‘ಕಾಂತಾರ: ಚಾಪ್ಟರ್ 1’ ಚಿತ್ರಕ್ಕೆ ಓಪನ್ ಆಯ್ತು ಪ್ರೀಮಿಯರ್ ಶೋ; ಎಷ್ಟು ಗಂಟೆ ಇಂದ?
‘ಕಾಂತಾರ’ ಚಿತ್ರದ ಪ್ರೀಕ್ವೆಲ್ ಆಗಿರುವ ಕಾರಣ ‘ಕಾಂತಾರ: : ಚಾಪ್ಟರ್ 1’ ಚಿತ್ರದ ಬಗ್ಗೆ ನಿರೀಕ್ಷೆ ಮೂಡಿದೆ. ಈ ಚಿತ್ರವನ್ನು ರಿಷಬ್ ಶೆಟ್ಟಿ ಅವರೇ ನಟಿಸಿ, ನಿರ್ದೇಶಿಸಿದ್ದಾರೆ. ಈ ಸಿನಿಮಾದಲ್ಲಿ ರುಕ್ಮಿಣಿ ವಸಂತ್, ಗುಲ್ಶನ್ ದೇವಯ್ಯ ಮೊದಲಾದವರು ನಟಿಸಿದ್ದಾರೆ. ಈ ಸಿನಿಮಾ ಅಕ್ಟೋಬರ್ 2ರಂದು ದೊಡ್ಡ ಮಟ್ಟದಲ್ಲಿ ರಿಲೀಸ್ ಆಗುತ್ತಿದೆ. ಅದಕ್ಕೂ ಮೊದಲೇ ಚಿತ್ರದ ಪ್ರೀಮೀಯರ್ ಶೋಗಳನ್ನು ಆಯೋಜನೆ ಮಾಡಲಾಗಿದೆ.

‘ಕಾಂತಾರ: ಚಾಪ್ಟರ್ 1’ ಸಿನಿಮಾ (Kantara) ಅಕ್ಟೋಬರ್ 2ರಂದು ರಿಲೀಸ್ ಆಗಲಿದೆ. ಅದಕ್ಕೂ ಮೊದಲು ಅಂದರೆ ಅಕ್ಟೋಬರ್ 1ರಂದು ಸಿನಿಮಾಗೆ ಪ್ರೀಮಿಯರ್ ಶೋ ಆಯೋಜನೆ ಮಾಡಲಾಗಿದೆ. ಬೆಂಗಳೂರು ಸೇರಿದಂತೆ ಹಲವು ಕಡೆಗಳಲ್ಲಿ ಶೋನ ಹಮ್ಮಿಕೊಳ್ಳಲಾಗಿದೆ. ಅಕ್ಟೋಬರ್ 1ರಂದು ಶೋ ಓಪನ್ ಆಗಿದ್ದು, ಬೆಲೆ ಸಖತ್ ದುಬಾರಿ ಆಗಿದೆ. ಎಷ್ಟು ಗಂಟೆಯಿಂದ ಶೋ ಆರಂಭ, ಎಲ್ಲಿ ಎಷ್ಟು ಬೆಲೆ ಎಂಬುದರ ಬಗ್ಗೆ ಇಲ್ಲಿದೆ ಮಾಹಿತಿ.
‘ಕಾಂತಾರ’ ಚಿತ್ರದ ಪ್ರೀಕ್ವೆಲ್ ಆಗಿರುವ ಕಾರಣ ‘ಕಾಂತಾರ: : ಚಾಪ್ಟರ್ 1’ ಚಿತ್ರದ ಬಗ್ಗೆ ನಿರೀಕ್ಷೆ ಮೂಡಿದೆ. ಈ ಚಿತ್ರವನ್ನು ರಿಷಬ್ ಶೆಟ್ಟಿ ಅವರೇ ನಟಿಸಿ, ನಿರ್ದೇಶಿಸಿದ್ದಾರೆ. ಈ ಸಿನಿಮಾದಲ್ಲಿ ರುಕ್ಮಿಣಿ ವಸಂತ್, ಗುಲ್ಶನ್ ದೇವಯ್ಯ ಮೊದಲಾದವರು ನಟಿಸಿದ್ದಾರೆ. ಈ ಸಿನಿಮಾ ಅಕ್ಟೋಬರ್ 2ರಂದು ದೊಡ್ಡ ಮಟ್ಟದಲ್ಲಿ ರಿಲೀಸ್ ಆಗುತ್ತಿದೆ. ಅದಕ್ಕೂ ಮೊದಲೇ ಚಿತ್ರದ ಪ್ರೀಮೀಯರ್ ಶೋಗಳನ್ನು ಆಯೋಜನೆ ಮಾಡಲಾಗಿದೆ. ಸಂಜೆ 5 ಗಂಟೆಯಿಂದ ಶೋಗಳು ಆರಂಭ ಆಗಿವೆ.
ಬೆಂಗಳೂರಿನಲ್ಲಿರುವ ಏಕ ಪರದೆ ಮತ್ತು ಮಲ್ಟಿಪ್ಲೆಕ್ಸ್ಗಳಲ್ಲಿ ‘ಕಾಂತಾರ: ಚಾಪ್ಟರ್ 1’ ಚಿತ್ರದ ಪ್ರೀಮಿಯರ್ ಶೋಗಳನ್ನು ಆಯೋಜನೆ ಮಾಡಲಾಗಿದೆ. ಕೆಲವು ತಾಂತ್ರಿಕ ಸಮಸ್ಯೆಗಳ ಕಾರಣದಿಂದ ಪ್ರೀಮಿಯರ್ ಶೋಗಳ ಬಗ್ಗೆ ಯಾವುದೇ ಮಾಹಿತಿ ರಿವೀಲ್ ಆಗಿರಲಿಲ್ಲ. ಆದರೆ, ಈಗ ಅವು ಬಗೆಹರಿದಿದ್ದು, ಸಿನಿಮಾ ಪ್ರೀಮಿಯರ್ ಆಯೋಜನೆ ಮಾಡಲಾಗಿದೆ.
ಇದನ್ನೂ ಓದಿ: ‘ಕಾಂತಾರ: ಚಾಪ್ಟರ್ 1’ ಬಳಿಕ ಮತ್ತಷ್ಟು ಬದಲಾಗಲಿದೆ ರುಕ್ಮಿಣಿ ಜೀವನ
ಎಲ್ಲ ಕಡೆಗಳಲ್ಲೂ ದುಬಾರಿ ಬೆಲೆ ನಿಗದಿ ಮಾಡಲಾಗಿದೆ. ಸಿಂಗಲ್ ಸ್ಕ್ರೀನ್ನಲ್ಲಿ 400 ರೂಪಾಯಿ ಹಾಗೂ ಮಲ್ಟಿಪ್ಲೆಕ್ಸ್ಗಳಲ್ಲಿ 500 ರೂಪಾಯಿಗೂ ಹೆಚ್ಚಿನ ದರ ನಿಗದಿ ಮಾಡಲಾಗಿದೆ. ಇದರಿಂದ ಹೆಚ್ಚಿನ ಕಲೆಕ್ಷನ್ ನಿರೀಕ್ಷಿಸಬಹುದಾಗಿದೆ. ಸಿನಿಮಾದ ಅವಧಿ 2 ಗಂಟೆ 48 ನಿಮಿಷ ಇದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.








