Karan Johar: ಕರಣ್​ ಜೋಹರ್​ ಮಕ್ಕಳ ವಿಡಿಯೋ ವೈರಲ್​; ವಿಮಾನ ನಿಲ್ದಾಣದಲ್ಲಿ ನಮಸ್ತೆ ಮಾಡೋದು ಕಲಿಸಿದ ನಿರ್ಮಾಪಕ

ವಿಮಾನ ನಿಲ್ದಾಣದಲ್ಲಿ ಸೆಲೆಬ್ರಿಟಿಗಳು ಮತ್ತು ಅವರ ಮಕ್ಕಳು ಸಿಡಿಮಿಡಿ ಮಾಡಿದ ಪ್ರಸಂಗಗಳು ಸಾಕಷ್ಟಿವೆ. ಆದರೆ ಕರಣ್​ ಜೋಹರ್​ ಅವರು ಆ ರೀತಿ ಮಾಡಿಲ್ಲ. ತುಂಬ ಸೌಮ್ಯವಾಗಿ ನಡೆದುಕೊಂಡಿದ್ದಾರೆ.

Karan Johar: ಕರಣ್​ ಜೋಹರ್​ ಮಕ್ಕಳ ವಿಡಿಯೋ ವೈರಲ್​; ವಿಮಾನ ನಿಲ್ದಾಣದಲ್ಲಿ ನಮಸ್ತೆ ಮಾಡೋದು ಕಲಿಸಿದ ನಿರ್ಮಾಪಕ
ರೂಹಿ, ಕರಣ್​ ಜೋಹರ್​, ಯಶ್​
Follow us
TV9 Web
| Updated By: ಮದನ್​ ಕುಮಾರ್​

Updated on: Jul 03, 2022 | 10:53 AM

ಖ್ಯಾತ ನಿರ್ದೇಶಕ/ನಿರ್ಮಾಪಕ ಕರಣ್ ಜೋಹರ್​ (Karan Johar) ಅವರು ಹಲವು ಕಾರಣಗಳಿಂದಾಗಿ ಸುದ್ದಿ ಆಗುತ್ತಾರೆ. ಅನೇಕ ಬಾರಿ ನೆಟ್ಟಿಗರಿಂದ ಅವರು ಟೀಕೆಗೂ ಒಳಗಾಗುವುದುಂಟು. ಈಗ ಒಂದು ವಿಚಾರಕ್ಕಾಗಿ ಅವರಿಗೆ ಎಲ್ಲರೂ ಭೇಷ್​ ಎನ್ನುತ್ತಿದ್ದಾರೆ. ಇತ್ತೀಚೆಗೆ ಕರಣ್​ ಜೋಹರ್​ ಅವರು ವಿದೇಶಕ್ಕೆ ತೆರಳಿದ್ದರು. ಅಲ್ಲಿಂದ ವಾಪಸ್​ ಬರುವಾಗ ಮುಂಬೈ ವಿಮಾನ ನಿಲ್ದಾಣದಲ್ಲಿ ಅವರು ಪಾಪರಾಜಿ (Paparazzi) ಕ್ಯಾಮೆರಾಗಳ ಕಣ್ಣಿಗೆ ಕಾಣಿಸಿಕೊಂಡರು. ಕರಣ್​ ಜೋಹರ್​ ಜೊತೆ ಮಕ್ಕಳಾದ ಯಶ್​ ಮತ್ತು ರೂಹಿ (Yash and Roohi) ಕೂಡ ಇದ್ದರು. ಈ ವೇಳೆ ಮಕ್ಕಳಿಗೆ ಕರಣ್​ ಜೋಹರ್​ ಅವರು ನಮಸ್ತೆ ಮಾಡುವುದು ಕಲಿಸಿದ್ದಾರೆ. ಆ ವಿಡಿಯೋ ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗಿದೆ. ತುಂಬ ಕ್ಯೂಟ್​ ಆಗಿದೆ ಎಂದು ಕೂಡ ಅನೇಕರು ಕಮೆಂಟ್​ ಮಾಡುತ್ತಿದ್ದಾರೆ.

ಸಾಮಾನ್ಯವಾಗಿ ಸೆಲೆಬ್ರಿಟಿಗಳನ್ನು ಕಂಡಾಗ ಅವರ ಫೋಟೋ ಮತ್ತು ವಿಡಿಯೋಗಾಗಿ ಪಾಪರಾಜಿಗಳು ಮುಗಿಬೀಳಿತ್ತಾರೆ. ಸ್ಟಾರ್​ ಕಿಡ್​ಗಳನ್ನು ಕಂಡಾಗಲೂ ಇದೇ ಪರಿಸ್ಥಿತಿ ಇರುತ್ತದೆ. ಆಗ ಸೆಲೆಬ್ರಿಟಿಗಳು ಮತ್ತು ಅವರ ಮಕ್ಕಳು ಸಿಡಿಮಿಡಿ ಮಾಡಿದ ಪ್ರಸಂಗಗಳು ಸಾಕಷ್ಟಿವೆ. ಆದರೆ ಕರಣ್​ ಜೋಹರ್​ ಅವರು ಆ ರೀತಿ ಮಾಡಿಲ್ಲ. ತುಂಬ ಸೌಮ್ಯವಾಗಿ ನಡೆದುಕೊಂಡಿದ್ದಾರೆ.

ಇದನ್ನೂ ಓದಿ
Image
‘ನಾವು ‘ಕೆಜಿಎಫ್​’ ರೀತಿಯ ಸಿನಿಮಾ ಮಾಡಿದ್ರೆ ಕಟು ಟೀಕೆ ವ್ಯಕ್ತವಾಗುತ್ತಿತ್ತು’: ಕರಣ್​ ಜೋಹರ್​ ಆರೋಪ
Image
‘ನನ್ನನ್ನೇಕೆ ದೂಷಿಸುತ್ತೀರಿ?’; ಏಕಾಏಕಿ ಸಿಟ್ಟಾದ ನಿರ್ಮಾಪಕ ಕರಣ್​ ಜೋಹರ್
Image
‘ಬಾಡಿಗಾರ್ಡ್ಸ್​ ಇಲ್ಲದೇ ಬನ್ನಿ’​ ಎಂದು ರಶ್ಮಿಕಾಗೆ ಕರಣ್​ ಜೋಹರ್​ ಆಹ್ವಾನ: ನಂತರ ಏನಾಯ್ತು?
Image
‘ಇಂಥ ಕೆಲಸ ಮಾಡ್ಬೇಡಿ’: ಎಲ್ಲರ ಎದುರು ಕರಣ್​ ಜೋಹರ್​ಗೆ ಅನಿಲ್​ ಕಪೂರ್ ವಾರ್ನಿಂಗ್​; ವಿಡಿಯೋ ವೈರಲ್​​

‘ಹೇಗಿದ್ದೀರಿ ಸರ್​’ ಎಂದು ಪಾಪರಾಜಿಗಳು ಕೇಳಿದ ಪ್ರಶ್ನೆಗೆ ಕರಣ್​ ಜೋಹರ್​ ಉತ್ತರಿಸಿದ್ದಾರೆ. ‘ಪಾಪರಾಜಿಗಳಿಗೆ ನಮಸ್ತೆ ಮಾಡಿ’ ಎಂದು ಮಕ್ಕಳಿಗೆ ಅವರು ಹೇಳಿಕೊಟ್ಟಿದ್ದಾರೆ. ಎರಡೂ ಕೈಗಳನ್ನು ಜೋಡಿಸಿ ಯಶ್​ ಮತ್ತು ರೂಹಿ ನಮಸ್ತೆ ಮಾಡಿದ್ದಾರೆ. ಸೋಶಿಯಲ್​ ಮೀಡಿಯಾದಲ್ಲಿ ಕರಣ್​ ಜೋಹರ್​ ಅವರು ಮಕ್ಕಳ ಫೋಟೋ ಮತ್ತು ವಿಡಿಯೋಗಳನ್ನು ಆಗಾಗ ಶೇರ್​ ಮಾಡಿಕೊಳ್ಳುತ್ತಾ ಇರುತ್ತಾರೆ. ಅವುಗಳಿಗೆ ಅಭಿಮಾನಿಗಳು ಮೆಚ್ಚುಗೆ ಸೂಚಿಸುತ್ತಾರೆ.

ಸದ್ಯ ಹಲವು ಕೆಲಸಗಳಲ್ಲಿ ಕರಣ್​ ಜೋಹರ್​ ಬ್ಯುಸಿ ಆಗಿದ್ದಾರೆ. ನಿರೂಪಕನಾಗಿಯೂ ಅವರು ತುಂಬ ಫೇಮಸ್​. ‘ಕಾಫಿ ವಿತ್​ ಕರಣ್​ ಸೀಸನ್​ 7’ ಶೋ ಅನ್ನು ಅವರು ನಡೆಸಿಕೊಡುತ್ತಿದ್ದಾರೆ. ಇದರ ಜೊತೆಗೆ ಆಲಿಯಾ ಭಟ್​ ಮತ್ತು ರಣಬೀರ್​ ಸಿಂಗ್​ ನಟನೆಯ ‘ರಾಕಿ ಔರ್ ರಾಣಿ ಕಿ ಪ್ರೇಮ್​ ಕಹಾನಿ’ ಸಿನಿಮಾಗೆ ಕರಣ್ ಜೋಹರ್​ ನಿರ್ದೇಶನ ಮಾಡುತ್ತಿದ್ದಾರೆ. ಈ ವರ್ಷ ಅವರು 50ನೇ ವರ್ಷದ ಹುಟ್ಟುಹಬ್ಬ ಆಚರಿಸಿಕೊಂಡರು. ಅನೇಕ ಸ್ಟಾರ್​ ಕಿಡ್​ಗಳನ್ನು ಲಾಂಚ್​ ಮಾಡುವ ಉಸ್ತುವಾರಿಯನ್ನೂ ಅವರು ವಹಿಸಿಕೊಂಡಿದ್ದಾರೆ.

ಇದನ್ನೂ ಓದಿ: ಪ್ರಿಯಾಂಕಾ ಚೋಪ್ರಾ-ನಿಕ್​ ಜೋನಸ್​ ಸಂಸಾರದ ಗುಟ್ಟು ರಟ್ಟು ಮಾಡ್ತಾರಾ ಕರಣ್​ ಜೋಹರ್​?

‘ನಾವು ‘ಕೆಜಿಎಫ್​’ ರೀತಿಯ ಸಿನಿಮಾ ಮಾಡಿದ್ರೆ ಕಟು ಟೀಕೆ ವ್ಯಕ್ತವಾಗುತ್ತಿತ್ತು’: ಕರಣ್​ ಜೋಹರ್​ ಆರೋಪ

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ