‘ಬದುಕಿರುವುದಕ್ಕೆ ನಾನು ಅದೃಷ್ಟವಂತೆ’; ಗಂಡನ ನೀಲಿ ಚಿತ್ರ ಹಗರಣ ಬಯಲಾದ ಬಳಿಕ ಶಿಲ್ಪಾ ಶೆಟ್ಟಿ ಮೊದಲ ಮಾತು

ಪತಿ ರಾಜ್​ ಕುಂದ್ರಾ ಅರೆಸ್ಟ್​ ಆದ ಬಳಿಕ ಇದೇ ಮೊದಲ ಬಾರಿಗೆ ಶಿಲ್ಪಾ ಶೆಟ್ಟಿ ಮೌನ ಮುರಿದಿದ್ದಾರೆ. ‘ಈ ಹಿಂದೆ ಅನೇಕ ಸವಾಲುಗಳನ್ನು ಎದುರಿಸಿದ್ದೇನೆ. ಮುಂದೆಯೂ ಅನೇಕ ಸವಾಲುಗಳನ್ನು ಎದುರಿಸಲಿದ್ದೇನೆ’ ಎಂದು ಅವರು ಮಾತು ಆರಂಭಿಸಿದ್ದಾರೆ.

‘ಬದುಕಿರುವುದಕ್ಕೆ ನಾನು ಅದೃಷ್ಟವಂತೆ’; ಗಂಡನ ನೀಲಿ ಚಿತ್ರ ಹಗರಣ ಬಯಲಾದ ಬಳಿಕ ಶಿಲ್ಪಾ ಶೆಟ್ಟಿ ಮೊದಲ ಮಾತು
ಶಿಲ್ಪಾ ಶೆಟ್ಟಿ - ರಾಜ್​ ಕುಂದ್ರಾ ಕುಟುಂಬ
Follow us
| Updated By: ಮದನ್​ ಕುಮಾರ್​

Updated on: Jul 23, 2021 | 8:10 AM

ಖ್ಯಾತ ನಟಿ ಶಿಲ್ಪಾ ಶೆಟ್ಟಿ (Shilpa Shetty) ಪತಿ ರಾಜ್​ ಕುಂದ್ರಾ ಅವರು ನೀಲಿ ಚಿತ್ರಗಳ (Porn) ದಂಧೆಯಲ್ಲಿ ಪ್ರಮುಖ ಆರೋಪಿ ಆಗಿರುವುದು ಇಡೀ ಬಾಲಿವುಡ್​ಗೆ ಶಾಕ್​ ನೀಡಿದೆ. ರಾಜ್​ ಕುಂದ್ರಾ (Raj Kundra) ಸದ್ಯ ಪೊಲೀಸರ ವಶದಲ್ಲಿದ್ದಾರೆ. ಪತಿಯ ಬಂಧನದ ಬಳಿಕ ಸಂಪೂರ್ಣ ಮೌನ ವಹಿಸಿದ್ದ ಶಿಲ್ಪಾ ಶೆಟ್ಟಿ ಈಗ ಮೌನ ಮುರಿದಿದ್ದಾರೆ. ಪ್ರಸ್ತುತ ತಮ್ಮ ಸ್ಥಿತಿ ಯಾವ ರೀತಿ ಇದೆ ಎಂಬದುನ್ನು ಅವರು ಸೋಶಿಯಲ್​ ಮೀಡಿಯಾ ಮೂಲಕ ತಿಳಿಸಿದ್ದಾರೆ. ಏನೇ ಕಷ್ಟ ಬಂದರೂ ಎದುರಿಸುವುದಾಗಿ ಅವರು ತಮ್ಮ ನಿಲುವು ಸ್ಪಷ್ಟಪಡಿಸಿದ್ದಾರೆ.

‘ಬದುಕಿರುವುದಕ್ಕಾಗಿ ನಾನು ಅದೃಷ್ಟವಂತೆ ಎಂದು ತಿಳಿದುಕೊಂಡು ದೀರ್ಘ ಉಸಿರು ತೆಗೆದುಕೊಳ್ಳುತ್ತೇನೆ. ಈ ಹಿಂದೆ ಅನೇಕ ಸವಾಲುಗಳನ್ನು ಎದುರಿಸಿದ್ದೇನೆ. ಮುಂದೆಯೂ ಅನೇಕ ಸವಾಲುಗಳನ್ನು ಎದುರಿಸಲಿದ್ದೇನೆ. ಇಂದಿನ ನನ್ನ ಬದುಕನ್ನು ಯಾವುದೂ ಕೂಡ ಕೆಡಿಸಬೇಕಿಲ್ಲ’ ಎಂದು ಶಿಲ್ಪಾ ಶೆಟ್ಟಿ ಮಾರ್ಮಿಕವಾಗಿ ಪೋಸ್ಟ್​ ಮಾಡಿದ್ದಾರೆ.

‘ಈ ಹಿಂದೆ ನಮ್ಮನ್ನು ನೋಯಿಸಿದವರ ಬಗ್ಗೆ, ಅನುಭವಿಸಿದ ಹತಾಶೆಯ ಬಗ್ಗೆ, ಕೈಕೊಟ್ಟ ಅದೃಷ್ಟದ ಬಗ್ಗೆ ನಾವು ಕೋಪ ಮಾಡಿಕೊಳ್ಳುತ್ತೇವೆ. ಮುಂದೆ ಬರಬಹುದಾದ ಸಾವು-ನೋವು, ಕಷ್ಟ-ನಷ್ಟಗಳ ಬಗ್ಗೆ ಭಯ ಇಟ್ಟುಕೊಳ್ಳುತ್ತೇವೆ. ಹಿಂದೆ ಏನಾಗಿತ್ತು, ಮುಂದೆ ಏನಾಗಬಹುದು ಎಂಬುದರ ಚಿಂತೆ ಬಿಟ್ಟು, ಈ ಕ್ಷಣಕ್ಕಾಗಿ ನಾವು ಬದುಕಬೇಕು’ ಎಂದು ಶಿಲ್ಪಾ ಶೆಟ್ಟಿ ಬರೆದುಕೊಂಡಿದ್ದಾರೆ.

ಜು.19ರಂದು ರಾಜ್​ ಕುಂದ್ರಾ ಅವರನ್ನು ಪೊಲೀಸರು ಬಂಧಿಸಿದರು. ಅವರ ಮೇಲೆ ಇರುವ ಆರೋಪಗಳನ್ನು ಪುಷ್ಟೀಕರಿಸುವಂತಹ ಅನೇಕ ಸಾಕ್ಷಿಗಳು ಕೂಡ ಪೊಲೀಸರಿಗೆ ಸಿಕ್ಕಿವೆ. ರಾಜ್​ ಕುಂದ್ರಾ ಮತ್ತು ಶಿಲ್ಪಾ ಶೆಟ್ಟಿ ಅವರ ಶ್ರೀಮಂತಿಕೆಗೆ ಏನೂ ಕೊರತೆ ಇಲ್ಲ. ಐಷಾರಾಮಿ ಜೀವನ ನಡೆಸುತ್ತಿರುವ ಅವರು ಅನೇಕ ಮೂಲಗಳಿಂದ ಹಣ ಗಳಿಸುತ್ತಿದ್ದಾರೆ. ಒಂದು ಮೂಲದ ಪ್ರಕಾರ, ಅವರು 350 ಮಿಲಿಯನ್​ ಡಾಲರ್​ ಹೊಂದಿದ್ದಾರೆ. ಅಂದರೆ, ಸುಮಾರು 2600 ಕೋಟಿ ರೂ.! ಇನ್ನೊಂದು ಮೂಲದ ಪ್ರಕಾರ 550 ಮಿಲಿಯನ್​ ಡಾಲರ್​ (4 ಸಾವಿರ ಕೋಟಿ ರೂ.) ಮೊತ್ತದ ಆಸ್ತಿಯನ್ನು ರಾಜ್​ ಕುಂದ್ರಾ ಹೊಂದಿದ್ದಾರೆ.

ಪ್ರತಿ ವರ್ಷ ಅಂದಾಜು 120 ಕೋಟಿ ರೂ. ಆದಾಯ ರಾಜ್​ ಕುಂದ್ರಾಗೆ ಬರುತ್ತದೆ ಎನ್ನಲಾಗಿದೆ. ಐಪಿಎಲ್​ನಲ್ಲಿ ರಾಜಸ್ತಾನ್​ ರಾಯಲ್ಸ್​ ತಂಡದ ಸಹ-ಮಾಲೀಕತ್ವವನ್ನು ಈ ದಂಪತಿ ಹೊಂದಿದ್ದಾರೆ. ವಿಯಾನ್​ ಇಂಡಸ್ಟ್ರೀಸ್​, ಗ್ರೂಪ್​ಕೋ ಡೆವೆಲಪರ್ಸ್​, ಟಿಎಂಟಿ ಗ್ಲೋಬಲ್​, ಜೆಎಲ್​ ಸ್ಟ್ರೀಮ್​ ಪ್ರೈವೇಟ್​ ಲಿಮಿಡೆಟ್​ ಸೇರಿದಂತೆ ಹಲವು ಉದ್ಯಮಗಳನ್ನು ರಾಜ್​ ಕುಂದ್ರಾ ಹೊಂದಿದ್ದಾರೆ. ಅವರ ಜೊತೆ ಸಂಪರ್ಕ ಹೊಂದಿದ್ದ ಅನೇಕ ನಟಿಯರನ್ನು, ಮಾಡೆಲ್​ಗಳನ್ನು ಕೂಡ ಈಗ ವಿಚಾರಣೆಗೆ ಒಳಪಡಿಸಲಾಗುತ್ತಿದೆ. ತಾವು ಅರೆಸ್ಟ್​ ಆಗುವುದರಿಂದ ತಪ್ಪಿಸಿಕೊಳ್ಳಲು ಪೊಲೀಸರಿಗೆ ರಾಜ್​ ಕುಂದ್ರಾ 25 ಲಕ್ಷ ರೂ. ಲಂಚ ನೀಡಲು ಮುಂದಾಗಿದ್ದರು ಎಂಬ ಮಾಹಿತಿ ಕೂಡ ಹೊರಬಿದ್ದಿದೆ.

ಇದನ್ನೂ ಓದಿ:

ಬಾಲಿವುಡ್​​ನಷ್ಟು ದೊಡ್ಡದಾಗಿ ಪಾರ್ನ್​ ಉದ್ಯಮವನ್ನು ಬೆಳೆಸಬೇಕು ಎಂಬುದು ರಾಜ್​ ಕುಂದ್ರಾ ಕನಸಾಗಿತ್ತು

ಶಿಲ್ಪಾ ಶೆಟ್ಟಿ- ರಾಜ್ ಕುಂದ್ರಾ: ಇಬ್ಬರ ಹಣೆಬರಹವೂ ನಿರ್ಧಾರವಾಗಲಿದೆ ಒಂದೇ ದಿನ; ಹೇಗೆ ಗೊತ್ತಾ?

ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ