ಕೊನೆಯ ದಿನವಾಗಿದೆ. ಹೀಗಾಗಿ ಗುರುವಾರ ಹಲವು ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದರು. ಸೊಲ್ಲಾಪುರದ ಕಾಂಗ್ರೆಸ್ ಅಭ್ಯರ್ಥಿ ಹಾಗೂ ಶಾಸಕಿ ಪ್ರಣಿತಿ ಶಿಂಧೆ (Praniti Shinde) ಕೂಡ ಶಕ್ತಿ ಪ್ರದರ್ಶನದಲ್ಲಿ ಭಾಗಿಯಾದರು. ಈ ವೇಳೆ ಡೂಪ್ಲಿಕೇಟ್​ ಶಾರುಖ್​ ಖಾನ್(Duplicate Shah Rukh Khan) ನೋಡಿ ಎಲ್ಲರಿಗೂ ಅಚ್ಚರಿ ಆಯಿತು.

ಪ್ರಣಿತಿ ಶಿಂಧೆ ಅವರ ಪ್ರಚಾರದಲ್ಲಿ ಶಾರುಖ್ ಖಾನ್ ಅವರಂತೆ ಕಾಣುವ ವ್ಯಕ್ತಿಯೊಬ್ಬರು ಎಲ್ಲರ ಗಮನ ಸೆಳೆದರು. ಪ್ರಣಿತಿ ಶಿಂಧೆಯ ಪ್ರಚಾರಕ್ಕಾಗಿ ಶಾರುಖ್ ಸ್ವತಃ ರ‍್ಯಾಲಿಯಲ್ಲಿ ಕಾಣಿಸಿಕೊಂಡಿದ್ದಾರಾ ಎಂದು ಹಲವರು ಆಶ್ಚರ್ಯ ಪಡುತ್ತಿದ್ದರು. ಅವರ ಹಾವಭಾವ ಮತ್ತು ಲುಕ್​ ನೋಡಿದರೆ ಕಿಂಗ್ ಖಾನ್‌ ಅವರಂತೆಯೇ ಇತ್ತು. ಹಾಗಾಗಿ ಎಲ್ಲರೂ ಗೊಂದಲಕ್ಕೊಳಗಾದರು. ಆದರೆ ಪ್ರಚಾರಕ್ಕಾಗಿ ಪ್ರಣಿತಿ ಶಿಂಧೆ ಅವರು ಕರೆ ತಂದಿರುವುದು ಅಪ್ಪಟ ನಕಲಿ ಶಾರುಖ್ ಖಾನ್​ನನ್ನು ಎಂಬುದು ಅಸಲಿಯತ್ತು.

ಸೋಶಿಯಲ್​ ಮೀಡಿಯಾದಲ್ಲಿ ಈ ಪ್ರಚಾರ ರ‍್ಯಾಲಿಯ ವಿಡಿಯೋ ಸಖತ್​ ವೈರಲ್ ಆಗಿದೆ. ಈ ಡೂಪ್ಲಿಕೇಟ್ ಶಾರುಖ್ ಖಾನ್​ ಕಪ್ಪು ಟೀ ಶರ್ಟ್ ಮತ್ತು ಜೀನ್ಸ್ ಧರಿಸಿ ಕಾಣಿಸಿಕೊಂಡಿದ್ದಾರೆ. ಅವರ ಹೇರ್ ಸ್ಟೈಲ್, ಲುಕ್, ಹಾವಭಾವಗಳು ಶಾರುಖ್ ಅವರನ್ನು ಹೋಲುತ್ತವೆ. ಹಾಗಾಗಿ ಪ್ರಣಿತಿ ಶಿಂಧೆ ಪರವಾಗಿ ಪ್ರಚಾರಕ್ಕೆ ನಿಜವಾಗಿಯೂ ಶಾರುಖ್ ಖಾನ್​ ಬಂದಿದ್ದಾರಾ ಎಂದು ಕೆಲವರು ಕಮೆಂಟ್​ ಮೂಲಕ ಪ್ರಶ್ನಿಸಿದ್ದಾರೆ. ಅದೇನೇ ಇರಲಿ, ಚುನಾವಣಾ ಪ್ರಚಾರಕ್ಕಾಗಿ ಸೊಲ್ಲಾಪುರಕ್ಕೆ ಬಂದಿದ್ದ ಈ ಡೂಪ್ಲಿಕೇಟ್ ಶಾರುಖ್ ಖಾನ್​​ನ ನೋಡಲು ಜನರು ಮುಗಿಬಿದ್ದರು.

ಇದನ್ನೂ ಓದಿ: ಪುತ್ರಿ ಸುಹಾನಾ ಖಾನ್​ ಸಿನಿಮಾಗಾಗಿ 200 ಕೋಟಿ ರೂಪಾಯಿ ಸುರಿಯಲಿರುವ ಶಾರುಖ್​ ಖಾನ್​

ಶಾರುಖ್​ ಖಾನ್​ ಅವರು ಯಾವುದೇ ರಾಜಕೀಯ ಪಕ್ಷದ ಜೊತೆ ಗುರುತಿಸಿಕೊಂಡಿಲ್ಲ. ಸಿನಿಮಾ ಕೆಲಸಗಳಲ್ಲಿ ಅವರು ಬ್ಯುಸಿ ಆಗಿದ್ದಾರೆ. ‘ಡಂಕಿ’ ಸಿನಿಮಾ ಬಳಿಕ ಅವರು ಹೊಸ ಸಿನಿಮಾ ಅನೌನ್ಸ್​ ಮಾಡಲು ಅವಸರ ತೋರಿಲ್ಲ. ಸ್ಕ್ರಿಪ್ಟ್​ ಆಯ್ಕೆಯಲ್ಲಿ ಅವರು ಹೆಚ್ಚು ಕಾಳಜಿ ವಹಿಸುತ್ತಿದ್ದಾರೆ. ಅವರ ಮಕ್ಕಳಾದ ಸುಹಾನಾ ಖಾನ್​ ಮತ್ತು ಆರ್ಯನ್​ ಖಾನ್​ ಕೂಡ ಚಿತ್ರರಂಗದಲ್ಲಿ ಬ್ಯುಸಿ ಆಗಿದ್ದಾರೆ. ಮಗಳ ಮುಂದಿನ ಸಿನಿಮಾಗಾಗಿ ಶಾರುಖ್​ ಖಾನ್​ ಅವರು 200 ಕೋಟಿ ರೂಪಾಯಿ ಬಂಡವಾಳ ಹೂಡಲು ಮುಂದಾಗಿದ್ದಾರೆ ಎಂದು ಹೇಳಲಾಗುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!