ಐಟಿ ರೇಡ್ ಬೆನ್ನಲ್ಲೇ ಆಸ್ಪತ್ರೆ ಸೇರಿದ ನಿರ್ಮಾಪಕ ವಾಶು ಭಗ್ನಾನಿ

ಆದಾಯ ತೆರಿಗೆ ಇಲಾಖೆ ದಾಳಿಯ ಮರುದಿನವೇ ಬಾಲಿವುಡ್ ನಿರ್ಮಾಪಕ ವಾಶು ಭಗ್ನಾನಿ ಲಂಡನ್‌ನಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ರಕುಲ್ ಪ್ರೀತ್ ಸಿಂಗ್ ಸೇರಿದಂತೆ 12 ಸ್ಥಳಗಳಲ್ಲಿ ಐಟಿ ಅಧಿಕಾರಿಗಳು ಪರಿಶೀಲನೆ ನಡೆಸಿದ್ದರು. ಹಣಕಾಸಿನ ಅಕ್ರಮ ವರ್ಗಾವಣೆ ಆರೋಪದ ಬೆನ್ನಲ್ಲೇ ವಾಶು ಭಗ್ನಾನಿ ಆರೋಗ್ಯದಲ್ಲಿ ಏರುಪೇರಾಗಿದ್ದು, ಚಿತ್ರರಂಗದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ.

ಐಟಿ ರೇಡ್ ಬೆನ್ನಲ್ಲೇ ಆಸ್ಪತ್ರೆ ಸೇರಿದ ನಿರ್ಮಾಪಕ ವಾಶು ಭಗ್ನಾನಿ
ವಾಶು ಹಾಗೂ ಮಗ

Updated on: Sep 30, 2026 | 12:13 PM

ಮುಖ್ಯಾಂಶಗಳು

  • ಐಟಿ ದಾಳಿಯ ಬೆನ್ನಲ್ಲೇ ಆಸ್ಪತ್ರೆಗೆ ಸಿನಿನಿರ್ಮಾಪಕ
  • ಲಂಡನ್‌ನಲ್ಲಿ ವಾಶು ಭಗ್ನಾನಿ ದಿಢೀರ್ ದಾಖಲು
  • ವಿದೇಶಕ್ಕೆ ಅಕ್ರಮ ಹಣ ರವಾನೆ ಆರೋಪ

ಆದಾಯ ತೆರಿಗೆ ಇಲಾಖೆ ದಾಳಿಯ ಬೆನ್ನಲ್ಲೇ ಬಾಲಿವುಡ್‌ನ ಖ್ಯಾತ ನಿರ್ಮಾಪಕ ವಾಶು ಭಗ್ನಾನಿ ಲಂಡನ್‌ನಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಮುಂಬೈನ ಮನೆಯಲ್ಲಿ ನಡೆದ ಐಟಿ ರೇಡ್ ನಡೆದ ಮರುದಿನವೇ ಈ ಘಟನೆ ಸಂಭವಿಸಿದೆ. ಈ ವಿಚಾರ ತಿಳಿದ ಕುಟುಂಬಸ್ಥರು ‘ತಮಗೊಂದಿಷ್ಟು ಸಮಯ ನೀಡಿ’ ಎಂದು ವಿನಂತಿಸಿದ್ದಾರೆ. ಸದ್ಯ ಈ ಸುದ್ದಿ ಸಿನಿಮಾ ರಂಗದಲ್ಲಿ ತೀವ್ರ ಚರ್ಚೆಗೆ ಕಾರಣ ಆಗಿದೆ.

ವಾಶು ಭಗ್ನಾನಿ ಮನೆ ಹಾಗೂ ಕಚೇರಿ ಸೇರಿದಂತೆ ಒಟ್ಟು 12 ಕಡೆಗಳಲ್ಲಿ ಐಟಿ ಅಧಿಕಾರಿಗಳು ಏಕಕಾಲಕ್ಕೆ ದಾಳಿ ನಡೆಸಿದ್ದರು. ಅವರ ಸೊಸೆ ಹಾಗೂ ನಟಿ ರಕುಲ್ ಪ್ರೀತ್ ಸಿಂಗ್ ಅವರಿಗೂ ಸಂಬಂಧಿಸಿದ ಸ್ಥಳಗಳಲ್ಲಿ ಪರಿಶೀಲನೆ ನಡೆಸಲಾಗಿದೆ. ಪನೋರಮಾ ಸ್ಟುಡಿಯೋಸ್ ಮೇಲೆಯೂ ಪರಿಶೀಲನೆ ನಡೆದಿದೆ. ಹಣಕಾಸಿನ ಅಕ್ರಮ ವ್ಯವಹಾರದ ಶಂಕೆಯ ಹಿನ್ನೆಲೆಯಲ್ಲಿ ಈ ದಾಳಿ ನಡೆದಿದೆ. ಈ ದಾಳಿಯಿಂದ ಒತ್ತಡಕ್ಕೊಳಗಾಗಿ ಅವರು ಹೀಗೆ ಮಾಡಿದರೇ ಎನ್ನುವ ಪ್ರಶ್ನೆ ಮೂಡಿದೆ. ಇದಕ್ಕೆ ಇನ್ನೂ ಸ್ಪಷ್ಟನೆ ಸಿಕ್ಕಿಲ್ಲ.

ಚಿತ್ರನಿರ್ಮಾಣದ ಹೆಸರಿನಲ್ಲಿ ಹಣವನ್ನು ವಿದೇಶಕ್ಕೆ ಅಕ್ರಮವಾಗಿ ರವಾನಿಸಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಆದಾಯ ತೆರಿಗೆ ಅಧಿಕಾರಿಗಳು ಸುದೀರ್ಘ ತನಿಖೆ ನಡೆಸುತ್ತಿದ್ದಾರೆ. ಬ್ಯಾಂಕ್ ಖಾತೆಗಳು ಹಾಗೂ ವಿದೇಶಿ ವ್ಯವಹಾರಗಳ ದಾಖಲೆಗಳನ್ನು ಪರಿಶೀಲಿಸಲಾಗುತ್ತಿದೆ. ಈ ವಿಚಾರವಾಗಿ ತನಿಖೆ ಇನ್ನೂ ಪ್ರಗತಿಯಲ್ಲಿದೆ.

ಪೂಜಾ ಎಂಟರ್‌ಟೈನ್‌ಮೆಂಟ್ ಸಂಸ್ಥೆಯ ಮೂಲಕ ವಾಶು ಭಗ್ನಾನಿ ಹಲವು ಸೂಪರ್ ಹಿಟ್ ಸಿನಿಮಾಗಳನ್ನು ನೀಡಿದ್ದಾರೆ. ಆದರೆ ಇತ್ತೀಚಿನ ವರ್ಷಗಳಲ್ಲಿ ಅವರು ಸಾಲು ಸಾಲು ಹಿನ್ನಡೆಗಳನ್ನು ಎದುರಿಸುತ್ತಿದ್ದಾರೆ. ಅವರು ನಿರ್ಮಿಸಿದ ಸಿನಿಮಾಗಳು ಸೋಲು ಕಂಡಿದ್ದವು. ‘ಮಿಷನ್ ರಾಣಿಗಂಜ್’, ‘ಬಡೇ ಮಿಯಾ ಚೋಟೇ ಮಿಯಾ’ದಂತ ಸಿನಿಮಾಗಳು ಗಲ್ಲಾಪೆಟ್ಟಿಗೆಯಲ್ಲಿ ಭಾರೀ ಮುಖಭಂಗ ಅನುಭವಿಸಿತ್ತು.

ಇದನ್ನೂ ಓದಿ: ‘ಅಪ್ಪ-ಮಗನ ನಂಬಿ ಕೆಟ್ಟೆ’ 29 ಕೋಟಿ ನಷ್ಟ ಎಂದ ನಿರ್ಮಾಪಕ

ಈ ಸಿನಿಮಾದ ನಿರ್ಮಾಣದ ಸಮಯದಲ್ಲಿ ನಿರ್ದೇಶಕ ಅಲಿ ಅಬ್ಬಾಸ್ ಜಾಫರ್ ಜೊತೆ ವಾಶು ಭಗ್ನಾನಿ ವಿವಾದ ಮಾಡಿಕೊಂಡಿದ್ದರು. ಸಿನಿಮಾ ತಂತ್ರಜ್ಞರು ಹಾಗೂ ಸಿಬ್ಬಂದಿಗೆ ಸಂಭಾವನೆ ನೀಡದೇ ವಂಚಿಸಿದ್ದಾರೆ ಎಂಬ ಆರೋಪವೂ ಅವರ ಮೇಲಿದೆ. ಈಗ ಐಟಿ ರೇಡ್​ನಿಂದ ಅವರು ಒತ್ತಡಕ್ಕೆ ಒಳಗಾದರೇ ಎನ್ನುವ ಪ್ರಶ್ನೆ ಮೂಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

 

ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
Loading...
Unable to load recommendations.
Follow Us