ಶೂಟಿಂಗ್ ಸಂದರ್ಭದಲ್ಲಿ ಸಲ್ಮಾನ್ ಖಾನ್ (Salman Khan) ಕೃಷ್ಣ ಮೃಗ ಬೇಟೆ ಮಾಡಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿ ಸೆಷನ್ಸ್ ನ್ಯಾಯಾಲಯ ಅವರಿಗೆ ಐದು ವರ್ಷ ಶಿಕ್ಷೆಯನ್ನೂ ವಿಧಿಸಿತ್ತು. ಸಲ್ಮಾನ್ ಖಾನ್ ಬೇಟೆ ಮಾಡಿದ್ದ ಕೃಷ್ಣ ಮೃಗದ ಸ್ಮರಣಾರ್ಥವಾಗಿ ದೊಡ್ಡ ಸ್ಮಾರಕ ನಿರ್ಮಾಣ ಮಾಡಲು ರಾಜಸ್ಥಾನದ ಬಿಷ್ಣೋಯಿ ಸಮುದಾಯ ಮುಂದಾಗಿದೆ. 1998ರಲ್ಲಿ ‘ಹಮ್ ಸಾಥ್ ಸಾಥ್ ಹೇ’ ಚಿತ್ರದ ಶೂಟಿಂಗ್ಗಾಗಿ ಸಲ್ಮಾನ್ ಖಾನ್ ರಾಜಸ್ಥಾನದ ಜೋಧ್‌ಪುರಕ್ಕೆ ತೆರಳಿದ್ದರು. ಅವರು ಸಿನಿಮಾ ತಂಡದ ಕೆಲವರ ಜತೆ ಸಫಾರಿಗೆ ಹೋಗಿದ್ದರು. ಆ ಸಮಯದಲ್ಲಿ ಸಲ್ಮಾನ್ ಖಾನ್ ಒಂದು ಕೃಷ್ಣ ಮೃಗವನ್ನು ಬೇಟೆಯಾಡಿದ್ದರು. ಕೃಷ್ಣ ಮೃಗದ ಮೃತದೇಹ ಸಿಕ್ಕ ಜಾಗದಲ್ಲಿ ಬಿಷ್ಣೋಯಿ ಸಮುದಾಯದವರು ಭವ್ಯ ಸ್ಮಾರಕ ಮತ್ತು ಪ್ರಾಣಿ ರಕ್ಷಣಾ ಕೇಂದ್ರವನ್ನು ನಿರ್ಮಿಸುತ್ತಿದ್ದಾರೆ. ಐದು ಲೋಹಗಳನ್ನು ಬಳಸಿ ಬೃಹತ್ ಕೃಷ್ಣ ಮೃಗ ಪ್ರತಿಮೆಯನ್ನು ನಿರ್ಮಿಸಲು ಈ ಸಮುದಾಯದವರು ನಿರ್ಧರಿಸಿದ್ದಾರೆ.
ಬಿಷ್ಣೋಯಿ ಸಮುದಾಯದವರು ಪ್ರಕೃತಿ ಆರಾಧಕರು. ವನ್ಯಜೀವಿ ಸಂರಕ್ಷಣೆಗಾಗಿ ಅವರು ಪ್ರಾಣವನ್ನು ಬೇಕಾದರೂ ನೀಡುತ್ತಾರೆ. ಜೋಧಪುರ್ನ ಬಿಷ್ಣೋಯಿಗಳು ಕೃಷ್ಣಮೃಗವನ್ನು ತಮ್ಮ ಧಾರ್ಮಿಕ ಗುರು ಭಗವಾನ್ ಜಂಬೇಶ್ವರ ಅವರ ಪುನರ್ಜನ್ಮ ಎಂದು ಪರಿಗಣಿಸುತ್ತಾರೆ. ಹೀಗಾಗಿ, ಈ ಪ್ರಾಣಿಯನ್ನು ಕೊಲ್ಲುವುದನ್ನು ಅಥವಾ ಮರವನ್ನು ಕಡಿಯುವುದನ್ನು ಬಿಷ್ಣೋಯಿಗಳು ಎಂದಿಗೂ ಸಹಿಸುವುದಿಲ್ಲ.
ಕೃಷ್ಣ ಮೃಗ ಅಳಿವಿನ ಅಂಚಿನಲ್ಲಿರುವ ಪ್ರಾಣಿ ವರ್ಗ. ಇದನ್ನು ಹತ್ಯೆ ಮಾಡುವುದು ಅಪರಾಧ. ಆದಾಗ್ಯೂ ಸಲ್ಮಾನ್ ಖಾನ್ ಕೃಷ್ಣ ಮೃಗವನ್ನು ಬೇಟೆಯಾಡಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿ ವಿಚಾರಣೆಯನ್ನೂ ಸಲ್ಮಾನ್ ಖಾನ್ ಎದುರಿಸಿದರು. ರಾಜಸ್ಥಾನದ ಸೆಷನ್ಸ್ ನ್ಯಾಯಾಲಯವು ಸಲ್ಮಾನ್ ಅವರನ್ನು ತಪ್ಪಿತಸ್ಥರೆಂದು ತೀರ್ಪು ನೀಡಿ ಅವರಿಗೆ ಐದು ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸಿತು. ಈ ಆದೇಶದ ವಿರುದ್ಧ ಸಲ್ಮಾನ್ ಪರ ವಕೀಲರು ರಾಜಸ್ಥಾನ ಹೈಕೋರ್ಟ್ಗೆ ಮೇಲ್ಮನವಿ ಸಲ್ಲಿಸಿದ್ದಾರೆ. ಈ ಪ್ರಕರಣದ ವಿಚಾರಣೆ ರಾಜಸ್ಥಾನ ಹೈಕೋರ್ಟ್‌ನಲ್ಲಿದೆ. ಈ ಸಿನಿಮಾದ ಸಹ ನಟರಾದ ಸೈಫ್ ಅಲಿ ಖಾನ್, ಸೋನಾಲಿ ಬೇಂದ್ರೆ, ಟಬು ಮತ್ತು ನೀಲಂ ಕೊಠಾರಿ ಅವರನ್ನು ಪ್ರಕರಣದಿಂದ ಖುಲಾಸೆಗೊಳಿಸಲಾಗಿದೆ.
ಇದನ್ನೂ ಓದಿ: Salman Khan: ಸೆಲ್ಫಿ ಗೆದುಕೊಳ್ಳಲು ಬಂದ ಅಭಿಮಾನಿ ಬಗ್ಗೆ ಸಿಟ್ಟಾದ ಸಲ್ಮಾನ್ ಖಾನ್ ಮಾಡಿದ್ದೇನು ನೋಡಿ
ಶಿಲ್ಪಾ ಶೆಟ್ಟಿ ತಂಗಿಗೆ ಸಲ್ಮಾನ್ ಖಾನ್ ಖಡಕ್ ವಾರ್ನಿಂಗ್; ಎಲ್ಲರ ಎದುರು ಕಣ್ಣೀರು ಹಾಕಿದ ಶಮಿತಾ
Published On - 8:53 pm, Sun, 9 January 22