AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Priyanka Chopra: ಬಹುವರ್ಷಗಳ ಬಳಿಕ ಒಪ್ಪಿಕೊಂಡ ಬಾಲಿವುಡ್ ಚಿತ್ರದಿಂದಲೂ ಹೊರ ನಡೆದ ನಟಿ ಪ್ರಿಯಾಂಕಾ ಚೋಪ್ರಾ

ಪ್ರಿಯಾಂಕಾ ಅವರು ಬಹುವರ್ಷಗಳ ಬಳಿಕ ಒಪ್ಪಿಕೊಂಡಿದ್ದ ಹಿಂದಿ ಚಿತ್ರವೊಂದರಿಂದ ಹೊರ ನಡೆದಿದ್ದಾರೆ. ಈ ಮೂಲಕ ಅವರ ಕಂಬ್ಯಾಕ್ ಮತ್ತಷ್ಟು ವಿಳಂಬವಾಗಿದೆ.

Priyanka Chopra: ಬಹುವರ್ಷಗಳ ಬಳಿಕ ಒಪ್ಪಿಕೊಂಡ ಬಾಲಿವುಡ್ ಚಿತ್ರದಿಂದಲೂ ಹೊರ ನಡೆದ ನಟಿ ಪ್ರಿಯಾಂಕಾ ಚೋಪ್ರಾ
ಪ್ರಿಯಾಂಕಾ ಚೋಪ್ರಾ
ರಾಜೇಶ್ ದುಗ್ಗುಮನೆ
|

Updated on: Jul 01, 2023 | 7:48 AM

Share

ನಟಿ ಪ್ರಿಯಾಂಕಾ ಚೋಪ್ರಾ (Priyanka Chopra) ಅವರಿಗೆ ಜನಪ್ರಿಯತೆ ಸಿಕ್ಕಿದ್ದು ಬಾಲಿವುಡ್​ನಿಂದ. ಅವರು ಇಂದು ಈ ಮಟ್ಟಕ್ಕೆ ಬೆಳೆದು ನಿಂತಿದ್ದಾರೆ ಎಂದರೆ ಅದಕ್ಕೆ ಹಿಂದಿ ಚಿತ್ರರಂಗದ ಪಾತ್ರ ತುಂಬಾನೇ ದೊಡ್ಡದಿದೆ. ಆದರೆ, ಅಮೆರಿಕದ ಪಾಪ್ ಸಿಂಗರ್ ನಿಕ್ ಜೋನಸ್ (Nick Jonas) ಅವರನ್ನು ಮದುವೆ ಆದ ಬಳಿಕ ಪ್ರಿಯಾಂಕಾ ಬಾಲಿವುಡ್​ನತ್ತ ಮರಳಿಲ್ಲ. ಅವರನ್ನು ಹಿಂದಿ ಸಿನಿಮಾಗಳಲ್ಲಿ ನೋಡಬೇಕು ಎಂಬುದು ಅಭಿಮಾನಿಗಳ ಬಯಕೆ. ಆದರೆ, ಇದು ಸಾಧ್ಯವಾಗುತ್ತಿಲ್ಲ. ಈಗ ಅವರು ಬಹುವರ್ಷಗಳ ಬಳಿಕ ಒಪ್ಪಿಕೊಂಡಿದ್ದ ಹಿಂದಿ ಚಿತ್ರವೊಂದರಿಂದ ಹೊರ ನಡೆದಿದ್ದಾರೆ. ಈ ಮೂಲಕ ಅವರ ಕಂಬ್ಯಾಕ್ ಮತ್ತಷ್ಟು ವಿಳಂಬವಾಗಿದೆ.

ಫರ್ಹಾನ್ ಅಖ್ತರ್ ಅವರು ನಟನೆಯ ಜೊತೆಗೆ ನಿರ್ದೇಶನದಲ್ಲೂ ಗುರುತಿಸಿಕೊಂಡಿದ್ದಾರೆ. ಅವರ ನಿರ್ದೇಶನದಲ್ಲಿ ಹಲವು ಸೂಪರ್ ಹಿಟ್ ಚಿತ್ರಗಳು ಬಂದಿವೆ. ‘ಜೀ ಲೇ ಜರಾ’ ಸಿನಿಮಾನ ನಿರ್ದೇಶನ ಮಾಡುವ ಬಗ್ಗೆ ಅವರು ಘೋಷಣೆ ಮಾಡಿದ್ದರು. ಈ ಚಿತ್ರದಲ್ಲಿ ಆಲಿಯಾ ಭಟ್, ಕತ್ರಿನಾ ಕೈಫ್ ಹಾಗೂ ಪ್ರಿಯಾಂಕಾ ಚೋಪ್ರಾ ಒಟ್ಟಾಗಿ ನಟಿಸಬೇಕಿತ್ತು. ಆದರೆ, ಸಿನಿಮಾ ಸೆಟ್ಟೇರುವುದು ವಿಳಂಬ ಆಗುತ್ತಲೇ ಇದೆ. ಇದರಿಂದ ಪ್ರಿಯಾಂಕಾ ಸಿನಿಮಾದಿಂದ ಹೊರ ನಡೆದಿದ್ದಾರೆ ಎನ್ನಲಾಗುತ್ತಿದೆ.

ಪ್ರಿಯಾಂಕಾ ಚೋಪ್ರಾ ಹಾಗೂ ಫರ್ಹಾನ್ ಅಖ್ತರ್ ಈ ಮೊದಲು ‘ಡಾನ್’ ಹಾಗೂ ‘ಡಾನ್ 2’ ಚಿತ್ರಗಳಲ್ಲಿ ಒಟ್ಟಾಗಿ ಕೆಲಸ ಮಾಡಿದ್ದಾರೆ. ಈ ಕಾರಣಕ್ಕೆ ಇವರ ಮಧ್ಯೆ ಒಳ್ಳೆಯ ಗೆಳೆತನ ಇದೆ. ಹೀಗಾಗಿ ಪ್ರಿಯಾಂಕಾ ಅವರು ‘ಜೀ ಲೇ ಜರಾ’ ಸಿನಿಮಾದಲ್ಲಿ ನಟಿಸಲು ಒಪ್ಪಿದ್ದರು. ಆದರೆ, ಸಿನಿಮಾ ಪದೇಪದೇ ವಿಳಂಬ ಆಗುತ್ತಿರುವುದಕ್ಕೆ ಅವರಿಗೆ ಡೇಟ್ಸ್ ಹೊಂದಾಣಿಕೆ ಅಸಾಧ್ಯವಾಗಿದೆ. ಈ ಕಾರಣದಿಂದ ಪ್ರಿಯಾಂಕಾ ಈ ಸಿನಿಮಾದಲ್ಲಿ ನಟಿಸದಿರಲು ನಿರ್ಧರಿಸಿದ್ದಾರೆ.

ಪ್ರಿಯಾಂಕಾ ಹಲವು ಇಂಗ್ಲಿಷ್ ಸಿನಿಮಾ ಹಾಗೂ ವೆಬ್ ಸೀರಿಸ್​ಗಳಲ್ಲಿ ನಟಿಸಿದ್ದಾರೆ. ಅವರು ಶೂಟಿಂಗ್​ಗಾಗಿ ಬೇರೆ ಬೇರೆ ದೇಶಗಳಿಗೆ ತೆರಳುತ್ತಾರೆ. ಇದರ ಜೊತೆಗೆ ಪತಿ ನಿಕ್ ಜೋನಸ್ ಹಾಗೂ ಮಗಳು ಮಾಲ್ತಿ ಮೇರಿ ಜೋನಸ್ ಚೋಪ್ರಾಗಾಗಿ ಸಮಯ ಮೀಸಲಿಡಬೇಕು. ಇವೆಲ್ಲವನ್ನೂ ಪ್ರಿಯಾಂಕಾ ಪರಿಗಣನೆ ತೆಗೆದುಕೊಂಡು ಈ ನಿರ್ಧಾರಕ್ಕೆ ಬಂದಿದ್ದಾರಂತೆ.

ಇದನ್ನೂ ಓದಿ: Priyanka Chopra: ಪ್ರಶಾಂತ್​ ನೀಲ್​ ನಿರ್ದೇಶನದ ಸಿನಿಮಾದಲ್ಲಿ ಪ್ರಿಯಾಂಕಾ ಚೋಪ್ರಾ? ಕೇಳಿಬರ್ತಿದೆ ಬಿಗ್​ ನ್ಯೂಸ್​

ಸದ್ಯ ಪ್ರಿಯಾಂಕಾ ಸ್ಥಾನಕ್ಕೆ ಯಾರು ಎನ್ನುವ ಪ್ರಶ್ನೆ ಮೂಡಿದೆ. ಅನೇಕರು ಅನುಷ್ಕಾ ಶರ್ಮಾ ಹಾಗೂ ದೀಪಿಕಾ ಪಡುಕೋಣೆ ಹೆಸರನ್ನು ಸೂಚಿಸಿದ್ದಾರೆ. ಅಂತಿಮವಾಗಿ ಫರ್ಹಾನ್ ಅವರು ಯಾರ ಹೆಸರನ್ನು ಫೈನಲ್ ಮಾಡುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್