ರಾಜ್​ ಕುಂದ್ರಾಗೆ ಮತ್ತೊಂದು ಸಂಕಷ್ಟ; ಕೋರ್ಟ್​ನಿಂದ ಮಹತ್ವದ ಆದೇಶ

Raj Kundra: ರಾಜ್​ ಕುಂದ್ರಾ ಅಶ್ಲೀಲ ಸಿನಿಮಾ ಮಾಡುತ್ತಿದ್ದರು ಎಂಬುದಕ್ಕೆ ಪೊಲೀಸರ ಬಳಿ ಹಲವು ಸಾಕ್ಷಿ ಇವೆ ಎನ್ನಲಾಗಿದೆ. ಆದರೆ ತನಿಖೆಗೆ ರಾಜ್​ ಕುಂದ್ರಾ ಸೂಕ್ತ ರೀತಿಯಲ್ಲಿ ಸಹಕರಿಸುತ್ತಿಲ್ಲ ಎಂಬ ಹಿನ್ನೆಲೆಯಲ್ಲಿ ವಿಚಾರಣೆ ಅವಧಿ ವಿಸ್ತರಣೆ ಅನಿವಾರ್ಯವಾಗಿತ್ತು.

ರಾಜ್​ ಕುಂದ್ರಾಗೆ ಮತ್ತೊಂದು ಸಂಕಷ್ಟ; ಕೋರ್ಟ್​ನಿಂದ ಮಹತ್ವದ ಆದೇಶ
ರಾಜ್​ ಕುಂದ್ರಾ
Follow us
TV9 Web
| Updated By: Digi Tech Desk

Updated on:Jul 29, 2021 | 9:16 AM

ಅಶ್ಲೀಲ ಸಿನಿಮಾ ನಿರ್ಮಾಣದ ಆರೋಪದಲ್ಲಿ ಸಿಕ್ಕಿ ಬಿದ್ದಿರುವ ಶಿಲ್ಪಾ ಶೆಟ್ಟಿ (Shilpa Shetty) ಪತಿ ರಾಜ್ ಕುಂದ್ರಾಗೆ ಸಂಕಷ್ಟ ಹೆಚ್ಚಿದೆ. ಮಂಗಳವಾರ (ಜು.27) ವಿಚಾರಣೆ ನಡೆಸಿ, ಅವರನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಲ್ಲಿ (Judicial Custody) ಇರಿಸಲು ಆದೇಶಿಸಲಾಗಿತ್ತು. ಇದಾದ ಬೆನ್ನಲ್ಲೇ ಬುಧವಾರ (ಜುಲೈ 28) ಅವರ ಜಾಮೀನು ಅರ್ಜಿಯನ್ನು ಮುಂಬೈ ಎಸ್‍ಪ್ಲನೇಡ್​ ನ್ಯಾಯಾಲಯ ವಜಾ ಮಾಡಿದೆ.

ರಾಜ್​ ಕುಂದ್ರಾ ಅಶ್ಲೀಲ ಸಿನಿಮಾ ಮಾಡುತ್ತಿದ್ದರು ಎಂಬುದಕ್ಕೆ ಪೊಲೀಸರ ಬಳಿ ಹಲವು ಸಾಕ್ಷಿ ಇವೆ ಎನ್ನಲಾಗಿದೆ. ಆದರೆ ತನಿಖೆಗೆ ರಾಜ್​ ಕುಂದ್ರಾ ಸೂಕ್ತ ರೀತಿಯಲ್ಲಿ ಸಹಕರಿಸುತ್ತಿಲ್ಲ ಎಂಬ ಹಿನ್ನೆಲೆಯಲ್ಲಿ ವಿಚಾರಣೆ ಅವಧಿ ವಿಸ್ತರಣೆ ಅನಿವಾರ್ಯವಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವರನ್ನು ತನಿಖೆಗೆ ಒಳಪಡಿಸಲಾಗುತ್ತಿದೆ.  ಹೀಗಾಗಿ, ರಾಜ್​ ಕುಂದ್ರಾಗೆ ನ್ಯಾಯಾಲಯ 14 ದಿನಗಳ ನ್ಯಾಯಾಂಗ ಬಂಧನವಿಧಿಸಿದೆ.

ಇದನ್ನು ರಾಜ್​ ಕುಂದ್ರಾ ಪರ ವಕೀಲರು ನ್ಯಾಯಾಲಯದಲ್ಲಿ ಪ್ರಶ್ನಿಸಿದ್ದಾರೆ. ‘ಈ ಪ್ರಕರಣದಲ್ಲಿ ಸಿಲುಕಿದ ಅನೇಕರಿಗೆ ಜಾಮೀನು ಸಿಕ್ಕಿದೆ. ರಾಜ್​ ಕುಂದ್ರಾ ಅವರು ತನಿಖೆಗೆ ಸಹಕರಿಸುತ್ತಿದ್ದಾರೆ. ಆದಾಗ್ಯೂ, ಅವರಿಗೆ ಜಾಮೀನು ಏಕೆ ನೀಡುತ್ತಿಲ್ಲ’ ಎಂದು ಕುಂದ್ರಾ ವಕೀಲರು ಕೇಳಿದರು. ಆದರೆ, ಇದನ್ನು ನ್ಯಾಯಾಲಯ ತಳ್ಳಿ ಹಾಕಿದೆ. ‘ರಾಜ್​ ಕುಂದ್ರಾ ಪ್ರಭಾವಿ ವ್ಯಕ್ತಿಯಾಗಿದ್ದು ಸಾಕ್ಷ್ಯಗಳನ್ನು ನಾಶ ಮಾಡುವ ಸಾಧ್ಯತೆ ಇದೆ’ ಎಂದು ನ್ಯಾಯಾಧೀಶರು ಅಭಿಪ್ರಾಯಪಟ್ಟರು.

ರಾಜ್​ ಕುಂದ್ರಾ ಅವರು ಈ ಬೆಳವಣಿಗೆಯನ್ನು ಪ್ರಶ್ನಿಸಿ ಮುಂಬೈ ಹೈಕೋರ್ಟ್​ನಲ್ಲಿ ಅರ್ಜಿ ಸಲ್ಲಿಕೆ ಮಾಡಿದ್ದಾರೆ. ಇದು ಜುಲೈ 29ರಂದು ವಿಚಾರಣೆಗೆ ಬರಲಿದೆ.

ನೀಲಿ ಚಿತ್ರ ದಂಧೆಗೆ ಸಂಬಂಧಿಸಿದಂತೆ ರಾಜ್​ ಕುಂದ್ರಾ ಮತ್ತು ಉಮೇಶ್​ ಕಾಮತ್ ಎಂಬುವವರ ನಡುವೆ ವಾಟ್ಸ್​ಆ್ಯಪ್​ ಚಾಟ್​ ನಡೆದಿತ್ತು. ಅದರಲ್ಲಿ ನಟಿ ಪ್ಲೋರಾ ಸೈನಿ ಬಗ್ಗೆಯೂ ಪ್ರಸ್ತಾಪ ಮಾಡಲಾಗಿತ್ತು ಎಂಬ ವಿಚಾರ ಈಗ ಬೆಳಕಿಗೆ ಬಂದಿದೆ. ಆದರೆ ರಾಜ್​ ಕುಂದ್ರಾ ಅವರ ಅಶ್ಲೀಲ ಸಿನಿಮಾ ದಂಧೆಗೂ ತಮಗೂ ಯಾವುದೇ ಸಂಬಂಧ ಇಲ್ಲ ಎಂದು ಫ್ಲೋರಾ ಸೈನಿ ಸ್ಪಷ್ಟನೆ ನೀಡಿದ್ದಾರೆ.

ಹಲವು ಆಯಾಮಗಳಿಂದ ಈ ಪ್ರಕರಣವನ್ನು ತನಿಖೆ ಮಾಡಲಾಗುತ್ತಿದೆ. ಮುಂಬೈನಲ್ಲಿರುವ ಶಿಲ್ಪಾ ಶೆಟ್ಟಿ ಅವರ ಮನೆ ಮೇಲೆ ಪೊಲೀಸರು ದಾಳಿ ಮಾಡಿ ಕೆಲವು ಸಾಕ್ಷ್ಯ ಸಂಗ್ರಹಿಸಿದ್ದಾರೆ. ಪೊಲೀಸರ ಜೊತೆ ಮನೆಗೆ ಬಂದ ರಾಜ್​ ಕುಂದ್ರಾ ಎದುರು ಶಿಲ್ಪಾ ಶೆಟ್ಟಿ ಕಣ್ಣೀರಿಟ್ಟು ರಂಪಾಟ ಮಾಡಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: Breaking News: ಅಶ್ಲೀಲ ಸಿನಿಮಾ ಕೇಸ್​: ಶಿಲ್ಪಾ ಶೆಟ್ಟಿ ಪತಿ ರಾಜ್​ ಕುಂದ್ರಾಗೆ 14 ದಿನ ನ್ಯಾಯಾಂಗ ಬಂಧನ

Published On - 7:13 pm, Wed, 28 July 21

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ