ಶನಿವಾರ ನಡೆಯಲಿದೆ ರಾಜ್​ಕುಂದ್ರಾ ಜಾಮೀನು ಅರ್ಜಿ ವಿಚಾರಣೆ; ಶೆರ್ಲಿನ್​ ನಿರೀಕ್ಷಣಾ ಜಾಮೀನು ಅರ್ಜಿ ವಜಾ

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವರನ್ನು ತನಿಖೆಗೆ ಒಳಪಡಿಸಲಾಗುತ್ತಿದೆ.  ಹೀಗಾಗಿ, ರಾಜ್​ ಕುಂದ್ರಾಗೆ ನ್ಯಾಯಾಲಯ 14 ದಿನಗಳ ನ್ಯಾಯಾಂಗ ಬಂಧನವಿಧಿಸಿತ್ತು.

ಶನಿವಾರ ನಡೆಯಲಿದೆ ರಾಜ್​ಕುಂದ್ರಾ ಜಾಮೀನು ಅರ್ಜಿ ವಿಚಾರಣೆ; ಶೆರ್ಲಿನ್​ ನಿರೀಕ್ಷಣಾ ಜಾಮೀನು ಅರ್ಜಿ ವಜಾ
ರಾಜ್​ ಕುಂದ್ರಾ- ಶೆರ್ಲಿನ್​ ಚೋಪ್ರಾ

ಅಶ್ಲೀಲ ಸಿನಿಮಾ ನಿರ್ಮಾಣದ ಆರೋಪದಲ್ಲಿ ಬಂಧನಕ್ಕೆ ಒಳಗಾಗಿರುವುದನ್ನು ಪ್ರಶ್ನಿಸಿ ಶಿಲ್ಪಾಶೆಟ್ಟಿ ಪತಿ ರಾಜ್​ಕುಂದ್ರಾ  ಸಲ್ಲಿಸಿದ್ದ ಅರ್ಜಿಯನ್ನು ಮುಂಬೈ ಹೈಕೋರ್ಟ್​ ಶನಿವಾರ ವಿಚಾರಣೆ ಮಾಡಲಿದೆ.  ಈ ಪ್ರಕರಣಕ್ಕೆ ಸಂಬಂಧಿಸಿ ಶೆರ್ಲಿನ್ ಚೋಪ್ರಾ ಸಲ್ಲಿಸಿದ್ದ​ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಕೋರ್ಟ್​ ವಜಾ ಮಾಡಿದೆ. 

ರಾಜ್​ ಕುಂದ್ರಾ ಅಶ್ಲೀಲ ಸಿನಿಮಾ ಮಾಡುತ್ತಿದ್ದರು ಎಂಬುದಕ್ಕೆ ಪೊಲೀಸರ ಬಳಿ ಹಲವು ಸಾಕ್ಷಿ ಇವೆ ಎನ್ನಲಾಗಿದೆ. ಆದರೆ ತನಿಖೆಗೆ ರಾಜ್​ ಕುಂದ್ರಾ ಸೂಕ್ತ ರೀತಿಯಲ್ಲಿ ಸಹಕರಿಸುತ್ತಿಲ್ಲ ಎಂಬ ಹಿನ್ನೆಲೆಯಲ್ಲಿ ವಿಚಾರಣೆ ಅವಧಿ ವಿಸ್ತರಣೆ ಅನಿವಾರ್ಯವಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವರನ್ನು ತನಿಖೆಗೆ ಒಳಪಡಿಸಲಾಗುತ್ತಿದೆ.  ಹೀಗಾಗಿ, ರಾಜ್​ ಕುಂದ್ರಾಗೆ ನ್ಯಾಯಾಲಯ 14 ದಿನಗಳ ನ್ಯಾಯಾಂಗ ಬಂಧನವಿಧಿಸಿತ್ತು.

ಇದನ್ನು ರಾಜ್​ ಕುಂದ್ರಾ ಪರ ವಕೀಲರು ಎಸ್‍ಪ್ಲನೇಡ್ ನ್ಯಾಯಾಲಯದಲ್ಲಿ ಪ್ರಶ್ನಿಸಿದ್ದರು. ‘ಈ ಪ್ರಕರಣದಲ್ಲಿ ಸಿಲುಕಿದ ಅನೇಕರಿಗೆ ಜಾಮೀನು ಸಿಕ್ಕಿದೆ. ರಾಜ್​ ಕುಂದ್ರಾ ಅವರು ತನಿಖೆಗೆ ಸಹಕರಿಸುತ್ತಿದ್ದಾರೆ. ಆದಾಗ್ಯೂ, ಅವರಿಗೆ ಜಾಮೀನು ಏಕೆ ನೀಡುತ್ತಿಲ್ಲ’ ಎಂದು ಕುಂದ್ರಾ ವಕೀಲರು ಕೇಳಿದರು. ಆದರೆ, ಇದನ್ನು ನ್ಯಾಯಾಲಯ ತಳ್ಳಿ ಹಾಕಿದೆ. ‘ರಾಜ್​ ಕುಂದ್ರಾ ಪ್ರಭಾವಿ ವ್ಯಕ್ತಿಯಾಗಿದ್ದು ಸಾಕ್ಷ್ಯಗಳನ್ನು ನಾಶ ಮಾಡುವ ಸಾಧ್ಯತೆ ಇದೆ’ ಎಂದು ನ್ಯಾಯಾಧೀಶರು ಅಭಿಪ್ರಾಯಪಟ್ಟಿದ್ದರು. ಈಗ ಮುಂಬೈ ಹೈಕೋರ್ಟ್​ನಲ್ಲಿ ಅವರ ಜಾಮೀನು ಅರ್ಜಿ ಇಂದು ವಿಚಾರಣೆಗೆ ಬರಬೇಕಿತ್ತು. ಆದರೆ, ಇಂದಿನ ಕೋರ್ಟ್​ ಅವಧಿ ಮುಗಿದ ಕಾರಣ, ಅರ್ಜಿ ವಿಚಾರಣೆ ಶನಿವಾರಕ್ಕೆ ಮುಂದೂಡಲ್ಪಟ್ಟಿದೆ.

ಶೆರ್ಲಿನ್​ ನಿರೀಕ್ಷಣಾ ಜಾಮೀನು ಅರ್ಜಿ ವಜಾ:

ನಟಿ ಶೆರ್ಲಿನ್​ ಚೋಪ್ರಾ ಅವರು ರಾಜ್​ ಕುಂದ್ರಾ ಬಗ್ಗೆ ಕೆಲವು ಗಂಭೀರ ಆರೋಪಗಳನ್ನು ಮಾಡಿದ್ದಾರೆ. ಶಿಲ್ಪಾ ಶೆಟ್ಟಿಗೆ ಆಘಾತ ಮೂಡಿಸುವಂತಹ ಕೆಲವು ಮಾಹಿತಿಯನ್ನು ಶೆರ್ಲಿನ್​ ಚೋಪ್ರಾ ಬಹಿರಂಗಪಡಿಸಿದ್ದಾರೆ. ರಾಜ್ ಕುಂದ್ರಾ ಜೊತೆ ಸಂಪರ್ಕ ಹೊಂದಿದ್ದ ಕಾರಣಕ್ಕಾಗಿ ಶರ್ಲಿನ್​ ಚೋಪ್ರಾ ಅವರಿಗೂ ಬಂಧನದ ಭಯ ಕಾಡುತ್ತಿದೆ. ಹಾಗಾಗಿ ಅವರು ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಕೆ ಮಾಡಿದ್ದರು. ಆದರೆ, ಇದನ್ನು ನ್ಯಾಯಾಲಯ ರಿಜೆಕ್ಟ್​ ಮಾಡಿದೆ.

ಇದನ್ನೂ ಓದಿ: ರಾಜ್​ ಕುಂದ್ರಾ ಕಾಮಕ್ಕೆ ಹೆದರಿ ಶೌಚಾಲಯದಲ್ಲಿ ಅಡಗಿಕೊಂಡಿದ್ದ ನಟಿ; ಪೊಲೀಸ್​ ದೂರಿನಲ್ಲಿ ರಹಸ್ಯ ಬಹಿರಂಗ

Click on your DTH Provider to Add TV9 Kannada