AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೋದಿ ಹುಟ್ಟುಹಬ್ಬಕ್ಕೆ ಹಾಡಿನ ಉಡುಗೊರೆ ಕೊಟ್ಟ ಪ್ರಸೂನ್ ಜೋಶಿ-ಶಂಕರ್

Narendra Modi Birthday: ನರೇಂದ್ರ ಮೋದಿ ಅವರ 75ನೇ ಹುಟ್ಟುಹಬ್ಬ ಇಂದು (ಸೆಪ್ಟೆಂಬರ್ 17) ಆಚರಣೆ ಮಾಡಲಾಗುತ್ತಿದೆ. ಹಲವಾರು ಸಿನಿಮಾ ಸೆಲೆಬ್ರಿಟಿಗಳು, ರಾಜಕಾರಣಿಗಳು ಮೋದಿ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳನ್ನು ತಿಳಿಸಿದ್ದಾರೆ. ಮೋದಿಯ ಅಪ್ಪಟ ಅಭಿಮಾನಿ, ಚಿತ್ರ ಸಾಹಿತಿ ಪ್ರಸೂನ್ ಜೋಶಿ ಅವರು ಮೋದಿ ಅವರಿಗಾಗಿ ಹಾಡೊಂದನ್ನು ರಚಿಸಿ, ಯೂಟ್ಯೂಬ್​​ನಲ್ಲಿ ಬಿಡುಗಡೆ ಮಾಡಿದ್ದಾರೆ.

ಮೋದಿ ಹುಟ್ಟುಹಬ್ಬಕ್ಕೆ ಹಾಡಿನ ಉಡುಗೊರೆ ಕೊಟ್ಟ ಪ್ರಸೂನ್ ಜೋಶಿ-ಶಂಕರ್
Narendra Modi
ಮಂಜುನಾಥ ಸಿ.
|

Updated on:Sep 17, 2025 | 11:03 AM

Share

ಇಂದು (ಸೆಪ್ಟೆಂಬರ್ 17) ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ಹುಟ್ಟುಹಬ್ಬ. ರಾಜಕೀಯ ಮುಖಂಡರು, ಸಚಿವರುಗಳು, ವಿಪಕ್ಷ ನಾಯಕರು, ಸಿನಿಮಾ ಸೆಲೆಬ್ರಿಟಿಗಳು, ಕ್ರೀಡಾ ತಾರೆಯರು, ಉದ್ಯಮಿಗಳು ಪ್ರಧಾನಿ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳನ್ನು ಕೋರಿದ್ದಾರೆ. ಹಲವಾರು ಮಂದಿ ಸೆಲೆಬ್ರಿಟಿಗಳು ಮೋದಿ ಜೊತೆಗಿನ ತಮ್ಮ ಸ್ವಂತ ಅನುಭವವನ್ನು ಹಂಚಿಕೊಂಡಿದ್ದಾರೆ. ಇದರ ನಡುವೆ ಮೋದಿ ಅವರ ಅಭಿಮಾನಿ, ಸಿನಿಮಾ ಸಾಹಿತಿ ಪ್ರಸೂನ್ ಜೋಶಿ ಅವರು ಮೋದಿ ಅವರ ಗುಣಗಾನ ಮಾಡಿ ಹಾಡೊಂದನ್ನು ರಚಿಸಿದ್ದು, ಶಂಕರ್ ಮಹದೇವ್ ಹಾಡು ಹಾಡಿದ್ದಾರೆ. ಮೋದಿ ಅವರ ಹುಟ್ಟುಹಬ್ಬದ ವಿಶೇಷವಾಗಿ ಹಾಡನ್ನು ಬಿಡುಗಡೆ ಮಾಡಲಾಗಿದೆ.

ಮೋದಿ ಅವರ 75ನೇ ವರ್ಷದ ಹುಟ್ಟುಹಬ್ಬದ ಪ್ರಯುಕ್ತ ‘ವಂದನೀಯ ಹೇ ದೇಶ್​ ಮೇರ’ ಎಂಬ ಹಾಡನ್ನು ಬಿಡುಗಡೆ ಮಾಡಲಾಗಿದೆ. ಹಾಡಿಗೆ ಸಾಹಿತ್ಯವನ್ನು ಪ್ರಸೂನ್ ಜೋಶಿ ಬರೆದಿದ್ದಾರೆ. ಹಾಡು ಹಾಡಿರುವುದು ಶಂಕರ್ ಮಹದೇವನ್, ಸಂಗೀತ ನೀಡಿರುವುದು ಸಹ ಶಂಕರ್ ಮಹದೆವನ್ ಅವರೇ, ಹಾಡು ಟಿ-ಸೀರೀಸ್ ಯೂಟ್ಯೂಬ್ ಚಾನೆಲ್​​ನಲ್ಲಿ ಬಿಡುಗಡೆ ಆಗಿದೆ. ನರೇಂದ್ರ ಮೋದಿ ಅವರ ಸಾಧನೆಗಳನ್ನು, ವ್ಯಕ್ತಿತ್ವವನ್ನು ಹಾಡಿನಲ್ಲಿ ಕೊಂಡಾಡಲಾಗಿದೆ.

ನರೇಂದ್ರ ಮೋದಿ ಹುಟ್ಟುಹಬ್ಬದ ಪ್ರಯುಕ್ತ ವಿಶೇಷ ಹಾಡು

ಹಾಡಿನಲ್ಲಿ ಮೋದಿ ಅವರ ಹಲವು ವಿಡಿಯೋ ತುಣುಕುಗಳನ್ನು ಬಳಸಿಕೊಳ್ಳಲಾಗಿದೆ. ಇತ್ತೀಚೆಗೆ ನಡೆಸಲಾದ ಆಪರೇಷನ್ ಸಿಂಧೂರ್ ವಿಡಿಯೋಗಳು, ಮೋದಿ ಅವರ ಭಾಷಣದ ವಿಡಿಯೋ ತುಣುಕುಗಳು, ಸೈನ್ಯದ ಪಥಸಂಚಲನದ ದೃಶ್ಯಗಳು, ರಾಮ ಮಂದಿರದ ವಿಡಿಯೋ, ಮೋದಿ ಅವರ ವಿದೇಶ ಪ್ರವಾಸದ ವಿಡಿಯೋ ತುಣುಕುಗಳು ಇನ್ನೂ ಕೆಲವು ವಿಡಿಯೋ ತುಣುಕುಗಳನ್ನು ಹಾಡಿನಲ್ಲಿ ಬಳಸಿಕೊಳ್ಳಲಾಗಿದೆ.

ಇದನ್ನೂ ಓದಿ:ಜಪಾನೀ ಉದ್ದಿಮೆಗಳಿಗೆ ಗ್ಲೋಬಲ್ ಸೌತ್ ತಲುಪಲು ಭಾರತ ಸ್ಪ್ರಿಂಗ್​ಬೋರ್ಡ್ ಇದ್ದಂತೆ: ನರೇಂದ್ರ ಮೋದಿ

ಮೋದಿ ಅವರಿಂದ ಭಾರತೀಯರು ಮತ್ತೆ ಸ್ವಾಭಿಮಾನಿಗಳಾಗಿದ್ದಾರೆ. ವಿಶ್ವದಲ್ಲೇ ದೇಶವನ್ನು ಎತ್ತರಕ್ಕೆ ಏರಿಸಿದ್ದಾರೆ. ಆಕ್ರಮಣಕಾರರಿಗೆ ತಕ್ಕ ಪಾಠ ಕಲಿಸಿದ್ದಾರೆ ಇನ್ನೂ ಹಲವು ಸಾಲುಗಳನ್ನು ಹಾಡಿನಲ್ಲಿ ಬಳಸಿಕೊಳ್ಳಲಾಗಿದೆ. ಟಾಯ್ಲೆಟ್ ನಿರ್ಮಾಣ, ಉಜ್ವಲ ಯೋಜನೆ, ಸ್ವಚ್ಛ ಭಾರತ್ ಯೋಜನೆ ಇನ್ನೂ ಹಲವು ಯೋಜನೆಗಳ ಉಲ್ಲೇಖ ಮಾಡಲಾಗಿದ್ದು, ವಿಡಿಯೋಗಳನ್ನು ಬಳಸಿಕೊಳ್ಳಲಾಗಿದೆ. 3:35 ನಿಮಿಷದ ಹಾಡು ಸೆಪ್ಟೆಂಬರ್ 17ರಂದು ಬಿಡುಗಡೆ ಆಗಿದ್ದು ಒಂದು ಗಂಟೆಗಳಲ್ಲಿ 2500ಕ್ಕೂ ಹೆಚ್ಚು ಮಂದಿ ವೀಕ್ಷಿಸಿದ್ದಾರೆ. 500ಕ್ಕೂ ಮಂದಿ ಲೈಕ್ ಸಹ ಮಾಡಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 10:55 am, Wed, 17 September 25

'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ವಿಮಾನ ನಿಲ್ದಾಣದಲ್ಲಿ ಶಾಸ್ತ್ರೀಯ ನೃತ್ಯಕ್ಕೆ ಮನಸೋತ ರಷ್ಯಾ ಅಧ್ಯಕ್ಷ ಪುಟಿನ್
ವಿಮಾನ ನಿಲ್ದಾಣದಲ್ಲಿ ಶಾಸ್ತ್ರೀಯ ನೃತ್ಯಕ್ಕೆ ಮನಸೋತ ರಷ್ಯಾ ಅಧ್ಯಕ್ಷ ಪುಟಿನ್
ಭಾರತಕ್ಕೆ ಬಂದ ಗೆಳೆಯ ಪುಟಿನ್​ಗೆ ಪ್ರಧಾನಿ ಮೋದಿಯ ಅಪ್ಪುಗೆಯ ಸ್ವಾಗತ
ಭಾರತಕ್ಕೆ ಬಂದ ಗೆಳೆಯ ಪುಟಿನ್​ಗೆ ಪ್ರಧಾನಿ ಮೋದಿಯ ಅಪ್ಪುಗೆಯ ಸ್ವಾಗತ