ಹಾರರ್​ ಸಿನಿಮಾಗಾಗಿ ಸೂಪರ್​ ಹಿಟ್​ ನಿರ್ದೇಶಕನ ಜತೆ ಕೈ ಜೋಡಿಸಿದ ಅಕ್ಷಯ್​ ಕುಮಾರ್​

ಪ್ರಿಯದರ್ಶನ್​ ಮತ್ತು ಅಕ್ಷಯ್​ ಕುಮಾರ್​ ಅವರ ಕಾಂಬಿನೇಷನ್​ನಲ್ಲಿ ಬಂದಿದ್ದ ‘ಹೇರಾ ಫೇರಿ’, ‘ಭೂಲ್​ಭುಲಯ್ಯ’ ಸಿನಿಮಾ ಜನಮನ ಗೆದ್ದಿದ್ದವು. ಈಗ ಅವರಿಬ್ಬರು ಮತ್ತೆ ಒಂದಾಗುತ್ತಿದ್ದಾರೆ. ಏಕ್ತಾ ಕಪೂರ್​ ಅವರ ನಿರ್ಮಾಣದಲ್ಲಿ ಈ ಚಿತ್ರ ಮೂಡಿಬರಲಿದೆ. ಸದ್ಯದಲ್ಲೇ ಇದರ ಚಿತ್ರೀಕರಣ ಶುರುವಾಗಲಿದೆ.

ಹಾರರ್​ ಸಿನಿಮಾಗಾಗಿ ಸೂಪರ್​ ಹಿಟ್​ ನಿರ್ದೇಶಕನ ಜತೆ ಕೈ ಜೋಡಿಸಿದ ಅಕ್ಷಯ್​ ಕುಮಾರ್​
ಅಕ್ಷಯ್​ ಕುಮಾರ್​
Follow us
|

Updated on: Apr 25, 2024 | 9:03 PM

ನಟ ಅಕ್ಷಯ್​ ಕುಮಾರ್​ (Akshay Kumar) ಅವರ ‘ಬಡೆ ಮಿಯಾ ಚೋಟೆ ಮಿಯಾ’ ಸಿನಿಮಾದ ಮೇಲೆ ಭಾರಿ ನಿರೀಕ್ಷೆ ಇತ್ತು. ಆದರೆ ಈ ಸಿನಿಮಾ ದೊಡ್ಡ ಮಟ್ಟದಲ್ಲಿ ಕಲೆಕ್ಷನ್​ ಮಾಡಲಿಲ್ಲ. ಇತ್ತೀಚಿನ ವರ್ಷಗಳಲ್ಲಿ ಅಕ್ಷಯ್​ ಕುಮಾರ್​ ಅವರಿಗೆ ಹೇಳಿಕೊಳ್ಳುವಂತಹ ಗೆಲುವು ಸಿಕ್ಕಿಲ್ಲ. ಆದರೂ ಕೂಡ ಅವರಿಗೆ ಆಫರ್​ ಕಡಿಮೆ ಆಗಿಲ್ಲ. ಅಕ್ಷಯ್​ ಕುಮಾರ್​ ಜೊತೆ ಸಿನಿಮಾ ಮಾಡಲು ಖ್ಯಾತ ನಿರ್ದೇಶಕ ಪ್ರಿಯದರ್ಶನ್​ (Priyadarshan) ಅವರು ಮುಂದೆ ಬಂದಿದ್ದಾರೆ. ಅವರಿಬ್ಬರ ಕಾಂಬಿನೇಷನ್​ನಲ್ಲಿ ಹಾರರ್​ ಸಿನಿಮಾ ಮೂಡಿಬರಲಿದೆ ಎಂಬುದು ವಿಶೇಷ.

ಹಿರಿಯ ನಿರ್ದೇಶಕ ಪ್ರಿಯದರ್ಶನ್​ ಅವರು ಈವರೆಗೆ 90ಕ್ಕೂ ಅಧಿಕ ಸಿನಿಮಾಗಳಿಗೆ ಆ್ಯಕ್ಷನ್​-ಕಟ್​ ಹೇಳಿದ್ದಾರೆ. ಚಿತ್ರರಂಗದಲ್ಲಿ ಅವರ ಅನುಭವ ಅಪಾರ. ಅಕ್ಷಯ್​ ಕುಮಾರ್​ ಜೊತೆ ಅವರು ‘ಹೇರಾ ಫೇರಿ’ ಹಾಗೂ ‘ಭೂಲ್​ಭುಲಯ್ಯ’ ಸಿನಿಮಾ ಮಾಡಿ ಯಶಸ್ಸು ಕಂಡಿದ್ದರು. ಆ ಎರಡೂ ಸಿನಿಮಾಗಳಿಂದ ಅಕ್ಷಯ್​ ಕುಮಾರ್​ ಅವರ ವೃತ್ತಿಜೀವನಕ್ಕೆ ಮೈಲೇಜ್​ ಸಿಕ್ಕಿತ್ತು.

ಇದನ್ನೂ ಓದಿ: 500 ರೂಪಾಯಿ ಬಾಡಿಗೆ ಮನೆ ಖರೀದಿಸಲಿರುವ ಅಕ್ಷಯ್​ ಕುಮಾರ್​; ಕಾರಣ ಏನು?

ಅಕ್ಷಯ್​ ಕುಮಾರ್​ ಮತ್ತು ಪ್ರಿಯದರ್ಶನ್​ ಅವರು 14 ವರ್ಷಗಳ ಬಳಿಕ ಒಂದಾಗಿದ್ದಾರೆ. ಈ ಬಾರಿ ಅವರು ಹಾರರ್​ ಸಿನಿಮಾ ಮಾಡಲಿದ್ದಾರೆ. ಈ ಸುದ್ದಿ ಕೇಳಿ ಅವರ ಅಭಿಮಾನಿಗಳಿಗೆ ಖುಷಿ ಆಗಿದೆ. ಸಿನಿಮಾ ಬಗ್ಗೆ ಹೆಚ್ಚಿನ ಅಪ್​ಡೇಟ್​ ತಿಳಿಯಲು ಕಾದಿದ್ದಾರೆ. ‘ಹೇರಾ ಫೇರಿ’ ಮತ್ತು ‘ಭೂಲ್​ಭುಲಯ್ಯ’ ಚಿತ್ರಗಳು ಮಲಯಾಳಂನ ರಿಮೇಕ್​ ಆಗಿದ್ದವು. ಆದರೆ ಈ ಬಾರಿ ಪ್ರಿಯದರ್ಶನ್​ ಅವರು ಅಕ್ಷಯ್​ ಕುಮಾರ್​ಗಾಗಿ ಸ್ವಮೇಕ್​ ಮಾಡಲಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: ‘ಬದುಕುವ ಸಾಧ್ಯತೆ ಶೇ.30 ಮಾತ್ರ’: ಇದು ಅಕ್ಷಯ್​ ಕುಮಾರ್​ ಜೀವನದ ಅಪಾಯಕಾರಿ ಸ್ಟಂಟ್

ಶೀಘ್ರದಲ್ಲೇ ಈ ಸಿನಿಮಾದ ಶೂಟಿಂಗ್​ ಆರಂಭ ಆಗಲಿದೆ. ಏಕ್ತಾ ಕಪೂರ್​ ಅವರು ಈ ಚಿತ್ರಕ್ಕೆ ಬಂಡವಾಳ ಹೂಡಲಿದ್ದಾರೆ. ‘ಈ ಸಿನಿಮಾದಲ್ಲಿ ಫ್ಯಾಂಟಸಿ ಇರಲಿದೆ. ಜಾದೂ ಹಿನ್ನೆಲೆಯಲ್ಲಿ ಕಥೆ ಸಾಗಲಿದೆ. ಅಕ್ಷಯ್​ ಕುಮಾರ್​ ಜೊತೆ ಸಿನಿಮಾ ಮಾಡುವುದು ಯಾವಾಗಲೂ ಖುಷಿ ನೀಡುತ್ತದೆ. ಅವರು ಭಾವನೆಗಳನ್ನು ಚೆನ್ನಾಗಿ ನಿಭಾಯಿಸುತ್ತಾರೆ. ಅವರ ಜೊತೆ ಸಿನಿಮಾ ಮಾಡಲು ಒಳ್ಳೆಯ ಕಥೆ ಬೇಕು ಅಂತ ನಾನು ಕಾದಿದ್ದೆ. ಅದು ಈಗ ಸಿಕ್ಕಿದೆ’ ಎಂದು ಪ್ರಿಯದರ್ಶನ್​ ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಈ ರಾಶಿಯವರಿಗೆ ಆಗಬೇಕಾದ ವಿವಾಹವು ಕಾರಾಣಾಂತರದಿಂದ ಮುಂದೆ ಹೋಗಲಿದೆ
ಈ ರಾಶಿಯವರಿಗೆ ಆಗಬೇಕಾದ ವಿವಾಹವು ಕಾರಾಣಾಂತರದಿಂದ ಮುಂದೆ ಹೋಗಲಿದೆ
FIR ದಾಖಲಾಗಿದ್ದರೂ ಸುದೀರ್ಘ 8 ವರೆ ಗಂಟೆ ಪ್ರಗತಿ ಪರಿಶೀಲನಾ ಸಭೆ ನಡೆಸಿದ CM
FIR ದಾಖಲಾಗಿದ್ದರೂ ಸುದೀರ್ಘ 8 ವರೆ ಗಂಟೆ ಪ್ರಗತಿ ಪರಿಶೀಲನಾ ಸಭೆ ನಡೆಸಿದ CM
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದ ಗೋಡೆ ಕುಸಿದು ಇಬ್ಬರು ಸಾವು
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದ ಗೋಡೆ ಕುಸಿದು ಇಬ್ಬರು ಸಾವು
ಈ ಪ್ರಕರಣದಲ್ಲಿ ನಂಗೆ ಗಂಡಾಂತರ ಇಲ್ಲ: ಲೋಕಾಯುಕ್ತ ವಿಚಾರಣೆ ಬಳಿಕ HDK ಮಾತು
ಈ ಪ್ರಕರಣದಲ್ಲಿ ನಂಗೆ ಗಂಡಾಂತರ ಇಲ್ಲ: ಲೋಕಾಯುಕ್ತ ವಿಚಾರಣೆ ಬಳಿಕ HDK ಮಾತು
ಸಿಎಂ ವಿರುದ್ಧ FIR: ಪಂಜು ಹಿಡಿದು ಪ್ರತಿಭಟನೆ ನಡೆಸಿದ ಸಿದ್ದು ಬೆಂಬಲಿಗರು
ಸಿಎಂ ವಿರುದ್ಧ FIR: ಪಂಜು ಹಿಡಿದು ಪ್ರತಿಭಟನೆ ನಡೆಸಿದ ಸಿದ್ದು ಬೆಂಬಲಿಗರು
ದಿಲ್ಲಿಯಿಂದ ನೇರವಾಗಿ ಬೆಂಗಳೂರಿನ ಲೋಕಾಯುಕ್ತ ಕಚೇರಿಗೆ ಬಂದ ಕುಮಾರಸ್ವಾಮಿ
ದಿಲ್ಲಿಯಿಂದ ನೇರವಾಗಿ ಬೆಂಗಳೂರಿನ ಲೋಕಾಯುಕ್ತ ಕಚೇರಿಗೆ ಬಂದ ಕುಮಾರಸ್ವಾಮಿ
ಅರಮನೆ ಆವರಣದಲ್ಲಿ ಸಿದ್ದುಗೆ ದಸರಾ ಆನೆಗಳು ಸೆಲ್ಯೂಟ್
ಅರಮನೆ ಆವರಣದಲ್ಲಿ ಸಿದ್ದುಗೆ ದಸರಾ ಆನೆಗಳು ಸೆಲ್ಯೂಟ್
‘ದೇವರ’ ಬಿಡುಗಡೆ, ಜೂ ಎನ್​ಟಿಆರ್ ಬೃಹತ್ ಕಟೌಟ್​ಗೆ ಬೆಂಕಿ: ವಿಡಿಯೋ ನೋಡಿ
‘ದೇವರ’ ಬಿಡುಗಡೆ, ಜೂ ಎನ್​ಟಿಆರ್ ಬೃಹತ್ ಕಟೌಟ್​ಗೆ ಬೆಂಕಿ: ವಿಡಿಯೋ ನೋಡಿ
ರೋಹಿತ್​ಗೂ ಅಚ್ಚರಿ ತರಿಸಿದ ಆಕಾಶ್ ಉರುಳಿಸಿದ ವಿಕೆಟ್; ವಿಡಿಯೋ ನೋಡಿ
ರೋಹಿತ್​ಗೂ ಅಚ್ಚರಿ ತರಿಸಿದ ಆಕಾಶ್ ಉರುಳಿಸಿದ ವಿಕೆಟ್; ವಿಡಿಯೋ ನೋಡಿ
ತುಮಕೂರು-ಯಶವಂತಪುರ ಮೆಮು ರೈಲು ಸೇವೆಗೆ ಚಾಲನೆ, ಇಲ್ಲಿದೆ ಟ್ರೈನ್​ ಸಮಯ
ತುಮಕೂರು-ಯಶವಂತಪುರ ಮೆಮು ರೈಲು ಸೇವೆಗೆ ಚಾಲನೆ, ಇಲ್ಲಿದೆ ಟ್ರೈನ್​ ಸಮಯ