AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗುಟ್ಟಾಗಿ ಹೈದರಾಬಾದ್​ಗೆ ಬಂದ ಪ್ರಿಯಾಂಕಾ ಚೋಪ್ರಾ, ಯಾರೊಂದಿಗೆ ಭೇಟಿ?

Priyanka Chopra: ಬಾಲಿವುಡ್ ನಟಿಯಾಗಿದ್ದ ಪ್ರಿಯಾಂಕಾ ಚೋಪ್ರಾ ಹಾಲಿವುಡ್ ನಟಿಯಾಗಿ ಬಹಳ ವರ್ಷಗಳೇ ಆಗಿವೆ. ಪ್ರಿಯಾಂಕಾ ಚೋಪ್ರಾ ಭಾರತಕ್ಕೆ ಬರುವುದೇ ಅಪರೂಪ ಆಗಿಬಿಟ್ಟಿದೆ. ಬಂದರೂ ಮುಂಬೈಗೆ ಬಂದು ನಿಗದಿತ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡು ವಾಪಸ್ಸಾಗುತ್ತಾರೆ. ಆದರೆ ಇದೀಗ ಪ್ರಿಯಾಂಕಾ ಚೋಪ್ರಾ ಹೈದರಾಬಾದ್​ಗೆ ಬಂದಿದ್ದಾರೆ.

ಗುಟ್ಟಾಗಿ ಹೈದರಾಬಾದ್​ಗೆ ಬಂದ ಪ್ರಿಯಾಂಕಾ ಚೋಪ್ರಾ, ಯಾರೊಂದಿಗೆ ಭೇಟಿ?
Priyanka Chopra
ಮಂಜುನಾಥ ಸಿ.
|

Updated on: Jan 17, 2025 | 1:30 PM

Share

ಪ್ರಿಯಾಂಕಾ ಚೋಪ್ರಾ ಈಗ ಹಾಲಿವುಡ್ ನಟಿ. ಬಾಲಿವುಡ್​ನಿಂದ ಬಹುತೇಕ ದೂರ ಆಗಿಬಿಟ್ಟಿದ್ದಾರೆ. ಆದರೆ ಈಗ ಅಚಾನಕ್ಕಾಗಿ ಭಾರತಕ್ಕೆ ಬಂದಿದ್ದಾರೆ. ಸಾಮಾನ್ಯವಾಗಿ ಪ್ರಿಯಾಂಕಾ ಚೋಪ್ರಾ ಭಾರತಕ್ಕೆ ಬರುವುದು ತಮ್ಮ ಕುಟುಂಬ ಸದಸ್ಯರ ಮದುವೆ ಇನ್ನಿತರೆ ಕಾರ್ಯಕ್ರಮ ಅಥವಾ ಅಂಬಾನಿಯ ಕಾರ್ಯಕ್ರಮಗಳಿಗೆ ಮಾತ್ರ. ಹಾಗಾಗಿ ಬಂದಾಗೆಲ್ಲ ಮುಂಬೈನಲ್ಲಿ ವಿಮಾನ ಇಳಿದು ಅಲ್ಲಿಯೇ ಕೆಲ ಸಮಯ ಇದ್ದು ಕಾರ್ಯಕ್ರಮ ಮುಗಿಸಿ ಅಮೆರಿಕಕ್ಕೆ ಮರಳುತ್ತಾರೆ.

ಆದರೆ ಈ ಬಾರಿ ಪ್ರಿಯಾಂಕಾ ಚೋಪ್ರಾ ಬಿಸಿಲ ನಗರ ಹೈದರಾಬಾದ್​ಗೆ ಬಂದಿದ್ದಾರೆ. ಅದೂ ಗುಟ್ಟಾಗಿ. ಪ್ರಿಯಾಂಕಾ ಚೋಪ್ರಾ, ಹೈದರಾಬಾದ್​ಗೆ ಬಂದಿರುವುದು ಯಾವುದೋ ಕಾರ್ಯಕ್ರಮಕ್ಕೆ ಅಲ್ಲ ಬದಲಿಗೆ ನಿರ್ದೇಶಕ ರಾಜಮೌಳಿಯನ್ನು ಭೇಟಿ ಆಗಲು. ಮೂಲಗಳ ಪ್ರಕಾರ ರಾಜಮೌಳಿಯ ಮುಂದಿನ ಸಿನಿಮಾದಲ್ಲಿ ಪ್ರಿಯಾಂಕಾ ಚೋಪ್ರಾ ನಾಯಕಿಯಂತೆ. ಅದೇ ಸಿನಿಮಾದ ಕಾರಣಕ್ಕಾಗಿ ಈಗ ಪ್ರಿಯಾಂಕಾ ಚೋಪ್ರಾ ಹೈದರಾಬಾದ್​ಗೆ ಬಂದಿಳಿದಿದ್ದಾರೆ.

ಕೆಲ ದಿನಗಳ ಹಿಂದಷ್ಟೆ ರಾಜಮೌಳಿ ಹಾಗೂ ಮಹೇಶ್ ಬಾಬು ಅವರ ಹೊಸ ಸಿನಿಮಾದ ಮುಹೂರ್ತ ಕಾರ್ಯಕ್ರಮ ಹೈದರಾಬಾದ್​ನಲ್ಲಿ ನೆರವೇರಿದೆ. ಈ ಸಿನಿಮಾದಲ್ಲಿ ನಾಯಕಿಯಾಗಿ ಪ್ರಿಯಾಂಕಾ ಚೋಪ್ರಾ ನಟಿಸುತ್ತಿದ್ದು, ಸಿನಿಮಾದ ಫೋಟೊಶೂಟ್​ಗಾಗಿ ಈಗ ಅವರು ಹೈದರಾಬಾದ್​ಗೆ ಬಂದಿದ್ದಾರೆ ಎನ್ನಲಾಗುತ್ತಿದೆ. ಸಿನಿಮಾದ ಚಿತ್ರೀಕರಣ ಕೆಲವೇ ದಿನಗಳಲ್ಲಿ ಪ್ರಾರಂಭವಾಗಲಿದ್ದು, ಅದಕ್ಕೆ ಮುಂಚೆ ಎಲ್ಲ ನಟರಿಗೂ ತಾಲೀಮು ಮಾಡಿಸುತ್ತಿದ್ದಾರೆ ರಾಜಮೌಳಿ. ಈ ತರಬೇತಿ ಶಿಬಿರದಲ್ಲಿ ಪಾಲ್ಗೊಳ್ಳಲೆಂದು ಪ್ರಿಯಾಂಕಾ ಇದೀಗ ಹೈದರಾಬಾದ್​ಗೆ ಬಂದಿದ್ದಾರೆ.

ಇದನ್ನೂ ಓದಿ:ರಾಜಮೌಳಿಯನ್ನೇ ಬ್ಯಾನ್ ಮಾಡಿತ್ತು ತೆಲುಗು ಚಿತ್ರರಂಗ, ಕಾರಣ ಏನು ಗೊತ್ತೆ?

ರಾಜಮೌಳಿ ಮತ್ತು ಮಹೇಶ್ ಬಾಬು ಅವರ ಮುಂದಿನ ಸಿನಿಮಾ ಅಡ್ವೇಂಚರ್ ಕತೆಯನ್ನು ಒಳಗೊಂಡಿದ್ದು, ಸಿನಿಮಾದ ಕತೆ ಕಾಡುಗಳ ನಡುವೆ ನಡೆಯುವ ಅದ್ಭುತ ಸಾಹಸಗಳನ್ನು ಒಳಗೊಂಡಿದೆ. ಈ ಸಿನಿಮಾದ ಚಿತ್ರೀಕರಣಕ್ಕೆ ಹಲವು ಅತ್ಯುತ್ತಮ ಮತ್ತು ಹೊಸ ರೀತಿಯ ತಂತ್ರಜ್ಞಾನಗಳನ್ನು ರಾಜಮೌಳಿ ಬಳಸುತ್ತಿದ್ದು, ಇದೇ ಕಾರಣಕ್ಕೆ ಮೊದಲೇ ಸಿನಿಮಾದ ನಟ-ನಟಿಯರಿಗೆ ತರಬೇತಿ ನೀಡಿ ಬಳಿಕ ಚಿತ್ರೀಕರಣ ಪ್ರಾರಂಭ ಮಾಡಲಿದ್ದಾರೆ. ಈ ಕಾರಣಕ್ಕೆ ಸಿನಿಮಾದಲ್ಲಿ ನಟಿಸುತ್ತಿರುವ ಎಲ್ಲ ನಟರು ಹೈದರಾಬಾದ್​ನಲ್ಲಿ ಇದೀಗ ತರಬೇತಿ ಪಡೆಯುತ್ತಿದ್ದಾರೆ.

ಪ್ರಿಯಾಂಕಾ ಚೋಪ್ರಾ ಇದೀಗ ಎರಡು ಹಾಲಿವುಡ್ ಪ್ರಾಜೆಕ್ಟ್​ಗಳಲ್ಲಿ ಬ್ಯುಸಿಯಾಗಿದ್ದಾರೆ. ಒಂದು ಆಕ್ಷನ್ ವೆಬ್ ಸೀರೀಸ್ ಒಂದರಲ್ಲಿ ಪ್ರಿಯಾಂಕಾ ಚೋಪ್ರಾ ನಟಿಸುತ್ತಿದ್ದಾರೆ. ಅದರ ಜೊತೆಗೆ ಒಂದು ರೊಮ್ಯಾಂಟಿಕ್ ಕಾಮಿಡಿ ಸಿನಿಮಾದಲ್ಲಿಯೂ ಪ್ರಿಯಾಂಕಾ ಚೋಪ್ರಾ ನಟಿಸುತ್ತಿದ್ದಾರೆ. ಇದರ ಜೊತೆಗೆ ಝೋಯಾ ಅಖ್ತರ್ ನಿರ್ದೇಶನ ಮಾಡಲಿರುವ ಸಿನಿಮಾದಲ್ಲಿ ಆಲಿಯಾ ಭಟ್, ಕರೀನಾ ಕಪೂರ್ ಅವರುಗಳ ಜೊತೆಗೆ ಸಿನಿಮಾ ಒಂದರಲ್ಲಿ ಪ್ರಿಯಾಂಕಾ ಚೋಪ್ರಾ ನಟಿಸಲಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!