ಸಾಮಾನ್ಯ ಪ್ರೇಕ್ಷಕನಂತೆ ಥಿಯೇಟರ್‌ಗೆ ಬಂದು ‘ಧುರಂಧರ್ 2’ ನೋಡಿದ ಆರ್. ಮಾಧವನ್

ಮುಂಬೈನಲ್ಲಿ ನಟ ಆರ್. ಮಾಧವನ್ ಅವರು ‘ಧುರಂಧರ್ 2’ ಸಿನಿಮಾ ವೀಕ್ಷಿಸಿದ್ದಾರೆ. ಅಭಿಮಾನಿಗಳ ಜೊತೆಯಲ್ಲಿ ಕುಳಿತು ಅವರು ಚಿತ್ರವನ್ನು ಎಂಜಾಯ್ ಮಾಡಿದ್ದಾರೆ. ತಮ್ಮ ಸಿನಿಮಾಗೆ ಪ್ರೇಕ್ಷಕರು ಹೇಗೆ ಪ್ರತಿಕ್ರಿಯಿಸುತ್ತಿದ್ದಾರೆ ಎಂದು ಅವರು ಖುದ್ದಾಗಿ ಬಂದು ಗಮನಿಸಿದ್ದಾರೆ. ಚಿತ್ರಮಂದಿರದಲ್ಲಿ ಕುಳಿತ ಆರ್. ಮಾಧವನ್ ಅವರ ಫೋಟೋ ವೈರಲ್ ಆಗಿದೆ.

ಸಾಮಾನ್ಯ ಪ್ರೇಕ್ಷಕನಂತೆ ಥಿಯೇಟರ್‌ಗೆ ಬಂದು ‘ಧುರಂಧರ್ 2’ ನೋಡಿದ ಆರ್. ಮಾಧವನ್
R Madhavan

Updated on: Apr 03, 2026 | 5:54 PM

ಬಾಲಿವುಡ್‌ನ ಖ್ಯಾತ ನಟ ಆರ್. ಮಾಧವನ್ ಅವರು ಈಗ ‘ಧುರಂಧರ್: ದಿ ರಿವೇಂಜ್’ (Dhurandhar The Revenge) ಸಿನಿಮಾದ ಭರ್ಜರಿ ಯಶಸ್ಸಿನ ಅಲೆಯಲ್ಲಿ ತೇಲುತ್ತಿದ್ದಾರೆ. ಈ ಚಿತ್ರಕ್ಕೆ ಪ್ರೇಕ್ಷಕರಿಂದ ಸಿಗುತ್ತಿರುವ ಪ್ರತಿಕ್ರಿಯೆಯನ್ನು ಖುದ್ದಾಗಿ ನೋಡಲು ಮಾಧವನ್ (R Madhavan) ಅವರು ಯಾರಿಗೂ ಗೊತ್ತಾಗದಂತೆ ಮುಂಬೈನ ಚಿತ್ರಮಂದಿರವೊಂದಕ್ಕೆ ಭೇಟಿ ನೀಡಿದ್ದಾರೆ. ಈ ಸಿನಿಮಾದಲ್ಲಿ ಅವರು ಒಂದು ಪ್ರಮುಖ ಪಾತ್ರವನ್ನು ಮಾಡಿದ್ದಾರೆ. ಅವರ ಅಭಿನಯಕ್ಕೆ ಅಭಿಮಾನಿಗಳಿಂದ ಮೆಚ್ಚುಗೆ ಸಿಕ್ಕಿದೆ.

ಚಿತ್ರಮಂದಿರದಲ್ಲಿ ಸಾಮಾನ್ಯ ಪ್ರೇಕ್ಷಕರಂತೆ ಯಾರಿಗೂ ಗುರುತು ಸಿಗದ ರೀತಿಯಲ್ಲಿ ಕುಳಿತು ಆರ್. ಮಾಧವನ್ ಅವರು ‘ಧುರಂಧರ್ 2’ ಸಿನಿಮಾವನ್ನು ವೀಕ್ಷಿಸಿದ್ದಾರೆ. ಅಭಿಮಾನಿಗಳ ಶಿಳ್ಳೆ, ಚಪ್ಪಾಳೆ ಮತ್ತು ಸಿನಿಮಾದ ಸನ್ನಿವೇಶಗಳಿಗೆ ಪ್ರೇಕ್ಷಕರು ನೀಡುವ ಪ್ರತಿಕ್ರಿಯೆಯನ್ನು ಕಂಡು ಮಾಧವನ್ ಸಂಭ್ರಮಿಸಿದ್ದಾರೆ. ಬಾಕ್ಸ್ ಆಫೀಸ್​ನಲ್ಲಿ ಈ ಸಿನಿಮಾ ಸಾವಿರಾರು ಕೋಟಿ ರೂಪಾಯಿ ಕಲೆಕ್ಷನ್ ಮಾಡಿದೆ.

ಈ ಕುರಿತ ವಿಡಿಯೋವನ್ನು ಪ್ರಸಿದ್ಧ ಚಿತ್ರ ಪ್ರದರ್ಶಕ ಅಕ್ಷಯ್ ರಾಠಿ ಅವರು ತಮ್ಮ ಇನ್‌ಸ್ಟಾಗ್ರಾಮ್ ಸ್ಟೋರೀಸ್‌ನಲ್ಲಿ ಹಂಚಿಕೊಂಡಿದ್ದಾರೆ. ವಿಡಿಯೋದಲ್ಲಿ ಮಾಧವನ್ ಅವರು ಅತ್ಯಂತ ಸರಳವಾಗಿ ಕುಳಿತು ಸಿನಿಮಾವನ್ನು ಎಂಜಾಯ್ ಮಾಡುತ್ತಿರುವುದನ್ನು ಕಾಣಬಹುದು.

ಅಕ್ಷಯ್ ರಾಠಿ ಅವರು ಮಾಧವನ್ ಅವರ ಫೋಟೋ ಹಂಚಿಕೊಂಡು, ಸಿನಿಮಾದಲ್ಲಿನ ಅವರ ಪಾತ್ರವನ್ನು ಉಲ್ಲೇಖಿಸಿ ತಮಾಷೆಯಾಗಿ ಬರೆದುಕೊಂಡಿದ್ದಾರೆ. ‘ISI ಏನೇ ಪ್ಲಾನ್ ಮಾಡಲಿ, ಅಜಯ್ ಸನ್ಯಾಲ್ (ಮಾಧವನ್ ಪಾತ್ರದ ಹೆಸರು) ಕಣ್ಣು ಸದಾ ಅವರ ಮೇಲೆ ಇರುತ್ತದೆ ಎಂದು ಅವರಿಗೆ ತಿಳಿಸಿ’ ಎಂದು ಕಿಚಾಯಿಸಿದ್ದಾರೆ. ನಂತರ ಮಾಧವನ್ ಅವರೊಂದಿಗೆ ತೆಗೆಸಿಕೊಂಡ ಫೋಟೋವನ್ನು ಹಂಚಿಕೊಂಡು ತಮ್ಮ ಅನುಭವವನ್ನು ತಿಳಿಸಿದ್ದಾರೆ.

ಇದನ್ನೂ ಓದಿ: ‘ಧುರಂಧರ್ 2’ ಬಳಿಕ ಮತ್ತೊಂದು ಬ್ಲಾಕ್ ಬಸ್ಟರ್ ನಿರೀಕ್ಷೆಯಲ್ಲಿ ಸಂಜಯ್ ದತ್

ಮಾರ್ಚ್ 19ರಂದು ಬಿಡುಗಡೆ ಆದ ‘ಧುರಂಧರ್ 2’ ಸಿನಿಮಾಗೆ ಆದಿತ್ಯ ಧರ್ ನಿರ್ದೇಶನ ಮಾಡಿದ್ದಾರೆ. ಇದು ‘ಧುರಂಧರ್’ ಚಿತ್ರದ ಸೀಕ್ವೆಲ್ ಆಗಿದ್ದು, ಎಲ್ಲ ಕಡೆಗಳಲ್ಲಿ ಹೌಸ್​ಪುಲ್ ಪ್ರದರ್ಶನ ಕಂಡಿದೆ. ಇದರಿಂದಾಗಿ ಬಾಕ್ಸ್ ಆಫೀಸ್‌ನಲ್ಲಿ ಹೊಸ ದಾಖಲೆ ಬರೆದಿದೆ. ಅಜಯ್ ಸನ್ಯಾಲ್ ಆಗಿ ಆರ್. ಮಾಧವನ್ ನಟಿಸಿದ್ದಾರೆ. ಜನರಿಂದ ಈ ಪರಿ ಪ್ರತಿಕ್ರಿಯೆ ಸಿಕ್ಕಿರುವುದಕ್ಕೆ ಅವರು ಖುಷಿ ಆಗಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
Follow Us