AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ಟಾರ್ ಹೀರೋನ ಜಾಗಕ್ಕೆ ಪೃಥ್ವಿರಾಜ್ ಸುಕುಮಾರನ್ ಎಂಟ್ರಿ: ಇಲ್ಲಿದೆ ವಿವರ

ಮಲಯಾಳಂ ನಟ ಪೃಥ್ವಿರಾಜ್ ಸುಕುಮಾರನ್ ಭಾರತದ ಪ್ರತಿಭಾವಂತ ನಟರಲ್ಲಿ ಒಬ್ಬರು. ತೆಲುಗು ಸಿನಿಮಾಗಳಲ್ಲಿಯೂ ಬ್ಯುಸಿಯಾಗಿರುವ ಪೃಥ್ವಿರಾಜ್ ಸುಕುಮಾರನ್ ಈಗ ಬಾಲಿವುಡ್​ ಸಿನಿಮಾ ಒಂದನ್ನು ಒಪ್ಪಿಕೊಂಡಿದ್ದಾರೆ. ಸ್ಟಾರ್ ನಟಿಯ ಜೊತೆ ಪೃಥ್ವಿರಾಜ್ ಸುಕುಮಾರನ್ ನಟಿಸಲಿದ್ದಾರೆ.

ಸ್ಟಾರ್ ಹೀರೋನ ಜಾಗಕ್ಕೆ ಪೃಥ್ವಿರಾಜ್ ಸುಕುಮಾರನ್ ಎಂಟ್ರಿ: ಇಲ್ಲಿದೆ ವಿವರ
 ಶ್ರೀಲಕ್ಷ್ಮೀ ಎಚ್
| Edited By: |

Updated on: Nov 05, 2024 | 6:18 PM

Share

ಮಲಯಾಳಂ ನಟ ಪೃಥ್ವಿರಾಜ್ ಸುಕುಮಾರನ್ ಅವರು ಹಲವು ಸೂಪರ್ ಹಿಟ್ ಚಿತ್ರಗಳನ್ನು ನೀಡಿದ್ದಾರೆ. ಹಲವು ಸಿನಿಮಾಗಳಲ್ಲಿ ಅವರು ನಟಿಸಿ ಗಮನ ಸೆಳೆದಿದ್ದಾರೆ. ಅವರಿಗೆ ಮಲಯಾಳಂ ಚಿತ್ರರಂಗ ಮಾತ್ರವಲ್ಲದೆ ಪರಭಾಷೆಯಲ್ಲೂ ಬೇಡಿಕೆ ಸೃಷ್ಟಿ ಮಾಡಿಕೊಂಡಿದ್ದಾರೆ. ಈಗ ಅವರು ಖ್ಯಾತ ಬಾಲಿವುಡ್ ಹಿರೋ ಜಾಗಕ್ಕೆ ಆಯ್ಕೆ ಆಗಿದ್ದಾರೆ ಎನ್ನಲಾಗಿದೆ. ಈ ವಿಚಾರ ಅವರ ಅಭಿಮಾನಿಗಳ ಖುಷಿ ಹೆಚ್ಚಿಸಿದೆ.

ಮೇಘನಾ ಗುಲ್ಜರ್ ನಿರ್ದೇಶನದ ಸಿನಿಮಾದಲ್ಲಿ ಕರೀನಾ ಕಪೂರ್ ನಟಿಸುತ್ತಿದ್ದಾರೆ. ಈ ಚಿತ್ರದಲ್ಲಿ ಆಯುಷ್ಮಾನ್ ಖುರಾನಾ ನಟಿಸಬೇಕಿತ್ತು. ಆದರೆ, ಡೇಟ್ಸ್ ಹೊಂದಾಣಿಕೆ ಮಾಡಲಾಗಾದ ಕಾರಣ ಈ ಚಿತ್ರಕ್ಕೆ ಪೃಥ್ವಿರಾಜ್ ಸುಕುಮಾರನ್ ನಟಿಸುತ್ತಿದ್ದಾರೆ ಎನ್ನಲಾಗಿದೆ. ಈ ಸಿನಿಮಾದಲ್ಲಿ ಪೃಥ್ವಿರಾಜ್ ಅವರು ಪೊಲೀಸ್ ಅಧಿಕಾರಿಯ ಪಾತ್ರ ಮಾಡುತ್ತಿದ್ದಾರಂತೆ. ನೈಜ ಘಟನೆ ಆಧರಿಸಿ ಸಿನಿಮಾ ಸಿದ್ಧಗೊಳ್ಳುತ್ತಿದೆ.

ಪೃಥ್ವಿರಾಜ್ ಅವರಿಗೆ ಸ್ಕ್ರಿಪ್ಟ್ ಇಷ್ಟ ಆಗಿದೆಯಂತೆ. ಈ ಚಿತ್ರದಲ್ಲಿ ಒಂದೊಳ್ಳೆಯ ಸಂದೇಶ ಇರಲಿದೆಯಂತೆ. ಕರೀನಾ ಕಪೂರ್ ಪಾತ್ರವೂ ಇಲ್ಲಿ ಸಖತ್ ಸ್ಟ್ರಾಂಗ್ ಆಗಿದೆಯಂತೆ. ಈ ಕಾರಣಕ್ಕೆ ಸಿನಿಮಾನ ಪೃಥ್ವಿರಾಜ್ ಮಾಡುತ್ತಿದ್ದಾರೆ.

ಆಯುಷ್ಮಾನ್ ಅವರಿಗೂ ಸಿನಿಮಾದ ಕಥೆ ಇಷ್ಟ ಆಗಿತ್ತು. ಆದರೆ, ಬೇರೆ ಕಮಿಟ್ಮೆಂಟ್ ಕಾರಣಕ್ಕೆ ಅವರಿಗೆ ಈ ಸಿನಿಮಾ ಮಾಡಲಾಗುತ್ತಿದೆ. ‘ಬಾರ್ಡರ್ 2’ ಹಾಗೂ ಕರಣ್ ಜೋಹರ್ ಮೊದಲಾದವರು ಸಿನಿಮಾಗಳಲ್ಲಿ ಆಯುಷ್ಮಾನ್ ಬ್ಯುಸಿ ಇದ್ದಾರೆ. ಈ ಚಿತ್ರದ ಶೂಟಿಂಗ್ಗೆ ಅವರು ಬೇರೆ ನಗರಗಳಿಗೆ ತೆರಳಬೇಕಿದೆ.

ಇದನ್ನೂ ಓದಿ:ಎರಡು ಬಾರಿ ಮೆಗಾಸ್ಟಾರ್ ಸಿನಿಮಾ ಅವಕಾಶ ನಿರಾಕರಿಸಿದ್ದ ಪೃಥ್ವಿರಾಜ್ ಸುಕುಮಾರನ್

ಪೃಥ್ವಿರಾಜ್ಗೆ ಹಿಂದಿ ಚಿತ್ರರಂಗ ಹೊಸದಲ್ಲ. ‘ಬಡೇ ಮಿಯಾ ಚೋಟೆ ಮಿಯಾ’ ಸಿನಿಮಾದಲ್ಲಿ ನಟಿಸಿದ್ದರು. ಇದು ಹಿಂದಿ ಸಿನಿಮಾ. ಇದರಲ್ಲಿ ಅಕ್ಷಯ್ ಕುಮಾರ್ ಹಾಗೂ ಟೈಗರ್ ಶ್ರಾಫ್ ನಟಿಸಿದ್ದರು. ಅಲಿ ಅಬ್ಬಾಸ್ ಜಫರ್ ಈ ಚಿತ್ರವನ್ನು ನಿರ್ದೇಶನ ಮಾಡಿದ್ದರು. ಈ ಸಿನಿಮಾ ಫ್ಲಾಪ್ ಆಯಿತು.

ಇದಲ್ಲದೆ ‘ಆಡುಜೀವಿತಂ’ ಸಿನಿಮಾದಲ್ಲಿ ನಟಿಸಿದ್ದರು ಪೃಥ್ವಿರಾಜ್ ಸುಕುಮಾರನ್. ಈ ಚಿತ್ರ ಸೂಪರ್ ಹಿಟ್ ಆಯಿತು. ‘ಆಡುಜೀವಿತಂ’ ಸಿನಿಮಾದ ನಾವೆಲ್ ಆಧರಿಸಿ ಈ ಸಿನಿಮಾ ಮಾಡಲಾಗಿತ್ತು. 2019ರಲ್ಲಿ ರಿಲೀಸ್ ಆದ ‘ಲುಸಿಫರ್’ ಚಿತ್ರಕ್ಕೆ ಸೀಕ್ವೆಲ್ ಮಾಡುತ್ತಿದ್ದಾರೆ. ಈ ಚಿತ್ರದಲ್ಲಿ ಮೋಹನ್​ಲಾಲ್ ನಟಿಸಲಿದ್ದಾರೆ. ಈ ಚಿತ್ರದ ಬಗ್ಗೆ ನಿರೀಕ್ಷೆ ಇದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ