ಶಿಲ್ಪಾ ಶೆಟ್ಟಿಗೆ ಕೋಟ್ಯಂತರ ರೂಪಾಯಿ ಆಸ್ತಿ, ಮನೆ ಬರೆದುಕೊಟ್ಟ ರಾಜ್​ ಕುಂದ್ರಾ; ಅಚ್ಚರಿ ಮೂಡಿಸಿದ ನಡೆ

ಉದ್ಯಮಿ ಆಗಿರುವ ರಾಜ್​ ಕುಂದ್ರಾ ಅವರು ದೇಶದ ಹಲವು ಕಡೆಗಳಲ್ಲಿ ಆಸ್ತಿ ಹೊಂದಿದ್ದಾರೆ. ಆ ಪೈಕಿ ಕೆಲವನ್ನು ಶಿಲ್ಪಾ ಶೆಟ್ಟಿ ಹೆಸರಿಗೆ ವರ್ಗಾಯಿಸಿದ್ದಾರೆ.

ಶಿಲ್ಪಾ ಶೆಟ್ಟಿಗೆ ಕೋಟ್ಯಂತರ ರೂಪಾಯಿ ಆಸ್ತಿ, ಮನೆ ಬರೆದುಕೊಟ್ಟ ರಾಜ್​ ಕುಂದ್ರಾ; ಅಚ್ಚರಿ ಮೂಡಿಸಿದ ನಡೆ
ರಾಜ್​ ಕುಂದ್ರಾ, ಶಿಲ್ಪಾ ಶೆಟ್ಟಿ
Follow us
TV9 Web
| Updated By: ಮದನ್​ ಕುಮಾರ್​

Updated on: Feb 04, 2022 | 3:03 PM

ನಟಿ ಶಿಲ್ಪಾ ಶೆಟ್ಟಿ ಅವರ ಫ್ಯಾಮಿಲಿ (Shilpa Shetty Family) ವಿಷಯ ಭಾರಿ ಚರ್ಚೆಗೆ ಒಳಪಡುತ್ತಿದೆ. ಪತಿ ರಾಜ್​ ಕುಂದ್ರಾ (Raj Kundra) ಅವರು ಅಶ್ಲೀಲ ಸಿನಿಮಾ ನಿರ್ಮಾಣ ಪ್ರಕರಣದಲ್ಲಿ ಮುಖ್ಯ ಆರೋಪಿಯಾಗಿ ಜೈಲು ಸೇರಿದ ಬಳಿಕ ಶಿಲ್ಪಾ ಶೆಟ್ಟಿ (Shilpa Shetty) ಸಖತ್​ ಮುಜುಗರಕ್ಕೆ ಒಳಗಾದರು. ಈಗ ರಾಜ್​ ಕುಂದ್ರಾ ಜಾಮೀನು ಪಡೆದು ಹೊರಬಂದಿದ್ದರೂ ಕೂಡ ಸಾರ್ವಜನಿಕವಾಗಿ ಹೆಚ್ಚು ಕಾಣಿಸಿಕೊಳ್ಳುತ್ತಿಲ್ಲ. ಅಚ್ಚರಿ ವಿಚಾರ ಏನೆಂದರೆ, ಈಗ ರಾಜ್​ ಕುಂದ್ರಾ ಅವರು ಶಿಲ್ಪಾ ಶೆಟ್ಟಿ ಹೆಸರಿಗೆ ಕೋಟ್ಯಂತರ ರೂಪಾಯಿ ಬೆಲೆಬಾಳುವ ಆಸ್ತಿಯನ್ನು ವರ್ಗಾವಣೆ ಮಾಡಿದ್ದಾರೆ. ಏಕಾಏಕಿ ಅವರು ಈ ರೀತಿ ಮಾಡಿರುವುದು ಯಾಕೆ ಎಂಬ ಬಗ್ಗೆ ಸೋಶಿಯಲ್​ ಮೀಡಿಯಾದಲ್ಲಿ ಚರ್ಚೆ ನಡೆಯುತ್ತಿದೆ. zapkey.com ಪ್ರಕಟಿಸಿದ ವರದಿಯ ಪ್ರಕಾರ, ಬರೋಬ್ಬರಿ 38.5 ಕೋಟಿ ರೂಪಾಯಿ ಬೆಲೆ ಬಾಳುವ ಆಸ್ತಿಯನ್ನು ರಾಜ್​ ಕುಂದ್ರಾ ಅವರು ಪತ್ನಿಯ ಹೆಸರಿಗೆ ವರ್ಗಾಯಿಸಿದ್ದಾರೆ. ಅವರು ಈ ರೀತಿ ಮಾಡಿರುವುದಕ್ಕೆ ಕಾರಣ ಏನು ಎಂಬುದು ಇನ್ನೂ ಬಹಿರಂಗ ಆಗಿಲ್ಲ. ಆಸ್ತಿ ವರ್ಗಾವಣೆಗಾಗಿ ಶಿಲ್ಪಾ ಶೆಟ್ಟಿ ಅವರು 1.9 ಕೋಟಿ ರೂಪಾಯಿ ಸ್ಟ್ಯಾಂಪ್​ ಡ್ಯೂಟಿ ಪಾವತಿಸಿದ್ದಾರೆ ಎಂಬ ಮಾಹಿತಿ ಹರಿದಾಡುತ್ತಿದೆ.

ಉದ್ಯಮಿ ಆಗಿರುವ ರಾಜ್​ ಕುಂದ್ರಾ ಅವರು ದೇಶದ ಹಲವು ಕಡೆಗಳಲ್ಲಿ ಆಸ್ತಿ ಹೊಂದಿದ್ದಾರೆ. ಆ ಪೈಕಿ ಕೆಲವನ್ನು ಶಿಲ್ಪಾ ಶೆಟ್ಟಿ ಹೆಸರಿಗೆ ವರ್ಗಾಯಿಸಿದ್ದಾರೆ. ಜುಹೂನಲ್ಲಿ ಇರುವ ಒಂದು ಮನೆ ಮತ್ತು ‘ಓಷನ್​ ವ್ಯೂ’ ಹೆಸರಿನ ಕಟ್ಟಡದ 5 ಫ್ಲಾಟ್​ಗಳನ್ನು ಶಿಲ್ಪಾ ಶೆಟ್ಟಿಗೆ ನೀಡಲಾಗಿದೆ. ಎಲ್ಲ ಸೇರಿಸಿದರೆ ಇದರ ಬೆಲೆ 38.5 ಕೋಟಿ ರೂ. ಆಗಲಿದೆ ಎಂದು ವರದಿ ಆಗಿದೆ.

ಸೋಶಿಯಲ್​ ಮೀಡಿಯಾಗೆ ರಾಜ್ ​ಕುಂದ್ರಾ ವಾಪಸ್​:

2021ರ ಜುಲೈ ತಿಂಗಳಲ್ಲಿ ರಾಜ್ ​ಕುಂದ್ರಾ ಬಂಧನಕ್ಕೆ ಒಳಗಾಗಿದ್ದರು. ಒಂದು ತಿಂಗಳ ನಂತರ ಅವರು ಜೈಲಿನಿಂದ ಹೊರ ಬಂದಿದ್ದರು. ಆದರೆ, ಅವರು ಸಾರ್ವಜನಿಕವಾಗಿ ಕಾಣಿಸಿಕೊಂಡಿದ್ದು ನವೆಂಬರ್​ನಲ್ಲಿ. ಈ ಮಧ್ಯೆ ಅವರು ಸೋಶಿಯಲ್​ ಮೀಡಿಯಾಗೆ ಗುಡ್​ಬೈ ಹೇಳಿದ್ದರು. ಇತ್ತೀಚೆಗೆ  ಅವರು ಮತ್ತೆ ಇನ್​ಸ್ಟಾಗ್ರಾಮ್​ಗೆ ಮರಳಿದ್ದಾರೆ. ಅವರು 9.77 ಲಕ್ಷ ಹಿಂಬಾಲಕರನ್ನು ಹೊಂದಿದ್ದಾರೆ. ಅವರು ಹಿಂಬಾಲಿಸುತ್ತಿರುವುದು ಒಂದು ಖಾತೆಯನ್ನು ಮಾತ್ರ.

ರಾಜ್​ ಕುಂದ್ರಾ ಹಿಂಬಾಲಿಸುತ್ತಿರುವ ಒಂದು ಖಾತೆ ಎಂದರೆ ಅದು ಬಾಂದ್ರಾದಲ್ಲಿರುವ ಸೀಫುಡ್​ ರೆಸ್ಟೋರೆಂಟ್​. ಈ ರೆಸ್ಟೋರೆಂಟ್​ಗೆ ಅವರ ಪತ್ನಿ ಶಿಲ್ಪಾ ಶೆಟ್ಟಿ ಸಹ ಮಾಲಕಿ. ಈ ಕಾರಣಕ್ಕೆ ರಾಜ್​ ಕುಂದ್ರಾ ಇದನ್ನು ಹಿಂಬಾಲಿಸುತ್ತಿದ್ದಾರೆ ಎನ್ನಲಾಗಿದೆ. ಹಳೆಯ ಎಲ್ಲಾ ಪೋಸ್ಟ್​ಗಳನ್ನು ಇನ್​ಸ್ಟಾಗ್ರಾಮ್​ ಖಾತೆಯಿಂದ ರಾಜ್​ ಕುಂದ್ರಾ ಡಿಲೀಟ್​ ಮಾಡಿದ್ದಾರೆ.

ಇದನ್ನೂ ಓದಿ:

8 ಬಾದಾಮಿಗಾಗಿ ಶಿಲ್ಪಾ ಶೆಟ್ಟಿ ಜಗಳ; ‘ನೀನು ಕಂಜೂಸ್’​ ಎಂದು ಮುಖಕ್ಕೆ ಹೊಡೆದಂತೆ ಹೇಳಿದ ಹಿರಿಯ ನಟಿ

‘ನಾನು ಅಶ್ಲೀಲ ಸಿನಿಮಾ ಮಾಡಿಲ್ಲ, ಮುಖ ಮುಚ್ಕೊಂಡು ಓಡಾಡಲ್ಲ’; ಮೌನ ಮುರಿದ ರಾಜ್​ ಕುಂದ್ರಾ

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ