AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೃಷ್ಣ ಮೃಗ ಹತ್ಯೆ ಪ್ರಕರಣ; ಸಲ್ಮಾನ್​ ಖಾನ್​ ಮನವಿ ಪುರಸ್ಕರಿಸಿದ ರಾಜಸ್ಥಾನ್​ ಹೈಕೋರ್ಟ್​

ಕೃಷ್ಣ ಮೃಗ ಅಳಿವಿನ ಅಂಚಿನಲ್ಲಿರುವ ಪ್ರಾಣಿ ವರ್ಗ. ಇದನ್ನು ಹತ್ಯೆ ಮಾಡುವುದು ಅಪರಾಧ. ಆದಾಗ್ಯೂ ಸಲ್ಮಾನ್​ ಖಾನ್​ ಕೃಷ್ಣ ಮೃಗವನ್ನು ಬೇಟೆಯಾಡಿದ್ದರು. ಪ್ರಕರಣದಲ್ಲಿ ಅವರಿಗೆ ಶಿಕ್ಷೆಯೂ ಆಗಿತ್ತು.

ಕೃಷ್ಣ ಮೃಗ ಹತ್ಯೆ ಪ್ರಕರಣ; ಸಲ್ಮಾನ್​ ಖಾನ್​ ಮನವಿ ಪುರಸ್ಕರಿಸಿದ ರಾಜಸ್ಥಾನ್​ ಹೈಕೋರ್ಟ್​
ಸಲ್ಮಾನ್ ಖಾನ್
TV9 Web
| Edited By: |

Updated on: Mar 22, 2022 | 8:27 AM

Share

1998ರಲ್ಲಿ ‘ಹಮ್ ಸಾಥ್ ಸಾಥ್ ಹೇ’ ಚಿತ್ರದ ಶೂಟಿಂಗ್​ಗಾಗಿ ​ ರಾಜಸ್ಥಾನದ (Rajasthan) ಜೋಧ್‌ಪುರಕ್ಕೆ ತೆರಳಿದ್ದ ವೇಳೆ ಸಲ್ಮಾನ್​ ಖಾನ್ (Salman Khan) ಸಿನಿಮಾ ತಂಡದ ಕೆಲವರ ಜತೆ ಸಫಾರಿಗೆ ತೆರಳಿದ್ದರು. ಆ ಸಮಯದಲ್ಲಿ ಅವರು ಒಂದು ಕೃಷ್ಣ ಮೃಗವನ್ನು ಬೇಟೆಯಾಡಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿ ಸೆಷನ್ಸ್​ ನ್ಯಾಯಾಲಯ ಅವರಿಗೆ ಐದು ವರ್ಷ ಶಿಕ್ಷೆಯನ್ನೂ ವಿಧಿಸಿತ್ತು. ಆ ಬಳಿಕ ಸಲ್ಮಾನ್ ಖಾನ್​ ಅವರು ಈ ಪ್ರಕರಣಲ್ಲಿ ಜಾಮೀನು ಪಡೆದು ಹೊರ ಬಂದಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದ ಮತ್ತೆರಡು ಅರ್ಜಿಗಳನ್ನು ಜೋಧ್​ಪುರ್ ಕೋರ್ಟ್​ನಲ್ಲಿ (Jodhpur Court) ವಿಚಾರಣೆ ಮಾಡಲಾಗುತ್ತಿದೆ. ಇದನ್ನು ರಾಜಸ್ಥಾನ ಹೈಕೋರ್ಟ್​ಗೆ ವರ್ಗಾವಣೆ ಮಾಡಲು ಸಲ್ಮಾನ್​ ಕೋರಿದ್ದರು. ಇದಕ್ಕೆ ಈಗ ಹೈಕೋರ್ಟ್​ನಿಂದಲೇ ಅನುಮತಿ ನೀಡಿದೆ.

ಕೃಷ್ಣ ಮೃಗ ಅಳಿವಿನ ಅಂಚಿನಲ್ಲಿರುವ ಪ್ರಾಣಿ ವರ್ಗ. ಇದನ್ನು ಹತ್ಯೆ ಮಾಡುವುದು ಅಪರಾಧ. ಆದಾಗ್ಯೂ ಸಲ್ಮಾನ್​ ಖಾನ್​ ಕೃಷ್ಣ ಮೃಗವನ್ನು ಬೇಟೆಯಾಡಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿ ವಿಚಾರಣೆಯನ್ನೂ ಸಲ್ಮಾನ್​ ಖಾನ್​ ಎದುರಿಸಿದ್ದರು. ರಾಜಸ್ಥಾನದ ಸೆಷನ್ಸ್ ನ್ಯಾಯಾಲಯವು ಸಲ್ಮಾನ್​ ಅವರನ್ನು ತಪ್ಪಿತಸ್ಥರೆಂದು ತೀರ್ಪು ನೀಡಿ ಅವರಿಗೆ ಐದು ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸಿತು. ಈ ಆದೇಶದ ವಿರುದ್ಧ ಸಲ್ಮಾನ್ ಪರ ವಕೀಲರು ರಾಜಸ್ಥಾನ ಹೈಕೋರ್ಟ್​ಗೆ ಮೇಲ್ಮನವಿ ಸಲ್ಲಿಸಿದ್ದಾರೆ. ಈ ಪ್ರಕರಣದ ವಿಚಾರಣೆ ರಾಜಸ್ಥಾನ ಹೈಕೋರ್ಟ್‌ನಲ್ಲಿದೆ. ಸೆಷನ್​ ಕೋರ್ಟ್​ನಲ್ಲಿ ಈ ಪ್ರಕರಣಕ್ಕೆ ಸಂಬಂಧಿಸಿರುವ ಎರಡು ಅರ್ಜಿಗಳು ಹೈಕೋರ್ಟ್​ಗೆ ವರ್ಗಾವಣೆ ಆದರೆ, ಮೂರು ಅರ್ಜಿಗಳನ್ನು ಒಟ್ಟಿಗೆ ವಿಚಾರಣೆ ನಡೆಸಬಹುದು ಎಂಬುದು ಸಲ್ಮಾನ್​ ಖಾನ್ ಅವರ ಮನವಿ ಆಗಿತ್ತು. ಇದನ್ನು ಹೈಕೋರ್ಟ್​ ಪುರಸ್ಕರಿಸಿದೆ.  

ಜೋಧ್​ಪುರ್ ಸೆಷನ್​ ಕೋರ್ಟ್​ನಲ್ಲಿರುವ ಅರ್ಜಿಗಳು ಹೈಕೋರ್ಟ್​ಗೆ ವರ್ಗಾವಣೆ ಆಗಬೇಕು ಎಂದು ಸಲ್ಮಾನ್ ಖಾನ್ ಮನವಿ ಮಾಡಿಕೊಂಡಿದ್ದರು. ಸಣ್ಣ ವಿಚಾರಣೆ ನಡೆಸಿ ನಂತರದಲ್ಲಿ ರಾಜಸ್ಥಾನ ಹೈಕೋರ್ಟ್​ ನ್ಯಾಯಮೂರ್ತಿ ಪಿ.ಎಸ್. ಭಾಟಿ ಅವರು ಇದಕ್ಕೆ ಅನುಮತಿ ನೀಡಿದ್ದಾರೆ.

ಈ ಬಗ್ಗೆ ಮಾತನಾಡಿರುವ ಸಲ್ಮಾನ್​ ಖಾನ್ ಪರ ವಕೀಲ ಸಾರಸ್ವತ್​, ‘ಕೃಷ್ಣ ಮೃಗ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಸೆಷನ್​ ಕೋರ್ಟ್​ ನೀಡಿದ ತೀರ್ಪನ್ನು ಹೈಕೋರ್ಟ್​ನಲ್ಲಿ ಪ್ರಶ್ನೆ ಮಾಡಿದ್ದೇವೆ. ಈ ಅರ್ಜಿಯ ವಿಚಾರಣೆ ಪ್ರಗತಿಯಲ್ಲಿದೆ. ಇದರ ಜತೆಗೆ ಸೆಷನ್​ ಕೋರ್ಟ್​ನಲ್ಲಿ ಬಾಕಿ ಇರುವ ಎರಡು ಅರ್ಜಿಯನ್ನು ನಾವು ಹೈಕೋರ್ಟ್​ಗೆ ವರ್ಗಾವಣೆ ಮಾಡಲು ಕೇಳಿದ್ದೆವು. ಇದನ್ನು ಕೋರ್ಟ್ ಒಪ್ಪಿದೆ. ಮೂರು ಪ್ರಕರಣಗಳ ವಿಚಾರಣೆ ಒಂದೇ ಕಡೆ ನಡೆಯುವುದರಿಂದ ಸಾಕಷ್ಟು ಸಮಯ ಉಳಿಯಲಿದೆ’ ಎಂದಿದ್ದಾರೆ. ಸಲ್ಮಾನ್​ ಖಾನ್​ ಮನವಿಗೆ ಉತ್ತರಿಸಲು ಸರ್ಕಾರಿ ಪರ ವಕೀಲರು ಸಮಯಾವಕಾಶ ಕೇಳಿದ್ದರು. ಅವರು ಇದಕ್ಕೆ ಯಾವುದೇ ರೀತಿಯಲ್ಲಿ ವಿರೋಧ ವ್ಯಕ್ತಪಡಿಸಲಿಲ್ಲ.

ಇದನ್ನೂ ಓದಿ: ಚಿರುಗಾಗಿ ಸಂಭಾವನೆ ಪಡೆಯಲು ನಿರಾಕರಿಸಿದ ಸಲ್ಮಾನ್​ ಖಾನ್​; ಫ್ರೀ ಆಗಿ ನಟಿಸಿದ ಸ್ಟಾರ್ ನಟ

ಸಲ್ಮಾನ್​ ಖಾನ್ ಫಾರ್ಮ್​ಹೌಸ್​ ಬೆಲೆ 80 ಕೋಟಿ ರೂ.! ಸಲ್ಲು ಮೆಚ್ಚಿನ ಈ ಸ್ಥಳದಲ್ಲಿ ಏನೆಲ್ಲ ಇದೆ?

Follow Us
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ