AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಭೂಲ್ ಚುಕ್ ಮಾಫ್’ ಸಿನಿಮಾ ವಿರುದ್ಧ ಪಿವಿಆರ್ ದಾವೆ, 60 ಕೋಟಿ ಹಣಕ್ಕೆ ಬೇಡಿಕೆ

Bhool Chuk Maaf: ಭಾರತ ಮತ್ತು ಪಾಕಿಸ್ತಾನದ ನಡುವೆ ಯುದ್ಧದ ಪರಿಸ್ಥಿತಿ ನಿರ್ಮಾಣ ಆಗಿರುವ ಕಾರಣ ‘ಭೂಲ್ ಚುಕ್ ಮಾಫ್’ ಸಿನಿಮಾವನ್ನು ಚಿತ್ರಮಂದಿರದಲ್ಲಿ ಬಿಡುಗಡೆ ಮಾಡದೆ ನೇರವಾಗಿ ಒಟಿಟಿಗೆ ಬಿಡುಗಡೆ ಮಾಡಲಾಗಿತ್ತು. ಆದರೆ ಇದಕ್ಕೆ ವಿರೋಧ ವ್ಯಕ್ತಪಡಿಸಿರುವ ಪಿವಿಆರ್-ಐನಾಕ್ಸ್, ಸಿನಿಮಾದ ವಿರುದ್ಧ ದಾವೆ ಹೂಡಿದೆ.

‘ಭೂಲ್ ಚುಕ್ ಮಾಫ್’ ಸಿನಿಮಾ ವಿರುದ್ಧ ಪಿವಿಆರ್ ದಾವೆ, 60 ಕೋಟಿ ಹಣಕ್ಕೆ ಬೇಡಿಕೆ
Bhul Chuk Maaf
ಮಂಜುನಾಥ ಸಿ.
|

Updated on: May 10, 2025 | 2:59 PM

Share

ಭಾರತ-ಪಾಕಿಸ್ತಾನ ಗಡಿಯಲ್ಲಿ ಗಂಭೀರ ಪರಿಸ್ಥಿತಿ ಇದೆ. ಎರಡೂ ದೇಶಗಳ ನಡುವೆ ಯುದ್ಧದ (War) ಪರಿಸ್ಥಿತಿ ಇದೆ. ಭಾರತ ಹಾಗೂ ಪಾಕಿಸ್ತಾನಗಳು ಈಗಾಗಲೇ ವೈಮಾನಿಕ ದಾಳಿಯಲ್ಲಿ ಭಾಗಿಯಾಗಿವೆ. ಭಾರತದಲ್ಲಿ ನಾಗರೀಕರಿಗೆ ಯುದ್ಧದ ಎಚ್ಚರಿಕೆ ನೀಡಲಾಗಿದ್ದು, ಮಾಕ್​ ಡ್ರಿಲ್​ಗಳನ್ನು ಮಾಡಿಸಲಾಗುತ್ತಿದೆ. ಪರಿಸ್ಥತಿ ಗಂಭೀರವಾಗುತ್ತಿರುವ ಕಾರಣ ಕೆಲವು ಸಿನಿಮಾಗಳು ಚಿತ್ರಮಂದಿರದಲ್ಲಿ ಬಿಡುಗಡೆ ಮಾಡುವ ಬದಲಿಗೆ ನೇರವಾಗಿ ಒಟಿಟಿಗೆ ಬಿಡುಗಡೆ ಮಾಡುತ್ತಿವೆ. ಇತ್ತೀಚೆಗೆ ರಾಜ್​ಕುಮಾರ್ ನಟನೆಯ ‘ಭೂಲ್ ಚುಕ್ ಮಾಫ್’ ಸಿನಿಮಾವನ್ನು ನೇರವಾಗಿ ಒಟಿಟಿಗೆ ಬಿಡುಗಡೆ ಮಾಡಲಿರುವುದಾಗಿ ಘೋಷಿಸಲಾಯ್ತು, ಆದರೆ ಇದೀಗ ಪಿವಿಆರ್ ಸಿನಿಮಾದ ವಿರುದ್ಧ ದಾವೆ ಹೂಡಿಕೆ.

ರಾಜ್​ಕುಮಾರ್ ರಾವ್, ವಮಿಕಾ ಗಬ್ಬಿ ಇನ್ನೂ ಹಲವಾರು ಮಂದಿ ನಟಿಸಿರುವ ‘ಭೂಲ್ ಚುಕ್ ಮಾಫ್’ ಸಿನಿಮಾ ಮೇ 9 ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆ ಆಗಬೇಕಿತ್ತು. ಆದರೆ ಯುದ್ಧದ ಪರಿಸ್ಥಿತಿ ಇರುವ ಕಾರಣ ನೇರವಾಗಿ ಸಿನಿಮಾವನ್ನು ಅಮೆಜಾನ್ ಪ್ರೈಂನಲ್ಲಿ ಬಿಡುಗಡೆ ಮಾಡಲಾಗುತ್ತಿದೆ. ಮೇ 16ರಂದು ಸಿನಿಮಾ ಅಮೆಜಾನ್ ಪ್ರೈಂನಲ್ಲಿ ಬಿಡುಗಡೆ ಆಗಲಿದೆ.

ಆದರೆ ‘ಭೂಲ್ ಚುಕ್ ಮಾಫ್’ ಸಿನಿಮಾ ಈ ಮೊದಲೇ ಪಿವಿಆರ್ ಜೊತೆಗೆ ಒಪ್ಪಂದ ಮಾಡಿಕೊಂಡಿತ್ತು ಎನ್ನಲಾಗಿದ್ದು ಸಿನಿಮಾದ ಅಡ್ವಾನ್ಸ್ ಬುಕಿಂಗ್ ಸಹ ಪಿವಿಆರ್​-ಐನಾಕ್ಸ್​ನಲ್ಲಿ ಓಪನ್ ಆಗಿತ್ತು. ಆದರೆ ಅಡ್ವಾನ್ಸ್ ಬುಕಿಂಗ್​ಗೆ ಸೂಕ್ತ ಪ್ರತಿಕ್ರಿಯೆ ಬರದೇ ಇರುವ ಕಾರಣಕ್ಕೆ ‘ಭೂಲ್ ಚುಕ್ ಮಾಫ್’ ಸಿನಿಮಾವನ್ನು ಚಿತ್ರತಂಡ ಒಟಿಟಿಯಲ್ಲಿ ಬಿಡುಗಡೆ ಮಾಡುತ್ತಿದೆ ಎಂದು ಪಿವಿಆರ್ ಆರೋಪಿಸಿದ್ದು, ಬಾಂಬೆ ಹೈಕೋರ್ಟ್​ನಲ್ಲಿ ಸಿನಿಮಾದ ವಿರುದ್ಧ ದಾವೆ ಹೂಡಿದ್ದು, 60 ಕೋಟಿ ರೂಪಾಯಿ ನಷ್ಟಪರಿಹಾರಕ್ಕೆ ಒತ್ತಾಯಿಸಿದೆ.

ಇದನ್ನೂ ಓದಿ:ದೇಶ ಮೊದಲು, ಸಿನಿಮಾ ಕಾರ್ಯಕ್ರಮ ರದ್ದು ಮಾಡಿದ ಕಮಲ್ ಹಾಸನ್

ಸಿನಿಮಾಗಳು ಮೊದಲೇ ಮಲ್ಟಿಪ್ಲೆಕ್ಸ್​ಗಳ ಜೊತೆಗೆ ಒಪ್ಪಂದ ಮಾಡಿಕೊಂಡಿರುತ್ತವೆ. ಆದರೆ ಆ ಒಪ್ಪಂದದಲ್ಲಿ ಯುದ್ಧ ಮತ್ತು ನೈಸರ್ಗಿಕ ವಿಕೋಪದ ಸಂದರ್ಭದಲ್ಲಿ ಒಪ್ಪಂದ ಮುರಿದು ಬೀಳುತ್ತದೆ ಎಂಬ ಸಾಮಾನ್ಯ ಪಾಯಿಂಟ್ ಅನ್ನು ಸೇರಿಸುವ ಅವಕಾಶ ಇರುತ್ತದೆ. ಆದರೆ ‘ಭೂಲ್ ಚುಕ್ ಮಾಫ್’ ಸಿನಿಮಾದವರು ಮಾಡಿಕೊಂಡ ಒಪ್ಪಂದದಲ್ಲಿ ಈ ಪಾಯಿಂಟ್ ಇಲ್ಲದೇ ಇರುವ ಕಾರಣಕ್ಕೆ ಈಗ ಸಮಸ್ಯೆ ಎದುರಿಸುವಂತಾಗಿದೆ.

ಈಗ ‘ಭೂಲ್ ಚುಕ್ ಮಾಫ್’ ಚಿತ್ರತಂಡ ಒಟಿಟಿಯಲ್ಲಿಯೇ ಬಿಡುಗಡೆ ಮಾಡುತ್ತದೆಯೇ ಅಥವಾ ಪಿವಿಆರ್-ಐನಾಕ್ಸ್​ನಲ್ಲಿ ಬಿಡುಗಡೆ ಮಾಡುತ್ತದೆಯೇ ಕಾದು ನೋಡಬೇಕಿದೆ. ಅಥವಾ ನ್ಯಾಯಾಲಯದಲ್ಲಿ ಹೋರಾಟ ಮಾಡುತ್ತದೆಯೇ?

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ