ಆಮಿರ್ ಖಾನ್ ಸಿನಿಮಾ ನಿರ್ಮಾಪಕನಿಗೆ ಎರಡು ವರ್ಷ ಜೈಲು ಶಿಕ್ಷೆ ವಿಧಿಸಿದ ಕೋರ್ಟ್

Producer: ಆಮಿರ್ ಖಾನ್​ರ ಸಿನಿಮಾ ಸೇರಿದಂತೆ ಇನ್ನೂ ಹಲವು ಸಿನಿಮಾಗಳ ನಿರ್ದೇಶನ, ನಿರ್ಮಾಣ ಮಾಡಿದ್ದ ವ್ಯಕ್ತಿಗೆ ಎರಡು ವರ್ಷ ಜೈಲು ಶಿಕ್ಷೆ ವಿಧಿಸಿ ನ್ಯಾಯಾಲಯ ಆದೇಶ ನೀಡಿದೆ.

ಆಮಿರ್ ಖಾನ್ ಸಿನಿಮಾ ನಿರ್ಮಾಪಕನಿಗೆ ಎರಡು ವರ್ಷ ಜೈಲು ಶಿಕ್ಷೆ ವಿಧಿಸಿದ ಕೋರ್ಟ್
Follow us
 ಶ್ರೀಲಕ್ಷ್ಮೀ ಎಚ್
| Updated By: ಮಂಜುನಾಥ ಸಿ.

Updated on:Feb 17, 2024 | 9:08 PM

ಹಲವು ಸೂಪರ್ ಹಿಟ್ ಚಿತ್ರಗಳನ್ನು ನೀಡಿ ಫೇಮಸ್ ಆಗಿರುವ ನಿರ್ದೇಶಕ ರಾಜ್​ಕುಮಾರ್ ಸಂತೋಷಿ (Rajkumar Santhoshi) ಅವರಿಗೆ ಎರಡು ವರ್ಷ ಜೈಲು ಶಿಕ್ಷೆ ಆಗಿದೆ. ಚೆಕ್ ಬೌನ್ಸ್ ಕೇಸ್​ನಲ್ಲಿ ಅಪರಾಧ ಸಾಬೀತಾದ ಹಿನ್ನೆಲೆಯಲ್ಲಿ ಕೋರ್ಟ್ ಈ ಆದೇಶ ನೀಡಿದೆ. ಆಮಿರ್ ಖಾನ್, ಸನ್ನಿ ಡಿಯೋಲ್ ಜೊತೆಗೆ ‘ಲಾಹೋರ್ 1947’ ಸಿನಿಮಾನ ಅವರು ನಿರ್ದೇಶನ ಮಾಡಬೇಕಿತ್ತು. ಈಗ ಅವರಿಗೆ ಸಂಕಷ್ಟ ಎದುರಾಗಿದೆ. ಅವರಿಗೆ ಬಂಧನ ಭೀತಿ ಎದುರಾಗಿದೆ.

ಜಾಮ್​ನಗರ್​ ನಿವಾಸಿ ಹಾಗೂ ಶ್ರೀಜಿ ಶಿಪ್ಪಿಂಗ್ ಮಾಲೀಕ ಅಶೋಕ್ ಲಾಲ್ ಅವರ ಬಳಿ ರಾಜ್​ಕುಮಾರ್ ಸಂತೋಷಿ ಅವರು 1 ಕೋಟಿ ಹಣ ಪಡೆದಿದ್ದರು. 2015ರಲ್ಲಿ ಪಡೆದ ಹಣ ಇದಾಗಿತ್ತು. ಈ ಹಣವನ್ನು ಹಿಂದಿರುಗಿಸಲು 10 ಲಕ್ಷ ರೂಪಾಯಿಯ 10 ಚೆಕ್​ನ ನಿರ್ದೇಶಕರು ಅಶೋಕ್​ಲಾಲ್​ಗೆ ನೀಡಿದ್ದರು. ಈ ಚೆಕ್ ಬೌನ್ಸ್ ಆಗಿತ್ತು. ಆ ಬಳಿಕ ರಾಜ್​ಕುಮಾರ್ ಸಂತೋಷಿ ಅವರನ್ನು ಸಂಪರ್ಕಿಸಲು ಅಶೋಕ್ ಲಾಲ್ ಸಾಕಷ್ಟು ಪ್ರಯತ್ನಪಟ್ಟರು. ಆದರೆ ಯಾವುದೇ ಪ್ರಯೋಜನ ಆಗಲಿಲ್ಲ. ಆ ಬಳಿಕ ಅಶೋಕ್ ಲಾಲ್ ಅವರು ಕೇಸ್ ದಾಖಲು ಮಾಡಿದರು.

ಈ ಮೊದಲು ಜಾಮ್​ನಗರ ನ್ಯಾಯಾಲಯ ನಿರ್ದೇಶಕ ಸಂತೋಷಿ ಅವರಿಗೆ ಪ್ರತಿ ಚೆಕ್​ಗೆ 15 ಸಾವಿರ ರೂಪಾಯಿನ ಪರಿಹಾರ ಹಣ ನೀಡುವಂತೆ ಆದೇಶ ನೀಡಿತ್ತು. ಅಂದರೆ 1.50 ಲಕ್ಷ ರೂಪಾಯಿ ಪರಿಹಾರ ಹಣ ನೀಡಬೇಕಿತ್ತು. ಇದಕ್ಕೆ ಕಳೆದ ಏಪ್ರಿಲ್ 15ರವರೆಗೆ ಗಡುವು ನೀಡಲಾಗಿತ್ತು. ಆದರೆ, ರಾಜ್​ಕುಮಾರ್ ಸಂತೋಷಿ ಇದಕ್ಕೆ ಬೆಲೆ ನೀಡಲಿಲ್ಲ. ಈ ಕಾರಣಕ್ಕೆ ಜಾಮ್​ನಗರ್ ನ್ಯಾಯಾಲಯ ಅವರಿಗೆ ಎರಡು ವರ್ಷ ಜೈಲುಶಿಕ್ಷೆ ವಿಧಿಸಿದೆ. ಜೊತೆಗೆ ಅಶೋಕ್ ಲಾಲ್​ಗೆ 2 ಕೋಟಿ ರೂಪಾಯಿ ನೀಡಬೇಕೆಂದು ಸೂಚಿಸಿದೆ.

ಇದನ್ನೂ ಓದಿ:‘ಒಂದು ಸರಳ ಪ್ರೇಮಕಥೆ’ ಸಿನಿಮಾ ನೋಡಿದ ಶಿವರಾಜ್​ಕುಮಾರ್-ಗೀತಾ ದಂಪತಿ

ರಾಜ್​ಕುಮಾರ್ ಸಂತೋಷಿ ಅವರು ಸನ್ನಿ ಡಿಯೋಲ್ ಹಾಗೂ ಆಮಿರ್ ಖಾನ್ ಜೊತೆ ಕೈ ಜೋಡಿಸಿದ್ದಾರೆ. ಈ ಚಿತ್ರಕ್ಕೆ ‘ಲಾಹೋರ್ 1947’ ಎಂದು ಟೈಟಲ್ ಇಡಲಾಗಿದೆ. ಈ ಚಿತ್ರದ ಬಗ್ಗೆ ಸಾಕಷ್ಟು ನಿರೀಕ್ಷೆ ಇದೆ. ಈ ಸಿನಿಮಾಗೆ ಆಮಿರ್ ನಿರ್ಮಾಣ ಮಾಡುತ್ತಿದ್ದಾರೆ. ಈ ಚಿತ್ರಕ್ಕೆ ಎಆರ್ ರೆಹಮಾನ್ ಸಂಗೀತ ಸಂಯೋಜನೆ ಮಾಡಲಿದ್ದಾರೆ. ‘ಅಂದಾಜ್​ ಅಪ್ನಾ ಅಪ್ನಾ’ ಸಿನಿಮಾದಲ್ಲಿ ಆಮಿರ್ ಖಾನ್ ಜೊತೆ ರಾಜ್​ಕುಮಾರ್ ಸಂತೋಷಿ ಕೆಲಸ ಮಾಡಿದ್ದರು. ‘ಘಾಯಲ್’, ‘ದಾಮಿನಿ’, ‘ಘಾಟಕ್’ ಸಿನಿಮಾಗಳಲ್ಲಿ ಸನ್ನಿ ಡಿಯೋಲ್ ಜೊತೆ ರಾಜ್​ಕುಮಾರ್ ಸಂತೋಷಿ ಕೆಲಸ ಮಾಡಿದ್ದರು.

1982ರಲ್ಲಿ ರಿಲೀಸ್ ಆದ ‘ಅರ್ಧ ಸತ್ಯ’ ಸಿನಿಮಾದಲ್ಲಿ ಸಹಾಯಕ ನಿರ್ದೇಶಕರಾಗಿ ರಾಜ್​ಕುಮಾರ್ ಸಂತೋಷಿ ಕೆಲಸ ಮಾಡಿದರು. 1990ರ ‘ಘಾಯಲ್’ ಚಿತ್ರದ ಮೂಲಕ ನಿರ್ದೇಶಕನ ಕ್ಯಾಪ್ ತೊಟ್ಟರು. ನಂತರ ಹಲವು ಸಿನಿಮಾಗಳನ್ನು ಅವರು ನಿರ್ದೇಶನ ಮಾಡಿದರು. ಕೆಲವು ಸಿನಿಮಾಗಳನ್ನು ಅವರು ನಿರ್ಮಾಣ ಕೂಡ ಮಾಡಿದ್ದಾರೆ. ಈಗ ಅವರ ಆರ್ಥಿಕ ಪರಿಸ್ಥಿತಿ ಉತ್ತಮವಾಗಿಲ್ಲ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 9:08 pm, Sat, 17 February 24

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ