AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್​ ಕುಂದ್ರಾ ಅವರನ್ನು ಕ್ಷಮಿಸಿದ್ರಾ ಶಿಲ್ಪಾ? ವಿಚ್ಛೇದನ ವದಂತಿಗೆ ಕೊನೆಗೂ ಬಿತ್ತು ಬ್ರೇಕ್​

ಶಿಲ್ಪಾ-ರಾಜ್​ ಮಕ್ಕಳು ಈಗಿನ್ನೂ ಸಣ್ಣವರು. ಮುಂದೆ ಅವರ ಭವಿಷ್ಯ ಉತ್ತಮವಾಗಿರಬೇಕು ಎಂದಾದರೆ, ಪತಿಯಿಂದ ದೂರ ಉಳಿಯಲೇಬೇಕಾದ ಅನಿವಾರ್ಯತೆ ಶಿಲ್ಪಾಗೆ ಎದುರಾಗಿದೆ ಎಂದು ವರದಿ ಆಗಿತ್ತು.

ರಾಜ್​ ಕುಂದ್ರಾ ಅವರನ್ನು ಕ್ಷಮಿಸಿದ್ರಾ ಶಿಲ್ಪಾ? ವಿಚ್ಛೇದನ ವದಂತಿಗೆ ಕೊನೆಗೂ ಬಿತ್ತು ಬ್ರೇಕ್​
ಶಿಲ್ಪಾ ಶೆಟ್ಟಿ-ರಾಜ್​ ಕುಂದ್ರಾ
TV9 Web
| Edited By: |

Updated on:Nov 09, 2021 | 7:46 PM

Share

ಶಿಲ್ಪಾ ಶೆಟ್ಟಿ (Shilpa Shetty)  ಪತಿ ರಾಜ್​ ಕುಂದ್ರಾ (Raj Kundra) ಅಶ್ಲೀಲ ಸಿನಿಮಾ ನಿರ್ಮಾಣ ಪ್ರಕರಣದಲ್ಲಿ ಸಿಲುಕಿದ್ದರು. ಸದ್ಯ, ಜಾಮೀನು ಪಡೆದು ಜೈಲಿನಿಂದ ಹೊರ ಬಂದಿದ್ದಾರೆ. ಈ ಪ್ರಕರಣ ಶಿಲ್ಪಾ ಕುಟುಂಬಕ್ಕೆ ಸಾಕಷ್ಟು ಮುಜುಗರ ತಂದಿತ್ತು. ಆರಂಭದಲ್ಲಿ ಶಿಲ್ಪಾ ಸೋಶಿಯಲ್​ ಮೀಡಿಯಾದಿಂದ ಕೆಲ ದಿನ ದೂರ ಉಳಿದಿದ್ದರು. ನಂತರ ಅವರು ಮತ್ತೆ ಸೋಶಿಯಲ್​ ಮೀಡಿಯಾದಲ್ಲಿ ಆ್ಯಕ್ಟೀವ್​ ಆಗಿದ್ದಾರೆ. ಆದರೆ, ಪತಿ ಜತೆ ಅವರು ಎಂದಿಗೂ ಕಾಣಿಸಿಕೊಂಡಿರಲಿಲ್ಲ. ಹೀಗಾಗಿ, ವಿಚ್ಛೇದನ (Divorce) ಪಡೆಯುತ್ತಾರೆ ಎನ್ನುವ ಸುದ್ದಿ ಹರಿದಾಡಿತ್ತು. ಆದರೆ, ಇದನ್ನು ಶಿಲ್ಪಾ ಸುಳ್ಳು ಮಾಡಿದ್ದಾರೆ. ಪತಿ ರಾಜ್​ ಕುಂದ್ರಾ ಜತೆಗೆ ಅವರು ಇದೇ ಮೊದಲ ಬಾರಿಗೆ ಒಟ್ಟಾಗಿ ಕಾಣಿಸಿಕೊಂಡಿದ್ದಾರೆ. ಈ ಮೂಲಕ ಎಲ್ಲಾ ವದಂತಿಗೆ ಬ್ರೇಕ್​ ಹಾಕಿದ್ದಾರೆ. ರಾಜ್​ ಕುಂದ್ರಾ ಅವರನ್ನು ಶಿಲ್ಪಾ ಕ್ಷಮಿಸಿದರಾ ಎನ್ನುವ ಪ್ರಶ್ನೆ ಮೂಡಿದೆ.

ಶಿಲ್ಪಾ ಶೆಟ್ಟಿ ಹಾಗೂ ರಾಜ್​ ಕುಂದ್ರಾ ಇತ್ತೀಚೆಗೆ ಒಟ್ಟಾಗಿ ಕಾಣಿಸಿಕೊಂಡಿರಲಿಲ್ಲ. ಶಿಲ್ಪಾ-ರಾಜ್​ ಮಕ್ಕಳು ಈಗಿನ್ನೂ ಸಣ್ಣವರು. ಮುಂದೆ ಅವರ ಭವಿಷ್ಯ ಉತ್ತಮವಾಗಿರಬೇಕು ಎಂದಾದರೆ, ಪತಿಯಿಂದ ದೂರ ಉಳಿಯಲೇಬೇಕಾದ ಅನಿವಾರ್ಯತೆ ಶಿಲ್ಪಾಗೆ ಎದುರಾಗಿದೆ ಎಂದು ವರದಿ ಆಗಿತ್ತು. ಆದರೆ, ಈಗ ಅದು ಸುಳ್ಳಾಗಿದೆ. ಶಿಲ್ಪಾ ಅವರು ಪತಿ ರಾಜ್​ ಕುಂದ್ರಾ ಜತೆ ಹಿಮಾಚಲ ಪ್ರದೇಶದ ಧರ್ಮಶಾಲಾದ ದೇವಸ್ಥಾನಕ್ಕೆ ತೆರಳಿದ್ದಾರೆ. ಈ ಫೋಟೋ, ಹಾಗೂ ವಿಡಿಯೋಗಳು ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗಿದೆ.

ರಾಜ್​ ಕುಂದ್ರಾ ಅವರನ್ನು ಜುಲೈ 19ರಂದು ಬಂಧಿಸಲಾಗಿತ್ತು. ರಾಜ್​ ಕುಂದ್ರಾ ವಿರುದ್ಧ ಮಾಡೆಲ್​, ನಟಿ ಶೆರ್ಲಿನ್​ ಚೋಪ್ರಾ ಗಂಭೀರ ಆರೋಪ ಮಾಡಿದ್ದರು. ಸಿನಿಮಾ ಆಫರ್​ ಕೊಡುವುದಾಗಿ ನಂಬಿಸಿ ರಾಜ್​ ಕುಂದ್ರಾ ಮೋಸ ಮಾಡಿದ್ದರು. ತಮ್ಮನ್ನು ಬೆತ್ತಲೆಯಾಗಿ ಚಿತ್ರೀಕರಿಸಲಾಗಿತ್ತು ಎಂದು ಅವರು ಆರೋಪಿಸಿದ್ದರು. ಈ ಆರೋಪದಿಂದ ರಾಜ್​ಗೆ ಮತ್ತಷ್ಟು ತೊಂದರೆ ಎದುರಾಗಿತ್ತು. ಸೆಪ್ಟೆಂಬರ್​ನಲ್ಲಿ ಅವರಿಗೆ ಜಾಮೀನು ಸಿಕ್ಕಿತ್ತು. ಇದಾದ ನಂತರ ಅವರು ಮನೆಯಿಂದ ಹೊರಗೆ ಕಾಣಿಸಿಕೊಂಡಿರಲಿಲ್ಲ.

ಇದನ್ನೂ ಓದಿ: ‘ನನಗೆ 75 ಕೋಟಿ ರೂಪಾಯಿ ನೀಡಿ’; ಶಿಲ್ಪಾ ಶೆಟ್ಟಿಗೆ ಶೆರ್ಲಿನ್ ಕಡೆಯಿಂದ ಬಂತು ಹೊಸ ಆಗ್ರಹ

Shilpa Shetty: ಸಾಮಾಜಿಕ ಜಾಲತಾಣಗಳಿಂದ ರಾಜ್ ಕುಂದ್ರಾ ಹೊರ ನಡೆದ ಬೆನ್ನಲ್ಲೇ ಕುತೂಹಲ ಹುಟ್ಟಿಸಿದ ಶಿಲ್ಪಾ ಪೋಸ್ಟ್

Published On - 7:43 pm, Tue, 9 November 21

Follow Us
RSS, ಬಿಜೆಪಿ ಹಿಂದೂ ರಾಷ್ಟ್ರ ಮಾಡಲು ಹೊರಟಿಲ್ಲ, ಈಗಾಗಲೇ ಇದೆ: ಜೋಶಿ
RSS, ಬಿಜೆಪಿ ಹಿಂದೂ ರಾಷ್ಟ್ರ ಮಾಡಲು ಹೊರಟಿಲ್ಲ, ಈಗಾಗಲೇ ಇದೆ: ಜೋಶಿ
ಆರ್​ಎಸ್​ಎಸ್​ನವರು ಪುಕ್ಕಲರು, ಧೈರ್ಯವೇ ಇಲ್ಲ ಎಂದ ಹರಿಪ್ರಸಾದ್!
ಆರ್​ಎಸ್​ಎಸ್​ನವರು ಪುಕ್ಕಲರು, ಧೈರ್ಯವೇ ಇಲ್ಲ ಎಂದ ಹರಿಪ್ರಸಾದ್!
ಇನ್ಮುಂದೆ ನನ್ನನ್ನು ಕೊನೆಯ ಭಾಷಣಕಾರನನ್ನಾಗಿ ಮಾಡಬೇಡಿ ಎಂದ ಸಿದ್ದರಾಮಯ್ಯ
ಇನ್ಮುಂದೆ ನನ್ನನ್ನು ಕೊನೆಯ ಭಾಷಣಕಾರನನ್ನಾಗಿ ಮಾಡಬೇಡಿ ಎಂದ ಸಿದ್ದರಾಮಯ್ಯ
ನೀಟ್ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ಚೈನ್, ಮೂಗುತಿಗೆ ಕತ್ತರಿ
ನೀಟ್ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ಚೈನ್, ಮೂಗುತಿಗೆ ಕತ್ತರಿ
ಅಖಂಡ ಶ್ರೀನಿವಾಸಮೂರ್ತಿ ಘರ್ ವಾಪ್ಸಿ: ಯಾವ ಕ್ಷೇತ್ರದ ಟಿಕೆಟ್ ಆಕಾಂಕ್ಷಿ?
ಅಖಂಡ ಶ್ರೀನಿವಾಸಮೂರ್ತಿ ಘರ್ ವಾಪ್ಸಿ: ಯಾವ ಕ್ಷೇತ್ರದ ಟಿಕೆಟ್ ಆಕಾಂಕ್ಷಿ?
ಹರಿಪ್ರಸಾದ್​​​ಗೆ ಖರ್ಗೆ ಕೊಟ್ಟ ಸಲಹೆಗಳೇನು?
ಹರಿಪ್ರಸಾದ್​​​ಗೆ ಖರ್ಗೆ ಕೊಟ್ಟ ಸಲಹೆಗಳೇನು?
ಗಿಲ್ಲಿ ನಟನ ಮೊದಲ ಸಿನಿಮಾಕ್ಕೆ ಕಾವೂನೇ ನಾಯಕಿ: ಗಿಲ್ಲಿ ಹೇಳಿದ್ದೇನು?
ಗಿಲ್ಲಿ ನಟನ ಮೊದಲ ಸಿನಿಮಾಕ್ಕೆ ಕಾವೂನೇ ನಾಯಕಿ: ಗಿಲ್ಲಿ ಹೇಳಿದ್ದೇನು?
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್​​​ಗೆ ಪಟ್ಟಾಭಿಷೇಕ
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್​​​ಗೆ ಪಟ್ಟಾಭಿಷೇಕ
ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್
ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್
ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!
ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!