Rajinikanth: ಸಾವು ಬದುಕಿನ ಮಧ್ಯೆ ಹೋರಾಡುತ್ತಿರುವ ಬೆಂಗಳೂರು ಬಾಲಕಿಯ ಆಸೆ ಈಡೇರಿಸಿದ ರಜನಿಕಾಂತ್​

ಬೆಂಗಳೂರಿನ ಬಾಲಕಿ ಸೌಮ್ಯಾಗೆ ಬ್ರೇನ್ ಸ್ಟ್ರೋಕ್‌ ಆಗಿದ್ದು ಸಾವು-ಬದುಕಿನ ನಡುವೆ ಹೋರಾಡುತ್ತಿದ್ದಾರೆ. ಅವಳು ಕೊನೆಯ ದಿನಗಳನ್ನು ಎಣಿಸುತ್ತಿದ್ದಾಳೆ. ಅವಳು ರಜನಿ ಅಭಿಮಾನಿ. ರಜನಿ‌ಕಾಂತ್​ ಅವರನ್ನು ನೋಡಬೇಕು ಎನ್ನುವ ಆಸೆ ಇತ್ತು.

Rajinikanth: ಸಾವು ಬದುಕಿನ ಮಧ್ಯೆ ಹೋರಾಡುತ್ತಿರುವ ಬೆಂಗಳೂರು ಬಾಲಕಿಯ ಆಸೆ ಈಡೇರಿಸಿದ ರಜನಿಕಾಂತ್​
ರಜನಿಕಾಂತ್​
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on:Dec 20, 2021 | 4:44 PM

‘ಸೂಪರ್​ ಸ್ಟಾರ್​’ ರಜನಿಕಾಂತ್​ ಅವರ ಅಭಿಮಾನಿ ಬಳಗ ತುಂಬಾನೇ ದೊಡ್ಡದಿದೆ. ಕರ್ನಾಟಕದ ಮೂಲದ ಅವರು ತಮಿಳುನಾಡಿಗೆ ತೆರಳಿ ಅಲ್ಲಿ ಸೂಪರ್​ ಹಿಟ್​ ಚಿತ್ರಗಳನ್ನು ನೀಡಿದರು. ವಯಸ್ಸು 70 ದಾಟಿದರೂ ಹದಿಹರೆಯದವರ ಎನರ್ಜಿಯಲ್ಲಿ ಸಿನಿಮಾ ಮಾಡುತ್ತಾರೆ. ಪ್ರತಿ ವರ್ಷ ಅವರ ಜನ್ಮದಿನದಂದು ಅಭಿಮಾನಿಗಳು ದೊಡ್ಡ ಸಂಖ್ಯೆಯಲ್ಲಿ ಸೇರುತ್ತಾರೆ. ರಜನಿಕಾಂತ್​ಗೂ ಅಷ್ಟೇ, ಅಭಿಮಾನಿಗಳನ್ನು ಕಂಡರೆ ಎಲ್ಲಿಲ್ಲದ ಪ್ರೀತಿ. ಅವರ ಬಗ್ಗೆ ಹೆಚ್ಚು ಕಾಳಜಿ ತೋರುತ್ತಾರೆ. ಈಗ ಬೆಂಗಳೂರಿನ ಬಾಲಕಿ ಒಬ್ಬಳ ಆಸೆಯನ್ನು ಸೂಪರ್​ ಸ್ಟಾರ್​ ಈಡೇರಿಸಿದ್ದಾಳೆ. ಸಾವು ಬದುಕಿನ ನಡುವೆ ಹೋರಾಡುತ್ತಿರುವ ಬಾಲಕಿಯ ಕುಟುಂಬಕ್ಕೆ ಧೈರ್ಯ ತುಂಬುವ ಕೆಲಸ ಮಾಡಿದ್ದಾರೆ.

ಬೆಂಗಳೂರಿನ ಬಾಲಕಿ ಸೌಮ್ಯಾಗೆ ಬ್ರೇನ್ ಸ್ಟ್ರೋಕ್‌ ಆಗಿದ್ದು ಸಾವು-ಬದುಕಿನ ನಡುವೆ ಹೋರಾಡುತ್ತಿದ್ದಾರೆ. ಅವಳು ಕೊನೆಯ ದಿನಗಳನ್ನು ಎಣಿಸುತ್ತಿದ್ದಾಳೆ. ಅವಳು ರಜನಿ ಅಭಿಮಾನಿ. ರಜನಿ‌ಕಾಂತ್​ ಅವರನ್ನು ನೋಡಬೇಕು ಎನ್ನುವ ಆಸೆ ಇತ್ತು. ಆದರೆ, ಅದು ಸಾಧ್ಯವಾಗಿರಲಿಲ್ಲ. ಈಗ ಕೊನೆಯ ದಿನಗಳಲ್ಲಿ ರಜನಿ ಬಾಲಕಿಯ ಆಸೆ ಈಡೇರಿಸಿದ್ದಾರೆ.

ರಜನಿಕಾಂತ್​ ಬೆಂಗಳೂರಿಗೆ ಬಂದು ಸೌಮ್ಯ ಅವಳನ್ನು ಭೇಟಿ ಮಾಡುವವರಿದ್ದರು. ಆದರೆ, ಕೊರೊನಾ ಹಿನ್ನೆಲೆಯಲ್ಲಿ ಬರಲು ಸಾಧ್ಯವಾಗಿಲ್ಲ. ಹೀಗಾಗಿ, ‘ಧೈರ್ಯವಾಗಿರಿ. ಆರೋಗ್ಯ ಸರಿಹೋಗಲು ಪ್ರಾರ್ಥಿಸುತ್ತೇವೆ’ ಎಂದು ರಜನಿಕಾಂತ್​ ವಿಡಿಯೋ ಕಾಲ್​ನಲ್ಲಿ ಹೇಳಿದ್ದಾರೆ ಎನ್ನಲಾಗಿದೆ.

ರಜನಿಕಾಂತ್​ ಅವರಿಗೆ ಕರೆ ಮಾಡಿದ್ದ ಸೌಮ್ಯಾ ತಂದೆ ಮಗಳ ಆಸೆ ಬಗ್ಗೆ ವಿವರಿಸಿದ್ದರು. ನಂತರ ರಜನಿ ವಿಡಿಯೋ ಕಾಲ್ ಮಾಡಿ ಮಾತನಾಡಿದ್ದರು. ಅಷ್ಟೇ ಅಲ್ಲ, ಅವರ ಸಹೋದರ‌ ಸತ್ಯನಾರಾಯಣ್ ಅವರು ಸೌಮ್ಯಾ ಮನೆಗೆ ಭೇಟಿ ನೀಡಿ ರಜನಿ ‌ಪರವಾಗಿ ಧೈರ್ಯ ತುಂಬೋ ಕೆಲಸ‌ಮಾಡಿ ಬಂದಿದ್ದಾರೆ.

ರಕನಿ ಸಿನಿಮಾ ‘ಅಣ್ಣಾಥೆ’ ಇತ್ತೀಚೆಗೆ ತೆರೆಗೆಬಂದಿತ್ತು. ವಿಶ್ವ ಮಟ್ಟದಲ್ಲಿ ಈ ಸಿನಿಮಾ ಮೊದಲ ದಿನ 70 ಕೋಟಿ ಗಳಿಕೆ ಮಾಡಿತ್ತು. ಮೂರು ವಾರಗಳಲ್ಲಿ ಈ ಚಿತ್ರ ಬರೊಬ್ಬರಿ 239 ಕೋಟಿ ರೂಪಾಯಿ ಗಳಿಸಿದೆ. ಈ ಚಿತ್ರ ಇತ್ತೀಚೆಗೆ ನೆಟ್​ಫ್ಲಿಕ್ಸ್​ನಲ್ಲಿ ರಿಲೀಸ್​ ಆಗಿದೆ.

ಇದನ್ನೂ ಓದಿ: ರಜನಿಕಾಂತ್​, ಪ್ರಭಾಸ್ ಸಿನಿಮಾ ಮಾಡೋಕೆ ಕರೆದಿದ್ರು, ನಾನು ಹೋಗಿಲ್ಲ; ಜೋಗಿ ಪ್ರೇಮ್​

 Rajinikanth: ನೆಟ್​​ಫ್ಲಿಕ್ಸ್​​ನಲ್ಲೂ ರಜಿನಿ ಹವಾ; ಗಲ್ಲಾಪೆಟ್ಟಿಗೆಯಲ್ಲಿ ಧೂಳೆಬ್ಬಿಸಿದ ಬಳಿಕ ಒಟಿಟಿಯಲ್ಲೂ ದಾಖಲೆ ಬರೆದ ತಲೈವಾ!

Published On - 4:40 pm, Mon, 20 December 21

ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ನ್ಯೂಸ್​​9 ಗ್ಲೋಬಲ್​ ಸಮಿಟ್​ನಲ್ಲಿ ಕರ್ನಾಟಕ-ಜರ್ಮನಿ ನಂಟು: ಸಿಎಂ ಮಾತು
ನ್ಯೂಸ್​​9 ಗ್ಲೋಬಲ್​ ಸಮಿಟ್​ನಲ್ಲಿ ಕರ್ನಾಟಕ-ಜರ್ಮನಿ ನಂಟು: ಸಿಎಂ ಮಾತು
ಧಾರವಾಡದಲ್ಲಿ ರೈತರೊಂದಿಗೆ ವಿತಂಡವಾದಕ್ಕಿಳಿದ ಸಚಿವ ಸಂತೋಷ್ ಲಾಡ್
ಧಾರವಾಡದಲ್ಲಿ ರೈತರೊಂದಿಗೆ ವಿತಂಡವಾದಕ್ಕಿಳಿದ ಸಚಿವ ಸಂತೋಷ್ ಲಾಡ್
ನೋಟೀಸ್ ಹಿಂಪಡೆಯಲು ಸಿದ್ದರಾಮಯ್ಯ ಮೌಖಿಕ ಆದೇಶ ನೀಡಿದ್ದಾರೆ: ರೆಡ್ಡಿ
ನೋಟೀಸ್ ಹಿಂಪಡೆಯಲು ಸಿದ್ದರಾಮಯ್ಯ ಮೌಖಿಕ ಆದೇಶ ನೀಡಿದ್ದಾರೆ: ರೆಡ್ಡಿ
ಶೋಭಾ ಶೆಟ್ಟಿಗೆ ಈಗ ಉಗ್ರಂ ಮಂಜು ನೇರ ಟಾರ್ಗೆಟ್​; ಮುಖಕ್ಕೆ ಬಿತ್ತು ಕೆಸರು
ಶೋಭಾ ಶೆಟ್ಟಿಗೆ ಈಗ ಉಗ್ರಂ ಮಂಜು ನೇರ ಟಾರ್ಗೆಟ್​; ಮುಖಕ್ಕೆ ಬಿತ್ತು ಕೆಸರು
ವಕ್ಪ್ ಕಾಯ್ದೆಗೆ ತಿದ್ದುಪಡಿ ಬರುವವರೆಗೆ ಹೋರಾಟ ನಿಲ್ಲದು: ಶೋಭಾ ಕರಂದ್ಲಾಜೆ
ವಕ್ಪ್ ಕಾಯ್ದೆಗೆ ತಿದ್ದುಪಡಿ ಬರುವವರೆಗೆ ಹೋರಾಟ ನಿಲ್ಲದು: ಶೋಭಾ ಕರಂದ್ಲಾಜೆ