AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Breaking News: ಅಶ್ಲೀಲ ಸಿನಿಮಾ ಕೇಸ್​: ಶಿಲ್ಪಾ ಶೆಟ್ಟಿ ಪತಿ ರಾಜ್​ ಕುಂದ್ರಾಗೆ 14 ದಿನ ನ್ಯಾಯಾಂಗ ಬಂಧನ

Raj Kundra: ನೀಲಿ ಚಿತ್ರ ಕೇಸ್​ನಲ್ಲಿ ಪೊಲೀಸರ ಅತಿಥಿ ಆಗಿರುವ ರಾಜ್​ ಕುಂದ್ರಾಗೆ ಜಾಮೀನು ಪಡೆಯುವಲ್ಲಿ ಹಿನ್ನಡೆ ಆಗಿದೆ. ಮಂಗಳವಾರ (ಜು.27) ವಿಚಾರಣೆ ನಡೆಸಿ, ಅವರನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಲ್ಲಿ ಇರಿಸಲು ಆದೇಶಿಸಲಾಗಿದೆ.

Breaking News: ಅಶ್ಲೀಲ ಸಿನಿಮಾ ಕೇಸ್​: ಶಿಲ್ಪಾ ಶೆಟ್ಟಿ ಪತಿ ರಾಜ್​ ಕುಂದ್ರಾಗೆ 14 ದಿನ ನ್ಯಾಯಾಂಗ ಬಂಧನ
ಅಶ್ಲೀಲ ಸಿನಿಮಾ ಕೇಸ್​: ಶಿಲ್ಪಾ ಶೆಟ್ಟಿ ಪತಿ ರಾಜ್​ ಕುಂದ್ರಾಗೆ 14 ದಿನ ನ್ಯಾಯಾಂಗ ಬಂಧನ
TV9 Web
| Edited By: |

Updated on:Jul 27, 2021 | 2:01 PM

Share

ಅಶ್ಲೀಲ ಸಿನಿಮಾ ನಿರ್ಮಾಣದ ಆರೋಪದಲ್ಲಿ ಸಿಕ್ಕಿ ಬಿದ್ದಿರುವ ಶಿಲ್ಪಾ ಶೆಟ್ಟಿ (Shilpa Shetty) ಪತಿ ರಾಜ್ ಕುಂದ್ರಾಗೆ ಸಂಕಷ್ಟ ಹೆಚ್ಚಿದೆ. ಜು.19ರಂದು ಅವರನ್ನು ಪೊಲೀಸರು ಬಂಧಿಸಿದ್ದರು. ಜು.27ರವರೆಗೆ ನ್ಯಾಯಾಲಯವು ಅವರನ್ನು ಪೊಲೀಸ್​ ಕಸ್ಟಡಿಗೆ ಒಪ್ಪಿಸಿತ್ತು. ಮಂಗಳವಾರ (ಜು.27) ವಿಚಾರಣೆ ನಡೆಸಿ, ಅವರನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಲ್ಲಿ (Judicial Custody) ಇರಿಸಲು ಆದೇಶಿಸಲಾಗಿದೆ. ನಟಿಯರು ಮತ್ತು ಮಾಡೆಲ್​ಗಳನ್ನು ಬಳಸಿಕೊಂಡು ನೀಲಿ ಚಿತ್ರಗಳನ್ನು ತಯಾರಿಸುತ್ತಿದ್ದರು ಎಂಬ ಆರೋಪದ ಮೇಲೆ ರಾಜ್ ಕುಂದ್ರಾ (Raj Kundra) ಬಂಧನವಾಗಿದೆ. ಜಾಮೀನು ಪಡೆಯಲು ಅವರು ಮಾಡುತ್ತಿರುವ ಎಲ್ಲ ಪ್ರಯತ್ನಗಳು ವಿಫಲ ಆಗುತ್ತಿವೆ.

ರಾಜ್​ ಕುಂದ್ರಾ ಅಶ್ಲೀಲ ಸಿನಿಮಾ ಮಾಡುತ್ತಿದ್ದರು ಎಂಬುದಕ್ಕೆ ಪೊಲೀಸರ ಬಳಿ ಹಲವು ಸಾಕ್ಷಿ ಇವೆ ಎನ್ನಲಾಗಿದೆ. ಆದರೆ ತನಿಖೆಗೆ ರಾಜ್​ ಕುಂದ್ರಾ ಸೂಕ್ತ ರೀತಿಯಲ್ಲಿ ಸಹಕರಿಸುತ್ತಿಲ್ಲ ಎಂಬ ಹಿನ್ನೆಲೆಯಲ್ಲಿ ವಿಚಾರಣೆ ಅವಧಿ ವಿಸ್ತರಣೆ ಅನಿವಾರ್ಯವಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವರನ್ನು ತನಿಖೆಗೆ ಒಳಪಡಿಸಲಾಗುತ್ತಿದೆ. ರಾಜ್ ಕುಂದ್ರಾ ಜೊತೆ ಸಂಪರ್ಕ ಹೊಂದಿದ್ದ ಅನೇಕರ ಮೇಲೆ ಅನುಮಾನ ಮೂಡಿದೆ.

ನೀಲಿ ಚಿತ್ರ ದಂಧೆಗೆ ಸಂಬಂಧಿಸಿದಂತೆ ರಾಜ್​ ಕುಂದ್ರಾ ಮತ್ತು ಉಮೇಶ್​ ಕಾಮತ್ ಎಂಬುವವರ ನಡುವೆ ವಾಟ್ಸ್​ಆ್ಯಪ್​ ಚಾಟ್​ ನಡೆದಿತ್ತು. ಅದರಲ್ಲಿ ನಟಿ ಪ್ಲೋರಾ ಸೈನಿ ಬಗ್ಗೆಯೂ ಪ್ರಸ್ತಾಪ ಮಾಡಲಾಗಿತ್ತು ಎಂಬ ವಿಚಾರ ಈಗ ಬೆಳಕಿಗೆ ಬಂದಿದೆ. ಆದರೆ ರಾಜ್​ ಕುಂದ್ರಾ ಅವರ ಅಶ್ಲೀಲ ಸಿನಿಮಾ ದಂಧೆಗೂ ತಮಗೂ ಯಾವುದೇ ಸಂಬಂಧ ಇಲ್ಲ ಎಂದು ಫ್ಲೋರಾ ಸೈನಿ ಸ್ಪಷ್ಟನೆ ನೀಡಿದ್ದಾರೆ.

‘ಇಬ್ಬರು ವ್ಯಕ್ತಿಗಳು ಅವರ ಚಾಟ್​ನಲ್ಲಿ ನನ್ನ ಬಗ್ಗೆ ಚರ್ಚೆ ಮಾಡುತ್ತಾರೆ ಎಂದರೆ ಅವರ ಕೃತ್ಯದಲ್ಲಿ ನಾನೂ ಭಾಗಿ ಆಗಿದ್ದೇನೆ ಎಂದರ್ಥವಲ್ಲ. ನಾನು ಯಾವುದೇ ಸಿನಿಮಾ ಹಿನ್ನೆಲೆಯ ಕುಟುಂಬದಿಂದ ಬಂದವಳಲ್ಲ. ಹಾಗಾಗಿ ನನ್ನ ಹೆಸರನ್ನು ಇದರಲ್ಲಿ ಎಳೆದು ತರಲಾಗಿದೆ. ರಾಜ್​ ಕುಂದ್ರಾ ಅಥವಾ ಅವರ ಕಡೆಯವರು ನನ್ನನ್ನು ಯಾವತ್ತೂ ಭೇಟಿ ಆಗಿಲ್ಲ’ ಎಂದು ಅವರು ಹೇಳಿದ್ದಾರೆ.

ಹಲವು ಆಯಾಮಗಳಿಂದ ಈ ಪ್ರಕರಣವನ್ನು ತನಿಖೆ ಮಾಡಲಾಗುತ್ತಿದೆ. ಮುಂಬೈನಲ್ಲಿರುವ ಶಿಲ್ಪಾ ಶೆಟ್ಟಿ ಅವರ ಮನೆ ಮೇಲೆ ಪೊಲೀಸರು ದಾಳಿ ಮಾಡಿ ಕೆಲವು ಸಾಕ್ಷ್ಯ ಸಂಗ್ರಹಿಸಿದ್ದಾರೆ. ಪೊಲೀಸರ ಜೊತೆ ಮನೆಗೆ ಬಂದ ರಾಜ್​ ಕುಂದ್ರಾ ಎದುರು ಶಿಲ್ಪಾ ಶೆಟ್ಟಿ ಕಣ್ಣೀರಿಟ್ಟು ರಂಪಾಟ ಮಾಡಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ:

ಅಶ್ಲೀಲ ಸಿನಿಮಾ ದಂಧೆ: ಶಿಲ್ಪಾ ಶೆಟ್ಟಿ ಪತಿ ರಾಜ್ ಕುಂದ್ರಾ ಜೊತೆ ಈ ಸುಂದರಿಯರಿಗೆ ಏನು ಸಂಬಂಧ?

ನೀಲಿ ಚಿತ್ರ ದಂಧೆಯ ಆರೋಪಿ ರಾಜ್​ ಕುಂದ್ರಾ ಒಟ್ಟು ಆಸ್ತಿ ಮೊತ್ತ ಎಷ್ಟು? ಇದು ದಂಗಾಗಿಸುವ ನಂಬರ್​

Published On - 1:33 pm, Tue, 27 July 21

Follow Us
Web contact
Web contact

TV9 Kannada

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು