ರಾಷ್ಟ್ರಪತಿಗೆ ‘ಸಿತಾರೆ ಜಮೀನ್ ಪರ್’ ಸಿನಿಮಾ ತೋರಿಸಿದ ಆಮಿರ್ ಖಾನ್

ಮಿಸ್ಟರ್ ಪರ್ಫೆಕ್ಟ್ ಆಮಿರ್ ಖಾನ್ ನಟಿಸಿರುವ ‘ಸಿತಾರೆ ಜಮೀನ್ ಪರ್’ ಸಿನಿಮಾಗೆ ಜನಮೆಚ್ಚುಗೆ ಸಿಕ್ಕಿದೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗಾಗಿ ಈ ಚಿತ್ರದ ವಿಶೇಷ ಪ್ರದರ್ಶನ ಏರ್ಪಡಿಸಲಾಗಿತ್ತು. ಆಮಿರ್ ಖಾನ್ ಅವರು ದ್ರೌಪದಿ ಮುರ್ಮು ಅವರನ್ನು ಭೇಟಿ ಆಗಿರುವ ಫೋಟೋ ವೈರಲ್ ಆಗಿದೆ.

ರಾಷ್ಟ್ರಪತಿಗೆ ‘ಸಿತಾರೆ ಜಮೀನ್ ಪರ್’ ಸಿನಿಮಾ ತೋರಿಸಿದ ಆಮಿರ್ ಖಾನ್
Aamir Khan, Draupadi Murmu

Updated on: Jun 24, 2025 | 9:48 PM

ಕಳೆದ ಶುಕ್ರವಾರ (ಜೂನ್ 20) ಬಿಡುಗಡೆ ಆದ ‘ಸಿತಾರೆ ಜಮೀನ್ ಪರ್’ (Sitaare Zameen Par) ಸಿನಿಮಾ ಉತ್ತಮವಾಗಿ ಪ್ರದರ್ಶನ ಕಾಣುತ್ತಿದೆ. ಬಾಕ್ಸ್ ಆಫೀಸ್​ನಲ್ಲಿ ಬಹುಕೋಟಿ ರೂಪಾಯಿ ಕಲೆಕ್ಷನ್ ಮಾಡುವುದರ ಜೊತೆಗೆ ಪಾಸಿಟಿವ್ ವಿಮರ್ಶೆಯನ್ನು ಕೂಡ ಈ ಸಿನಿಮಾ ಪಡೆದುಕೊಂಡಿದೆ. ನಟ ಆಮಿರ್ ಖಾನ್ (Aamir Khan) ಅವರಿಗೆ ಈ ಸಿನಿಮಾದಿಂದ ಗೆಲುವು ಸಿಕ್ಕಿದೆ. ಈ ಚಿತ್ರದಲ್ಲಿ ವಿಶೇಷ ಕಥಾಹಂದರ ಇದೆ. ಆ ಕಾರಣಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು (Draupadi Murmu) ಅವರಿಗೆ ಸಿನಿಮಾ ತೋರಿಸಲಾಗಿದೆ. ರಾಷ್ಟ್ರಪತಿ ಭವನದಲ್ಲಿ ‘ಸಿತಾರೆ ಜಮೀನ್ ಪರ್’ ಸಿನಿಮಾದ ವಿಶೇಷ ಪ್ರದರ್ಶನ ಏರ್ಪಡಿಸಲಾಗಿದೆ.

ಮಂಗಳವಾರ (ಜೂನ್ 24) ರಾಷ್ಟ್ರಪತಿ ಭವನಕ್ಕೆ ಆಮಿರ್ ಖಾನ್ ಅವರು ಭೇಟಿ ನೀಡಿದ್ದಾರೆ. ಅಲ್ಲಿಯೇ ‘ಸಿತಾರೆ ಜಮೀನ್ ಪರ್’ ಸಿನಿಮಾ ಪ್ರದರ್ಶನ ಮಾಡಲಾಗಿದೆ. ವಿಶೇಷಚೇತನರ ಬಗ್ಗೆ ಸಂದೇಶ ನೀಡುವ ಈ ಸಿನಿಮಾಗೆ ವಿಮರ್ಶಕರು ಭೇಷ್ ಎಂದಿದ್ದಾರೆ. ದ್ರೌಪದಿ ಮುರ್ಮು ಅವರು ಕೂಡ ಸಿನಿಮಾ ವೀಕ್ಷಿಸಿರುವುದರಿಂದ ಚಿತ್ರತಂಡಕ್ಕೆ ದೊಡ್ಡ ಬಲ ಸಿಕ್ಕಂತೆ ಆಗಿದೆ.

ಇದನ್ನೂ ಓದಿ
ಆಮಿರ್ ಖಾನ್-ರಣ್​ಬೀರ್ ಕಪೂರ್ ಜಗಳ, ಮಧ್ಯಸ್ಥಿಕೆ ವಹಿಸಿದ ರೋಹಿತ್ ಶರ್ಮಾ
ಹೊಸ ಪ್ರಾಜೆಕ್ಟ್​ಗಾಗಿ ಒಂದಾದ ಆಮಿರ್-ರಣಬೀರ್; ವಿಚಾರ ರಿವೀಲ್ ಮಾಡಿದ ಆಲಿಯಾ
59ನೇ ವಯಸ್ಸಲ್ಲಿ ಬೆಂಗಳೂರು ಹುಡುಗಿ ಮೇಲೆ ಆಮಿರ್​​​ಗೆ ಲವ್? ಯಾರು ಈ ಗೌರಿ?
ಆಮಿರ್ ಖಾನ್ ಈ ರೀತಿ ವೇಷ ಹಾಕಿದ್ದು ದುಡ್ಡಿಗಾಗಿ; ಅಸಲಿ ವಿಚಾರ ರಿವೀಲ್

ರಾಷ್ಟ್ರಪತಿ ಭವನದ ಅಧಿಕೃತ ಎಕ್ಸ್ (ಟ್ವಿಟರ್) ಖಾತೆಯಲ್ಲಿ ಈ ಬಗ್ಗೆ ಮಾಹಿತಿ ಹಂಚಿಕೊಳ್ಳಲಾಗಿದೆ. ‘ಪ್ರಖ್ಯಾತ ನಟ, ನಿರ್ಮಾಪಕ ಶ್ರೀ ಆಮಿರ್ ಖಾನ್ ಅವರು ಇಂದು ರಾಷ್ಟ್ರಪತಿ ಭವನದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿಯಾದರು’ ಎಂಬ ಕ್ಯಾಪ್ಷನ್​ನೊಂದಿಗೆ ಅವರಿಬ್ಬರ ಫೋಟೋ ಪೋಸ್ಟ್ ಮಾಡಲಾಗಿದೆ. ಆಮಿರ್ ಖಾನ್ ಫ್ಯಾನ್ಸ್ ಪೇಜ್​ಗಳಲ್ಲಿ ಈ ಫೋಟೋ ವೈರಲ್ ಆಗಿದೆ.

ಸ್ವತಃ ಆಮಿರ್ ಖಾನ್ ಅವರು ‘ಸಿತಾರೆ ಜಮೀನ್ ಪರ್’ ಸಿನಿಮಾಗೆ ಬಂಡವಾಳ ಹೂಡಿದ್ದಾರೆ. ಇದು ಸ್ಪ್ಯಾನಿಶ್ ಭಾಷೆಯ ‘ಚಾಂಪಿಯನ್ಸ್’ ಸಿನಿಮಾದ ರಿಮೇಕ್ ಆಗಿದ್ದರೂ ಕೂಡ ಭಾರತದ ಪ್ರೇಕ್ಷಕರು ಮೆಚ್ಚಿಕೊಂಡಿದ್ದಾರೆ. ಈ ಸಿನಿಮಾ ಮೇಲೆ ಆಮಿರ್ ಖಾನ್ ಅವರಿಗೆ ಸಖತ್ ಭರವಸೆ ಇತ್ತು. ಅದಕ್ಕೆ ತಕ್ಕಂತೆಯೇ ಪ್ರೇಕ್ಷಕರಿಂದ ಪಾಸಿಟಿವ್ ಪ್ರತಿಕ್ರಿಯೆ ಸಿಗುತ್ತಿದೆ.

ಇದನ್ನೂ ಓದಿ: ಆಮಿರ್ ಖಾನ್-ಸಿದ್ದರಾಮಯ್ಯ ಮುಖಾಮುಖಿ, ಶುಭ ಕೋರಿದ ಸಿಎಂ

‘ಸಿತಾರೆ ಜಮೀನ್ ಪರ್’ ಸಿನಿಮಾ ಮೊದಲ ದಿನ ಸಾಧಾರಣ ಗಳಿಕೆ ಮಾಡಿತು. ಶುಕ್ರವಾರ (ಜೂನ್ 20) ಈ ಚಿತ್ರಕ್ಕೆ 10.70 ಕೋಟಿ ರೂಪಾಯಿ ಕಲೆಕ್ಷನ್ ಆಯಿತು. ಎರಡನೇ ದಿನ ಗಳಿಕೆ ಹೆಚ್ಚಾಯಿತು. 2ನೇ ದಿನ ಈ ಸಿನಿಮಾಗೆ 19.90 ಕೋಟಿ ರೂಪಾಯಿ ಕಮಾಯಿ ಆಯಿತು. ಮೂರನೇ ದಿನವಾದ ಭಾನುವಾರ ಹಣದ ಹೊಳೆ ಹರಿಯಿತು. ಅಂದರೆ, ಜೂನ್ 22ರಂದು ಈ ಸಿನಿಮಾ ಬರೋಬ್ಬರಿ 26.70 ಕೋಟಿ ರೂಪಾಯಿ ಬಾಚಿಕೊಂಡಿತು. ಸೋಮವಾರ (ಜೂನ್ 23) 8.50 ಕೋಟಿ ರೂಪಾಯಿ ಗಳಿಸಿತು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.