ನಟ ಸಲ್ಮಾನ್ ಖಾನ್ ಬೇಟೆಯಾಡಿದ್ದ ಕೃಷ್ಣ ಮೃಗದ ನೆನಪಲ್ಲಿ ನಿರ್ಮಾಣ ಆಗಲಿದೆ ಬೃಹತ್​ ಸ್ಮಾರಕ

ಕೃಷ್ಣ ಮೃಗ ಅಳಿವಿನ ಅಂಚಿನಲ್ಲಿರುವ ಪ್ರಾಣಿ ವರ್ಗ. ಇದನ್ನು ಹತ್ಯೆ ಮಾಡುವುದು ಅಪರಾಧ. ಆದಾಗ್ಯೂ ಸಲ್ಮಾನ್​ ಖಾನ್​ ಕೃಷ್ಣ ಮೃಗವನ್ನು ಬೇಟೆಯಾಡಿದ್ದರು.

ನಟ ಸಲ್ಮಾನ್ ಖಾನ್ ಬೇಟೆಯಾಡಿದ್ದ ಕೃಷ್ಣ ಮೃಗದ ನೆನಪಲ್ಲಿ ನಿರ್ಮಾಣ ಆಗಲಿದೆ ಬೃಹತ್​ ಸ್ಮಾರಕ
ಸಲ್ಮಾನ್​ ಖಾನ್​
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on:Mar 22, 2022 | 7:51 AM

ಶೂಟಿಂಗ್​ ಸಂದರ್ಭದಲ್ಲಿ ಸಲ್ಮಾನ್​ ಖಾನ್ (Salman Khan)​ ಕೃಷ್ಣ ಮೃಗ ಬೇಟೆ ಮಾಡಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿ ಸೆಷನ್ಸ್​ ನ್ಯಾಯಾಲಯ ಅವರಿಗೆ ಐದು ವರ್ಷ ಶಿಕ್ಷೆಯನ್ನೂ ವಿಧಿಸಿತ್ತು. ಸಲ್ಮಾನ್​ ಖಾನ್​ ಬೇಟೆ ಮಾಡಿದ್ದ ಕೃಷ್ಣ ಮೃಗದ ಸ್ಮರಣಾರ್ಥವಾಗಿ ದೊಡ್ಡ ಸ್ಮಾರಕ ನಿರ್ಮಾಣ ಮಾಡಲು ರಾಜಸ್ಥಾನದ ಬಿಷ್ಣೋಯಿ ಸಮುದಾಯ ಮುಂದಾಗಿದೆ. 1998ರಲ್ಲಿ ‘ಹಮ್ ಸಾಥ್ ಸಾಥ್ ಹೇ’ ಚಿತ್ರದ ಶೂಟಿಂಗ್​ಗಾಗಿ ಸಲ್ಮಾನ್​ ಖಾನ್​ ರಾಜಸ್ಥಾನದ ಜೋಧ್‌ಪುರಕ್ಕೆ ತೆರಳಿದ್ದರು. ಅವರು ಸಿನಿಮಾ ತಂಡದ ಕೆಲವರ ಜತೆ ಸಫಾರಿಗೆ ಹೋಗಿದ್ದರು. ಆ ಸಮಯದಲ್ಲಿ ಸಲ್ಮಾನ್ ಖಾನ್ ಒಂದು ಕೃಷ್ಣ ಮೃಗವನ್ನು ಬೇಟೆಯಾಡಿದ್ದರು. ಕೃಷ್ಣ ಮೃಗದ ಮೃತದೇಹ ಸಿಕ್ಕ ಜಾಗದಲ್ಲಿ ಬಿಷ್ಣೋಯಿ ಸಮುದಾಯದವರು ಭವ್ಯ ಸ್ಮಾರಕ ಮತ್ತು ಪ್ರಾಣಿ ರಕ್ಷಣಾ ಕೇಂದ್ರವನ್ನು ನಿರ್ಮಿಸುತ್ತಿದ್ದಾರೆ. ಐದು ಲೋಹಗಳನ್ನು ಬಳಸಿ ಬೃಹತ್ ಕೃಷ್ಣ ಮೃಗ ಪ್ರತಿಮೆಯನ್ನು ನಿರ್ಮಿಸಲು ಈ ಸಮುದಾಯದವರು ನಿರ್ಧರಿಸಿದ್ದಾರೆ.

ಬಿಷ್ಣೋಯಿ ಸಮುದಾಯದವರು ಪ್ರಕೃತಿ ಆರಾಧಕರು. ವನ್ಯಜೀವಿ ಸಂರಕ್ಷಣೆಗಾಗಿ ಅವರು ಪ್ರಾಣವನ್ನು ಬೇಕಾದರೂ ನೀಡುತ್ತಾರೆ. ಜೋಧಪುರ್​ನ ಬಿಷ್ಣೋಯಿಗಳು ಕೃಷ್ಣಮೃಗವನ್ನು ತಮ್ಮ ಧಾರ್ಮಿಕ ಗುರು ಭಗವಾನ್ ಜಂಬೇಶ್ವರ ಅವರ ಪುನರ್ಜನ್ಮ ಎಂದು ಪರಿಗಣಿಸುತ್ತಾರೆ. ಹೀಗಾಗಿ, ಈ ಪ್ರಾಣಿಯನ್ನು ಕೊಲ್ಲುವುದನ್ನು ಅಥವಾ ಮರವನ್ನು ಕಡಿಯುವುದನ್ನು ಬಿಷ್ಣೋಯಿಗಳು ಎಂದಿಗೂ ಸಹಿಸುವುದಿಲ್ಲ.

ಕೃಷ್ಣ ಮೃಗ ಅಳಿವಿನ ಅಂಚಿನಲ್ಲಿರುವ ಪ್ರಾಣಿ ವರ್ಗ. ಇದನ್ನು ಹತ್ಯೆ ಮಾಡುವುದು ಅಪರಾಧ. ಆದಾಗ್ಯೂ ಸಲ್ಮಾನ್​ ಖಾನ್​ ಕೃಷ್ಣ ಮೃಗವನ್ನು ಬೇಟೆಯಾಡಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿ ವಿಚಾರಣೆಯನ್ನೂ ಸಲ್ಮಾನ್​ ಖಾನ್​ ಎದುರಿಸಿದರು. ರಾಜಸ್ಥಾನದ ಸೆಷನ್ಸ್ ನ್ಯಾಯಾಲಯವು ಸಲ್ಮಾನ್​ ಅವರನ್ನು ತಪ್ಪಿತಸ್ಥರೆಂದು ತೀರ್ಪು ನೀಡಿ ಅವರಿಗೆ ಐದು ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸಿತು. ಈ ಆದೇಶದ ವಿರುದ್ಧ ಸಲ್ಮಾನ್ ಪರ ವಕೀಲರು ರಾಜಸ್ಥಾನ ಹೈಕೋರ್ಟ್​ಗೆ ಮೇಲ್ಮನವಿ ಸಲ್ಲಿಸಿದ್ದಾರೆ. ಈ ಪ್ರಕರಣದ ವಿಚಾರಣೆ ರಾಜಸ್ಥಾನ ಹೈಕೋರ್ಟ್‌ನಲ್ಲಿದೆ. ಈ ಸಿನಿಮಾದ ಸಹ ನಟರಾದ ಸೈಫ್ ಅಲಿ ಖಾನ್, ಸೋನಾಲಿ ಬೇಂದ್ರೆ, ಟಬು ಮತ್ತು ನೀಲಂ ಕೊಠಾರಿ ಅವರನ್ನು ಪ್ರಕರಣದಿಂದ ಖುಲಾಸೆಗೊಳಿಸಲಾಗಿದೆ.

ಇದನ್ನೂ ಓದಿ: Salman Khan: ಸೆಲ್ಫಿ ಗೆದುಕೊಳ್ಳಲು ಬಂದ ಅಭಿಮಾನಿ ಬಗ್ಗೆ ಸಿಟ್ಟಾದ ಸಲ್ಮಾನ್​ ಖಾನ್ ಮಾಡಿದ್ದೇನು ನೋಡಿ

ಶಿಲ್ಪಾ ಶೆಟ್ಟಿ ತಂಗಿಗೆ ಸಲ್ಮಾನ್​ ಖಾನ್ ಖಡಕ್​ ವಾರ್ನಿಂಗ್​​​; ಎಲ್ಲರ ಎದುರು ಕಣ್ಣೀರು ಹಾಕಿದ ಶಮಿತಾ

Published On - 8:53 pm, Sun, 9 January 22

ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ನ್ಯೂಸ್​​9 ಗ್ಲೋಬಲ್​ ಸಮಿಟ್​ನಲ್ಲಿ ಕರ್ನಾಟಕ-ಜರ್ಮನಿ ನಂಟು: ಸಿಎಂ ಮಾತು
ನ್ಯೂಸ್​​9 ಗ್ಲೋಬಲ್​ ಸಮಿಟ್​ನಲ್ಲಿ ಕರ್ನಾಟಕ-ಜರ್ಮನಿ ನಂಟು: ಸಿಎಂ ಮಾತು
ಧಾರವಾಡದಲ್ಲಿ ರೈತರೊಂದಿಗೆ ವಿತಂಡವಾದಕ್ಕಿಳಿದ ಸಚಿವ ಸಂತೋಷ್ ಲಾಡ್
ಧಾರವಾಡದಲ್ಲಿ ರೈತರೊಂದಿಗೆ ವಿತಂಡವಾದಕ್ಕಿಳಿದ ಸಚಿವ ಸಂತೋಷ್ ಲಾಡ್
ನೋಟೀಸ್ ಹಿಂಪಡೆಯಲು ಸಿದ್ದರಾಮಯ್ಯ ಮೌಖಿಕ ಆದೇಶ ನೀಡಿದ್ದಾರೆ: ರೆಡ್ಡಿ
ನೋಟೀಸ್ ಹಿಂಪಡೆಯಲು ಸಿದ್ದರಾಮಯ್ಯ ಮೌಖಿಕ ಆದೇಶ ನೀಡಿದ್ದಾರೆ: ರೆಡ್ಡಿ
ಶೋಭಾ ಶೆಟ್ಟಿಗೆ ಈಗ ಉಗ್ರಂ ಮಂಜು ನೇರ ಟಾರ್ಗೆಟ್​; ಮುಖಕ್ಕೆ ಬಿತ್ತು ಕೆಸರು
ಶೋಭಾ ಶೆಟ್ಟಿಗೆ ಈಗ ಉಗ್ರಂ ಮಂಜು ನೇರ ಟಾರ್ಗೆಟ್​; ಮುಖಕ್ಕೆ ಬಿತ್ತು ಕೆಸರು
ವಕ್ಪ್ ಕಾಯ್ದೆಗೆ ತಿದ್ದುಪಡಿ ಬರುವವರೆಗೆ ಹೋರಾಟ ನಿಲ್ಲದು: ಶೋಭಾ ಕರಂದ್ಲಾಜೆ
ವಕ್ಪ್ ಕಾಯ್ದೆಗೆ ತಿದ್ದುಪಡಿ ಬರುವವರೆಗೆ ಹೋರಾಟ ನಿಲ್ಲದು: ಶೋಭಾ ಕರಂದ್ಲಾಜೆ