AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್​ ಕುಂದ್ರಾ ಖಾತೆಯಿಂದ ಈ ಮಹಿಳೆ ಖಾತೆಗೆ ವರ್ಗಾವಣೆ ಆಗಿತ್ತು ಕೋಟಿ ಕೋಟಿ ಹಣ; ಯಾರು ಈ ಹರ್ಷಿತಾ?

ಮೂಲಗಳ ಪ್ರಕಾರ, ಈ ಬ್ಯಾಂಕ್ ಖಾತೆಗಳನ್ನು ಕಪ್ಪು ಹಣ, ಹವಾಲಾ ಮತ್ತು ಬೆಟ್ಟಿಂಗ್‌ಗೆ ಬಳಸಲಾಗಿದೆಯೆಂದು ಶಂಕಿಸಲಾಗಿದೆ. ಹರ್ಷಿತಾ ಮತ್ತು ನರ್ವದ ಶ್ರೀವಾಸ್ತವ ಅವರ ಖಾತೆಗಳಿಗೆ ಈ ಮೊತ್ತವು ಬಂದ ಕೆಲವು ದಿನಗಳ ನಂತರ, ಅದನ್ನು ಇತರ ಖಾತೆಗಳಿಗೆ ವರ್ಗಾಯಿಸಲಾಗುತ್ತಿತ್ತು.

ರಾಜ್​ ಕುಂದ್ರಾ ಖಾತೆಯಿಂದ ಈ ಮಹಿಳೆ ಖಾತೆಗೆ ವರ್ಗಾವಣೆ ಆಗಿತ್ತು ಕೋಟಿ ಕೋಟಿ ಹಣ; ಯಾರು ಈ ಹರ್ಷಿತಾ?
ಶಿಲ್ಪಾ ಶೆಟ್ಟಿ ಮತ್ತು ರಾಜ್ ಕುಂದ್ರಾ (ಸಂಗ್ರಹ ಚಿತ್ರ)
ರಾಜೇಶ್ ದುಗ್ಗುಮನೆ
|

Updated on: Jul 26, 2021 | 8:19 PM

Share

ರಾಜ್ ಕುಂದ್ರಾ ಅಶ್ಲೀಲ ಸಿನಿಮಾ ನಿರ್ಮಾಣ ಮಾಡುತ್ತಿದ್ದ ಪ್ರಕರಣದಲ್ಲಿ ಮುಂಬೈ ಪೊಲೀಸ್​ ಅಪರಾಧ ವಿಭಾಗವು ಪ್ರತಿದಿನ ಹೊಸಹೊಸ ವಿಚಾರವನ್ನು ಪತ್ತೆ ಮಾಡುತ್ತಿದೆ. ರಾಜ್ ಕುಂದ್ರಾ ಅವರ ಈ ಅಶ್ಲೀಲ ದಂಧೆ ಪ್ರಕರಣಕ್ಕೂ ಉತ್ತರ ಪ್ರದೇಶದ ಕಾನ್ಪುರಕ್ಕೂ ನಂಟು ಸಿಕ್ಕಿದೆ. ಕಾನ್ಪುರ್ ಮಹಿಳೆಯ ಖಾತೆಗೆ ರಾಜ್ ​ಕುಂದ್ರಾ ಹಣ ವರ್ಗಾವಣೆ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ.

ಹರ್ಷಿತಾ ಶ್ರೀವಾಸ್ತವ ಎಂಬ ಮಹಿಳೆಗೆ ಹಣ ವರ್ಗಾವಣೆ ಮಾಡಲಾಗುತ್ತಿತ್ತು. ಈ ಖಾತೆಯನ್ನು ವಶಕ್ಕೆ ಪಡೆಯಲಾಗಿದ್ದು, ಈ ಖಾತೆಯಲ್ಲಿ ಸುಮಾರು 2,32,45,222 ರೂಪಾಯಿ ಇತ್ತು. ಹಾಟ್ ಶಾಟ್ಸ್​​ ವಾಟ್ಸಾಪ್ ಗ್ರೂಪ್‌ನಲ್ಲಿ ಅರವಿಂದ್ ಕುಮಾರ್ ಶ್ರೀವಾಸ್ತವ ಹೆಸರಿನ ವ್ಯಕ್ತಿ ಇದ್ದಾರೆ. ಈ ಅರವಿಂದ್ ಅವರ ಪತ್ನಿ ಹರ್ಷಿತಾ. ಅರವಿಂದ್ ಕೋಟ್ಯಂತರ ರೂಪಾಯಿಗಳನ್ನು ಹರ್ಷಿತಾಗೆ ಮಾತ್ರವಲ್ಲ, ತಂದೆ ನರ್ವದ ಶ್ರೀವಾಸ್ತವ ಹೆಸರಿನಲ್ಲಿ ತೆರೆಯಲಾದ ಬ್ಯಾಂಕ್ ಖಾತೆಗೆ ವರ್ಗಾಯಿಸುತ್ತಿದ್ದರು. ಆದರೆ, ಪಾರ್ನ್​ ದಂಧೆಯಿಂದ ಗಳಿಸಿದ ಹಣವನ್ನು ಅರವಿಂದ್ ತನ್ನ ಕುಟುಂಬದ ಖಾತೆಗೆ ಏಕೆ ಕಳುಹಿಸುತ್ತಿದ್ದಾನೆ ಎಂಬ ಬಗ್ಗೆ ತನಿಖೆ ನಡೆಯುತ್ತಿದೆ.

ಮೂಲಗಳ ಪ್ರಕಾರ, ಈ ಬ್ಯಾಂಕ್ ಖಾತೆಗಳನ್ನು ಕಪ್ಪು ಹಣ, ಹವಾಲಾ ಮತ್ತು ಬೆಟ್ಟಿಂಗ್‌ಗೆ ಬಳಸಲಾಗಿದೆಯೆಂದು ಶಂಕಿಸಲಾಗಿದೆ. ಹರ್ಷಿತಾ ಮತ್ತು ನರ್ವದ ಶ್ರೀವಾಸ್ತವ ಅವರ ಖಾತೆಗಳಿಗೆ ಈ ಮೊತ್ತವು ಬಂದ ಕೆಲವು ದಿನಗಳ ನಂತರ, ಅದನ್ನು ಇತರ ಖಾತೆಗಳಿಗೆ ವರ್ಗಾಯಿಸಲಾಗುತ್ತಿತ್ತು. ಅರವಿಂದ್ ಅವರ ಖಾತೆಯನ್ನು ಸಹ ವಶಪಡಿಸಿಕೊಳ್ಳಲಾಗಿದ್ದು, ಇದರಲ್ಲಿ 1.81 ಕೋಟಿ ರೂಪಾಯಿ ಇತ್ತು.

ಸುಮಾರು 6 ವರ್ಷಗಳ ಹಿಂದೆ ಹರ್ಷಿತಾ ಖಾತೆಯನ್ನು ತೆರೆಯಲಾಗಿದೆ ಎಂದು ತನಿಖೆಯಲ್ಲಿ ತಿಳಿದುಬಂದಿದೆ. ಕಳೆದ ಎರಡು ವರ್ಷಗಳಿಂದ ಮೊತ್ತದ ವಹಿವಾಟು ಹೆಚ್ಚಾಗಿದೆ. ಈ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಇದನ್ನೂ ಓದಿ: ರಾಜ್​ ಕುಂದ್ರಾ ನಡೆಸುತ್ತಿದ್ದ ದಂಧೆ ಬಗ್ಗೆ ಶಿಲ್ಪಾ ಶೆಟ್ಟಿಗೆ ಇತ್ತು ಮಾಹಿತಿ? ಪೊಲೀಸರಿಂದ ವಿಚಾರಣೆ

‘ಲಂಚವನ್ನು ನಾನು ಸ್ವೀಕರಿಸುವುದೂ ಇಲ್ಲ, ಕೊಡುವುದೂ ಇಲ್ಲ’; ವೈರಲ್​ ಆಯ್ತು ರಾಜ್​ ಕುಂದ್ರಾ ಹಳೆಯ ವಿಡಿಯೋ

Follow Us
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
ಬೆಂಗಳೂರಿನ ಮಟನ್ ಶಾಪ್‌ನಲ್ಲಿ ನಡೀತಿತ್ತು ಡ್ರಗ್ಸ್ ಮಾರಾಟ! ಇಬ್ಬರ ಬಂಧನ
ಬೆಂಗಳೂರಿನ ಮಟನ್ ಶಾಪ್‌ನಲ್ಲಿ ನಡೀತಿತ್ತು ಡ್ರಗ್ಸ್ ಮಾರಾಟ! ಇಬ್ಬರ ಬಂಧನ
ಕಾಮನ್‌ವೆಲ್ತ್ ಪವರ್‌ಲಿಫ್ಟಿಂಗ್: ಕನ್ನಡಿಗ ಸಚಿನ್ ಸಾಳುಂಕೆಗೆ ಬೆಳ್ಳಿ ಪದಕ
ಕಾಮನ್‌ವೆಲ್ತ್ ಪವರ್‌ಲಿಫ್ಟಿಂಗ್: ಕನ್ನಡಿಗ ಸಚಿನ್ ಸಾಳುಂಕೆಗೆ ಬೆಳ್ಳಿ ಪದಕ
ಧಾರಾಕಾರ ಮಳೆಗೆ ಮಂಡ್ಯ, ಹನೂರು ತತ್ತರ: ಎಂ.ಎಂ. ಹಿಲ್ಸ್‌ನಲ್ಲಿ ಗುಡ್ಡ ಕುಸಿತ
ಧಾರಾಕಾರ ಮಳೆಗೆ ಮಂಡ್ಯ, ಹನೂರು ತತ್ತರ: ಎಂ.ಎಂ. ಹಿಲ್ಸ್‌ನಲ್ಲಿ ಗುಡ್ಡ ಕುಸಿತ
ಬೆಂಗಳೂರಿನ ಅಂಚೆಪಾಳ್ಯದಲ್ಲಿ ಚಿರತೆ ಪ್ರತ್ಯಕ್ಷ
ಬೆಂಗಳೂರಿನ ಅಂಚೆಪಾಳ್ಯದಲ್ಲಿ ಚಿರತೆ ಪ್ರತ್ಯಕ್ಷ
Live: ಹೆಚ್.ಡಿ. ಕುಮಾರಸ್ವಾಮಿ ಸುದ್ದಿಗೋಷ್ಠಿ ನೇರಪ್ರಸಾರ
Live: ಹೆಚ್.ಡಿ. ಕುಮಾರಸ್ವಾಮಿ ಸುದ್ದಿಗೋಷ್ಠಿ ನೇರಪ್ರಸಾರ
ಜಿಬಿಎಗೆ 2.77 ಕೋಟಿ ರೂ. ದಂಡ ವಿಧಿಸಿದ ಹೈಕೋರ್ಟ್!
ಜಿಬಿಎಗೆ 2.77 ಕೋಟಿ ರೂ. ದಂಡ ವಿಧಿಸಿದ ಹೈಕೋರ್ಟ್!
ಆರ್​ಆರ್ ನಗರದಲ್ಲಿ ವ್ಯಕ್ತಿಯ ಕೊಂದಿದ್ದ ಕಾಡಾನೆ ಕೊನೆಗೂ ಕಾಡಿಗೆ
ಆರ್​ಆರ್ ನಗರದಲ್ಲಿ ವ್ಯಕ್ತಿಯ ಕೊಂದಿದ್ದ ಕಾಡಾನೆ ಕೊನೆಗೂ ಕಾಡಿಗೆ
ಧಾರಾಕಾರ ಮಳೆಗೆ ವೈಟ್​ಫಿಲ್ಡ್, ಮಾರತ್ತಹಳ್ಳಿ, ಔಟರ್ ರಿಂಗ್ ರಸ್ತೆ ಜಲಾವೃತ
ಧಾರಾಕಾರ ಮಳೆಗೆ ವೈಟ್​ಫಿಲ್ಡ್, ಮಾರತ್ತಹಳ್ಳಿ, ಔಟರ್ ರಿಂಗ್ ರಸ್ತೆ ಜಲಾವೃತ
ಅಸಹ್ಯದಲ್ಲೇ ಅಸಹ್ಯ, ಅದಕ್ಕೆ ನಾಮಿನೇಟ್ ಮಾಡಿದೆ; ಕಿರಣ್​​ ನಾಮಿನೇಟ್
ಅಸಹ್ಯದಲ್ಲೇ ಅಸಹ್ಯ, ಅದಕ್ಕೆ ನಾಮಿನೇಟ್ ಮಾಡಿದೆ; ಕಿರಣ್​​ ನಾಮಿನೇಟ್
ರಾತ್ರಿಯಿಡೀ ಮಳೆ ಅಬ್ಬರ: ಮಲ್ಲೇಶ್ವರಂನಲ್ಲಿ ಮರಬಿದ್ದು 2 ಕಾರುಗಳು ಜಖಂ
ರಾತ್ರಿಯಿಡೀ ಮಳೆ ಅಬ್ಬರ: ಮಲ್ಲೇಶ್ವರಂನಲ್ಲಿ ಮರಬಿದ್ದು 2 ಕಾರುಗಳು ಜಖಂ