AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

2 ಕೋಟಿ ರೂ. ಪಾವತಿಸಲು ರಾಜ್‌ಪಾಲ್ ಯಾದವ್‌ಗೆ ಸುಪ್ರೀಂ ಕೋರ್ಟ್ ಕಟ್ಟುನಿಟ್ಟಿನ ಸೂಚನೆ

2010ರಲ್ಲಿ ತಾವು ನಿರ್ಮಿಸಿದ ಸಿನಿಮಾಗಾಗಿ ರಾಜ್‌ಪಾಲ್ ಯಾದವ್ ಅವರು 5 ಕೋಟಿ ರೂಪಾಯಿಗೂ ಹೆಚ್ಚು ಸಾಲ ಪಡೆದಿದ್ದರು. 8 ಕೋಟಿ ರೂಪಾಯಿ ಹಿಂತಿರುಗಿಸುವುದಾಗಿ ಭರವಸೆ ನೀಡಿದ್ದ ಅವರು, ಬಳಿಕ ಹಣ ಪಾವತಿಸಲು ವಿಫಲರಾಗಿದ್ದರು. ಈ ಸಂಬಂಧ ಅವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಾಗಿತ್ತು.

2 ಕೋಟಿ ರೂ. ಪಾವತಿಸಲು ರಾಜ್‌ಪಾಲ್ ಯಾದವ್‌ಗೆ ಸುಪ್ರೀಂ ಕೋರ್ಟ್ ಕಟ್ಟುನಿಟ್ಟಿನ ಸೂಚನೆ
Rajpal YadavImage Credit source: PTI
ಮದನ್​ ಕುಮಾರ್​
|

Updated on: Oct 07, 2026 | 4:36 PM

Share

ಚೆಕ್ ಬೌನ್ಸ್ ಪ್ರಕರಣದಲ್ಲಿ 2 ಕೋಟಿ ರೂಪಾಯಿ ಠೇವಣಿ ಇಡುವಂತೆ ಬಾಲಿವುಡ್ ನಟ ರಾಜ್‌ಪಾಲ್ ಯಾದವ್ ಅವರಿಗೆ ಈ ಮೊದಲು ನೀಡಿದ್ದ ಸಮಯವನ್ನು ಮುಂಬರುವ ಮಂಗಳವಾರದವರೆಗೆ (ಅಕ್ಟೋಬರ್ 13) ಸುಪ್ರೀಂ ಕೋರ್ಟ್ ವಿಸ್ತರಿಸಿದೆ. ವಿಚಾರಣೆ ವೇಳೆ ಅವರು 1.15 ಕೋಟಿ ರೂಪಾಯಿ ಮೌಲ್ಯದ ಡಿಮಾಂಡ್ ಡ್ರಾಫ್ಟ್ ಸಲ್ಲಿಸಿ, ಉಳಿದ ಮೊತ್ತವನ್ನು ಪಾವತಿಸಲು ಹೆಚ್ಚುವರಿ ಕಾಲಾವಕಾಶ ಕೋರಿದ್ದರು.

ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್, ನ್ಯಾಯಮೂರ್ತಿಗಳಾದ ಜೋಯಮಾಲ್ಯ ಭಾಗ್ಚಿ ಮತ್ತು ವಿ. ಮೋಹನಾ ಅವರನ್ನೊಳಗೊಂಡ ಪೀಠವು, ಕೋರ್ಟ್‌ನಲ್ಲಿ ಹಾಜರಿದ್ದ ರಾಜ್‌ಪಾಲ್ ಯಾದವ್ ಅವರಿಗೆ ಉಳಿದ 85 ಲಕ್ಷ ರೂಪಾಯಿಗಳನ್ನು ಮಂಗಳವಾರದೊಳಗೆ ಜಮಾ ಮಾಡುವಂತೆ ನಿರ್ದೇಶನ ನೀಡಿದೆ. ಈ ಹಣ ಪಾವತಿಯಾದ ಬಳಿಕ ದೆಹಲಿ ಹೈಕೋರ್ಟ್ ವಿಧಿಸಿರುವ ಶಿಕ್ಷೆ ಮತ್ತು ಮೂರು ತಿಂಗಳ ಜೈಲು ಶಿಕ್ಷೆಯನ್ನು ಪ್ರಶ್ನಿಸಿ ಅವರು ಸಲ್ಲಿಸಿರುವ ಮೇಲ್ಮನವಿಯನ್ನು ಪೀಠವು ವಿಚಾರಣೆಗೆ ಕೈಗೆತ್ತಿಕೊಳ್ಳಲಿದೆ.

ವಿಚಾರಣೆ ವೇಳೆ ನಟನ ನಡವಳಿಕೆ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಪೀಠವು, ‘ನೀವು ಮೊದಲು 85 ಲಕ್ಷ ರೂಪಾಯಿ ಠೇವಣಿ ಇಡುವ ನಮ್ಮ ಆದೇಶವನ್ನು ಪಾಲಿಸಿ. ಉಳಿದ ಮೊತ್ತಕ್ಕೆ ನಾವು ಪಾವತಿ ವೇಳಾಪಟ್ಟಿಯನ್ನು ನಿಗದಿಪಡಿಸುತ್ತೇವೆ. ನಿಮ್ಮ ವರ್ತನೆಯನ್ನು ನೋಡಿದರೆ ನೀವು ಜೈಲಿನಲ್ಲಿರಬೇಕಿತ್ತು. ನಿಮ್ಮ ನಡೆ ನಮಗೆ ತೃಪ್ತಿ ತಂದಿಲ್ಲ. ಆದರೆ ನೀವು 1.15 ಕೋಟಿ ರೂಪಾಯಿ ತಂದಿರುವುದರಿಂದ ಸ್ವಲ್ಪ ಕಾಲಾವಕಾಶ ನೀಡುತ್ತಿದ್ದೇವೆ’ ಎಂದು ಎಚ್ಚರಿಸಿತು.

ಅಲ್ಲದೆ, ‘ನಿಮ್ಮ ಮೇಲ್ಮನವಿಯಲ್ಲಿ ನೋಟಿಸ್ ಜಾರಿ ಮಾಡುವುದು ಮತ್ತು ನಿಮ್ಮ ಶಿಕ್ಷೆಯನ್ನು ಎರಡು ವರ್ಷಗಳವರೆಗೆ ಹೆಚ್ಚಿಸುವುದು ನಮ್ಮ ವಿವೇಚನೆಗೆ ಒಳಪಟ್ಟಿದೆ’ ಎಂದು ನ್ಯಾಯಪೀಠ ತೀವ್ರ ತಾರಟೆಗೆ ತೆಗೆದುಕೊಂಡಿತು. ನಟನ ಪರ ವಾದ ಮಂಡಿಸಿದ ವಕೀಲ ವಿಕ್ರಾಂತ್ ಯಾದವ್, ‘ಅವರ ಅದೃಷ್ಟ ಈಗ ಒಳ್ಳೆಯ ಹಾದಿಗೆ ಮರಳುತ್ತಿದೆ. ಪ್ರಸ್ತುತ ಅವರಿಗೆ ಸಿನಿಮಾಗಳಲ್ಲಿ ಅಭಿನಯಿಸಲು ಹಾಗೂ ನಿರ್ದೇಶನ ಮಾಡಲು ಅವಕಾಶಗಳು ಸಿಗುತ್ತಿವೆ’ ಎಂದು ಕೋರ್ಟ್‌ಗೆ ತಿಳಿಸಿದರು.

ಇದನ್ನೂ ಓದಿ: ಸಾಲದ ಸುಳಿಗೆ ಸಿಲುಕಿ ನಟ ರಾಜ್‌ಪಾಲ್ ಯಾದವ್ ಆಸ್ತಿ ಹರಾಜು; ಹೆಚ್ಚಿತು ಸಂಕಷ್ಟ

ಉಳಿದ ಹಣವನ್ನು ತಕ್ಷಣವೇ ಜೋಡಿಸಲು ಸಾಧ್ಯವಾಗದಿರಲು ಪಿತೃ ಪಕ್ಷ ಕಾರಣ ಎಂದು ರಾಜ್‌ಪಾಲ್ ಯಾದವ್ ಕೋರ್ಟ್‌ಗೆ ತಿಳಿಸಿದರು. ಈ ಅವಧಿಯಲ್ಲಿ ಆಸ್ತಿ ವಹಿವಾಟು ನಡೆಸುವುದು ಶುಭವಲ್ಲ ಎಂಬ ನಂಬಿಕೆಯಿಂದಾಗಿ ಜಮೀನು ಮಾರಾಟ ಪ್ರಕ್ರಿಯೆ ತಡವಾಗಿದೆ ಎಂದು ಸ್ಪಷ್ಟಪಡಿಸಿದರು. ತಮ್ಮ ಜಮೀನು ಖರೀದಿಸಲು ಒಪ್ಪಿಕೊಂಡಿರುವ ವ್ಯಕ್ತಿಯನ್ನೂ ನಟ ಕೋರ್ಟ್‌ಗೆ ಕರೆತಂದಿದ್ದು, ಅವರು ಬಾಕಿ 85 ಲಕ್ಷ ರೂಪಾಯಿವನ್ನು ಡಿಡಿ ಮೂಲಕ ವರ್ಗಾಯಿಸಲು ಸಮ್ಮತಿಸಿದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಮದನ್​ ಕುಮಾರ್​
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಡೀಸೆಲ್​ ಟ್ಯಾಂಕರ್​​ನಲ್ಲಿ ತಾಂತ್ರಿಕ ದೋಷ, ಬಸ್​ ಸಂಚಾರ ಸ್ಥಗಿತ
ಡೀಸೆಲ್​ ಟ್ಯಾಂಕರ್​​ನಲ್ಲಿ ತಾಂತ್ರಿಕ ದೋಷ, ಬಸ್​ ಸಂಚಾರ ಸ್ಥಗಿತ
ಮಂತ್ರಿಗಳ ಮೇಲೆ ರಹಸ್ಯ ಕ್ಯಾಮೆರಾ ಕಣ್ಣು: ಸಚಿವರನ್ನ ಎಚ್ಚರಿಸಿದ ಡಿಕೆಶಿ
ಮಂತ್ರಿಗಳ ಮೇಲೆ ರಹಸ್ಯ ಕ್ಯಾಮೆರಾ ಕಣ್ಣು: ಸಚಿವರನ್ನ ಎಚ್ಚರಿಸಿದ ಡಿಕೆಶಿ
'ಸಿಎಂ ಆಗಲು ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಸ್ಟಿಂಗ್ ಆಪರೇಷನ್ ಮಾಡಿದ್ದರು'
'ಸಿಎಂ ಆಗಲು ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಸ್ಟಿಂಗ್ ಆಪರೇಷನ್ ಮಾಡಿದ್ದರು'
ಕಬ್ಬು ಬೆಳೆಗಾರರ ಮೀಟಿಂಗ್‌ ಬಗ್ಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೀಗಂದ್ರು
ಕಬ್ಬು ಬೆಳೆಗಾರರ ಮೀಟಿಂಗ್‌ ಬಗ್ಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೀಗಂದ್ರು
ಸಾರಿಗೆ ನೌಕರರಿಂದ ಮತ್ತೆ ಪ್ರತಿಭಟನೆ: ವೇತನ ಪರಿಷ್ಕರಣೆಗೆ ಆಗ್ರಹ
ಸಾರಿಗೆ ನೌಕರರಿಂದ ಮತ್ತೆ ಪ್ರತಿಭಟನೆ: ವೇತನ ಪರಿಷ್ಕರಣೆಗೆ ಆಗ್ರಹ
ಗಾಲ್ಫ್​​ನಲ್ಲಿ ಚಿನ್ನದ ಪದಕ ವಿಜೇತೆ ಪ್ರಣವಿ​ಗೆ ಅದ್ದೂರಿ ಸ್ವಾಗತ
ಗಾಲ್ಫ್​​ನಲ್ಲಿ ಚಿನ್ನದ ಪದಕ ವಿಜೇತೆ ಪ್ರಣವಿ​ಗೆ ಅದ್ದೂರಿ ಸ್ವಾಗತ
ಕಾಲು ಮುರಿದು ಬಿದ್ದಿದ್ದ ದ್ರೋಣ ಆನೆ ಈಗ ಫುಲ್ ಫಿಟ್
ಕಾಲು ಮುರಿದು ಬಿದ್ದಿದ್ದ ದ್ರೋಣ ಆನೆ ಈಗ ಫುಲ್ ಫಿಟ್
ಸ್ವಂತ ಹಣದಲ್ಲಿ ಹೆದ್ದಾರಿಯ ನೂರಾರು ಗುಂಡಿಗಳನ್ನು ಮುಚ್ಚಿದ ಯುವಕರಪಡೆ
ಸ್ವಂತ ಹಣದಲ್ಲಿ ಹೆದ್ದಾರಿಯ ನೂರಾರು ಗುಂಡಿಗಳನ್ನು ಮುಚ್ಚಿದ ಯುವಕರಪಡೆ
ಮೈಸೂರು ದಸರಾ 2026: ಗಜಪಡೆ, ಅಶ್ವಪಡೆಗೆ ಸಿಡಿಮದ್ದು ತಾಲೀಮು
ಮೈಸೂರು ದಸರಾ 2026: ಗಜಪಡೆ, ಅಶ್ವಪಡೆಗೆ ಸಿಡಿಮದ್ದು ತಾಲೀಮು
ಕೊಪ್ಪಳ: ತಾನೇ ನಲ್ಲಿ ತಿರುಗಿಸಿ ದಾಹ ಇಂಗಿಸಿಕೊಂಡ ಗೋಮಾತೆ!
ಕೊಪ್ಪಳ: ತಾನೇ ನಲ್ಲಿ ತಿರುಗಿಸಿ ದಾಹ ಇಂಗಿಸಿಕೊಂಡ ಗೋಮಾತೆ!